ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿಗಳ ವಿತರಣೆಯನ್ನು ಆರಂಭಿಸಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಕೇರಳದ ಮೋಟಾರು ವಾಹನ ಇಲಾಖೆಗೆ ತನ್ನ ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿಗಳ ವಿತರಣೆಯನ್ನು ಅಧಿಕೃತವಾಗಿ ಆರಂಭಿಸಿದೆ. ಕೇರಳ ಮೋಟಾರು ವಾಹನ ಇಲಾಖೆಯು 65 ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿಗಳಿಗಾಗಿ ಆದೇಶ ನೀಡಿತ್ತು.

ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿಗಳ ವಿತರಣೆಯನ್ನು ಆರಂಭಿಸಿದ ಟಾಟಾ ಮೋಟಾರ್ಸ್

ಕೇರಳ ಮೋಟಾರು ವಾಹನ ಇಲಾಖೆಯು ಸುರಕ್ಷಿತ ಕೇರಳ ಯೋಜನೆಯ ಅಂಗವಾಗಿ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿಗಳನ್ನು ಖರೀದಿಸುತ್ತಿದೆ. ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿಗಳನ್ನು ಈ ಯೋಜನೆಯಲ್ಲಿ ಬಳಸಲಾಗುವುದು. ಕೇರಳ ಮೋಟಾರು ವಾಹನ ಇಲಾಖೆಯ ಅಧಿಕೃತ ಲೊಗೊವನ್ನು ಈಗ ವಿತರಿಸಲಾದ ಕಾರುಗಳ ಸುತ್ತಲೂ ಅಳವಡಿಸಲಾಗಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿಗಳ ವಿತರಣೆಯನ್ನು ಆರಂಭಿಸಿದ ಟಾಟಾ ಮೋಟಾರ್ಸ್

ಈ ಎಸ್‌ಯುವಿಗಳಲ್ಲಿ ರೇಡಿಯೋ ಹಾಗೂ ಸ್ಟ್ರಾಪ್ ಲೈಟ್‌ನಂತಹ ಹೆಚ್ಚುವರಿ ಎಕ್ವಿಪ್ ಮೆಂಟ್ ಗಳಿವೆಯೇ ಎಂಬುದು ದೃಢಪಟ್ಟಿಲ್ಲ. ಆದರೆ ಸಾಮಾನ್ಯವಾಗಿ ಈ ಎಕ್ವಿಪ್ ಮೆಂಟ್ ಗಳನ್ನು ಮೋಟಾರು ವಾಹನ ಉದ್ಯಮದ ವಾಹನಗಳಲ್ಲಿ ಅಳವಡಿಸಲಾಗುತ್ತದೆ. ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿ ಕೂಡ ಈ ಎಕ್ವಿಪ್ ಮೆಂಟ್ ಗಳನ್ನು ಪಡೆಯುವ ಸಾಧ್ಯತೆಗಳಿವೆ.

MOSTREAD: ಮದುವೆ ಉಂಗುರದ ಶೋಧಕ್ಕಾಗಿ ಚೆಲ್ಲಾಪಿಲ್ಲಿಯಾದ ಕಾರಿನ ಇಂಟಿರಿಯರ್

ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿಗಳ ವಿತರಣೆಯನ್ನು ಆರಂಭಿಸಿದ ಟಾಟಾ ಮೋಟಾರ್ಸ್

ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿಯು ರಾಡಾರ್ ಸ್ಪೀಡ್ ಸೆನ್ಸಾರ್‌ ಹಾಗೂ ಕ್ಯಾಮೆರಾ ಸೇರಿದಂತೆ ಹಲವಾರು ಎಕ್ವಿಪ್ ಮೆಂಟ್ ಗಳನ್ನು ಹೊಂದಿದೆ. ವಾಹನದ ಹೊರಭಾಗದಲ್ಲಿ ಬೇರೆ ಯಾವುದೇ ಬದಲಾವಣೆಗಳು ಕಂಡುಬಂದಿಲ್ಲ. ಈ ಎಲೆಕ್ಟ್ರಿಕ್ ಕಾರುಗಳನ್ನು ಫೆಡರಲ್ ಸರ್ಕಾರಿ ಸಂಸ್ಥೆಯಾದ ಎನರ್ಜಿ ಎಫಿಷಿಯೆನ್ಸಿ ಸರ್ವೀಸಸ್ ಲಿಮಿಟೆಡ್ (ಇಇಎಸ್ಎಲ್) ಖರೀದಿಸಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿಗಳ ವಿತರಣೆಯನ್ನು ಆರಂಭಿಸಿದ ಟಾಟಾ ಮೋಟಾರ್ಸ್

