ಆಟೋ ಎಕ್ಸ್‌ಪೋ 2020: ಬರೋಬ್ಬರಿ 26 ಹೊಸ ವಾಹನಗಳನ್ನು ಪ್ರದರ್ಶನಗೊಳಿಸಲಿದೆ ಟಾಟಾ ಮೋಟಾರ್ಸ್

ದೇಶದ ಜನಪ್ರಿಯ ಕಾರು ಉತ್ಪಾದನಾ ಸಂಸ್ಥೆಯಾದ ಟಾಟಾ ಮೋಟಾರ್ಸ್ ತನ್ನ ಹೊಸ ಮಾದರಿಯ ವಾಹನಗಳ ಉತ್ಪನ್ನಗಳನ್ನು ಅನಾವರಣಗೊಳಿಸಲು ಭರ್ಜರಿ ಸಿದ್ದತೆ ನಡೆಸಿದ್ದು, ಫೆಬ್ರುವರಿ 5ರಿಂದ ಆರಂಭವಾಗುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರಯಾಣಿಕ ವಾಹನಗಳು ಮತ್ತು ವಾಣಿಜ್ಯ ವಾಹನಗಳು ಸೇರಿದಂತೆ ಬರೋಬ್ಬರಿ 26 ಹೊಸ ವಾಹನಗಳನ್ನು ಪ್ರದರ್ಶನಗೊಳಿಸಲಿದೆ.

ಆಟೋ ಎಕ್ಸ್‌ಪೋ 2020: ಬರೋಬ್ಬರಿ 26 ಹೊಸ ವಾಹನಗಳನ್ನು ಪ್ರದರ್ಶನಗೊಳಿಸಲಿದೆ ಟಾಟಾ ಮೋಟಾರ್ಸ್

ಹೊಸ ವಾಹನಗಳ ಉತ್ಪಾದನೆಯಲ್ಲಿ ಸದ್ಯ ಭಾರೀ ಬದಲಾವಣೆ ತರುವ ಮೂಲಕ ಗ್ರಾಹಕರ ಆಕರ್ಷಣೆ ಕಾರಣವಾಗಿರುವ ಟಾಟಾ ಮೋಟಾರ್ಸ್ ಸಂಸ್ಥೆಯು 2020ರ ಆಟೋ ಎಕ್ಸ್‌ಪೋ ಬಹುನೀರಿಕ್ಷಿತ ಕಾರು ಮಾದರಿಗಳ ಜೊತೆಗೆ ವಾಣಿಜ್ಯ ವಾಹನಗಳನ್ನು ಪ್ರದರ್ಶನಗೊಳಿಸಲಿದ್ದು, ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಜೊತೆಗೆ ಈ ಬಾರಿ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಸಹ ಅನಾವರಣಗೊಳಿಸುತ್ತಿರುವ ಹಲವು ವಿಶೇಷತೆಗಳಿಗೆ ಕಾರಣವಾಗಿದೆ.

ಆಟೋ ಎಕ್ಸ್‌ಪೋ 2020: ಬರೋಬ್ಬರಿ 26 ಹೊಸ ವಾಹನಗಳನ್ನು ಪ್ರದರ್ಶನಗೊಳಿಸಲಿದೆ ಟಾಟಾ ಮೋಟಾರ್ಸ್

ಮಾಹಿತಿಗಳ ಪ್ರಕಾರ, ಟಾಟಾ ಸಂಸ್ಥೆಯು ಒಟ್ಟು 26 ವಾಹನಗಳನ್ನು ಅನಾವರಣಗೊಳಿಸಲಿದ್ದು, ಇದರಲ್ಲಿ 14 ವಾಣಿಜ್ಯ ಬಳಕೆಯ ವಾಹನಗಳು ಮತ್ತು 12 ಪ್ರಯಾಣಿಕ ಬಳಕೆಯ ಕಾರು ಮಾದರಿಗಳು ಸೇರಿವೆ.

ಆಟೋ ಎಕ್ಸ್‌ಪೋ 2020: ಬರೋಬ್ಬರಿ 26 ಹೊಸ ವಾಹನಗಳನ್ನು ಪ್ರದರ್ಶನಗೊಳಿಸಲಿದೆ ಟಾಟಾ ಮೋಟಾರ್ಸ್

ಜೊತೆಗೆ ಪ್ರದರ್ಶನಗೊಳ್ಳಲಿರುವ ವಾಹನಗಳಲ್ಲಿ ಕೆಲವು ಕೆಲವು ಮಾತ್ರವೇ ಹೊಸ ವಾಹನ ಮಾದರಿಗಳಾಗಿದ್ದು, ಇನ್ನುಳಿದ ವಾಹನ ಮಾದರಿಗಳು ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಯಾಗಿರುವ ಬಿಎಸ್-6 ನಿಯಮದಂತೆ ಹೊಸ ಎಂಜಿನ್‌ನೊಂದಿಗೆ ಅನಾವರಣಗೊಳ್ಳಲಿವೆ.

