ಗ್ರಾವಿಟಾಸ್ ಅನಾವರಣಗೊಂಡ ಬೆನ್ನಲ್ಲೇ ಟಿವಿಸಿ ಬಿಡುಗಡೆಗೊಳಿಸಿದ ಟಾಟಾ

ಟಾಟಾ ಮೋಟಾರ್ಸ್ ಸಂಸ್ಥೆಯು ತನ್ನ ಬಹುನೀರಿಕ್ಷಿತ 7 ಸೀಟರ್ ಎಸ್‌ಯುವಿ ಆವೃತ್ತಿಯಾದ ಗ್ರಾವಿಟಾಸ್ ಕಾರು ಮಾದರಿಯನ್ನು ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಿದ ಬೆನ್ನಲ್ಲೇ ಇದೀಗ ಹೊಸ ಕಾರಿನ ಟಿವಿ ಜಾಹೀರಾತನ್ನು ಕೂಡಾ ಬಿಡುಗಡೆ ಮಾಡಿದೆ.

ಗ್ರಾವಿಟಾಸ್ ಅನಾವರಣಗೊಂಡ ಬೆನ್ನಲ್ಲೇ ಟಿವಿಸಿ ಬಿಡುಗಡೆಗೊಳಿಸಿದ ಟಾಟಾ

2019ರ ಜಿನೆವಾ ಆಟೋ ಮೇಳದಲ್ಲಿ ಮೊದಲ ಬಾರಿಗೆ ಬಝರ್ಡ್ ಹೆಸರಿನೊಂದಿಗ ಅನಾವರಣಗೊಂಡಿದ್ದ ಟಾಟಾ ಹೊಸ ಎಸ್‌ಯುವಿ ಕಾರು ಇದೀಗ ಗ್ರಾವಿಟಾಸ್ ಹೆಸರಿನೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಈಗಾಗಲೇ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಹ್ಯಾರಿಯರ್ ವಿನ್ಯಾಸವನ್ನೇ ಪಡೆದಿರುವ ಹೊಸ ಗ್ರಾವಿಟಾಸ್ ಕಾರು ಗ್ರಾಹಕರ ಬೇಡಿಕೆಯೆಂತೆ ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಖರೀದಿಗೆ ಲಭ್ಯವಾಗುತ್ತಿದೆ.

ಗ್ರಾವಿಟಾಸ್ ಅನಾವರಣಗೊಂಡ ಬೆನ್ನಲ್ಲೇ ಟಿವಿಸಿ ಬಿಡುಗಡೆಗೊಳಿಸಿದ ಟಾಟಾ

7 ಸೀಟರ್ ಆಸನ ಸೌಲಭ್ಯದೊಂದಿಗೆ ಎಸ್‌ಯುವಿ ಆವೃತ್ತಿಗಳಲ್ಲಿ ಮುಂಚೂಣಿಯಲ್ಲಿರುವ ಫೋರ್ಡ್ ಎಂಡೀವರ್, ಮಹೀಂದ್ರಾ ಅಲ್ಟುರಾಸ್ ಜಿ4 ಮತ್ತು ಟೊಯೊಟಾ ಫಾರ್ಚೂನರ್‌ ಕಾರಿಗೂ ಗ್ರಾವಿಟಾಸ್ ಪ್ರಬಲ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಗ್ರಾವಿಟಾಸ್ ಅನಾವರಣಗೊಂಡ ಬೆನ್ನಲ್ಲೇ ಟಿವಿಸಿ ಬಿಡುಗಡೆಗೊಳಿಸಿದ ಟಾಟಾ

ಗ್ರಾವಿಟಾಸ್ ಕಾರು 4,661-ಎಂಎಂ ಉದ್ದ, 1786-ಎಂಎಂ ಎತ್ತರ ಮತ್ತು 2,741-ಎಂಎಂ ವೀಲ್ಹ್ ಬೆಸ್‌ನೊಂದಿಗೆ ಹ್ಯಾರಿಯರ್‌ಗಿಂತಲೂ 63-ಎಂಎಂ ಹೆಚ್ಚು ಉದ್ದ, 80-ಎಂಎಂ ಕಡಿಮೆ ಎತ್ತರ ಪಡೆದುಕೊಂಡಿದೆ.

ಗ್ರಾವಿಟಾಸ್ ಅನಾವರಣಗೊಂಡ ಬೆನ್ನಲ್ಲೇ ಟಿವಿಸಿ ಬಿಡುಗಡೆಗೊಳಿಸಿದ ಟಾಟಾ

ಟಾಟಾ ಹೊಸ ಎಸ್‍ಯುವಿ ಕಾರು ಇಂಪ್ಯಾಕ್ಟ್ 2.0 ಡಿಸೈನ್ ಅಡಿ ನಿರ್ಮಾಣವಾಗಿದ್ದು, ಫ್ಲೇರ್ಡ್ ಆರ್ಚೆಸ್, ಮುಂಭಾಗದ ಬಂಪರ್‍‍ಗಳಿಗೆ ಟ್ರೈ ಆರೋ ಡಿಸೈನ್, ಡ್ಯುಯಲ್ ಟೋನ್ ಬಂಪರ್, ಎಲ್ಇಡಿ ಹೆಡ್‍ಲೈಟ್, ವ್ರಾಪ್ಡ್ ಅರೌಂಡ್ ಟೈಲ್ ಲೈಟ್ ಮತ್ತು ಸ್ಕಿಡ್ ಪ್ಲೇಟ್‍‍ಗಳಿಂದ ಸಜ್ಜುಗೊಂಡಿದೆ.

