Just In
Don't Miss!
- Movies
ಜನವರಿ 22ರಂದು ಐದು ಕನ್ನಡ ಸಿನಿಮಾ ಬಿಡುಗಡೆ
- News
ಲಿಂಗಾಂಬೂದಿಪಾಳ್ಯ ಕೆರೆಗೆ ಹರಿಯಲಿದೆ ಕೆಆರ್ಎಸ್ ನೀರು
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Sports
ತವರಿಗೆ ಮರಳಿದ ಟೀಮ್ ಇಂಡಿಯಾ: ಮುಂಬೈನಲ್ಲಿ ರಹಾನೆಗೆ ಅದ್ದೂರಿ ಸ್ವಾಗತ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಡ್ಯುಯಲ್ ಟೋನ್ ಅಲಾಯ್ ವೀಲ್ಹ್‌ನೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಟಾಟಾ ಹೆಚ್‌ಬಿಎಕ್ಸ್
ಬಹುನೀರಿಕ್ಷಿತ ಟಾಟಾ ಹೆಚ್‌ಬಿಎಕ್ಸ್ ಮೈಕ್ರೊ ಎಸ್‌ಯುವಿ ಆವೃತ್ತಿಯು ಶೀಘ್ರದಲ್ಲೇ ಉತ್ಪಾದನಾ ಆವೃತ್ತಿಯನ್ನು ಪಡೆದುಕೊಳ್ಳಲು ಸಿದ್ದವಾಗುತ್ತಿದ್ದು, ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಮುಂದುವರಿಸಿದೆ.

ಟಾಟಾ ಮೋಟಾರ್ಸ್ ಕಂಪನಿಯು ಸದ್ಯ ಹೊಸ ವಾಹನಗಳ ಮಾರಾಟ ಪ್ರಕ್ರಿಯೆ ಜೊತೆಗೆ ಬಿಡುಗಡೆಯಾಗಲಿರುವ ಹೊಸ ವಾಹನಗಳ ಅಭಿವೃದ್ದಿ ಮೇಲೂ ಗಮನಹರಿಸುತ್ತಿದ್ದು, ಬಹುನೀರಿಕ್ಷಿತ ಹೆಚ್‌ಬಿಎಕ್ಸ್ ಮೈಕ್ರೊ ಎಸ್‌ಯುವಿ ಮತ್ತು ಗ್ರಾವಿಟಾಸ್ ಎಸ್‌ಯುವಿ ಬಿಡುಗಡೆಗೆ ಸಜ್ಜಾಗುತ್ತಿದೆ. ಹೀಗಾಗಿ ಬಿಡುಗಡೆಯಾಗಲಿರುವ ಹೊಸ ಕಾರುಗಳ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಲಾಕ್‌ಡೌನ್ ವಿನಾಯ್ತಿ ನಂತರ ತೀವ್ರಗೊಳಿಸಲಾಗಿದ್ದು, ಹೊಸ ಕಾರುಗಳು ಮುಂಬರುವ ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಖರೀದಿಗೆ ಲಭ್ಯವಿರಲಿವೆ.

ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್ ನಂತರ ಅಲ್ಫಾ ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಮೇಲೆ ಉತ್ಪಾದನೆ ಮಾಡಲಾಗುತ್ತಿರುವ ಎರಡನೇ ಆವೃತ್ತಿಯಾಗಿರುವ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರು ಶೀಘ್ರದಲ್ಲೇ ಉತ್ಪಾದನಾ ಮಾದರಿಯು ಸಹ ಅನಾವರಣಗೊಳ್ಳಲಿದ್ದು, ಹೊಸ ಕಾರನ್ನು ಡ್ಯುಯಲ್ ಟೋನ್ ಅಲಾಯ್ ವೀಲ್ಹ್‌ನೊಂದಿಗೆ ರೋಡ್ ಟೆಸ್ಟಿಂಗ್ ನಡೆಸುತ್ತಿರುವುದು ಕಂಡುಬಂದಿದೆ.