ಇವುಗಳನ್ನು ಕೇರಳ ಮೋಟಾರು ವಾಹನ ಇಲಾಖೆ ಇಇಎಸ್‌ಎಲ್‌ನಿಂದ ಗುತ್ತಿಗೆ ಪಡೆದಿದೆ. ಈ ಹೊಸ ಕಾರುಗಳ ಮೆಂಟೆನೆನ್ಸ್ ಅನ್ನು ಇಇಎಸ್ಎಲ್ ಸಹ ನೋಡಿಕೊಳ್ಳಲಿದೆ. ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ.

MOSTREAD: ಬೀದಿ ನಾಯಿಯೇ ಈ ಶೋರೂಂನ ರಿಸೆಪ್ಶನಿಸ್ಟ್

ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿಗಳ ವಿತರಣೆಯನ್ನು ಆರಂಭಿಸಿದ ಟಾಟಾ ಮೋಟಾರ್ಸ್

ಇಇಎಸ್ಎಲ್, ಸರ್ಕಾರದ ಇಲಾಖೆಗಳ ಬಳಕೆಗಾಗಿ ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿ ಭಾರತದಲ್ಲಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿಗಳ ವಿತರಣೆಯನ್ನು ಆರಂಭಿಸಿದ ಟಾಟಾ ಮೋಟಾರ್ಸ್

ಇದು ಭಾರತದಲ್ಲಿ ಮಾರಾಟವಾಗುತ್ತಿರುವ ಕಡಿಮೆ ಬೆಲೆಯ ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿಯನ್ನು ಮೂರು ಮಾದರಿಗಳಲ್ಲಿ ಮಾರಾಟ ಮಾಡಲಾಗುತ್ತದೆ.

MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು

ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿಗಳ ವಿತರಣೆಯನ್ನು ಆರಂಭಿಸಿದ ಟಾಟಾ ಮೋಟಾರ್ಸ್

ಇಇಎಸ್ಎಲ್, ಎಕ್ಸ್‌ ಝಡ್ ಪ್ಲಸ್ ಮಾದರಿಯನ್ನು ಖರೀದಿಸಿರುವ ಸಾಧ್ಯತೆಗಳಿವೆ. ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿಯ ಆರಂಭಿಕ ಬೆಲೆ ಭಾರತದ ಎಕ್ಸ್ ಶೋರೂಂ ದರದಂತೆ ರೂ.13.99 ಲಕ್ಷಗಳಾಗಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿಗಳ ವಿತರಣೆಯನ್ನು ಆರಂಭಿಸಿದ ಟಾಟಾ ಮೋಟಾರ್ಸ್

ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನಲ್ಲಿ 30.2 ಕಿ.ವ್ಯಾನ ಲಿಥಿಯಂ ಐಯಾನ್ ಬ್ಯಾಟರಿ ಅಳವಡಿಸಲಾಗಿದೆ. ಈ ಬ್ಯಾಟರಿ ಪೂರ್ತಿಯಾಗಿ ಚಾರ್ಜ್ ಆದ ನಂತರ ಈ ಕಾರು 312 ಕಿ.ಮೀಗಳವರೆಗೆ ಚಲಿಸುತ್ತದೆ ಎಂದು ಹೇಳಲಾಗಿದೆ. ಆದರೆ ವಾಸ್ತವದಲ್ಲಿ ಇದಕ್ಕಿಂತ ದೂರ ಚಲಿಸುವ ಸಾಧ್ಯತೆಗಳಿವೆ.

MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ

ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿಗಳ ವಿತರಣೆಯನ್ನು ಆರಂಭಿಸಿದ ಟಾಟಾ ಮೋಟಾರ್ಸ್

ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರ್ಕಾರವು ಹೆಚ್ಚಿನ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಳಸುತ್ತಿದೆ. ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಿದಂತೆ ವಾಯುಮಾಲಿನ್ಯದ ಸಮಸ್ಯೆ ಮಾತ್ರವಲ್ಲದೆ ಕಚ್ಚಾ ತೈಲ ಆಮದು ಸಮಸ್ಯೆಯೂ ನಿಯಂತ್ರಣಕ್ಕೆ ಬರುತ್ತದೆ.

Most Read Articles

Kannada
English summary
Tata Motors delivers Tata Nexon Ev to Kerala motor vehicle department. Read in Kannada.
Story first published: Monday, September 21, 2020, 13:46 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X