ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಟಾಟಾ ಹ್ಯಾರಿಯರ್
ಟಾಟಾ ಮೋಟಾರ್ಸ್ ಕಂಪನಿಯ ಹ್ಯಾರಿಯರ್ ಭಾರತೀಯ ಮಾರುಕಟ್ಟೆಯ ಎಸ್‍ಯುವಿಗಳ ವಿಭಾಗದಲ್ಲಿ ಜನಪ್ರಿಯ ಮಾದರಿಗಳಲ್ಲಿ ಒಂದಾಗಿದೆ. 2020ರ ಅಕ್ಟೋಬರ್ ತಿಂಗಳಲ್ಲಿ ಟಾಟಾ ಮೋಟಾರ್ಸ್ ಕಂಪನಿಯ ಹ್ಯಾರಿಯರ್ 2,398 ಯುನಿಟ್‌ಗಳನ್ನು ಮಾರಟ ಮಾಡಿದೆ.

ಕಳೆದ ವರ್ಷದ ಅಕ್ಟೋಬರ್ ಮಾರಾಟವನ್ನು ಈ ವರ್ಷದ ಅದೇ ಅವಧಿಗೆ ಹೋಲಿಸಿದರೆ ಶೇ.91 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಟಾಟಾ ಮೋಟಾರ್ಸ್ ಕಂಪನಿಯು ಹಬ್ಬದ ಸೀಸನ್ ನಲ್ಲಿ ಹ್ಯಾರಿಯರ್ ಎಸ್‍ಯುವಿಯ ಮಾರಾಟವನ್ನು ಹೆಚ್ಚಿಸಲು ‘ಕ್ಯಾಮೊ' ವೆರಿಯೆಂಟ್ ಅನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಇನ್ನು ಕಳೆದ ತಿಂಗಳ ಮಾರಾಟದಲ್ಲಿ ಹ್ಯಾರಿಯರ್ ತನ್ನ ಎರಡು ನೇರ ಪ್ರತಿಸ್ಪರ್ಧಿಗಳಾದ ಎಕ್ಸ್‌ಯುವಿ 500 ಮತ್ತು ಜೀಪ್ ಕಂಪಾಸ್ ಅನ್ನು ಹಿಂದಿಕ್ಕಿದೆ.

ಟಾಟಾ ಮೋಟಾರ್ಸ್ ಕಂಪನಿಯು ಹ್ಯಾರಿಯರ್ ಎಸ್‍ಯುವಿಯನ್ನು ಒಟ್ಟು ಆರು ರೂಪಾಂತರಗಳಲ್ಲಿ ಲಭ್ಯವಿದೆ. ಟಾಟಾ ಮೋಟಾರ್ಸ್ ಕಂಪನಿಯು ಕಳೆದ ವರ್ಷ ಒಮೆಗಾ-ಎಆರ್ಸಿ ಪ್ಲಾಟ್‌ಫಾರ್ಮ್‌ನಲ್ಲಿ ಹೊಸ ಹ್ಯಾರಿಯರ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿದ್ದರು.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಈ ಹೊಸ ಎಸ್‍ಯುವಿಯನ್ನು ಈ ವರ್ಷದ ಆರಂಭದಲ್ಲಿ ಹೆಚ್ಚು ಪವರ್ ಫುಲ್ ಎಂಜಿನ್‌ನೊಂದಿಗೆ ನವೀಕರಿಸಲಾಗಿತ್ತು. ಮಾರಾಟ ಪಟ್ಟೆಯಲ್ಲಿ ದಾಖಲೆಯ ಮಟ್ಟದಲ್ಲಿ ಮಾರಾಟವಾಗದಿದ್ದರೂ ಈ ಎಸ್‍ಯುವಿಯು ಬಹಳಷ್ಟು ಗ್ರಾಹಕರನ್ನು ಆಕರ್ಷಸಿತು.

