ಮೂರು ಹೊಸ ಕಾರು ಮಾದರಿಗಳ ಬಿಡುಗಡೆಗೆ ಸಿದ್ದವಾದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಕಾರುಗಳ ಮಾರಾಟದಲ್ಲಿ ಹಿಂದೆಂದಿಗಿಂತಲೂ ಹೆಚ್ಚಿನ ಮಟ್ಟದಲ್ಲಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಎಸ್‌ಯುವಿ ವಾಹನ ಮಾರಾಟದಲ್ಲಿ ಭರ್ಜರಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ.

ಮೂರು ಹೊಸ ಕಾರು ಮಾದರಿಗಳ ಬಿಡುಗಡೆಗೆ ಸಿದ್ದವಾದ ಟಾಟಾ ಮೋಟಾರ್ಸ್

ಆಕರ್ಷಕ ಬೆಲೆಗಳೊಂದಿಗೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿರುವ ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಕಾರುಗಳ ಬಿಡುಗಾಗಿಗಿ ಕೇಂದ್ರ ಸಾರಿಗೆ ಇಲಾಖೆಯಲ್ಲಿ ಹೊಸ ಕಾರುಗಳಿಗಾಗಿ ವಿವಿಧ ಹೆಸರನ್ನು ನೋಂದಣಿ ಮಾಡಿದೆ. ಬಿಡುಗಡೆಯಾಗಲಿರುವ ಹೊಸ ಕಾರುಗಳಲ್ಲಿ ಎಲೆಕ್ಟ್ರಿಕ್ ಮಾದರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಕಾರು ಮಾರಾಟದಲ್ಲಿ ಟಾಟಾ ಕಂಪನಿಯು ಮತ್ತಷ್ಟು ಜನಪ್ರಿಯತೆ ಪಡೆದುಕೊಳ್ಳಲಿದೆ.

ಮೂರು ಹೊಸ ಕಾರು ಮಾದರಿಗಳ ಬಿಡುಗಡೆಗೆ ಸಿದ್ದವಾದ ಟಾಟಾ ಮೋಟಾರ್ಸ್

ಟಾಟಾ ಕಂಪನಿಯು 2020-21ರ ಹಣಕಾಸು ವರ್ಷದಲ್ಲಿ ಹೊಸದಾಗಿ ನೋಂದಣಿ ಮಾಡಿರುವ ಕಾರು ಮಾದರಿಗಳನ್ನು ಹೊರತುಪಡಿಸಿ ಮೂರು ಹೊಸ ಕಾರುಗಳನ್ನು ಬಿಡುಗಡೆ ಮಾಡುತ್ತಿದ್ದು, ನೋಂದಣಿ ಮಾಡಲಾದ ಹೊಸ ಕಾರು ಮುಂಬರುವ ಎರಡು ವರ್ಷಗಳ ಅವಧಿಯಲ್ಲಿ ಬಿಡುಗಡೆಯಾಗಲಿವೆ.

ಮೂರು ಹೊಸ ಕಾರು ಮಾದರಿಗಳ ಬಿಡುಗಡೆಗೆ ಸಿದ್ದವಾದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ಮೈಕ್ರೋ ಎಸ್‌ಯುವಿ ಮಾದರಿಯಾದ ಹೆಚ್‌ಬಿಎಕ್ಸ್, ಗ್ರಾವಿಟಾಸ್ ಎಸ್‌ಯುವಿ ಮತ್ತು ಹ್ಯಾರಿಯರ್ ಪೆಟ್ರೋಲ್ ಮಾದರಿಯನ್ನು ಬಿಡುಗಡೆ ಯೋಜನೆಯಲ್ಲಿದ್ದು, ಈ ಮೂರು ಕಾರುಗಳ ಬಿಡುಗಡೆ ನಂತರವಷ್ಟೇ ಹೊಸದಾಗಿ ನೋಂದಣಿ ಮಾಡಲಾದ ಕಾರುಗಳನ್ನು ಬಿಡುಗಡೆ ಮಾಡಲಾಗುತ್ತದೆ.

ಮೂರು ಹೊಸ ಕಾರು ಮಾದರಿಗಳ ಬಿಡುಗಡೆಗೆ ಸಿದ್ದವಾದ ಟಾಟಾ ಮೋಟಾರ್ಸ್

ಹೊಸ ಕಾರು ಮಾದರಿಗಳಾಗಿ ಟಾಟಾ ಮೋಟಾರ್ಸ್ ಕಂಪನಿಯು ಎಫಿಕ್, ಸ್ಪೈಕ್ ಮತ್ತು ಟೊರಿಯೊ ಎಂಬ ಮೂರು ಹೊಸ ಹೆಸರುಗಳನ್ನು ಕೇಂದ್ರ ಸಾರಿಗೆ ಇಲಾಖೆಯಲ್ಲಿ ನೋಂದಣಿ ಮಾಡಿದ್ದು, ಹೊಸ ಕಾರುಗಳ ಹೆಸರು ಎಲೆಕ್ಟ್ರಿಕ್ ಮಾದರಿಗಳಿಗಾಗಿ ಬಳಕೆ ಮಾಡಬಹುದು ಎನ್ನಲಾಗಿದೆ. ಟಾಟಾ ಕಂಪನಿಯು ಈಗಾಗಲೇ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲೂ ಸಾಕಷ್ಟು ಜನಪ್ರಿಯತೆ ಪಡೆದುಕೊಳ್ಳುತ್ತಿದ್ದು, ನೆಕ್ಸಾನ್ ಇವಿ ನಂತರ ಹಲವು ಹೊಸ ಇವಿ ಕಾರುಗಳನ್ನು ಅಭಿವೃದ್ದಿಗೊಳಿಸುತ್ತಿದೆ.

