ಕಾರು ಮಾರಾಟ ಹೆಚ್ಚಳಕ್ಕಾಗಿ ಸ್ಪೆಷಲ್ ಲೋನ್ ಆಫರ್‌ ಘೋಷಿಸಿದ ಟಾಟಾ ಮೋಟಾರ್ಸ್

ಕರೋನಾ ವೈರಸ್‌ನಿಂದಾಗಿ ಆಟೋ ಮೊಬೈಲ್ ಸೇರಿದಂತೆ ಎಲ್ಲ ವಲಯದಲ್ಲೂ ಆರ್ಥಿಕ ಸ್ಥಿತಿ ಶೋಚನೀಯ ಸ್ಥಿತಿಗೆ ತಲುಪಿದೆ. ಹೀಗಿರುವಾಗ ವ್ಯಾಪಾರ ಅಭಿವೃದ್ದಿಯು ಇದೀಗ ಹೊಸ ಸವಾಲಾಗಿ ಪರಿಣಮಿಸಿದ್ದು, ಟಾಟಾ ಮೋಟಾರ್ಸ್ ಕಂಪನಿಯು ಕೆಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದೆ.

ಕಾರು ಮಾರಾಟ ಹೆಚ್ಚಳಕ್ಕಾಗಿ ಸ್ಪೆಷಲ್ ಲೋನ್ ಆಫರ್‌ ಘೋಷಿಸಿದ ಟಾಟಾ ಮೋಟಾರ್ಸ್

ಕಳೆದ ಎರಡು ತಿಂಗಳಿನಿಂದ ವಿಧಿಸಲಾಗಿರುವ ಲಾಕ್‌ಡೌನ್‌ನಿಂದ ಬಹುತೇಕ ವಾಣಿಜ್ಯ ಚಟುವಟಿಕೆಗಳು ನೆಲಕಚ್ಚಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಉದ್ಯೋಗದ ಅಭದ್ರತೆ ಇದೀಗ ಪ್ರತಿಯೊಬ್ಬರಲ್ಲೂ ಕಾಡತೊಡಗಿದೆ. ಹೀಗಿರುವಾಗ ಕಾರು ಮಾರಾಟವನ್ನು ಸರಿದಾರಿಗೆ ತರಲು ಯತ್ನಿಸುತ್ತಿರುವ ಆಟೋ ಕಂಪನಿಯು ಕೆಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದು, ಹೊಸ ಕಾರು ಖರೀದಿದಾರರಿಗೆ ಇಎಂಐ ಪಾವತಿ ಚಿಂತೆಯನ್ನು ಹೊಗಲಾಡಿಸಲು ಕೆಲವು ಮಹತ್ವದ ಕ್ರಮಗಳನ್ನು ತೆಗೆದುಕೊಂಡಿವೆ.

ಕಾರು ಮಾರಾಟ ಹೆಚ್ಚಳಕ್ಕಾಗಿ ಸ್ಪೆಷಲ್ ಲೋನ್ ಆಫರ್‌ ಘೋಷಿಸಿದ ಟಾಟಾ ಮೋಟಾರ್ಸ್

ವೈರಸ್ ತಡೆಗಾಗಿ ಲಾಕ್‌ಡೌನ್ ಅನಿವಾರ್ಯವಾಗಿದ್ದರಿಂದ ಭಾರತೀಯ ಆಟೋ ಉದ್ಯಮವು ಸಹ ದಿನಂಪ್ರತಿ ನೂರಾರು ಕೋಟಿ ನಷ್ಟ ಅನುಭವಿಸುತ್ತಿದ್ದು, ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಆಟೋ ಕ್ಷೇತ್ರಕ್ಕೆ ವಿನಾಯ್ತಿ ನೀಡಲಾಗಿದೆಯಾದರೂ ಆರ್ಥಿಕ ಮುಗ್ಗಟ್ಟು ತೀವ್ರ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

ಕಾರು ಮಾರಾಟ ಹೆಚ್ಚಳಕ್ಕಾಗಿ ಸ್ಪೆಷಲ್ ಲೋನ್ ಆಫರ್‌ ಘೋಷಿಸಿದ ಟಾಟಾ ಮೋಟಾರ್ಸ್

ಹೊಸ ಸುರಕ್ಷಾ ಮಾರ್ಗಸೂಚಿತಂತೆ ಆಟೋ ಉದ್ಯಮವು ಮರು ಚಾಲನೆಗೊಂಡರು ನೀರಿಕ್ಷಿತ ಮಟ್ಟದಲ್ಲಿ ಗ್ರಾಹಕರಿಲ್ಲದೆ ಪರದಾಡುತ್ತಿವೆ. ಜೊತೆಗೆ ಲಾಕ್‌ಡೌನ್‌ಗೂ ಮೊದಲು ಬುಕ್ಕಿಂಗ್ ಮಾಡಿ ವಾಹನ ಖರೀದಿಯ ಸಂಭ್ರಮದಲ್ಲಿದ್ದ ಗ್ರಾಹಕರು ಇದೀಗ ಖರೀದಿ ಪ್ರಕ್ರಿಯೆಯಿಂದ ಹಿಂದೆ ಸರಿಯುತ್ತಿದ್ದು, ಮಾರಾಟ ಮಳಿಗೆಗಳು ಪುನಾರಂಭಗೊಂಡ ನಂತರ ವಾಹನ ಖರೀದಿ ಬದಲು ಬುಕ್ಕಿಂಗ್ ಹಣ ವಾಪಸ್ ನೀಡುವಂತೆ ಬೇಡಿಕೆಯಿಡುತ್ತಿದ್ದಾರೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಕಾರು ಮಾರಾಟ ಹೆಚ್ಚಳಕ್ಕಾಗಿ ಸ್ಪೆಷಲ್ ಲೋನ್ ಆಫರ್‌ ಘೋಷಿಸಿದ ಟಾಟಾ ಮೋಟಾರ್ಸ್

