Just In
Don't Miss!
- News
ಮತ್ತೊಂದು ದಾಖಲೆಯ ಮಟ್ಟವನ್ನ ತಲುಪಿದ ಪೆಟ್ರೋಲ್, ಡೀಸೆಲ್ ದರ
- Finance
ಹೊಸ ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್- ಡೀಸೆಲ್ ದರ; ಯಾವ ನಗರದಲ್ಲಿ ಎಷ್ಟು?
- Movies
ರೈತರ ಪ್ರತಿಭಟನೆ: ಕೆಂಪುಕೋಟೆ ಮೇಲೆ ಬಾವುಟ ಹಾರಿಸಿದ್ದು ಸಿನಿಮಾ ನಟ ದೀಪ್ ಸಿಧು?
- Lifestyle
ಹೊಟ್ಟೆಯ ಬಲಭಾಗದಲ್ಲಿ ನೋವು, ಈ ತೊಂದರೆಗಳಿರಬಹುದು
- Sports
ವಿರಾಟ್ ಕೊಹ್ಲಿ ಮತ್ತು ನನ್ನ ಮಧ್ಯೆ ಏನೂ ಬದಲಾಗಿಲ್ಲ: ಅಜಿಂಕ್ಯ ರಹಾನೆ
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕಮರ್ಷಿಯಲ್ ವಾಹನಗಳ ಬೆಲೆ ಏರಿಕೆ ಮಾಡಿದ ಟಾಟಾ ಮೋಟಾರ್ಸ್
ಟಾಟಾ ಮೋಟಾರ್ಸ್ ಭಾರತದಲ್ಲಿರುವ ಜನಪ್ರಿಯ ವಾಹನ ತಯಾರಕ ಕಂಪನಿಗಳಲ್ಲಿ ಒಂದು. ಈ ಕಂಪನಿಯು ಕಾರುಗಳ ಜೊತೆಗೆ ಕಮರ್ಷಿಯಲ್ ವಾಹನಗಳನ್ನು ಸಹ ಉತ್ಪಾದಿಸಿ ಮಾರಾಟ ಮಾಡುತ್ತದೆ.

ಈಗ ಟಾಟಾ ಮೋಟಾರ್ಸ್ ತನ್ನ ಕಮರ್ಷಿಯಲ್ ವಾಹನಗಳ ಬೆಲೆಯನ್ನು ಹೆಚ್ಚಿಸಲು ಮುಂದಾಗಿದೆ. ಬೆಲೆ ಏರಿಕೆಯು ಜನವರಿ 1ರಿಂದ ಜಾರಿಗೆ ಬರಲಿದೆ ಎಂದು ಟಾಟಾ ಮೋಟಾರ್ಸ್ ನಿನ್ನೆ ಪ್ರಕಟಿಸಿದೆ. ಉತ್ಪಾದನಾ ವೆಚ್ಚ ಹೆಚ್ಚಾದ ಕಾರಣಕ್ಕೆ ಬೆಲೆ ಏರಿಕೆ ಮಾಡುತ್ತಿರುವುದಾಗಿ ಟಾಟಾ ಮೋಟಾರ್ಸ್ ತಿಳಿಸಿದೆ.

ಉತ್ಪಾದನಾ ವೆಚ್ಚದಲ್ಲಿನ ಹೆಚ್ಚಳ, ವಿದೇಶಿ ವಿನಿಮಯದಲ್ಲಿನ ವ್ಯತ್ಯಯ ಹಾಗೂ ವಾಹನಗಳನ್ನು ಬಿಎಸ್ 6 ಎಂಜಿನ್'ನೊಂದಿಗೆ ಅಪ್ ಗ್ರೇಡ್ ಮಾಡಿರುವುದರಿಂದ ಬೆಲೆ ಹೆಚ್ಚಳವಾಗಿದೆ ಎಂದು ಟಾಟಾ ಮೋಟಾರ್ಸ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಉತ್ಪಾದನಾ ವೆಚ್ಚದ ಬೆಲೆ ಏರಿಕೆಯನ್ನು ಸರಿದೂಗಿಸಲು ಕಮರ್ಷಿಯಲ್ ವಾಹನಗಳ ಬೆಲೆಯನ್ನು ಹೆಚ್ಚಿಸುವುದಾಗಿ ಟಾಟಾ ಮೋಟಾರ್ಸ್ ಹೇಳಿದೆ. ಆದರೆ ಕಮರ್ಷಿಯಲ್ ವಾಹನಗಳ ಬೆಲೆಯನ್ನು ಯಾವ ಪ್ರಮಾಣದಲ್ಲಿ ಏರಿಕೆ ಮಾಡಲಾಗುವುದು ಎಂಬುದನ್ನು ಬಹಿರಂಗಪಡಿಸಿಲ್ಲ.

