ಉತ್ಪಾದನಾ ಮಾದರಿಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಟಾಟಾ ಮೈಕ್ರೊ ಎಸ್‌ಯುವಿ

ಟಾಟಾ ಹೊಚ್ಚ ಹೊಸ ಹೆಚ್‌ಬಿಎಕ್ಸ್ ಮೈಕ್ರೊ ಎಸ್‌ಯುವಿ ಆವೃತ್ತಿಯು ಶೀಘ್ರದಲ್ಲೇ ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳ್ಳಲು ಸಜ್ಜಾಗುತ್ತಿದ್ದು, ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಕೈಗೊಳ್ಳಲಾಗುತ್ತಿದೆ.

ರೋಡ್ ಟೆಸ್ಟಿಂಗ್ ನಡೆಸಿದ ಟಾಟಾ ಮೈಕ್ರೊ ಎಸ್‌ಯುವಿ

ಹೊಸ ವಾಹನಗಳ ಮಾರಾಟ ಪ್ರಕ್ರಿಯೆ ಜೊತೆಗೆ ಬಿಡುಗಡೆಯಾಗಲಿರುವ ಹೊಸ ವಾಹನಗಳ ಅಭಿವೃದ್ದಿ ಮೇಲೂ ಗಮನಹರಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಬಹುನೀರಿಕ್ಷಿತ ಹೆಚ್‌ಬಿಎಕ್ಸ್ ಮೈಕ್ರೊ ಎಸ್‌ಯುವಿ ಮತ್ತು ಗ್ರಾವಿಟಾಸ್ ಎಸ್‌ಯುವಿ ಬಿಡುಗಡೆಗೆ ಸಜ್ಜಾಗುತ್ತಿದ್ದು, ಎಂಟ್ರಿ ಲೆವಲ್‌ ಕಾರು ಮಾದರಿಯಾಗಿ ಬಿಡುಗಡೆಯಾಗಲಿರುವ ಮೈಕ್ರೊ ಎಸ್‌ಯುವಿ ಮಾದರಿಯು ಕಾನ್ಸೆಪ್ಟ್ ಮಾದರಿಯಲ್ಲೇ ಆಕರ್ಷಕ ವಿನ್ಯಾಸದೊಂದಿಗೆ ರಸ್ತೆಗಿಳಿಯಲು ಸಜ್ಜಾಗುತ್ತಿದೆ.

ರೋಡ್ ಟೆಸ್ಟಿಂಗ್ ನಡೆಸಿದ ಟಾಟಾ ಮೈಕ್ರೊ ಎಸ್‌ಯುವಿ

ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್ ನಂತರ ಅಲ್ಫಾ ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಮೇಲೆ ಉತ್ಪಾದನೆ ಮಾಡಲಾಗುತ್ತಿರುವ ಎರಡನೇ ಆವೃತ್ತಿಯಾಗಿರುವ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರು ಶೀಘ್ರದಲ್ಲೇ ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದ್ದು, ಹೊಸ ಕಾರನ್ನು ಡ್ಯುಯಲ್ ಟೋನ್ ಅಲಾಯ್ ವೀಲ್ಹ್‌ ಮತ್ತು ಆಕರ್ಷಕ ಫ್ರಂಟ್ ಫಾಸಿಯಾದೊಂದಿಗೆ ರೋಡ್ ಟೆಸ್ಟಿಂಗ್ ನಡೆಸುತ್ತಿರುವುದು ಕಂಡುಬಂದಿದೆ.

ರೋಡ್ ಟೆಸ್ಟಿಂಗ್ ನಡೆಸಿದ ಟಾಟಾ ಮೈಕ್ರೊ ಎಸ್‌ಯುವಿ

ಸಣ್ಣ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದರಿರುವ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಮೈಕ್ರೊ ಎಸ್‌ಯುವಿ ಮಾದರಿಯು ನಗರಪ್ರದೇಶಗಳಲ್ಲಿನ ಪ್ರಯಾಣಕ್ಕೆ ಸೂಕ್ತ ಆಯ್ಕೆಯಾಗಿದ್ದು, ಹೊಸ ಕಾರು 3,822-ಎಂಎಂ ಉದ್ದ, 1,822-ಎಂಎಂ ಉದ್ದ, 1,635-ಎಂಎಂ ಅಗಲ ಮತ್ತು 2,450-ಎಂಎಂ ವೀಲ್ಹ್‌ಬೆಸ್ ಹೊಂದಿದೆ.

