ಒಂದೇ ಬಾರಿಗೆ ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಟಾಟಾ ನಿರ್ಮಾಣದ ಮೂರು ಹೊಸ ಕಾರುಗಳು
ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್, ಹ್ಯಾರಿಯರ್ ಮತ್ತು ಆಲ್‌ಟ್ರೊಜ್ ನಂತರ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಮುಂಬರುವ ಕೆಲವೇ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಹೊಸ ಕಾರುಗಳ ಬಿಡುಗಡೆಗಾಗಿ ಈಗಾಗಲೇ ಅಂತಿಮ ಸಿದ್ದತೆಯಲ್ಲಿರುವ ಟಾಟಾ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಮೈಕ್ರೊ ಎಸ್‌ಯುವಿ ಹೆಚ್‌ಬಿಎಕ್ಸ್ ಕಾನ್ಸೆಪ್ಟ್, ಹ್ಯಾರಿಯರ್ ಪೆಟ್ರೋಲ್ ವರ್ಷನ್ ಮತ್ತು 7 ಸೀಟರ್ ಮಾದರಿಯಾದ ಗ್ರಾವಿಟಾಸ್ ಮಾದರಿಯನ್ನು ರಸ್ತೆಗಿಳಿಸುತ್ತಿದ್ದು, ಎಂಜಿನ್ ಮತ್ತು ತಾಂತ್ರಿಕ ಅಂಶಗಳ ಕುರಿತಾಗಿ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುತ್ತಿದೆ.

ಸಾಮಾನ್ಯವಾಗಿ ಹೊಸ ಕಾರುಗಳನ್ನು ಬಿಡುಗಡೆಗೂ ಮುನ್ನ ಪ್ರದೇಶಗಳಿಗೆ ಅನುಗುಣವಾಗಿ ರೋಡ್ ಟೆಸ್ಟಿಂಗ್ ನಡೆಸುವ ಆಟೋ ಕಂಪನಿಗಳು ವಿವಿಧ ಪ್ರದೇಶಗಳಲ್ಲಿನ ಪರ್ಫಾಮೆನ್ಸ್‌ಗೆ ಅನುಗುಣವಾಗಿರುವಂತೆ ಎಂಜಿನ್ ಕಾರ್ಯಕ್ಷಮತೆಯನ್ನು ನಿರ್ಧರಿಸುತ್ತವೆ.

ಟಾಟಾ ಕೂಡಾ ಇದೀಗ ಹೊಸ ಕಾರುಗಳ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದ್ದು, ವಿಷೇಶ ಅಂದ್ರೆ ಟಾಟಾ ಬಿಡುಗಡೆ ಮಾಡಲಿರುವ ಮೂರು ಹೊಸ ಕಾರುಗಳು ಒಂದೇ ಪ್ರದೇಶದಲ್ಲಿ ಒಟ್ಟಾಗಿ ರೋಡ್ ಟೆಸ್ಟಿಂಗ್ ನಡೆಸುತ್ತಿರುವುದು ಕಂಡುಬಂದಿದೆ.

ಕರೋನಾ ವೈರಸ್ ಹಿನ್ನಲೆಯಲ್ಲಿ ಹೊಸ ಕಾರುಗಳ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಮೊಟಕುಗೊಳಿಸಿದ್ದ ಟಾಟಾ ಕಂಪನಿಯು ಇದೀಗ ಹೊಸ ಸುರಕ್ಷಾ ಕ್ರಮಗಳೊಂದಿಗೆ ರೋಡ್ ಟೆಸ್ಟಿಂಗ್ ನಡೆಸುತ್ತಿದ್ದು, ಹೊಸ ಕಾರುಗಳಲ್ಲಿ ಮೊದಲ ಹೆಚ್‌ಪಿಎಕ್ಸ್ ಮೈಕ್ರೊ ಎಸ್‌ಯುವಿ ಬಿಡುಗಡೆಯಾದಗಲಿದ್ದರೆ ತನನಂತರ ಗ್ರಾವಿಟಾಸ್ ಮತ್ತು ಹ್ಯಾರಿಯರ್ ಪೆಟ್ರೋಲ್ ಮಾದರಿಯು ಬಿಡುಗಡೆಯಾಗಲಿದೆ.

