ಕ್ರ್ಯಾಶ್ ಟೆಸ್ಟ್‌ನಲ್ಲಿ ಫ್ಲಾಪ್ ಆದ ಹ್ಯುಂಡೈ ಗ್ರ್ಯಾಂಡ್ ಐ10 ಕಾರಿಗೆ ಸೆಡ್ದು ಹೊಡೆದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಸುರಕ್ಷಿತ ಕಾರುಗಳ ಉತ್ಪಾದನೆ ಮೂಲಕ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಕ್ರ್ಯಾಶ್ ಟೆಸ್ಟಿಂಗ್‌ ಮಾನದಂಡಗಳನ್ನು ಪೂರೈಸುವತ್ತ ಮಹತ್ವದ ಹೆಜ್ಜೆಯಿರಿಸುತ್ತಿದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ ಫ್ಲಾಪ್ ಆದ ಹ್ಯುಂಡೈ ಗ್ರ್ಯಾಂಡ್ ಐ10 ಕಾರಿಗೆ ಸೆಡ್ದು ಹೊಡೆದ ಟಾಟಾ ಮೋಟಾರ್ಸ್

ಸುರಕ್ಷಿತ ಕಾರುಗಳ ಉತ್ಪಾದನೆ ಅಭಿಯಾನದಡಿ ಈಗಾಗಲೇ ಬಹುತೇಕ ಕಾರು ಮಾದರಿಗಳನ್ನು ಗರಿಷ್ಠ ಸುರಕ್ಷತೆಯೊಂದಿಗೆ ಉತ್ಪಾದನೆ ಮಾಡುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಹೆಚ್ಚು ಕ್ರ್ಯಾಶ್ ಟೆಸ್ಟ್ ರೇಟಿಂಗ್ ಪಡೆದುಕೊಂಡಿದೆ. ನೆಕ್ಸಾನ್ ಮಾದರಿಯೊಂದಿಗೆ ಕಾರುಗಳಲ್ಲಿ ಸುರಕ್ಷಾ ಸೌಲಭ್ಯಗಳನ್ನು ಅಳವಡಿಸುವಲ್ಲಿ ಮಹತ್ವದ ಬದಲಾವಣೆ ತಂದಿರುವ ಟಾಟಾ ಮೋಟಾರ್ಸ್ ಕಂಪನಿಯು ಆರಂಭಿಕ ಕಾರು ಮಾರಿಯಾದ ಟಿಯಾಗೋದಲ್ಲೂ ಹೆಚ್ಚಿನ ಮಟ್ಟದ ಸೇಫ್ಟಿ ಫೀಚರ್ಸ್ ಜೋಡಣೆ ಮಾಡಿದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ ಫ್ಲಾಪ್ ಆದ ಹ್ಯುಂಡೈ ಗ್ರ್ಯಾಂಡ್ ಐ10 ಕಾರಿಗೆ ಸೆಡ್ದು ಹೊಡೆದ ಟಾಟಾ ಮೋಟಾರ್ಸ್

ಅಪಘಾತಗಳ ಸಂದರ್ಭಗಳಲ್ಲಿ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವತ್ತ ಗಮನಹರಿಸಿರುವ ಟಾಟಾ ಕಂಪನಿಯು ಗುಣಮಟ್ಟದ ಕಾರು ಉತ್ಪಾದನೆಯತ್ತ ಮಹತ್ವದ ಹೆಜ್ಜೆಯಿರಿಸಿದ್ದು, ಟಾಟಾ ಹೊಸ ಕಾರು ಮಾದರಿಗಳು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಹೆಚ್ಚು ಸುರಕ್ಷಿತವಾಗಿರುವುದು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಬಯಲಾಗಿದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ ಫ್ಲಾಪ್ ಆದ ಹ್ಯುಂಡೈ ಗ್ರ್ಯಾಂಡ್ ಐ10 ಕಾರಿಗೆ ಸೆಡ್ದು ಹೊಡೆದ ಟಾಟಾ ಮೋಟಾರ್ಸ್

