ಸಫಾರಿ, ನ್ಯಾನೊ ಕಾರುಗಳನ್ನು ಸ್ಥಗಿತಗೊಳಿಸಿದ ಟಾಟಾ ಮೋಟಾರ್ಸ್
ಟಾಟಾ ಮೋಟಾರ್ಸ್ ತನ್ನ ನ್ಯಾನೊ ಕಾರ್ ಅನ್ನು ಭಾರತದಲ್ಲಿ ಮಾರಾಟ ಮಾಡುವುದನ್ನು ನಿಲ್ಲಿಸಿದೆ. ಕಂಪನಿಯ ಅಧಿಕೃತ ವೆಬ್‌ಸೈಟ್‌ನಿಂದ ಸಫಾರಿ ಸ್ಟಾರ್ಮ್ ಕಾರಿನ ಹೆಸರನ್ನು ಸಹ ತೆಗೆದುಹಾಕಲಾಗಿದೆ.

ಭಾರತದಲ್ಲಿ ಹೊಸ ಮಾಲಿನ್ಯ ನಿಯಮಗಳು ಏಪ್ರಿಲ್ 1ರಿಂದ ಜಾರಿಗೆ ಬಂದಿವೆ. ಬಿಎಸ್ 4 ವಾಹನಗಳ ಮಾರಾಟಕ್ಕೆ ಮಾರ್ಚ್ 31ರವರೆಗೆ ಗಡುವು ವಿಧಿಸಲಾಗಿತ್ತು. ಕರೋನಾ ವೈರಸ್ ಹಾವಳಿಯ ಹಿನ್ನೆಲೆಯಲ್ಲಿ ಈ ಗಡುವನ್ನು ಏಪ್ರಿಲ್ 24ರವರೆಗೆ ವಿಸ್ತರಿಸಲಾಗಿದೆ.

ಈಗ ಎಲ್ಲಾ ವಾಹನ ತಯಾರಕ ಕಂಪನಿಗಳು ತಮ್ಮ ಉತ್ಪಾದನಾ ಘಟಕಗಳನ್ನು ತಾತ್ಕಾಲಿಕವಾಗಿ ಮುಚ್ಚಿದ್ದು, ತಮ್ಮ ವಾಹನಗಳನ್ನು ಬಿಎಸ್ 6 ನಿಯಮಗಳಿಗೆ ತಕ್ಕಂತೆ ಅಪ್‌ಗ್ರೇಡ್ ಮಾಡುವುದನ್ನು ಸ್ಥಗಿತಗೊಳಿಸಿವೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ಬಿಎಸ್ 6 ನಿಯಮಗಳಿಗೆ ತಕ್ಕಂತೆ ಅಪ್‌ಗ್ರೇಡ್ ಮಾಡಲು ಸಾಧ್ಯವಾಗದ ವಾಹನಗಳ ಮಾರಾಟವನ್ನು ನಿಲ್ಲಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಟಾಟಾ ಮೋಟಾರ್ಸ್ ನ್ಯಾನೊ ಹಾಗೂ ಸಫಾರಿ ಸ್ಟಾರ್ಮ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸಿ ಅವುಗಳ ಹೆಸರನ್ನು ವೆಬ್‌ಸೈಟ್‌ನಿಂದ ತೆಗೆದುಹಾಕಿದೆ.

ಬಿಎಸ್ 6 ಅಪ್‌ಗ್ರೇಡ್ ಜೊತೆಗೆ ನ್ಯಾನೊ ಕಾರು ಮಾರಾಟದಲ್ಲಿ ನಿರಂತರ ಕುಸಿತ ಕಂಡ ಕಾರಣಕ್ಕೆ ಹಾಗೂ ಹೊಸ ಕ್ರ್ಯಾಶ್ ಟೆಸ್ಟ್ ದುಬಾರಿಯಾದ ಕಾರಣಕ್ಕೆ ನ್ಯಾನೊ ಕಾರ್ ಅನ್ನು ಸ್ಥಗಿತಗೊಳಿಸಲಾಗಿದೆ.
MOSTREAD: ವಾಹನ ಉತ್ಪಾದನೆ ಸ್ಥಗಿತದಿಂದಾಗಿ ಸಾವಿರಾರು ಕೋಟಿ ನಷ್ಟ

ನ್ಯಾನೋ ಕಾರಿನಲ್ಲಿ 624 ಸಿಸಿಯ ಟ್ವಿನ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 38 ಬಿಹೆಚ್‌ಪಿ ಪವರ್ ಹಾಗೂ 51 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‌ನೊಂದಿಗೆ 4-ಸ್ಪೀಡ್ ಮ್ಯಾನುವಲ್ ಹಾಗೂ ಎಎಂಟಿ ಗೇರ್‌ಬಾಕ್ಸ್‌ಗಳನ್ನು ನೀಡಲಾಗುತ್ತದೆ.

ಎಎಂಟಿ ಗೇರ್‌ಬಾಕ್ಸ್ ಕಾರಿನ ಹಿಂದಿರುವ ವ್ಹೀಲ್‌ಗಳಿಗೆ ಪವರ್ ನೀಡುತ್ತದೆ. ಟಾಟಾ ಮೋಟಾರ್ಸ್ ಸದ್ಯಕ್ಕೆ ದೇಶಿಯ ಮಾರುಕಟ್ಟೆಯಲ್ಲಿ ಸಫಾರಿ ಸ್ಟಾರ್ಮ್ ಮಾದರಿಯನ್ನು ಬಿಡುಗಡೆಗೊಳಿಸಿ ಮಾರಾಟ ಮಾಡುತ್ತಿದೆ.
MOST READ:ವಾಹನ ಸವಾರರ ಕಾಲಿಗೆ ಬೀಳುತ್ತೇನೆಂದ ಸಂಚಾರಿ ಪೊಲೀಸ್, ಕಾರಣವೇನು ಗೊತ್ತಾ?

ಸಫಾರಿ ಸ್ಟಾರ್ಮ್ ಮಾದರಿಯಲ್ಲಿ 2.2 ಲೀಟರ್ ವಾರಿಯರ್ 400 ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಹೊಂದಿದ್ದು, 154 ಬಿಹೆಚ್‌ಪಿ ಪವರ್ ಹಾಗೂ 400 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಟಾಟಾ ಸಫಾರಿ ಸ್ಟಾರ್ಮ್ ಮಾದರಿಯಲ್ಲಿ ಟ್ರಾನ್ಸ್‌ಮಿಷನ್ ಸಿಸ್ಟಂ ಆಗಿ ಅಳವಡಿಸಲಾಗಿದೆ. ಇದರ ಜೊತೆಗೆ, ಎಲೆಕ್ಟ್ರಾನಿಕ್ ಶಿಫ್ಟ್ ಆನ್-ಫ್ಲೈನೊಂದಿಗೆ 4x4 ಸಿಸ್ಟಂ ಅನ್ನು ಸಹ ನೀಡಲಾಗಿದೆ.
MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್

ಟಾಟಾ ಸಫಾರಿ ಮಾದರಿಯನ್ನು 20 ವರ್ಷಗಳಿಂದ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತ್ತಿತ್ತು. ಸದ್ಯಕ್ಕೆ ನ್ಯಾನೋ ಹಾಗೂ ಸ್ಟಾರ್ಮ್ ಮಾದರಿಗಳ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಟಾಟಾ ಮೋಟಾರ್ಸ್‌ನ ಉತ್ಪಾದನಾ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ.


Click it and Unblock the Notifications








