Just In
- 6 min ago
ಪೊಲೊ ಹ್ಯಾಚ್ಬ್ಯಾಕ್ ಮತ್ತು ವೆಂಟೊ ಸೆಡಾನ್ ಕಾರುಗಳ ಖರೀದಿ ಮೇಲೆ ಹೊಸ ವರ್ಷದ ಆಫರ್
- 56 min ago
ದಿಢೀರನೆ ಕೈಕೊಟ್ಟ ಬ್ರೇಕ್, 3 ಕಿ.ಮೀ ರಿವರ್ಸ್ ಗೇರಿನಲ್ಲಿ ಸಾಗಿದ ಟ್ರಕ್ ಚಾಲಕ
- 1 hr ago
ಕೈಗೆಟುಕುವ ದರದಲ್ಲಿ ಟಿವಿಎಸ್ ಎಕ್ಸ್ಎಲ್100 ವಿನ್ನರ್ ಎಡಿಷನ್ ಬಿಡುಗಡೆ
- 2 hrs ago
ಭಾರತದಲ್ಲಿ ಅತಿದೊಡ್ಡ ಮಲ್ಟಿ ಬ್ರಾಂಡ್ ಕಾರ್ ಸರ್ವಿಸ್ ಸೆಂಟರ್ ತೆರೆದ ಬಾಷ್
Don't Miss!
- Sports
ಭಾರತ vs ಆಸ್ಟ್ರೇಲಿಯಾ: ಧೋನಿ ದಾಖಲೆ ಮುರಿದು 1000 ಟೆಸ್ಟ್ ರನ್ ಗಳಿಸಿದ ರಿಷಭ್ ಪಂತ್
- News
ಕಳಪೆ ಮಟ್ಟದಲ್ಲಿ ಲಸಿಕೆ ಅಭಿಯಾನ; ಎರಡು ರಾಜ್ಯಗಳಿಗೆ ಕೇಂದ್ರದ ತರಾಟೆ
- Finance
ಕಾರು ಖರೀದಿಗೆ ಅತ್ಯಂತ ಕಡಿಮೆ ಬಡ್ಡಿ ದರಕ್ಕೆ ಸಾಲ ನೀಡುವ ಬ್ಯಾಂಕ್ ಗಳಿವು
- Lifestyle
ಕೂದಲು ಬೇಗನೆ ಬೆಳ್ಳಗಾಗುವುದು: ಇದು ನಿಮ್ಮ ದೇಹದ ಕುರಿತು ಏನು ಸೂಚಿಸುತ್ತದೆ?
- Education
Indian Forest Service Recruitment 2021: 70 ಡಿಐಜಿಎಫ್/ಎಐಜಿಎಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಚಿತ್ರೀಕರಣ ವೇಳೆ ಅಸ್ವಸ್ಥ: ನಟಿ ಅಲಿಯಾ ಭಟ್ ಆಸ್ಪತ್ರೆಗೆ ದಾಖಲು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸುಧಾರಿತ ತಂತ್ರಜ್ಞಾನ ಪ್ರೇರಿತ ಟಾಟಾ ಎಲೆಕ್ಟ್ರಿಕ್ ಬಸ್‌ಗಳ ಚಾಲನೆಗೆ ಗ್ರೀನ್ ಸಿಗ್ನಲ್
ಟಾಟಾ ಮೋಟಾರ್ಸ್ ಕಂಪನಿಯು ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಅಡಿ ವಿವಿಧ ರಾಜ್ಯಗಳ ಸಾರಿಗೆ ನಿಗಮಗಳಿಂದ ಎಲೆಕ್ಟ್ರಿಕ್ ಬಸ್‌ಗಳ ಪೂರೈಕೆಗೆ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಂಡಿದ್ದು, ಬೇಡಿಕೆ ಅನುಸಾರವಾಗಿ ಇದೀಗ ಹೊಸ ಎಲೆಕ್ಟ್ರಿಕ್ ಬಸ್ ಮಾದರಿಗಳನ್ನು ವಿತರಣೆ ಮಾಡುತ್ತಿದೆ.

ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ಪರಿಣಾಮಕಾರಿಯಾಗಿ ತಗ್ಗಿಸುವ ಉದ್ದೇಶದಿಂದ ವಿವಿಧ ರಾಜ್ಯಗಳಲ್ಲಿ ಸಾರ್ವಜನಿಕ ಸಾರಿಗೆ ವಾಹನಗಳನ್ನು ಡೀಸೆಲ್‌ಗೆ ಬದಲಾಗಿ ಎಲೆಕ್ಟ್ರಿಕ್ ಮಾದರಿಗಳ ಬಳಕೆಯತ್ತ ಗಮನಹರಿಸಲಾಗುತ್ತಿದ್ದು, ಎಲೆಕ್ಟ್ರಿಕ್ ಬಸ್ ನಿರ್ಮಾಣದಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಗೆ ಹೊಸ ಮಾದರಿಯ ಎಲೆಕ್ಟ್ರಿಕ್ ಬಸ್‌ಗಳ ಪೂರೈಕೆಗಾಗಿ ವಿವಿಧ ರಾಜ್ಯ ಸರ್ಕಾರಗಳು ಭಾರೀ ಪ್ರಮಾಣದಲ್ಲಿ ಬೇಡಿಕೆ ಸಲ್ಲಿಸಿವೆ.

ಎಲೆಕ್ಟ್ರಿಕ್ ವಾಹನಗಳನ್ನು ಬಳಕೆಯನ್ನು ಪ್ರೊತ್ಸಾಹಿಸುವ ಕೇಂದ್ರ ಸರ್ಕಾರದ ಫೇಮ್ 2 ಯೋಜನೆ ಅಡಿ ಟಾಟಾ ಮೋಟಾರ್ಸ್ ಕಂಪನಿಯು 1 ಸಾವಿರಕ್ಕೂ ಅಧಿಕ ಎಲೆಕ್ಟ್ರಿಕ್ ಬಸ್‌ಗಳ ಪೂರೈಕೆಗಾಗಿ ಬೇಡಿಕೆ ಪಡೆದುಕೊಂಡಿದ್ದು, ಉತ್ಪಾದನಾ ಸಾಮರ್ಥ್ಯದ ಮೇಲೆ ಹೊಸ ಇ-ಬಸ್‌ಗಳನ್ನು ವಿತರಣೆ ಮಾಡುತ್ತಿದೆ.

ಬೃಹನ್ ಮುಂಬೈ ಎಲೆಕ್ಟ್ರಿಕ್ ಸಫ್ಲೈ ಅಂಡ್ ಟ್ರಾನ್ಸ್‌ಪೋರ್ಟ್(BEST) ಸಂಸ್ಥೆಯು ಕೂಡಾ ನಗರಪ್ರದೇಶದಲ್ಲಿನ ಸಾರಿಗೆ ಸೌಲಭ್ಯದಲ್ಲಿ ಮಹತ್ವದ ಬದಲಾವಣೆಗಾಗಿ ಬರೋಬ್ಬರಿ 340 ಎಲೆಕ್ಟ್ರಿಕ್ ಬಸ್‌ಗಳನ್ನು ಪೂರೈಸುವಂತೆ ಟಾಟಾ ಮೋಟಾರ್ಸ್ ಕಂಪನಿಗೆ ಬೇಡಿಕೆ ಸಲ್ಲಿಸಿದೆ.

ಬೇಡಿಕೆ ಸಲ್ಲಿಸಲಾದ 340 ಎಲೆಕ್ಟ್ರಿಕ್ ಬಸ್‌ಗಳಲ್ಲಿ ಮೊದಲ ಹಂತವಾಗಿ 26 ಎಲೆಕ್ಟ್ರಿಕ್ ಬಸ್‌ಗಳನ್ನು ವಿತರಣೆ ಮಾಡಿರುವ ಟಾಟಾ ಕಂಪನಿಯು ಹಂತ ಹಂತವಾಗಿ ಮುಂದಿನ ಒಂದು ವರ್ಷದಲ್ಲಿ ಪೂರ್ಣ ಪ್ರಮಾಣದಲ್ಲಿ ಪೂರೈಕೆ ಮಾಡುವ ಯೋಜನೆಯಲ್ಲಿದ್ದು, ಹೊಸ ಎಲೆಕ್ಟ್ರಿಕ್ ಬಸ್‌ಗಳನ್ನು ವಿತರಣೆ ಪಡೆದುಕೊಂಡ ಬೆಸ್ಟ್ ಸಂಸ್ಥೆಯು ಇಂದು ಅಧಿಕೃತವಾಗಿ ಸಿಎಂ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಇ-ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಲಾಗಿದೆ.

