ಲಾಕ್‌ಡೌನ್ ವಿನಾಯ್ತಿ ನಂತರ ಕಾರು ಉತ್ಪಾದನೆ ಮತ್ತು ಮಾರಾಟ ಪುನಾರಂಭಿಸಿದ ಟಾಟಾ ಮೋಟಾರ್ಸ್

ಲಾಕ್‌ಡೌನ್ ಮುಂದುವರಿಸಿದ್ದರೂ ಪರಿಸ್ಥಿತಿಗೆ ಅನುಗುಣವಾಗಿ ಕೈಗಾರಿಕಾ ವಲಯಕ್ಕೆ ಕೆಲವು ವಿನಾಯ್ತಿಗಳನ್ನು ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿಯೆಂತೆ ವಾಹನ ಉತ್ಪಾದನೆ ಮತ್ತು ಮಾರಾಟ ಪ್ರಕ್ರಿಯೆಯು ಪುನಾರಂಭಗೊಡಿದ್ದು, ಟಾಟಾ ಮೋಟಾರ್ಸ್ ಸಹ ಉತ್ಪಾದನೆ ಮತ್ತು ಮಾರಾಟ ಪ್ರಕ್ರಿಯೆಗೆ ಆರಂಭಿಸಿದೆ.

ಲಾಕ್‌ಡೌನ್ ವಿನಾಯ್ತಿ ನಂತರ ಕಾರು ಉತ್ಪಾದನೆ ಪುನಾರಂಭಿಸಿದ ಟಾಟಾ ಮೋಟಾರ್ಸ್

ಕರೋನಾ ವೈರಸ್ ಮಟ್ಟಹಾಕಲು ಲಾಕ್‌ಡೌನ್ ಅನ್ನು ಮುಂದುವರಿಸಿಕೊಂಡೆ ಹಸಿರು ಮತ್ತು ಕಿತ್ತಳೆ ವಲಯಗಳಲ್ಲಿರುವ ಕೈಗಾರಿಕೆಗಳ ಉತ್ಪಾದನಾ ಚಟುವಟಿಕೆಗಳಿಗೆ ಷರತ್ತುಬದ್ಧ ಅವಕಾಶ ನೀಡಲಾಗಿದ್ದು, ದೇಶಾದ್ಯಂತ ಬಹುತೇಕ ಆಟೋ ಉತ್ಪಾದನಾ ಕಂಪನಿಗಳು ಕಳೆದ ಒಂದೂವರೆ ತಿಂಗಳ ನಂತರ ವಾಹನ ಉತ್ಪಾದನೆಯನ್ನು ಪುನಾರಂಭಿಸಿವೆ. ಟಾಟಾ ಕೂಡಾ ಇದೀಗ ಕಾರು ಉತ್ಪಾದನೆ ಮತ್ತು ಮಾರಾಟಕ್ಕೆ ಮರುಚಾಲನೆ ನೀಡಿದ್ದು, ಸೋಂಕು ಹರಡದಂತೆ ಹಲವಾರು ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಲಾಕ್‌ಡೌನ್ ವಿನಾಯ್ತಿ ನಂತರ ಕಾರು ಉತ್ಪಾದನೆ ಪುನಾರಂಭಿಸಿದ ಟಾಟಾ ಮೋಟಾರ್ಸ್

ಪಾಂಟನಗರ್(ಉತ್ತರಾಖಂಡ್), ಸನಂದಾ(ಗುಜರಾತ್), ಲಕ್ನೋ(ಉತ್ತರಪ್ರದೇಶ), ಧಾರವಾಡ(ಕರ್ನಾಟಕ), ಜಮ್ಷೆಡ್ಪುರ್(ಜಾರ್ಖಂಡ್) ಘಟಕಗಳಲ್ಲಿ ಮಾತ್ರವೇ ಪ್ಯಾಸೆಂಜರ್ ಮತ್ತು ವಾಣಿಜ್ಯ ವಾಹನಗಳ ಉತ್ಪಾದನೆ ಮಾಡಲಾಗುತ್ತಿದ್ದು, ಪುಣೆಯಲ್ಲಿ ವೈರಸ್ ಭೀತಿ ಹೆಚ್ಚಿರುವುದರಿಂದ ಮುಖ್ಯ ಘಟಕದಲ್ಲಿ ಆ್ಯಂಬುಲೆನ್ಸ್ ವಾಹನಗಳನ್ನು ಹೊರಡುಪಡಿಸಿ ಯಾವುದೇ ಮಾದರಿಯ ವಾಹನಗಳ ಉತ್ಪಾದನೆ ಮಾಡಲಾಗುತ್ತಿಲ್ಲ.