ಟಾಟಾ ಮೋಟಾರ್ಸ್‌ನ ಕಮರ್ಷಿಯಲ್ ವಾಹನಗಳನ್ನು ಖರೀದಿಸಲು ಬಯಸುತ್ತಿರುವವರಿಗೆ ಈ ಸುದ್ದಿ ಆಘಾತವನ್ನುಂಟು ಮಾಡಿದೆ. ಟಾಟಾ ಮೋಟಾರ್ಸ್ ಕಮರ್ಷಿಯಲ್ ವಾಹನಗಳನ್ನು ಮಾತ್ರವಲ್ಲದೆ ಪ್ರಯಾಣಿಕರ ವಾಹನಗಳನ್ನು ಸಹ ಉತ್ಪಾದಿಸುತ್ತದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಟಾಟಾ ಮೋಟಾರ್ಸ್ ತನ್ನ ಕಮರ್ಷಿಯಲ್ ವಾಹನಗಳ ಬೆಲೆಯನ್ನು ಏರಿಸುವುದರ ಜೊತೆಗೆ ಹಲವಾರು ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಇವುಗಳಲ್ಲಿ ಗ್ರಾವಿಟಾಸ್ ಕಾರು ಸಹ ಸೇರಿದೆ.

ಟಾಟಾ ಗ್ರಾವಿಟಾಸ್ ಮಾರುಕಟ್ಟೆಯಲ್ಲಿರುವ ಟಾಟಾ ಹ್ಯಾರಿಯರ್ ಎಸ್‌ಯುವಿಯ 7 ಸೀಟುಗಳ ಆವೃತ್ತಿಯಾಗಿದೆ. ಭಾರತದ ಗ್ರಾಹಕರಲ್ಲಿ ಬಹು ನಿರೀಕ್ಷೆಯನ್ನು ಮೂಡಿಸಿರುವ ಟಾಟಾ ಗ್ರಾವಿಟಾಸ್ ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಯಾಗುವ ನಿರೀಕ್ಷೆಗಳಿವೆ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಟಾಟಾ ಗ್ರಾವಿಟಾಸ್ ಎಸ್‌ಯುವಿಯ ಬಿಡುಗಡೆಯನ್ನು ಕರೋನಾ ವೈರಸ್ ಸೇರಿದಂತೆ ಇನ್ನಿತರ ಕಾರಣಗಳಿಂದಾಗಿ ಮುಂದೂಡಲಾಗಿದೆ. ಟಾಟಾ ಗ್ರಾವಿಟಾಸ್ ಎಸ್‌ಯುವಿಯು ಎಂಜಿ ಹೆಕ್ಟರ್ ಪ್ಲಸ್ ಹಾಗೂ 7 ಸೀಟುಗಳ ಹ್ಯುಂಡೈ ಕ್ರೆಟಾ ಎಸ್‌ಯುವಿಗೆ ಪೈಪೋಟಿ ನೀಡಲಿದೆ.

ಎಂಜಿ ಹೆಕ್ಟರ್ ಪ್ಲಸ್ ಎಸ್‌ಯುವಿಯು ಈಗಾಗಲೇ ಮಾರಾಟದಲ್ಲಿದೆ. ಇನ್ನು 7 ಸೀಟುಗಳ ಹ್ಯುಂಡೈ ಕ್ರೆಟಾ ಎಸ್‌ಯುವಿಯನ್ನು 2021ರಲ್ಲಿ ಬಿಡುಗಡೆಗೊಳಿಸಲಾಗುವುದು. ಕಾರು ತಯಾರಕ ಕಂಪನಿಗಳು 7 ಸೀಟುಗಳ ವಾಹನಗಳನ್ನು ಬಿಡುಗಡೆಗೊಳಿಸಲು ಉತ್ಸುಕವಾಗಿವೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಟಾಟಾ ಮೋಟಾರ್ಸ್ ಮಾತ್ರವಲ್ಲದೇ ಇತರ ಕಂಪನಿಗಳು ಸಹ ತಮ್ಮ ಕಾರುಗಳ ಬೆಲೆ ಏರಿಕೆ ಮಾಡಿವೆ. ಮಾರುತಿ ಸುಜುಕಿ, ಫೋರ್ಡ್, ಎಂಜಿ ಮೋಟಾರ್, ಕಿಯಾ, ಹ್ಯುಂಡೈ, ಮಹೀಂದ್ರಾ ಹಾಗೂ ಬಿಎಂಡಬ್ಲ್ಯು ಕಾರುಗಳ ಬೆಲೆಗಳು ಸಹ ಜನವರಿ 1ರಿಂದ ಏರಿಕೆಯಾಗಲಿವೆ.