ಕಾರು ಮಾದರಿಗಳಿಗೆ ಅನುಗುಣವಾಗಿ ಟಾಟಾ ಕಂಪನಿಯು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 4 ಸ್ಟಾರ್ ರೇಟಿಂಗ್ ಮತ್ತು 5 ಸ್ಟಾರ್ ರೇಟಿಂಗ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಆರಂಭಿಕ ಕಾರು ಮಾದರಿಯಾದ ಟಿಯಾಗೋ ಹ್ಯಾಚ್‌ಬ್ಯಾಕ್ ಮಾದರಿಯು 4 ಸ್ಟಾರ್ ರೇಟಿಂಗ್‌ನೊಂದಿಗೆ ಪ್ರತಿಸ್ಪರ್ಧಿ ಕಾರು ಮಾದರಿಯಾದ ಹ್ಯುಂಡೈ ಗ್ರ್ಯಾಂಡ್ ಐ10 ನಿಯೊಸ್ ಕಾರಿಗೆ ಸೆಡ್ಡು ಹೊಡೆದಿದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ ಫ್ಲಾಪ್ ಆದ ಹ್ಯುಂಡೈ ಗ್ರ್ಯಾಂಡ್ ಐ10 ಕಾರಿಗೆ ಸೆಡ್ದು ಹೊಡೆದ ಟಾಟಾ ಮೋಟಾರ್ಸ್

ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್‌ನಲ್ಲಿ ಕೇವಲ 2 ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದುಕೊಂಡಿರುವ ಹ್ಯುಂಡೈ ಐ10 ನಿಯೊಸ್ ಕಾರು ಮಾದರಿಯು ಅಸುರಕ್ಷಿತ ಕಾರು ಮಾದರಿಯಾಗಿ ಹೊರಹೊಮ್ಮಿದ್ದು, ಅಪಘಾತಗಳ ಸಂದರ್ಭದಲ್ಲಿ ಪ್ರಯಾಣಿಕ ಗರಿಷ್ಠ ಪ್ರಮಾಣದ ಹಾನಿ ಉಂಟು ಮಾಡಲಿದೆ. ಉತ್ತಮ ಕಾರು ಮಾದರಿಗಾಗಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಕನಿಷ್ಠ 3 ಸ್ಟಾರ್ ರೇಟಿಂಗ್ ಅವಶ್ಯವಿದ್ದು, 2 ಸ್ಟಾರ್ ರೇಟಿಂಗ್‌ನೊಂದಿಗೆ ಗ್ರ್ಯಾಂಡ್ ಐ10 ನಿಯೊಸ್ ಕಾರು ಇದೀಗ ಕಳಪೆ ಕಾರು ಮಾದರಿಯಾಗಿದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ ಫ್ಲಾಪ್ ಆದ ಹ್ಯುಂಡೈ ಗ್ರ್ಯಾಂಡ್ ಐ10 ಕಾರಿಗೆ ಸೆಡ್ದು ಹೊಡೆದ ಟಾಟಾ ಮೋಟಾರ್ಸ್

ಇದೇ ಕಾರಣಕ್ಕೆ ಹ್ಯುಂಡೈ ಕಂಪನಿಯ ಕಾಲೆಳೆದಿರುವ ಟಾಟಾ ಮೋಟಾರ್ಸ್ ಕಂಪನಿಯು ಪರೋಕ್ಷವಾಗಿ ಗ್ರ್ಯಾಂಡ್ ಐ10 ನಿಯೊಸ್ ಕಾರಿಗೆ ಸೆಡ್ಡುಹೊಡೆದಿದ್ದು, ಗ್ರ್ಯಾಂಡ್ ಐ10 ಕಾರಿಗಿಂತಲೂ ಕಡಿಮೆ ಬೆಲೆಯೊಂದಿಗೆ ಅತ್ಯುತ್ತಮ ಸೇಫ್ಟಿ ಫೀಚರ್ಸ್ ಹೊಂದಿರುವ ಟಿಯಾಗೋ ಆಯ್ಕೆ ಮಾಡುವಂತೆ ಗ್ರಾಹಕರಿಗೆ ಸಲಹೆ ನೀಡಿದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ ಫ್ಲಾಪ್ ಆದ ಹ್ಯುಂಡೈ ಗ್ರ್ಯಾಂಡ್ ಐ10 ಕಾರಿಗೆ ಸೆಡ್ದು ಹೊಡೆದ ಟಾಟಾ ಮೋಟಾರ್ಸ್

