ಸುಧಾರಿತ ತಂತ್ರಜ್ಞಾನ ಪ್ರೇರಿತ ಟಾಟಾ ಎಲೆಕ್ಟ್ರಿಕ್ ಬಸ್‌ಗಳ ಚಾಲನೆಗೆ ಗ್ರೀನ್ ಸಿಗ್ನಲ್

ಟಾಟಾ ಮೋಟಾರ್ಸ್ ಕಂಪನಿಯು ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಅಡಿ ವಿವಿಧ ರಾಜ್ಯಗಳ ಸಾರಿಗೆ ನಿಗಮಗಳಿಂದ ಎಲೆಕ್ಟ್ರಿಕ್ ಬಸ್‌ಗಳ ಪೂರೈಕೆಗೆ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಂಡಿದ್ದು, ಬೇಡಿಕೆ ಅನುಸಾರವಾಗಿ ಇದೀಗ ಹೊಸ ಎಲೆಕ್ಟ್ರಿಕ್ ಬಸ್ ಮಾದರಿಗಳನ್ನು ವಿತರಣೆ ಮಾಡುತ್ತಿದೆ.

ಸುಧಾರಿತ ತಂತ್ರಜ್ಞಾನ ಪ್ರೇರಿತ ಟಾಟಾ ಎಲೆಕ್ಟ್ರಿಕ್ ಬಸ್‌ಗಳ ಚಾಲನೆಗೆ ಗ್ರೀನ್ ಸಿಗ್ನಲ್

ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ಪರಿಣಾಮಕಾರಿಯಾಗಿ ತಗ್ಗಿಸುವ ಉದ್ದೇಶದಿಂದ ವಿವಿಧ ರಾಜ್ಯಗಳಲ್ಲಿ ಸಾರ್ವಜನಿಕ ಸಾರಿಗೆ ವಾಹನಗಳನ್ನು ಡೀಸೆಲ್‌ಗೆ ಬದಲಾಗಿ ಎಲೆಕ್ಟ್ರಿಕ್ ಮಾದರಿಗಳ ಬಳಕೆಯತ್ತ ಗಮನಹರಿಸಲಾಗುತ್ತಿದ್ದು, ಎಲೆಕ್ಟ್ರಿಕ್ ಬಸ್ ನಿರ್ಮಾಣದಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಗೆ ಹೊಸ ಮಾದರಿಯ ಎಲೆಕ್ಟ್ರಿಕ್ ಬಸ್‌ಗಳ ಪೂರೈಕೆಗಾಗಿ ವಿವಿಧ ರಾಜ್ಯ ಸರ್ಕಾರಗಳು ಭಾರೀ ಪ್ರಮಾಣದಲ್ಲಿ ಬೇಡಿಕೆ ಸಲ್ಲಿಸಿವೆ.

ಸುಧಾರಿತ ತಂತ್ರಜ್ಞಾನ ಪ್ರೇರಿತ ಟಾಟಾ ಎಲೆಕ್ಟ್ರಿಕ್ ಬಸ್‌ಗಳ ಚಾಲನೆಗೆ ಗ್ರೀನ್ ಸಿಗ್ನಲ್

ಎಲೆಕ್ಟ್ರಿಕ್ ವಾಹನಗಳನ್ನು ಬಳಕೆಯನ್ನು ಪ್ರೊತ್ಸಾಹಿಸುವ ಕೇಂದ್ರ ಸರ್ಕಾರದ ಫೇಮ್ 2 ಯೋಜನೆ ಅಡಿ ಟಾಟಾ ಮೋಟಾರ್ಸ್ ಕಂಪನಿಯು 1 ಸಾವಿರಕ್ಕೂ ಅಧಿಕ ಎಲೆಕ್ಟ್ರಿಕ್ ಬಸ್‌ಗಳ ಪೂರೈಕೆಗಾಗಿ ಬೇಡಿಕೆ ಪಡೆದುಕೊಂಡಿದ್ದು, ಉತ್ಪಾದನಾ ಸಾಮರ್ಥ್ಯದ ಮೇಲೆ ಹೊಸ ಇ-ಬಸ್‌ಗಳನ್ನು ವಿತರಣೆ ಮಾಡುತ್ತಿದೆ.