ಇನ್ನು ಗ್ರಾವಿಟಾಸ್ ಕಾರು ಹ್ಯಾರಿಯರ್‍‍ನಂತೆಯೇ ಎಕ್ಸ್ಇ, ಎಕ್ಸ್ಎಂ, ಎಕ್ಸ್ ಟಿ ಮತ್ತು ಎಕ್ಸ್‌ಜೆಡ್ ಎಂಬ ನಾಲ್ಕು ವೆರಿಯೆಂಟ್‍‍ಗಳಲ್ಲಿ ಬಿಡುಗಡೆಯಾಗಲಿದ್ದು, 18-ಇಂಚಿನ ಅಲಾಯ್ ವ್ಹೀಲ್ಸ್, ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ವಿಭಿನ್ನವಾದ ಬೂಟ್ ಲಿಡ್ ಮತ್ತು ಟೈಲ್ ಲ್ಯಾಂಪ್ಸ್ ಅನ್ನು ಹೊಂದಿದಿದೆ.

ಗ್ರಾವಿಟಾಸ್ ಅನಾವರಣಗೊಂಡ ಬೆನ್ನಲ್ಲೇ ಟಿವಿಸಿ ಬಿಡುಗಡೆಗೊಳಿಸಿದ ಟಾಟಾ

ಜೊತೆಗೆ ಸ್ಪೋರ್ಟಿ ಸ್ಪಾಯ್ಲರ್, ಎಲ್ಇಡಿ ಟೈಲ್‍ಲೈಟ್ಸ್ ಅನ್ನು ಪಡೆದುಕೊಂಡಿದ್ದು, ಹ್ಯಾರಿಯರ್ ಕಾರಿನಲ್ಲಿ ಬಳಕೆ ಮಾಡಲಾಗುತ್ತಿರುವ ಬಿಎಸ್-6 ಡೀಸೆಲ್ ಎಂಜಿನ್ ಅನ್ನೇ ಗ್ರಾವಿಟಾಸ್ ಕೂಡಾ ಪಡೆದುಕೊಳ್ಳಲಿದೆ.

ಗ್ರಾವಿಟಾಸ್ ಅನಾವರಣಗೊಂಡ ಬೆನ್ನಲ್ಲೇ ಟಿವಿಸಿ ಬಿಡುಗಡೆಗೊಳಿಸಿದ ಟಾಟಾ

ಹೊಸ ಕಾರು ಹ್ಯಾರಿಯರ್ ಮಾದರಿಯಲ್ಲಿ 2.0-ಲೀಟರ್ ಕ್ರೆಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಮಾತ್ರ ಬಿಡುಗಡೆಯಾಗಲಿದ್ದು, ತದನಂತರವಷ್ಟೇ ಹ್ಯಾರಿಯರ್ ಮತ್ತು ಗ್ರಾವಿಟಾಸ್ ಕಾರುಗಳಲ್ಲಿ ಪೆಟ್ರೋಲ್ ಮಾದರಿಯು ಬಿಡುಗಡೆಯಾಗಲಿದೆ.

ಗ್ರಾವಿಟಾಸ್ ಅನಾವರಣಗೊಂಡ ಬೆನ್ನಲ್ಲೇ ಟಿವಿಸಿ ಬಿಡುಗಡೆಗೊಳಿಸಿದ ಟಾಟಾ

2.0-ಲೀಟರ್ ಡೀಸೆಲ್ ಮಾದರಿಯು 173-ಬಿಹೆಚ್‍ಪಿ ಹಾಗೂ 350-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ಟಿಯನ್ನು ಪಡೆದಿದ್ದು, ಹ್ಯುಂಡೈನಿಂದ ಎರವಲು ಪಡೆಯಲಾಗಿರುವ 6- ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪಿಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್ ಸೌಲಭ್ಯ ಪಡೆದುಕೊಳ್ಳಲಿದೆ.

ಗ್ರಾವಿಟಾಸ್ ಅನಾವರಣಗೊಂಡ ಬೆನ್ನಲ್ಲೇ ಟಿವಿಸಿ ಬಿಡುಗಡೆಗೊಳಿಸಿದ ಟಾಟಾ

ಜೊತೆಗೆ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದ್ದು, 4x4 ಡ್ರೈವ್ ಟೆಕ್ನಾಲಜಿ ಜೊತೆಗೆ ಆಫ್ ರೋಡ್ ಎಸ್‌ಯುವಿ ಪ್ರಿಯರ ಆಕರ್ಷಣೆಗೂ ಕಾರಣವಾಗಲಿದೆ.

ಗ್ರಾವಿಟಾಸ್ ಅನಾವರಣಗೊಂಡ ಬೆನ್ನಲ್ಲೇ ಟಿವಿಸಿ ಬಿಡುಗಡೆಗೊಳಿಸಿದ ಟಾಟಾ

ಬಿಡುಗಡೆಯ ಅವಧಿ ಮತ್ತು ಬೆಲೆ(ಅಂದಾಜು)

ಗ್ರಾವಿಟಾಸ್ ಕಾರು ಪ್ರತಿಸ್ಪರ್ಧಿ ಎಸ್‌ಯುವಿ ಕಾರುಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ದೊರೆಯಲಿದ್ದು, ಇದೇ ವರ್ಷದ ಕೊನೆಯಲ್ಲಿ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.18 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ.22 ಲಕ್ಷ ಬೆಲೆ ಹೊಂದಿರಬಹುದು ಎಂದು ನೀರಿಕ್ಷಿಸಲಾಗಿದೆ.

Most Read Articles

Kannada
English summary
Tata Gravitas: First TVC out after Auto Expo reveal. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X