ಗ್ರ್ಯಾಂಡ್ ಹೆಸರನ್ನು ಪರೋಕ್ಷವಾಗಿ ಬಳಕೆ ಮಾಡಿರುವ ಟಾಟಾ ಮೋಟಾರ್ಸ್ ಕಂಪನಿಯು ಗ್ರ್ಯಾಂಡ್ ಎನ್ನುವುದು ಕೇವಲ ಕಾಗದದ ಮೇಲೆ ಆದರೆ ಚಾಲನೆ ಬೇಕಿರುವುದು ಸುರಕ್ಷತೆ ಎನ್ನುವ ಮೂಲಕ ಟಿಯಾಗೋ ವೈಶಿಷ್ಟ್ಯತೆಯ ಬಗೆಗೆ ಹೆಮ್ಮೆ ವ್ಯಕ್ತಪಡಿಸಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಕ್ರ್ಯಾಶ್ ಟೆಸ್ಟ್‌ನಲ್ಲಿ ಫ್ಲಾಪ್ ಆದ ಹ್ಯುಂಡೈ ಗ್ರ್ಯಾಂಡ್ ಐ10 ಕಾರಿಗೆ ಸೆಡ್ದು ಹೊಡೆದ ಟಾಟಾ ಮೋಟಾರ್ಸ್

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಅಂಕಗಳಲ್ಲಿ 4 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡಿರುವ ಟಾಟಾ ಟಿಯಾಗೋ ಕಾರು ಮಾದರಿಯು ಅತ್ಯುತ್ತಮ ಫೀಚರ್ಸ್ ಹೊಂದಿದ್ದು, 1.2-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 4.70 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.74 ಲಕ್ಷ ಬೆಲೆ ಹೊಂದಿದೆ.

ಕ್ರ್ಯಾಶ್ ಟೆಸ್ಟ್‌ನಲ್ಲಿ ಫ್ಲಾಪ್ ಆದ ಹ್ಯುಂಡೈ ಗ್ರ್ಯಾಂಡ್ ಐ10 ಕಾರಿಗೆ ಸೆಡ್ದು ಹೊಡೆದ ಟಾಟಾ ಮೋಟಾರ್ಸ್

ಹಾಗೆಯೇ ಹ್ಯುಂಡೈ ನಿರ್ಮಾಣದ ಗ್ರ್ಯಾಂಡ್ ಐ10 ನಿಯೊಸ್ ಮಾದರಿಯು 1.0-ಲೀಟರ್ ಟರ್ಬೋ ಪೆಟ್ರೋಲ್, 1.2-ಲೀಟರ್ ಕಪ್ಪಾ ಪೆಟ್ರೋಲ್ ಮತ್ತು 1.2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.12 ಲಕ್ಷದಿಂದ ಮತ್ತು ಟಾಪ್ ಎಂಡ್ ಮಾದರಿಯು ರೂ. 8.35 ಲಕ್ಷ ಬೆಲೆ ಹೊಂದಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಕ್ರ್ಯಾಶ್ ಟೆಸ್ಟ್‌ನಲ್ಲಿ ಫ್ಲಾಪ್ ಆದ ಹ್ಯುಂಡೈ ಗ್ರ್ಯಾಂಡ್ ಐ10 ಕಾರಿಗೆ ಸೆಡ್ದು ಹೊಡೆದ ಟಾಟಾ ಮೋಟಾರ್ಸ್

ಗ್ರ್ಯಾಂಡ್ ಐ10 ನಿಯೊಸ್ ಮಾದರಿಯು ಟಿಯಾಗೋ ಕಾರಿಗಿಂತಲೂ ಹೆಚ್ಚು ಪ್ರೀಮಿಯಂ ಫೀಚರ್ಸ್ ಮತ್ತು ವಿವಿಧ ಎಂಜಿನ್ ಆಯ್ಕೆ ಹೊಂದಿದ್ದರೂ ಸುರಕ್ಷಾ ವಿಚಾರವಾಗಿ ಕಳಪೆ ಗುಣಮಟ್ಟ ಹೊಂದಿದ್ದು, ಟಾಟಾ ಟಿಯಾಗೋ ಈ ವಿಚಾರದಲ್ಲಿ ಬೆಸ್ಟ್ ಫೀಚರ್ಸ್‌ಗಳೊಂದಿಗೆ ಖರೀದಿಗೆ ಉತ್ತಮ ಎನ್ನಿಸುತ್ತದೆ.

Most Read Articles

Kannada
English summary
Tata Takes A Dig At The Hyundai Grand i10 For Safety. Read in Kannada.
Story first published: Wednesday, November 18, 2020, 14:39 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X