ಸುಧಾರಿತ ತಂತ್ರಜ್ಞಾನ ಪ್ರೇರಿತ ಟಾಟಾ ಎಲೆಕ್ಟ್ರಿಕ್ ಬಸ್‌ಗಳ ಚಾಲನೆಗೆ ಗ್ರೀನ್ ಸಿಗ್ನಲ್

ಬೃಹನ್‌ ಮುಂಬೈ ಎಲೆಕ್ಟ್ರಿಕ್ ಸಫ್ಲೈ ಅಂಡ್ ಟ್ರಾನ್ಸ್‌ಪೋರ್ಟ್(BEST) ಸಂಸ್ಥೆಯು ಕೂಡಾ ನಗರಪ್ರದೇಶದಲ್ಲಿನ ಸಾರಿಗೆ ಸೌಲಭ್ಯದಲ್ಲಿ ಮಹತ್ವದ ಬದಲಾವಣೆಗಾಗಿ ಬರೋಬ್ಬರಿ 340 ಎಲೆಕ್ಟ್ರಿಕ್ ಬಸ್‌ಗಳನ್ನು ಪೂರೈಸುವಂತೆ ಟಾಟಾ ಮೋಟಾರ್ಸ್ ಕಂಪನಿಗೆ ಬೇಡಿಕೆ ಸಲ್ಲಿಸಿದೆ.

ಸುಧಾರಿತ ತಂತ್ರಜ್ಞಾನ ಪ್ರೇರಿತ ಟಾಟಾ ಎಲೆಕ್ಟ್ರಿಕ್ ಬಸ್‌ಗಳ ಚಾಲನೆಗೆ ಗ್ರೀನ್ ಸಿಗ್ನಲ್

ಬೇಡಿಕೆ ಸಲ್ಲಿಸಲಾದ 340 ಎಲೆಕ್ಟ್ರಿಕ್ ಬಸ್‌ಗಳಲ್ಲಿ ಮೊದಲ ಹಂತವಾಗಿ 26 ಎಲೆಕ್ಟ್ರಿಕ್ ಬಸ್‌ಗಳನ್ನು ವಿತರಣೆ ಮಾಡಿರುವ ಟಾಟಾ ಕಂಪನಿಯು ಹಂತ ಹಂತವಾಗಿ ಮುಂದಿನ ಒಂದು ವರ್ಷದಲ್ಲಿ ಪೂರ್ಣ ಪ್ರಮಾಣದಲ್ಲಿ ಪೂರೈಕೆ ಮಾಡುವ ಯೋಜನೆಯಲ್ಲಿದ್ದು, ಹೊಸ ಎಲೆಕ್ಟ್ರಿಕ್ ಬಸ್‌ಗಳನ್ನು ವಿತರಣೆ ಪಡೆದುಕೊಂಡ ಬೆಸ್ಟ್ ಸಂಸ್ಥೆಯು ಇಂದು ಅಧಿಕೃತವಾಗಿ ಸಿಎಂ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಇ-ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಲಾಗಿದೆ.

ಸುಧಾರಿತ ತಂತ್ರಜ್ಞಾನ ಪ್ರೇರಿತ ಟಾಟಾ ಎಲೆಕ್ಟ್ರಿಕ್ ಬಸ್‌ಗಳ ಚಾಲನೆಗೆ ಗ್ರೀನ್ ಸಿಗ್ನಲ್

ಫೇಮ್ 1 ಸಬ್ಸಡಿ ಯೋಜನೆ ಅಡಿ ವಿವಿಧ ರಾಜ್ಯಗಳ ಸಾರಿಗೆ ಸಂಸ್ಥೆಗಳಿಗೆ ಬರೋಬ್ಬರಿ 215 ಇ-ಬಸ್‌ಗಳನ್ನು ವಿತರಣೆ ಮಾಡಿರುವ ಟಾಟಾ ಮೋಟಾರ್ಸ್ ಕಂಪನಿಯು ಇದೀಗ ಮತ್ತಷ್ಟು ತಂತ್ರಜ್ಞಾನಗಳೊಂದಿಗೆ ವಿವಿಧ ಮಾದರಿಯ ಎಲೆಕ್ಟ್ರಿಕ್ ಬಸ್ ಮಾದರಿಗಳನ್ನು ನಿರ್ಮಾಣ ಮಾಡುತ್ತಿದೆ.

ಸುಧಾರಿತ ತಂತ್ರಜ್ಞಾನ ಪ್ರೇರಿತ ಟಾಟಾ ಎಲೆಕ್ಟ್ರಿಕ್ ಬಸ್‌ಗಳ ಚಾಲನೆಗೆ ಗ್ರೀನ್ ಸಿಗ್ನಲ್

ಬೆಸ್ಟ್ ಸಂಸ್ಥೆಗೆ ವಿತರಣೆ ಮಾಡಲಾಗಿರುವ ಇ-ಬಸ್ ಮಾದರಿಗಳು ಅಲ್ಟ್ರಾ ಅರ್ಬನ್ ಎಸಿ ಬಸ್ ಆವೃತ್ತಿಗಳಾಗಿದ್ದು, 25 ಸೀಟರ್ ಸೌಲಭ್ಯ ಹೊಂದಿರುವ ಹೊಸ ಇ-ಬಸ್‌ಗಳು ಅತಿ ಕಡಿಮೆ ರನ್ನಿಂಗ್ ಕಾಸ್ಟ್ ವೈಶಿಷ್ಟ್ಯತೆ ಹೊಂದಿವೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಸುಧಾರಿತ ತಂತ್ರಜ್ಞಾನ ಪ್ರೇರಿತ ಟಾಟಾ ಎಲೆಕ್ಟ್ರಿಕ್ ಬಸ್‌ಗಳ ಚಾಲನೆಗೆ ಗ್ರೀನ್ ಸಿಗ್ನಲ್