ಫೇಮ್ 1 ಸಬ್ಸಡಿ ಯೋಜನೆ ಅಡಿ ವಿವಿಧ ರಾಜ್ಯಗಳ ಸಾರಿಗೆ ಸಂಸ್ಥೆಗಳಿಗೆ ಬರೋಬ್ಬರಿ 215 ಇ-ಬಸ್‌ಗಳನ್ನು ವಿತರಣೆ ಮಾಡಿರುವ ಟಾಟಾ ಮೋಟಾರ್ಸ್ ಕಂಪನಿಯು ಇದೀಗ ಮತ್ತಷ್ಟು ತಂತ್ರಜ್ಞಾನಗಳೊಂದಿಗೆ ವಿವಿಧ ಮಾದರಿಯ ಎಲೆಕ್ಟ್ರಿಕ್ ಬಸ್ ಮಾದರಿಗಳನ್ನು ನಿರ್ಮಾಣ ಮಾಡುತ್ತಿದೆ.

ಬೆಸ್ಟ್ ಸಂಸ್ಥೆಗೆ ವಿತರಣೆ ಮಾಡಲಾಗಿರುವ ಇ-ಬಸ್ ಮಾದರಿಗಳು ಅಲ್ಟ್ರಾ ಅರ್ಬನ್ ಎಸಿ ಬಸ್ ಆವೃತ್ತಿಗಳಾಗಿದ್ದು, 25 ಸೀಟರ್ ಸೌಲಭ್ಯ ಹೊಂದಿರುವ ಹೊಸ ಇ-ಬಸ್‌ಗಳು ಅತಿ ಕಡಿಮೆ ರನ್ನಿಂಗ್ ಕಾಸ್ಟ್ ವೈಶಿಷ್ಟ್ಯತೆ ಹೊಂದಿವೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಇಂಟೆಲಿಜೆಂಟ್ ಟಾನ್ಸ್‌ಪೋರ್ಟ್ ಸಿಸ್ಟಂ(ಐಟಿಎಸ್) ತಂತ್ರಜ್ಞಾನ ಹೊಂದಿರುವ ಟಾಟಾ ಆಲ್ಟ್ರಾ ಅರ್ಬನ್ ಇ-ಬಸ್‌ಗಳಲ್ಲಿ ಟೆಲಿಮ್ಯಾಟಿಕ್ ಸಿಸ್ಟಂ, ರಿಜನರೇಟಿವ್ ಬ್ರೇಕಿಂಗ್ ಸಿಸ್ಟಂ, ವೈಫೈ ಜೊತೆಗೆ ಪ್ರಯಾಣಿಕ ಆಸನಗಳು ಆರಾಮದಾಯಕ ವಿನ್ಯಾಸ ಪಡೆದುಕೊಂಡಿವೆ.

ಟಾಟಾ ಇ-ಬಸ್‌ಗಗಳಿಗೆ ಚಾರ್ಜಿಂಗ್ ಸೌಲಭ್ಯ ಹೊಣೆ ಹೊತ್ತಿರುವ ಟಾಟಾ ಪವರ್ ಕಂಪನಿಯು ಮುಂಬೈ ನಗರದ ಪ್ರಮುಖ ಡಿಪೋಗಳಲ್ಲಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯಗಳನ್ನು ತೆರೆದಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಬಸ್‌ಗಳು ರಸ್ತೆಗಿಳಿಯಲು ಸಿದ್ದವಾಗಿವೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಇನ್ನು ಟಾಟಾ ಮೋಟಾರ್ಸ್ ಕಂಪನಿಯು ಬೆಸ್ಟ್ ಸಂಸ್ಥೆಯಿಂದ ಮಾತ್ರವಲ್ಲ ಬಿಎಂಟಿಸಿ, ಎಜೆಎಲ್, ಜೈಪುರ್ ಸಿಟಿ ಟ್ರಾನ್‌ಪೋರ್ಟ್ ಸರ್ವಿಸ್ ಲಿಮಿಟೆಡ್ ಸೇರಿದಂತೆ ಪ್ರಮುಖ ಸಾರಿಗೆ ನಿಮಗಳಿಂದ ಭಾರೀ ಪ್ರಮಾಣದಲ್ಲಿ ಎಲೆಕ್ಟ್ರಿಕ್ ಬಸ್ ಪೂರೈಕೆಗೆ ಬೇಡಿಕೆ ಪಡೆದುಕೊಂಡಿದ್ದು, ಟಾಟಾ ಹೊಸ ಬಸ್‌ಗಳು ನಿರ್ವಹಣಾ ವೆಚ್ಚವನ್ನು ಪರಿಣಾಮಕಾರಿಯಾಗಿ ತಗ್ಗಿಸುವುದರ ಜೊತೆಗೆ ಮಾಲಿನ್ಯ ಉತ್ಪಾದನೆ ತಗ್ಗಿಸುವಲ್ಲಿ ಪ್ರಮುಖ ಪಾತ್ರವಹಿಸಲಿವೆ.