ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ವಿತರಣೆ ಪಡೆದ ಟಾಟಾ ಮೋಟಾರ್ಸ್ ಅಧ್ಯಕ್ಷ

ಟಾಟಾ ಮೋಟಾರ್ಸ್ ಕಂಪನಿಯು ಇತ್ತೀಚೆಗೆ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ 1,000ನೇ ಯುನಿಟ್ ಅನ್ನು ಉತ್ಪಾದಿಸಿತ್ತು. ಇದೀಗ ಕಂಪನಿಯು ನೆಕ್ಸಾನ್ ಎಲೆಕ್ಟ್ರಿಕ್ ಕಾರ್ ಅನ್ನು ಟಾಟಾ ಮೋಟಾರ್ಸ್ ಅಧ್ಯಕ್ಷರಿಗೆ ವಿತರಿಸಿದ್ದು, ನೆಕ್ಸಾನ್ ಇವಿ ಮಾದರಿಯು ಟಾಟಾ ಮೋಟಾರ್ಸ್ ಕಂಪನಿಯ ಮೊದಲ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯಾಗಿರುವುದಲ್ಲದೆ ಭಾರೀ ಜನಪ್ರಿಯತೆ ಹೊಂದುತ್ತಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ವಿತರಣೆ ಪಡೆದ ಟಾಟಾ ಮೋಟಾರ್ಸ್ ಅಧ್ಯಕ್ಷ

ಟಾಟಾ ನೆಕ್ಸಾನ್ ಇವಿಯನ್ನು ಈ ಹಿಂದೆ ಫೆಬ್ರುವರಿಯಲ್ಲಿ ಬಿಡುಗಡೆಗೊಳಿಸಲಾಗಿತ್ತು. ಟಾಟಾ ಮೋಟಾರ್ಸ್ ಕಂಪನಿಯು ಈ ಎಸ್‌ಯುವಿಯನ್ನು ಜಿಪ್‌ಟ್ರಾನ್ ಟೆಕ್ನಾಲಜಿಯೊಂದಿಗೆ ಅಭಿವೃದ್ಧಿಪಡಿಸಿದೆ. ಈ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆಯಾದಾಗಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಈ ಎಸ್‌ಯುವಿ ದೇಶಿಯ ಮಾರುಕಟ್ಟೆಯಲ್ಲಿ ಎಂಜಿ ಮೋಟಾರ್ಸ್ ಕಂಪನಿಯ ಝಡ್‌ಎಸ್ ಇವಿ ಹಾಗೂ ಹ್ಯುಂಡೈ ಕಂಪನಿಯ ಕೋನಾ ಎಲೆಕ್ಟ್ರಿಕ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುತ್ತದೆ. ಇದೀಗ ಟಾಟಾ ಸನ್ಸ್ ಮತ್ತು ಟಾಟಾ ಮೋಟಾರ್ಸ್ ಅಧ್ಯಕ್ಷರಾಗಿರುವ ಎನ್.ಚಂದ್ರಶೇಖರನ್ ಹೊಸ ಕಾರಿನ ವಿತರಣೆ ಪಡೆಯುವ ಮೂಲಕ ಕಾರಿನ ಜನಪ್ರಿಯತೆ ಮತ್ತಷ್ಟು ಹೆಚ್ಚಿಸಿದ್ದಾರೆ.

ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ವಿತರಣೆ ಪಡೆದ ಟಾಟಾ ಮೋಟಾರ್ಸ್ ಅಧ್ಯಕ್ಷ

ಹೊಸ ಎಲೆಕ್ಟ್ರಿಕ್ ಕಾರು ಮಾದರಿಯು ಗ್ರಾಹಕರ ಬೇಡಿಕೆ ಅನುಸಾರವಾಗಿ ಪ್ರಮುಖ ವೆರಿಯೆಂಟ್‌ನೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.15.99 ಲಕ್ಷ ಬೆಲೆ ಪಡೆದುಕೊಂಡಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ವಿತರಣೆ ಪಡೆದ ಟಾಟಾ ಮೋಟಾರ್ಸ್ ಅಧ್ಯಕ್ಷ

ನೆಕ್ಸಾನ್ ಎಲೆಕ್ಟ್ರಿಕ್ ಕಾರು ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್‍ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರೆಯೆಂಟ್‌ಗಳಲ್ಲಿ ಬಿಡುಗಡೆಗೊಳಿಸಲಾಗಿದ್ದು, ಮೂರು ವೆರಿಯೆಂಟ್‌ಗಳಲ್ಲೂ ಹಲವಾರು ಹೊಸ ಫೀಚರ್ಸ್‌ಗಳಿವೆ.

ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ವಿತರಣೆ ಪಡೆದ ಟಾಟಾ ಮೋಟಾರ್ಸ್ ಅಧ್ಯಕ್ಷ

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರನ್ನು ಸಾಮಾನ್ಯ ಮಾದರಿಯ ನೆಕ್ಸಾನ್ ಫೇಸ್‍‍ಲಿಫ್ಟ್ ಸ್ಟ್ಯಾಂಡರ್ಡ್ ಕಾರಿನ ಆಧಾರದ ಮೇಲೆ ತಯಾರಿಸಲಾಗಿದ್ದು, ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ 95 ಕಿ.ವ್ಯಾಟ್ ಎಲೆಕ್ಟ್ರಿಕ್ ಮೋಟಾರ್ ಅಳವಡಿಸಲಾಗಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ವಿತರಣೆ ಪಡೆದ ಟಾಟಾ ಮೋಟಾರ್ಸ್ ಅಧ್ಯಕ್ಷ

ಎ‍ಆರ್‌ಎಐ ಪ್ರಮಾಣ ಪತ್ರದಂತೆ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಒಂದು ಬಾರಿಗೆ ಪೂರ್ತಿಯಾಗಿ ಚಾರ್ಜ್ ಆದಲ್ಲಿ ಗರಿಷ್ಠ 312 ಕಿ.ಮೀವರೆಗೂ ಚಲಿಸುತ್ತದೆ ಎನ್ನಲಾಗಿದ್ದು, ಆದರೆ ನೈಜ ಪರಿಸ್ಥಿತಿಗಳಿಗೆ ಅನುಗುಣವಾಗಿ ಈ ಕಾರು 250 ಕಿ.ಮೀನಿಂದ- 300ಕಿ.ಮೀವರೆಗೂ ಚಲಿಸುವುವುದು ಫಸ್ಟ್ ಡ್ರೈವ್‌ ಟೆಸ್ಟಿಂಗ್‌ನಲ್ಲಿ ಸಾಬೀತಾಗಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ವಿತರಣೆ ಪಡೆದ ಟಾಟಾ ಮೋಟಾರ್ಸ್ ಅಧ್ಯಕ್ಷ

ಇನ್ನು ದೇಶಾದ್ಯಂತ ಸದ್ಯ ಎಲೆಕ್ಟ್ರಿಕ್ ವಾಹನ ಮಾರಾಟವು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದರೂ ಸಹ ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆಯಿಂದಾಗಿ ಬಹುತೇಕ ಎಲೆಕ್ಟ್ರಿಕ್ ವಾಹನ ಖರೀದಿದಾರರು ಹಿಂದೇಟು ಹಾಕುತ್ತಿದ್ದಾರೆ.

MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್

ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ವಿತರಣೆ ಪಡೆದ ಟಾಟಾ ಮೋಟಾರ್ಸ್ ಅಧ್ಯಕ್ಷ

ಈ ವಿಚಾರವಾಗಿ ಮಹತ್ವದ ನಿರ್ಣಯ ಕೈಗೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ದೇಶದ ಪ್ರಮುಖ ನಗರಗಳಲ್ಲಿ 300ಕ್ಕೂ ಹೆಚ್ಚು ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲು ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಟಿಯಾಗೋ ಮತ್ತು ನೆಕ್ಸಾನ್ ಇವಿ ನಂತರ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ವಿತರಣೆ ಪಡೆದ ಟಾಟಾ ಮೋಟಾರ್ಸ್ ಅಧ್ಯಕ್ಷ

ಪ್ರಸ್ತುತ ಮಾರುಕಟ್ಟೆಯಲ್ಲಿ ಹಲವಾರು ಎಲೆಕ್ಟ್ರಿಕ್ ವಾಹನಗಳು ಖರೀದಿಗೆ ಲಭ್ಯವಿದ್ದರೂ ಸಹ ಅವಶ್ಯಕತೆಗೆ ಅನುಗುಣವಾಗಿ ಚಾರ್ಜಿಂಗ್ ಸ್ಟೆಷನ್‌ಗಳು ಇಲ್ಲದಿರುವುದು ಇವಿ ವಾಹನ ಮಾರಾಟದಲ್ಲಿ ತೀವ್ರಗತಿಯ ಬೆಳವಣಿಗೆ ಸಾಧಿಸಲು ಸಾಧ್ಯವಾಗುತ್ತಿಲ್ಲ.

MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ವಿತರಣೆ ಪಡೆದ ಟಾಟಾ ಮೋಟಾರ್ಸ್ ಅಧ್ಯಕ್ಷ

ಕೇಂದ್ರ ಸರ್ಕಾರವು ಸಹ ಎಲೆಕ್ಟ್ರಿಕ್ ವಾಹನ ಮೇಲಿನ ಖರೀದಿಗೆ ಮಾತ್ರವಲ್ಲದೇ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣದ ಮೇಲೂ ಆಕರ್ಷಕ ಸಬ್ಸಡಿ ದರವನ್ನು ನೀಡುತ್ತಿದ್ದು, ಇದೀಗ ಟಾಟಾ ಸೇರಿದಂತೆ ಹಲವಾರು ಆಟೋ ಉತ್ಪಾದನಾ ಸಂಸ್ಥೆಗಳು ಫೇಮ್-2 ಯೋಜನೆ ಅಡಿ ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕೆ ಮುಂದಾಗಿವೆ.

Article Published On: Saturday, August 22, 2020, 19:41 [IST]
English summary
Tata Nexon EV Delivered To Chairman. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+