ಇಂಟೆಲಿಜೆಂಟ್ ಟಾನ್ಸ್‌ಪೋರ್ಟ್ ಸಿಸ್ಟಂ(ಐಟಿಎಸ್) ತಂತ್ರಜ್ಞಾನ ಹೊಂದಿರುವ ಟಾಟಾ ಆಲ್ಟ್ರಾ ಅರ್ಬನ್ ಇ-ಬಸ್‌ಗಳಲ್ಲಿ ಟೆಲಿಮ್ಯಾಟಿಕ್ ಸಿಸ್ಟಂ, ರಿಜನರೇಟಿವ್ ಬ್ರೇಕಿಂಗ್ ಸಿಸ್ಟಂ, ವೈಫೈ ಜೊತೆಗೆ ಪ್ರಯಾಣಿಕ ಆಸನಗಳು ಆರಾಮದಾಯಕ ವಿನ್ಯಾಸ ಪಡೆದುಕೊಂಡಿವೆ.

ಸುಧಾರಿತ ತಂತ್ರಜ್ಞಾನ ಪ್ರೇರಿತ ಟಾಟಾ ಎಲೆಕ್ಟ್ರಿಕ್ ಬಸ್‌ಗಳ ಚಾಲನೆಗೆ ಗ್ರೀನ್ ಸಿಗ್ನಲ್

ಟಾಟಾ ಇ-ಬಸ್‌ಗಗಳಿಗೆ ಚಾರ್ಜಿಂಗ್ ಸೌಲಭ್ಯ ಹೊಣೆ ಹೊತ್ತಿರುವ ಟಾಟಾ ಪವರ್ ಕಂಪನಿಯು ಮುಂಬೈ ನಗರದ ಪ್ರಮುಖ ಡಿಪೋಗಳಲ್ಲಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯಗಳನ್ನು ತೆರೆದಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಬಸ್‌ಗಳು ರಸ್ತೆಗಿಳಿಯಲು ಸಿದ್ದವಾಗಿವೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಸುಧಾರಿತ ತಂತ್ರಜ್ಞಾನ ಪ್ರೇರಿತ ಟಾಟಾ ಎಲೆಕ್ಟ್ರಿಕ್ ಬಸ್‌ಗಳ ಚಾಲನೆಗೆ ಗ್ರೀನ್ ಸಿಗ್ನಲ್

ಇನ್ನು ಟಾಟಾ ಮೋಟಾರ್ಸ್ ಕಂಪನಿಯು ಬೆಸ್ಟ್ ಸಂಸ್ಥೆಯಿಂದ ಮಾತ್ರವಲ್ಲ ಬಿಎಂಟಿಸಿ, ಎಜೆಎಲ್‌, ಜೈಪುರ್ ಸಿಟಿ ಟ್ರಾನ್‌ಪೋರ್ಟ್ ಸರ್ವಿಸ್ ಲಿಮಿಟೆಡ್‌ ಸೇರಿದಂತೆ ಪ್ರಮುಖ ಸಾರಿಗೆ ನಿಮಗಳಿಂದ ಭಾರೀ ಪ್ರಮಾಣದಲ್ಲಿ ಎಲೆಕ್ಟ್ರಿಕ್ ಬಸ್ ಪೂರೈಕೆಗೆ ಬೇಡಿಕೆ ಪಡೆದುಕೊಂಡಿದ್ದು, ಟಾಟಾ ಹೊಸ ಬಸ್‌ಗಳು ನಿರ್ವಹಣಾ ವೆಚ್ಚವನ್ನು ಪರಿಣಾಮಕಾರಿಯಾಗಿ ತಗ್ಗಿಸುವುದರ ಜೊತೆಗೆ ಮಾಲಿನ್ಯ ಉತ್ಪಾದನೆ ತಗ್ಗಿಸುವಲ್ಲಿ ಪ್ರಮುಖ ಪಾತ್ರವಹಿಸಲಿವೆ.

Most Read Articles

Kannada
English summary
Tata Motors e-Buses Delivered To BEST In Mumbai. Read in Kannada.
Story first published: Friday, December 4, 2020, 20:41 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X