ಇತ್ತೀಚೆಗೆ ಹ್ಯಾರಿಯರ್ ಎಸ್‍ಯುವಿಯ ಎಕ್ಸ್‌ಟಿ ಪ್ಲಸ್ ಎನ್ನುವ ವೆರಿಯೆಂಟ್‌ವೊಂದನ್ನು ಬಿಡುಗಡೆಗೊಳಿಸಿತು. ಹ್ಯಾರಿಯರ್ ಎಸ್‍ಯುವಿಯ ಹೊರಭಾಗವು ಬೋಲ್ಡ್ ಲುಕ್ ಅನ್ನು ಹೊಂದಿದೆ. ಈ ಎಸ್‍ಯುವಿಯಲ್ಲಿ ಡ್ಯುಯಲ್ ಫಂಕ್ಷನ್ ಎಲ್ಇಡಿ ಡಿಆರ್ಎಲ್ಗಳು, ಬಂಪರ್ ನಲ್ಲಿ ಅಳವಡಿಸಲಾದ ಹೆಡ್ ಲ್ಯಾಂಪ್ ಮತ್ತು ಮಸ್ಕ್ಯುಲರ್ ಫ್ರಂಟ್ ಗ್ರಿಲ್ ಎಲ್ಲವೂ ಆಕರ್ಷಕ ಲುಕ್ ಅನ್ನು ನೀಡುತ್ತದೆ.
MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಬಿಎಸ್ 6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸುವಾಗ ಈ ಎಸ್‍ಯುವಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಇದರಲ್ಲಿ ಮರುವಿನ್ಯಾಸಗೊಳಿಸಲಾದ ಒಆರ್‍ವಿಎಂ ಅನ್ನು ಹೊಂದಿದೆ. ಇನ್ನೊಂದು ಬದಲಾವಣೆಯೆಂದರೆ ಡ್ಯುಯಲ್ ಟೋನ್ ಡೈಮಂಡ್ ಕಟ್ ಅಲಾಯ್ ವ್ಹೀಲ್ ಗಳನ್ನು ಅಳವಡಿಸಿದೆ. ಇನ್ನು ಹೊಸದಾಗಿ ಪನೋರಮಿಕ್ ಸನ್‌ರೂಫ್ ಫೀಚರ್ ಅನ್ನು ಪಡೆದುಕೊಂಡಿದೆ.

ಟಾಟಾ ಹ್ಯಾರಿಯರ್ ಎಸ್‍ಯುವಿಯು ಡೀಸೆಲ್ ಎಂಜಿನ್‌ನೊಂದಿಗೆ ಮಾತ್ರ ಲಭ್ಯವಿದೆ. ಟಾಟಾ ಹ್ಯಾರಿಯರ್ ಎಸ್‍ಯುವಿಯಲ್ಲಿ 2.0 ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಈ ಎಂಜಿನ್ 170 ಬಿಹೆಚ್‍ಪಿ ಮತ್ತು 350 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಇನ್ನು ಈ ಹ್ಯಾರಿಯರ್ ಎಸ್‍ಯುವಿಯಲ್ಲಿ ಹೊಸದಾಗಿ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ನೀಡಲಾಗಿದೆ.

ಹ್ಯಾರಿಯರ್ ಎಸ್‌ಯುವಿಯಲ್ಲಿ ಸುರಕ್ಷತೆಗಾಗಿ ಏರ್‍ಬ್ಯಾಗ್‍ಗಳು, ಐಎಸ್ಒ ಚೈಲ್ಡ್ ಸೀಟ್ ಮೌಂಟ್ಸ್, ಹಿಲ್-ಹೋಲ್ಡ್, ಹಿಲ್ ಡಿಸ್ಸೆಂಟ್ ರೋಲ್-ಓವರ್, ಕಾರ್ನರಿಂಗ್ ಸ್ಟ್ಯಾಬಿಲಿಟಿ ಕಂಟ್ರೋಲ್ ಟ್ರಾಕ್ಷನ್, ಕಂಟ್ರೋಲ್ ಹೈಡ್ರಾಲಿಕ್ ಬ್ರೇಕ್ ಅಸಿಸ್ಟ್ ಗಳನ್ನು ಹೊಂದಿವೆ.


Click it and Unblock the Notifications