ಲಾಕ್‌ಡೌನ್ ವಿನಾಯ್ತಿ ನಂತರ ಕಾರು ಉತ್ಪಾದನೆ ಪುನಾರಂಭಿಸಿದ ಟಾಟಾ ಮೋಟಾರ್ಸ್

ಸದ್ಯ ಉತ್ಪಾದನೆ ಮತ್ತು ಮಾರಾಟ ಮಾಡುತ್ತಿರುವ ಉದ್ಯೋಗ ಸ್ಥಳಗಳಲ್ಲಿ ಶೇ.50ಕ್ಕಿಂತಲೂ ಕಡಿಮೆ ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಣೆ ಮಾಡಲಾಗುತ್ತಿದ್ದು, ವೈರಸ್ ತಡೆಗಾಗಿ ಆನ್‌ಲೈನ್ ಮೂಲಕವೇ ಪತ್ರ ವ್ಯವಹಾರ ಕೈಗೊಂಡು ಗ್ರಾಹಕರ ಮನೆ ಬಾಗಿಲಿಗೆ ವಾಹನ ಉತ್ಪನ್ನಗಳನ್ನು ವಿತರಣೆ ಮಾಡಲಾಗುತ್ತಿದೆ.

MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಲಾಕ್‌ಡೌನ್ ವಿನಾಯ್ತಿ ನಂತರ ಕಾರು ಉತ್ಪಾದನೆ ಪುನಾರಂಭಿಸಿದ ಟಾಟಾ ಮೋಟಾರ್ಸ್

ಇನ್ನು ಮಾಹಾಮಾರಿ ಕರೋನಾ ವೈರಸ್ ಹೊಡೆದೊಡಿಸಲು ಆಟೋ ಉತ್ಪಾದನಾ ಕಂಪನಿಗಳಲ್ಲೇ ಗರಿಷ್ಠ ಪ್ರಮಾಣದ ಸಹಾಯಧನ ನೀಡಿರುವ ಟಾಟಾ ಮೋಟಾರ್ಸ್ ಕಂಪನಿಯು ಸರ್ಕಾರಕ್ಕೆ ನೆರವು ನೀಡುವುದರ ಜೊತೆಗೆ ದಿನಂಪ್ರತಿ ದೇಶದ ವಿವಿಧಡೆ ಲಕ್ಷಾಂತರ ಜನರ ಹಸಿವು ನೀಗಿಸುವ ಮಹತ್ಕಾರ್ಯ ಮಾಡಿದೆ.

ಲಾಕ್‌ಡೌನ್ ವಿನಾಯ್ತಿ ನಂತರ ಕಾರು ಉತ್ಪಾದನೆ ಪುನಾರಂಭಿಸಿದ ಟಾಟಾ ಮೋಟಾರ್ಸ್

ಮಾಹಾಮಾರಿ ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಸರ್ಕಾರಕ್ಕೆ ವಿವಿಧ ಹಂತಗಳಲ್ಲಿ ಹಣಕಾಸು ಸಹಾಯ ಮಾಡಿರುವ ಟಾಟಾ ಸಮೂಹ ಸಂಸ್ಥೆಗಳು ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆಗೆ ಕಾರಣವಾಗಿವೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಲಾಕ್‌ಡೌನ್ ವಿನಾಯ್ತಿ ನಂತರ ಕಾರು ಉತ್ಪಾದನೆ ಪುನಾರಂಭಿಸಿದ ಟಾಟಾ ಮೋಟಾರ್ಸ್