ಹೆಚ್‌ಬಿಎಕ್ಸ್ ಮೈಕ್ರೊ ಎಸ್‌ಯುವಿ ಆವೃತ್ತಿಯು ಇದೇ ತಿಂಗಳ ಕೊನೆಯಲ್ಲಿ ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳ್ಳಲಿದ್ದು, ಹೊಸ ಕಾರನ್ನು ಮೊದಲ ಬಾರಿಗೆ 2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಲಾಗಿತ್ತು.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್ ನಂತರ ಅಲ್ಫಾ ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಮೇಲೆ ಉತ್ಪಾದನೆ ಮಾಡಲಾಗುತ್ತಿರುವ ಎರಡನೇ ಆವೃತ್ತಿಯಾಗಿರುವ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರು ಶೀಘ್ರದಲ್ಲೇ ಮಾರಾಟಕ್ಕೆ ಲಭ್ಯವಾಗಲಿದ್ದು, ಹೊಸ ಕಾರು 1.2-ಲೀಟರ್ ಸಾಮಾನ್ಯ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಇನ್ನು ಗ್ರಾವಿಟಾಸ್ ಕಾರು ಟಾಟಾ ನಿರ್ಮಾಣದ ಕಾರುಗಳಲ್ಲೇ ವಿಶೇಷ ವಿನ್ಯಾಸದ ಎಸ್‌ಯುವಿ ಆವೃತ್ತಿಯಾಗಿದ್ದು, ಹ್ಯಾರಿಯರ್ ಉತ್ಪಾದನೆಗಾಗಿ ಬಳಕೆ ಮಾಡಲಾಗಿದ್ದ OMEGA ಪ್ಲ್ಯಾಟ್‌ಫಾರ್ಮ್‌ನಡಿಯಲ್ಲೇ ಹೊಸ ಗ್ರಾವಿಟಾಸ್ ಅನ್ನು ಕೂಡಾ ಅಭಿವೃದ್ದಿಗೊಳಿಸಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

OMEGA ಕಾರು ಉತ್ಪಾದನಾ ತಂತ್ರಜ್ಞಾನವು ಟಾಟಾ ಹೊಸ ಕಾರುಗಳ ಅಭಿವೃದ್ದಿಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದ್ದು, ಗ್ರಾವಿಟಾಸ್ ಕಾರು ಕೂಡಾ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.

ಈ ಮೊದಲು ನಿಗದಿಪಡಿಸಿದ ಯೋಜನೆಯೆಂತೆ ಹೊಸ ಗ್ರಾವಿಟಾಸ್ ಕಾರು ಇದೇ ವರ್ಷ ಜೂನ್ ಅಥವಾ ಜುಲೈ ಅಂತ್ಯಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ ಕರೋನಾ ವೈರಸ್ ಪರಿಣಾಮ ಹೊಸ ಕಾರಿನ ಬಿಡುಗಡೆಯು 2021ರ ಆರಂಭದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.
MOST READ: ವಾಹನ ಖರೀದಿಯನ್ನು ಸುಲಭವಾಗಿಸಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

ಕೊನೆಯದಾಗಿ ಹ್ಯಾರಿಯರ್ ಪೆಟ್ರೋಲ್ ಮಾದರಿಯು ಸದ್ಯ ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಬದಲಾವಣೆಯ ನೀರಿಕ್ಷೆಯಲ್ಲಿದ್ದು, ಸದ್ಯ ಡೀಸೆಲ್ ಆವೃತ್ತಿಯಲ್ಲಿ ಮಾತ್ರ ಖರೀದಿಗೆ ಲಭ್ಯವಿರುವ ಹ್ಯಾರಿಯರ್ ಕಾರು ಹೊಸದಾಗಿ 1.5-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳುವ ಸಾಧ್ಯತೆಗಳಿವೆ.


Click it and Unblock the Notifications