ಮೂರು ಹೊಸ ಕಾರು ಮಾದರಿಗಳ ಬಿಡುಗಡೆಗೆ ಸಿದ್ದವಾದ ಟಾಟಾ ಮೋಟಾರ್ಸ್

ನೆಕ್ಸಾನ್ ಎಲೆಕ್ಟ್ರಿಕ್ ಮಾದರಿಯ ನಂತರ ಆಲ್‌ಟ್ರೊಜ್ ಎಲೆಕ್ಟ್ರಿಕ್, ಸಿಯೆರಾ ಎಲೆಕ್ಟ್ರಿಕ್ ಮತ್ತು ಟಿಗೊರ್ ಎಲೆಕ್ಟ್ರಿಕ್ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆ ಕೈಗೊಳ್ಳಲಾಗುತ್ತಿದ್ದು, ಈ ಮೂರು ಕಾರು ಮಾದರಿಗಳಿಗಾಗಿ ಹೊಸ ಹೆಸರುಗಳನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಮೂರು ಹೊಸ ಕಾರು ಮಾದರಿಗಳ ಬಿಡುಗಡೆಗೆ ಸಿದ್ದವಾದ ಟಾಟಾ ಮೋಟಾರ್ಸ್

2030ರ ವೇಳೆಗೆ ಜಗತ್ತಿನಾದ್ಯಂತ ಬಹುತೇಕ ರಾಷ್ಟ್ರಗಳು ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವ ಸಿದ್ದತೆ ನಡೆಸುತ್ತಿದ್ದು, ಎಲೆಕ್ಟ್ರಿಕ್ ವಾಹನ ಮಾರಾಟಕ್ಕೆ ಪೂರಕವಾದ ಹೊಸ ನೀತಿಗಳನ್ನು ಜಾರಿಗೆ ತರವು ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ಕಡಿತಗೊಳಿಸಲಾಗುತ್ತಿದೆ.

ಮೂರು ಹೊಸ ಕಾರು ಮಾದರಿಗಳ ಬಿಡುಗಡೆಗೆ ಸಿದ್ದವಾದ ಟಾಟಾ ಮೋಟಾರ್ಸ್

ಭಾರತದಲ್ಲಿ ಸದ್ಯಕ್ಕೆ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಮಂದಗತಿಯಲ್ಲಿ ಸಾಗಿದ್ದರೂ ಯುರೋಪ್ ಪ್ರಮುಖ ರಾಷ್ಟ್ರಗಳಲ್ಲಿ ಈಗಾಗಲೇ ಡೀಸೆಲ್ ಎಂಜಿನ್ ಪ್ರೇರಿತ ವಾಹನಗಳ ಬಳಕೆ ಮೇಲೆ ಹಲವು ನಿರ್ಬಂಧಗಳನ್ನು ಹೇರಲಾಗುತ್ತಿದ್ದು, ಕೇವಲ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಒತ್ತು ನೀಡಲಾಗುತ್ತಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಮೂರು ಹೊಸ ಕಾರು ಮಾದರಿಗಳ ಬಿಡುಗಡೆಗೆ ಸಿದ್ದವಾದ ಟಾಟಾ ಮೋಟಾರ್ಸ್

ಹೀಗಾಗಿ ಮುಂಬರುವ ದಿನಗಳಲ್ಲಿ ಮಾಲಿನ್ಯ ತಡೆ ಸಂಬಂಧ ಭಾರತದಲ್ಲೂ ಹಲವು ಕಠಿಣ ನಿರ್ಧಾರಗಳನ್ನು ಹಂತ-ಹಂತವಾಗಿ ಜಾರಿಗೆ ತರಲಾಗುತ್ತಿದ್ದು, ಭವಿಷ್ಯದ ಆಟೋ ಉದ್ಯಮಕ್ಕಾಗಿ ಟಾಟಾ ಸೇರಿದಂತೆ ವಿವಿಧ ಆಟೋ ಕಂಪನಿಗಳು ಹೊಸ ವಾಹನಗಳ ಉತ್ಪಾದನೆ ಮಹತ್ವದ ಬದಲಾವಣೆ ಪರಿಚಯಿಸುತ್ತಿವೆ.

Most Read Articles

Kannada
English summary
Tata Taureo, Epiq, Spyk Registered, Upcoming car names. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X