ಮೊದಲ ಮತ್ತು ಎರಡನೇ ಹಂತದ ಲಾಕ್‌ಡೌನ್ ಸಂದರ್ಭದಲ್ಲಿ ಬಹುತೇಕ ವಾಣಿಜ್ಯ ಚಟುವಟಿಕೆಗಳು ಸ್ಥಗಿತಗೊಂಡಿದ್ದರಿಂದ ಕೋಟ್ಯಾಂತರ ಜನರು ಒಂದು ಹೊತ್ತಿನ ಊಟಕ್ಕಾಗಿ ಪರದಾಡುವಂತಹ ಪರಿಸ್ಥಿತಿ ಎದುರಾಗಿತ್ತು. ಇಂತಹ ಹೊತ್ತಿನಲ್ಲಿ ಸರ್ಕಾರದ ಜೊತೆ ಕೈಜೋಡಿಸಿದ ಸಾವಿರಾರು ಸಂಘ-ಸಂಸ್ಥೆಗಳು ಭಾರೀ ಪ್ರಮಾಣದ ದೇಣಿಗೆ ಜೊತೆಗೆ ಬಡವರಿಗೆ ಊಟ ವಿತರಣೆ ಮಾಡಿರುವುದು ಶ್ಲಾಘನೀಯ ಕಾರ್ಯವಾಗಿದೆ.

ಲಾಕ್‌ಡೌನ್ ವಿನಾಯ್ತಿ ನಂತರ ಕಾರು ಉತ್ಪಾದನೆ ಪುನಾರಂಭಿಸಿದ ಟಾಟಾ ಮೋಟಾರ್ಸ್

ಇದರಲ್ಲಿ ಟಾಟಾ ಮೋಟಾರ್ಸ್ ಕೂಡಾ ಒಂದಾಗಿದ್ದು, ಇದುವರೆಗೆ ದೇಶದ ವಿವಿಧಡೆ 1.50 ಲಕ್ಷ ಜನರಿಗೆ ಸಿದ್ದ ಆಹಾರದ ಪೊಟ್ಟಣಗಳನ್ನು ಮತ್ತು ಅಗತ್ಯ ಅಡುಗೆ ಪದಾರ್ಥಗಳ ಪೊಟ್ಟಣಗಳನ್ನು ವಿತರಣೆ ಮಾಡಿದೆ.

MOST READ: ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಲಾಕ್‌ಡೌನ್ ವಿನಾಯ್ತಿ ನಂತರ ಕಾರು ಉತ್ಪಾದನೆ ಪುನಾರಂಭಿಸಿದ ಟಾಟಾ ಮೋಟಾರ್ಸ್

ಜೊತೆಗೆ ಆಟೋ ಉತ್ಪಾದನಾ ಕಂಪನಿಗಳಲ್ಲೇ ಅತಿ ಹೆಚ್ಚು ದೇಣಿಗೆ ನೀಡಿರುವ ಟಾಟಾ ಸಮೂಹ ಸಂಸ್ಥೆಗಳು ಪ್ರಧಾನಮಂತ್ರಿಗಳ ಪರಿಹಾರ ನಿಧಿಗೆ ರೂ.1,500 ಕೋಟಿ ಸಹಾಯ ಘೋಷಿಸಿದ್ದು, ಅರ್ಧದಷ್ಟು ಧನಸಹಾಯ ಮತ್ತು ಇನ್ನುಳಿದ ಅರ್ಧ ಹಣದಲ್ಲಿ ವೈದ್ಯಕೀಯ ಉಪಕರಣಗಳ ಪೂರೈಕೆಗೆ ಮತ್ತು ಸಾಮಾಜಿಕ ಕಾರ್ಯಗಳಿಗೆ ಬಳಕೆ ಮಾಡಿದೆ.

Most Read Articles

Kannada
English summary
Tata Motors resumes production in select plants details, Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X