ಸದ್ಯಕ್ಕೆ ವಾಹನ ಖರೀದಿ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುತ್ತಿರುವ ಬಹುತೇಕ ಗ್ರಾಹಕರು ಬುಕ್ಕಿಂಗ್ ಹಣ ವಾಪಸ್ ಪಡೆದುಕೊಳ್ಳುತ್ತಿದ್ದು, ಲಾಕ್‌ಡೌನ್ ನಂತರ ವಾಹನ ಮಾರಾಟ ಯೋಜನೆಯಲ್ಲಿದ್ದ ಆಟೋ ಕಂಪನಿಗಳಿಗೆ ಗ್ರಾಹಕರು ಬುಕ್ಕಿಂಗ್ ಹಣ ವಾಪಸ್ ಪಡೆದುಕೊಳ್ಳುವ ಮೂಲಕ ಮತ್ತೊಂದು ಶಾಕ್ ನೀಡುತ್ತಿದ್ದಾರೆ.

ಕಾರು ಮಾರಾಟ ಹೆಚ್ಚಳಕ್ಕಾಗಿ ಸ್ಪೆಷಲ್ ಲೋನ್ ಆಫರ್‌ ಘೋಷಿಸಿದ ಟಾಟಾ ಮೋಟಾರ್ಸ್

ಲಾಕ್‌ಡೌನ್‌ಗೂ ಮುನ್ನ ದೇಶಾದ್ಯಂತ ಹೊಸ ವಾಹನಗಳಿಗೆ ಬುಕ್ಕಿಂಗ್ ಮಾಡಿದ್ದ ಗ್ರಾಹಕರಲ್ಲಿ ಸುಮಾರು ಶೇ.60ರಿಂದ ಶೇ.70ರಷ್ಟು ಜನ ಇದೀಗ ಬುಕ್ಕಿಂಗ್ ಹಣ ವಾಪಸ್‌ ನೀಡುವಂತೆ ಬೇಡಿಕೆ ಸಲ್ಲಿಸಿದ್ದು, ಇದು ಆಟೋ ಕಂಪನಿಗಳನ್ನು ಮತ್ತಷ್ಟು ಚಿಂತೆಗೀಡು ಮಾಡಿದೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಕಾರು ಮಾರಾಟ ಹೆಚ್ಚಳಕ್ಕಾಗಿ ಸ್ಪೆಷಲ್ ಲೋನ್ ಆಫರ್‌ ಘೋಷಿಸಿದ ಟಾಟಾ ಮೋಟಾರ್ಸ್

ಇದರಿಂದ ಗ್ರಾಹಕರನ್ನು ಸೆಳೆಯಲು ಆಟೋ ಕಂಪನಿಗಳು ಅತಿ ಸುಲಭವಾದ ಸಾಲಸೌಲಭ್ಯಗಳನ್ನು ನೀಡುತ್ತಿದ್ದು, ಟಾಟಾ ಮೋಟಾರ್ಸ್ ಕೂಡಾ ಆಕರ್ಷಕ ಇಎಂಐ ಮರುಪಾವತಿ ಸೌಲಭ್ಯಗಳನ್ನು ಘೋಷಿಸಿದೆ.

ಕಾರು ಮಾರಾಟ ಹೆಚ್ಚಳಕ್ಕಾಗಿ ಸ್ಪೆಷಲ್ ಲೋನ್ ಆಫರ್‌ ಘೋಷಿಸಿದ ಟಾಟಾ ಮೋಟಾರ್ಸ್

ತನ್ನದೆ ಪ್ರಮುಖ ಹಣಕಾಸು ಸಂಸ್ಥೆಗಳಿಂದ ಅತಿ ಸುಲಭವಾದ ವಾಹನ ಸಾಲಗಳನ್ನು ನೀಡುತ್ತಿರುವ ಟಾಟಾ ಕಂಪನಿಯು ಮೊದಲ ಆರು ತಿಂಗಳು ಕಾಲ ಅತಿ ಕಡಿಮೆ ಇಎಂಐ ಮರುಪಾವತಿಗೆ ಅವಕಾಶ ನೀಡಿದ್ದು, ಲಾಕ್‌ಡೌನ್ ಆರ್ಥಿಕ ಸಂಕಷ್ಟ ಎದುರಾಗದಂತೆ ಇಎಂಐ ನಿಗದಿಪಡಿಸಿದೆ.

MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಕಾರು ಮಾರಾಟ ಹೆಚ್ಚಳಕ್ಕಾಗಿ ಸ್ಪೆಷಲ್ ಲೋನ್ ಆಫರ್‌ ಘೋಷಿಸಿದ ಟಾಟಾ ಮೋಟಾರ್ಸ್

ಹಾಗೆಯೇ ಸೀಮಿತ ಅವಧಿಗಾಗಿ ವಿವಿಧ ಕಾರು ಮಾದರಿಗಳ ಮೇಲೆ ಧೀರ್ಘಾವಧಿಯ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಕರೋನಾ ವಿರುದ್ಧ ಹೋರಾಡುತ್ತಿರುವ ವಾರಿಯರ್ಸ್‌ಗೆ ಕಾರು ಖರೀದಿಯ ಮೇಲೆ ರೂ.45 ಸಾವಿರದಷ್ಟು ವಿನಾಯ್ತಿ ನೀಡುತ್ತಿದೆ.

Article Published On: Tuesday, May 19, 2020, 15:01 [IST]
English summary
Tata Motors has introduced special car loan schemes to boost car sales in India amidst the coronovirus pandemic. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+