ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 5 ವೆರಿಯೆಂಟ್‌ಗಳಲ್ಲಿ ಬಿಡುಗಡೆಯಾಗಲಿದೆ ಟಾಟಾ ಹೊಸ ಕಾರು

ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹೊಸ ಮಾದರಿಯ ವಿವಿಧ ಕಾರು ಆವೃತ್ತಿಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ದೆಹಲಿ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದ್ದ ಮೈಕ್ರೊ ಎಸ್‌ಯುವಿ ವೈಶಿಷ್ಟ್ಯತೆಯ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರನ್ನು ಇದೇ ವರ್ಷಾಂತ್ಯದೊಳಗೆ ಬಿಡುಗಡೆಗೊಳಿಸುವುದಾಗಿ ಸುಳಿವು ನೀಡಿದೆ.

ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 5 ವೆರಿಯೆಂಟ್‌ಗಳಲ್ಲಿ ಬಿಡುಗಡೆಯಾಗಲಿದೆ ಟಾಟಾ ಹೊಸ ಕಾರು

ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್ ನಂತರ ಅಲ್ಫಾ ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಮೇಲೆ ಉತ್ಪಾದನೆ ಮಾಡಲಾಗುತ್ತಿರುವ ಎರಡನೇ ಆವೃತ್ತಿಯಾಗಿರುವ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರು ಶೀಘ್ರದಲ್ಲೇ ಉತ್ಪಾದನಾ ಮಾದರಿಯು ಅನಾವರಣಗೊಳ್ಳಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ನೆಕ್ಸಾನ್‌ಗಿಂತ ಕೆಳದರ್ಜೆಯಲ್ಲಿ ಮಾರಾಟಗೊಳ್ಳಲಿದೆ. ಸಣ್ಣ ಗಾತ್ರದ ಎಸ್‌ಯುವಿ ಮಾದರಿಗಳಲ್ಲೇ ವಿಶೇಷ ಹೊರ ವಿನ್ಯಾಸ ಹೊಂದಿರುವ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರನ್ನ ಸದ್ಯ ವಿವಿಧ ಮಾದರಿಯಲ್ಲಿ ತಾಂತ್ರಿಕ ಸೌಲಭ್ಯಗಳ ಪರೀಕ್ಷೆಗಾಗಿ ರೋಡ್ ಟೆಸ್ಟಿಂಗ್‌ ನಡೆಸಲಾಗುತ್ತಿದ್ದು, ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದೆ.

ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 5 ವೆರಿಯೆಂಟ್‌ಗಳಲ್ಲಿ ಬಿಡುಗಡೆಯಾಗಲಿದೆ ಟಾಟಾ ಹೊಸ ಕಾರು

ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರು ಪೆಟ್ರೋಲ್ ಆವೃತ್ತಿಯಲ್ಲಿ ಮಾತ್ರವೇ ಮಾರಾಟಗೊಳ್ಳಲಿದ್ದು, ಮಾರುತಿ ಸುಜುಕಿ ಎಸ್-ಪ್ರೆಸ್ಸೊ, ಮಹೀಂದ್ರಾ ಕೆಯುವಿ100 ಮತ್ತು ರೆನಾಲ್ಟ್ ಕ್ವಿಡ್ ಕಾರುಗಳಿಗೆ ಪೈಪೋಟಿ ನೀಡಲಿರುವ ಹೊಸ ಕಾರು ಫಸ್ಟ್ ಇನ್ ಸೆಗ್ಮೆಂಟ್ ಫೀಚರ್ಸ್‌ಗಳೊಂದಿಗೆ ಐದು ವೆರೆಯೆಂಟ್‌ಗಳನ್ನು ಪಡೆದುಕೊಂಡಿರಲಿದೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಭಾರೀ ಪ್ರಮಾಣದ ದೇಣಿಗೆ ನೀಡಿದ ಟಿವಿಎಸ್ ಮೋಟಾರ್

ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 5 ವೆರಿಯೆಂಟ್‌ಗಳಲ್ಲಿ ಬಿಡುಗಡೆಯಾಗಲಿದೆ ಟಾಟಾ ಹೊಸ ಕಾರು

ಮೈಕ್ರೊ ಎಸ್‌ಯುವಿ ಕಾರುಗಳಲ್ಲಿ ಗಮನಸೆಳೆಯುವಂತಹ ಉದ್ದಳತೆ ಹೊಂದಿರುವ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರು 3,822-ಎಂಎಂ ಉದ್ದ, 1,822-ಎಂಎಂ ಉದ್ದ, 1,635-ಎಂಎಂ ಅಗಲ ಮತ್ತು 2,450-ಎಂಎಂ ವೀಲ್ಹ್‌ಬೆಸ್ ಹೊಂದಿದೆ.

ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 5 ವೆರಿಯೆಂಟ್‌ಗಳಲ್ಲಿ ಬಿಡುಗಡೆಯಾಗಲಿದೆ ಟಾಟಾ ಹೊಸ ಕಾರು

ಇದು ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನ ಉದ್ದಳತೆಗೆ ಸಮನಾವಾಗಿದೆ. ಇದರೊಂದಿಗೆ ಹ್ಯಾಚ್‌ಬ್ಯಾಕ್ ಕಾರುಗಳ ಮಾರಾಟದಲ್ಲೂ ಸದ್ದು ಮಾಡಲಿರುವ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರು 1.2-ಲೀಟರ್ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿದೆ.