ಸಣ್ಣ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದರಿರುವ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಮೈಕ್ರೊ ಎಸ್‌ಯುವಿ ಮಾದರಿಯು ನಗರಪ್ರದೇಶಗಳಲ್ಲಿನ ಓಡಾಟಕ್ಕೆ ಸೂಕ್ತ ಆಯ್ಕೆಯಾಗಿದ್ದು, ಹೊಸ ಕಾರು 3,822-ಎಂಎಂ ಉದ್ದ, 1,822-ಎಂಎಂ ಉದ್ದ, 1,635-ಎಂಎಂ ಅಗಲ ಮತ್ತು 2,450-ಎಂಎಂ ವೀಲ್ಹ್‌ಬೆಸ್ ಹೊಂದಿದೆ.

ಹೊಸ ಕಾರಿನಲ್ಲಿ 1.2-ಲೀಟರ್ ಸಾಮಾನ್ಯ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಕುರಿತಾಗಿ ಇದುವರೆಗೂ ಯಾವುದೇ ನಿಖರ ಮಾಹಿತಿ ಲಭ್ಯವಾಗಿಲ್ಲ. ಮುಂಬರುವ ಜನವರಿ ಆರಂಭದಲ್ಲಿ ಹೊಸ ಕಾರಿನ ಉತ್ಪಾದನಾ ಆವೃತ್ತಿಯೊಂದಿಗೆ ಅಧಿಕೃತ ಹೆಸರನ್ನು ಅನಾವರಣಗೊಳಿಸುವ ಸಾಧ್ಯತೆಗಳಿದ್ದು, ಎಂಟ್ರಿ ಲೆವಲ್ ಕಾರುಗಳಲ್ಲಿ ಹೊಸ ಮೈಕ್ರೊ ಎಸ್‌ಯುವಿ ಭರ್ಜರಿ ಪೈಪೋಟಿ ನೀಡಲಿದೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಹೊಸ ಕಾರಿನಲ್ಲಿ ಸ್ಪೋರ್ಟಿ ಖದರ್ ಹೆಚ್ಚಿಸಲು ವಿಶೇಷ ಡಿಸೈನ್‌ಗಳನ್ನು ನೀಡಲಾಗಿದ್ದು, ಸ್ಪ್ಲಿಟ್ ಹೆಡ್‌ಲ್ಯಾಂಪ್ ಸೆಟ್‌ಅಪ್, ಆಕರ್ಷಕವಾದ ಬಂಪರ್, ಸ್ಕ್ವಾರ್ಡ್ ಔಟ್ ವೀಲ್ಹ್ ಆರ್ಚ್, ರೂಫ್ ಮೌಂಟೆಡ್ ಕ್ಯಾರಿಯರ್ ಸೌಲಭ್ಯಗಳು ಕಾರಿನ ಬಲಿಷ್ಠತೆ ಮತ್ತಷ್ಟು ಮೆರಗು ನೀಡಿವೆ.

ಹೊಸ ಕಾರು ಮಾದರಿಯು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಫೀಚರ್ಸ್‌ಗಳನ್ನು ಪಡೆದುಕೊಳ್ಳುತ್ತಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ.4.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.50 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಸದ್ಯ ಮಾರುಕಟ್ಟೆಯಲ್ಲಿ ಸುರಕ್ಷತೆ ವಿಚಾರವಾಗಿ ಗ್ರಾಹಕರ ಮೆಚ್ಚುಗೆಗೆ ಕಾರಣವಾಗಿರುವ ಟಾಟಾ ಕಂಪನಿಯು ಎಂಟ್ರಿ ಲೆವಲ್ ಮಾದರಿಯಲ್ಲೂ ಉತ್ತಮ ಸೇಫ್ಟಿ ರೇಟಿಂಗ್ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದ್ದು, ಹೊಸ ಕಾರು ಮುಂಬರುವ ಮಾರ್ಚ್ ಹೊತ್ತಿಗೆ ಖರೀದಿಗೆ ಲಭ್ಯವಿರಲಿದೆ.