ರೋಡ್ ಟೆಸ್ಟಿಂಗ್ ನಡೆಸಿದ ಟಾಟಾ ಮೈಕ್ರೊ ಎಸ್‌ಯುವಿ

ಹೊಸ ಕಾರಿನಲ್ಲಿ 1.2-ಲೀಟರ್ ಸಾಮಾನ್ಯ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಕುರಿತಾಗಿ ಇದುವರೆಗೂ ಯಾವುದೇ ನಿಖರ ಮಾಹಿತಿ ಲಭ್ಯವಾಗಿಲ್ಲ. ಮುಂಬರುವ ಜನವರಿ ಆರಂಭದಲ್ಲಿ ಹೊಸ ಕಾರಿನ ಉತ್ಪಾದನಾ ಆವೃತ್ತಿಯೊಂದಿಗೆ ಅಧಿಕೃತ ಹೆಸರನ್ನು ಅನಾವರಣಗೊಳಿಸುವ ಸಾಧ್ಯತೆಗಳಿದ್ದು, ಎಂಟ್ರಿ ಲೆವಲ್ ಕಾರುಗಳಲ್ಲಿ ಹೊಸ ಮೈಕ್ರೊ ಎಸ್‌ಯುವಿ ಭರ್ಜರಿ ಪೈಪೋಟಿ ನೀಡಲಿದೆ.

ರೋಡ್ ಟೆಸ್ಟಿಂಗ್ ನಡೆಸಿದ ಟಾಟಾ ಮೈಕ್ರೊ ಎಸ್‌ಯುವಿ

ಹೊಸ ಕಾರಿನಲ್ಲಿ ಸ್ಪೋರ್ಟಿ ಖದರ್ ಹೆಚ್ಚಿಸಲು ವಿಶೇಷ ಡಿಸೈನ್‌ಗಳನ್ನು ನೀಡಲಾಗಿದ್ದು, ಸ್ಪ್ಲಿಟ್ ಹೆಡ್‌ಲ್ಯಾಂಪ್ ಸೆಟ್‌ಅಪ್, ಆಕರ್ಷಕವಾದ ಬಂಪರ್, ಸ್ಕ್ವಾರ್ಡ್ ಔಟ್ ವೀಲ್ಹ್ ಆರ್ಚ್, ರೂಫ್ ಮೌಂಟೆಡ್ ಕ್ಯಾರಿಯರ್ ಸೌಲಭ್ಯಗಳು ಕಾರಿನ ಬಲಿಷ್ಠತೆ ಮತ್ತಷ್ಟು ಮೆರಗು ನೀಡಿವೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ರೋಡ್ ಟೆಸ್ಟಿಂಗ್ ನಡೆಸಿದ ಟಾಟಾ ಮೈಕ್ರೊ ಎಸ್‌ಯುವಿ

ಹೊಸ ಕಾರು ಮಾದರಿಯು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಫೀಚರ್ಸ್‌ಗಳನ್ನು ಪಡೆದುಕೊಳ್ಳುತ್ತಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ.4.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.50 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ.

ರೋಡ್ ಟೆಸ್ಟಿಂಗ್ ನಡೆಸಿದ ಟಾಟಾ ಮೈಕ್ರೊ ಎಸ್‌ಯುವಿ

ಸದ್ಯ ಮಾರುಕಟ್ಟೆಯಲ್ಲಿ ಸುರಕ್ಷತೆ ವಿಚಾರವಾಗಿ ಗ್ರಾಹಕರ ಮೆಚ್ಚುಗೆಗೆ ಕಾರಣವಾಗಿರುವ ಟಾಟಾ ಕಂಪನಿಯು ಎಂಟ್ರಿ ಲೆವಲ್ ಮಾದರಿಯಲ್ಲೂ ಉತ್ತಮ ಸೇಫ್ಟಿ ರೇಟಿಂಗ್ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದ್ದು, ಹೊಸ ಕಾರು ಮುಂಬರುವ ಮಾರ್ಚ್ ಹೊತ್ತಿಗೆ ಖರೀದಿಗೆ ಲಭ್ಯವಿರಲಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ರೋಡ್ ಟೆಸ್ಟಿಂಗ್ ನಡೆಸಿದ ಟಾಟಾ ಮೈಕ್ರೊ ಎಸ್‌ಯುವಿ

ಟಾಟಾ ಕಾರುಗಳು ಸದ್ಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯೊಂದಿಗೆ ಪ್ರತಿಸ್ಪರ್ಧಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ಮುಂಬರುವ ದಿನಗಳಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಹೊಸ ಕಾರುಗಳು ಎಂಟ್ರಿ ಲೆವಲ್ ಮಾದರಿಗಳಿಗೆ ಮಾತ್ರವಲ್ಲದೆ ಮಧ್ಯಮ ಕ್ರಮಾಂಕದ ಎಸ್‌ಯುವಿ ವಿಭಾಗದಲ್ಲೂ ಹೊಸ ಸಂಚಲನ ಮೂಡಿಸಲಿವೆ.

Article Published On: Wednesday, December 16, 2020, 8:45 [IST]
English summary
Tata HBX New Spy Image Reveals The Design Of The Front Fascia. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+