1.2-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮಾದರಿಯು ಈಗಾಗಲೇ ಆಲ್‌ಟ್ರೊಜ್ ಮಾದರಿಯಲ್ಲಿ ಮಾರಾಟಗೊಳ್ಳುತ್ತಿದ್ದು, ಅದೇ ಎಂಜಿನ್ ಇದೀಗ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರಿನಲ್ಲೂ ಬಳಕೆ ಮಾಡಲು ಉದ್ದೇಶಿಸಲಾಗಿದೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ರೂ.100 ಕೋಟಿ ದೇಣಿಗೆ ನೀಡಿದ ಬಜಾಜ್ ಗ್ರೂಪ್

ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 5 ವೆರಿಯೆಂಟ್‌ಗಳಲ್ಲಿ ಬಿಡುಗಡೆಯಾಗಲಿದೆ ಟಾಟಾ ಹೊಸ ಕಾರು

86-ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿರುವ 1.2-ಲೀಟರ್ ಪೆಟ್ರೋಲ್ ಮಾದರಿಯು ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರಿಗೆ ಉತ್ತಮ ಆಯ್ಕೆಯಾಗಲಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದೆ.

ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 5 ವೆರಿಯೆಂಟ್‌ಗಳಲ್ಲಿ ಬಿಡುಗಡೆಯಾಗಲಿದೆ ಟಾಟಾ ಹೊಸ ಕಾರು

ಇದರೊಂದಿಗೆ ಹೊಸ ಕಾರಿನ ಸ್ಪೋರ್ಟಿ ಖದರ್ ಹೆಚ್ಚಿಸಲು ವಿಶೇಷ ಡಿಸೈನ್‌ಗಳನ್ನು ನೀಡಲಾಗಿದ್ದು, ಸ್ಪ್ಲಿಟ್ ಹೆಡ್‌ಲ್ಯಾಂಪ್ ಸೆಟ್‌ಅಪ್, ಆಕರ್ಷಕವಾದ ಬಂಪರ್, ಸ್ಕ್ವಾರ್ಡ್ ಔಟ್ ವೀಲ್ಹ್ ಆರ್ಚ್, ರೂಫ್ ಮೌಂಟೆಡ್ ಕ್ಯಾರಿಯರ್ ಸೌಲಭ್ಯಗಳು ಕಾರಿನ ಬಲಿಷ್ಠತೆ ಮತ್ತಷ್ಟು ಮೆರಗು ನೀಡಿವೆ.

MOST READ: ಕರೋನಾ ವೈರಸ್: ವೆಂಟಿಲೆಟರ್ ಉತ್ಪಾದನೆ ಚಾಲನೆ ನೀಡಿದ ಮಾರುತಿ ಸುಜುಕಿ

ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 5 ವೆರಿಯೆಂಟ್‌ಗಳಲ್ಲಿ ಬಿಡುಗಡೆಯಾಗಲಿದೆ ಟಾಟಾ ಹೊಸ ಕಾರು

ಎಲೆಕ್ಟ್ರಿಕ್ ಆವೃತ್ತಿಯಲ್ಲೂ ಬಿಡುಗಡೆಗೆ ಸಿದ್ದತೆ

ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರು ಕೇವಲ ಪೆಟ್ರೋಲ್ ಆವೃತ್ತಿಯಲ್ಲಿ ಮಾತ್ರವಲ್ಲ ಎಲೆಕ್ಟ್ರಿಕ್ ಆವೃತ್ತಿಯಲ್ಲೂ ಬಿಡುಗಡೆಗೆ ಸಿದ್ದತೆ ನಡೆಸಲಾಗುತ್ತಿದ್ದು, ಮೊದಲು ಪೆಟ್ರೋಲ್ ಆವೃತ್ತಿಯ ಬಿಡುಗಡೆಯ ನಂತರವಷ್ಟೇ ಎಲೆಕ್ಟ್ರಿಕ್ ವರ್ಷನ್ ಮಾರುಕಟ್ಟೆ ಪ್ರವೇಶಿಸಲಿದೆ.

ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 5 ವೆರಿಯೆಂಟ್‌ಗಳಲ್ಲಿ ಬಿಡುಗಡೆಯಾಗಲಿದೆ ಟಾಟಾ ಹೊಸ ಕಾರು

ಬಿಡುಗಡೆಯ ಅವಧಿಯ ಮತ್ತು ಬೆಲೆ(ಅಂದಾಜು)

ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಪೆಟ್ರೋಲ್ ಆವೃತ್ತಿಯನ್ನು ಇದೇ ವರ್ಷದ ಜೂನ್ ಜುಲೈ ಹೊತ್ತಿಗೆ ಬಿಡುಗೆಡೆಗೊಳ್ಳಬಹುದೆಂದು ನೀರಿಕ್ಷೆ ಮಾಡಲಾಗಿತ್ತು. ಆದರೆ ಮಾರುಕಟ್ಟೆಯಲ್ಲಿ ಸನ್ನಿವೇಶದ ಆಧಾರದ ಮೇಲೆ ಹೊಸ ಕಾರು ಬಿಡುಗಡೆಯನ್ನು ನವೆಂಬರ್ ಅಂತ್ಯಕ್ಕೆ ಮುಂದೂಡಲಾಗಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ.5.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.7 ಲಕ್ಷ ಬೆಲೆ ಪಡೆದುಕೊಳ್ಳಬಹುದೆಂದು ಅಂದಾಜಿಸಲಾಗಿದೆ.

Article Published On: Friday, April 10, 2020, 8:45 [IST]
English summary
Tata HBX To Be Launched With 5 Segment-First Features. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+