ಆಟೋ ಎಕ್ಸ್‌ಪೋ 2020: ಬರೋಬ್ಬರಿ 26 ಹೊಸ ವಾಹನಗಳನ್ನು ಪ್ರದರ್ಶನಗೊಳಿಸಲಿದೆ ಟಾಟಾ ಮೋಟಾರ್ಸ್

ಹೊಸ ಕಾರು ಮಾದರಿಗಳಾದ ಗ್ರಾವಿಟಾಸ್, ಆಲ್‌ಟ್ರೊಜ್, ಆಲ್‌ಟ್ರೊಜ್ ಎಲೆಕ್ಟ್ರಿಕ್, ನೆಕ್ಸಾನ್ ಎಲೆಕ್ಟ್ರಿಕ್, ನ್ಯೂ ಜನರೇಷನ್ ಟಿಗೋರ್, ಟಿಯಾಗೋ, ಹೆಚ್ಎಕ್ಸ್2 ಕಾನೆಪ್ಟ್, ಹ್ಯಾರಿಯರ್ ಪೆಟ್ರೋಲ್ ಮಾದರಿಗಳ ಜೊತೆಗೆ ಪ್ರಸ್ತುತ ಮಾರುಕಟ್ಟೆಯಲ್ಲಿರುವ ವಾಹನಗಳ ಬಿಎಸ್-6 ಆವೃತ್ತಿಗಳು ಅನಾವರಣಗೊಳ್ಳಲಿದ್ದು, ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟದಲ್ಲೂ ಹೊಸ ಸಂಚಲನ ಮೂಡಿಸುವ ನೀರಿಕ್ಷೆಯಲ್ಲಿದೆ.

ಆಟೋ ಎಕ್ಸ್‌ಪೋ 2020: ಬರೋಬ್ಬರಿ 26 ಹೊಸ ವಾಹನಗಳನ್ನು ಪ್ರದರ್ಶನಗೊಳಿಸಲಿದೆ ಟಾಟಾ ಮೋಟಾರ್ಸ್

ಇನ್ನು ಟಾಟಾ ಸಂಸ್ಥೆಯು ಹೊಸ ಕಾರುಗಳ ಅಭಿವೃದ್ಧಿಗಾಗಿ ಟಾಟಾ ಸಂಸ್ಥೆಯು ಸುಧಾರಿತ ತಂತ್ರಜ್ಞಾನ ಪ್ರೇರಿತ ಅಲ್ಫಾ(ALFA) ಮತ್ತು ಒಮೇಗಾ(OMEGA) ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಬಳಕೆ ಮಾಡುತ್ತಿದ್ದು, ಫೇಸ್‌ಲಿಫ್ಟ್ ಕಾರುಗಳ ವಿನ್ಯಾಸದಲ್ಲಿ ಮತ್ತಷ್ಟು ಹೊಸ ಮೆರಗು ತಂದಿದೆ.

ಆಟೋ ಎಕ್ಸ್‌ಪೋ 2020: ಬರೋಬ್ಬರಿ 26 ಹೊಸ ವಾಹನಗಳನ್ನು ಪ್ರದರ್ಶನಗೊಳಿಸಲಿದೆ ಟಾಟಾ ಮೋಟಾರ್ಸ್

ಕಳೆದ ವರ್ಷ ಬಿಡುಗಡೆಯಾದ ಹ್ಯಾರಿಯರ್ ಕೂಡಾ ಒಮೇಗಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಸಿದ್ದಗೊಂಡಿರುವುದು ಗ್ರಾಹಕರ ಆಕರ್ಷಣೆಗೆ ಕಾರಣವಾಗಿದ್ದು, ಇದೀಗ ಬಿಡುಗಡೆಯಾಗಲಿರುವ ಫೇಸ್‌ಲಿಫ್ಟ್ ನೆಕ್ಸಾನ್, ಟಿಗೋರ್ ಮತ್ತು ಟಿಯಾಗೋ ಕಾರುಗಳನ್ನು ಸಹ ಇದೇ ಪ್ಯಾಟ್‌ಫಾರ್ಮ್ ಅಡಿಯಲ್ಲೇ ಅಭಿವೃದ್ಧಿಗೊಳಿಸಲಾಗಿದೆ.

ಆಟೋ ಎಕ್ಸ್‌ಪೋ 2020: ಬರೋಬ್ಬರಿ 26 ಹೊಸ ವಾಹನಗಳನ್ನು ಪ್ರದರ್ಶನಗೊಳಿಸಲಿದೆ ಟಾಟಾ ಮೋಟಾರ್ಸ್

ಹೊಸ ವಾಹನ ಉತ್ಪಾದನಾ ಪ್ಲ್ಯಾಟ್‌ಫಾರ್ಮ್‌ನಲ್ಲಿ ವಾಹನಗಳ ವಿನ್ಯಾಸ ಮತ್ತು ಸುರಕ್ಷತೆಯಲ್ಲಿ ಹೆಚ್ಚಿನ ಒತ್ತು ನೀಡಲಾಗಿದ್ದು, ಪ್ರತಿ ಪ್ರಯಾಣಿಕರ ವಾಹನದಲ್ಲೂ 5 ಸ್ಟಾರ್ ಕ್ರ್ಯಾಶ್ ರೇಟಿಂಗ್ ನೀಡಲು ಇದು ಸಹಕಾರಿಯಾಗಿದೆ.

ಆಟೋ ಎಕ್ಸ್‌ಪೋ 2020: ಬರೋಬ್ಬರಿ 26 ಹೊಸ ವಾಹನಗಳನ್ನು ಪ್ರದರ್ಶನಗೊಳಿಸಲಿದೆ ಟಾಟಾ ಮೋಟಾರ್ಸ್

ಇದಲ್ಲದೇ ಮಾಲಿನ್ಯದಲ್ಲಿ ಬಹುದೊಡ್ಡ ಕೊಡುಗೆ ಹೊಂದಿರುವ ಭಾರತದಲ್ಲಿ ಬಿಎಸ್-6 ವೈಶಿಷ್ಟ್ಯತೆಯ ವಾಹನಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಹೆಚ್ಚಿನ ಒತ್ತಡಗಳಿದ್ದು, ಟಾಟಾ ಸೇರಿದಂತೆ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕಾರುಗಳನ್ನು ಬಿಎಸ್-6 ನಿಯಮಕ್ಕೆ ಉನ್ನತೀಕರಿಸುತ್ತಿವೆ.

ಆಟೋ ಎಕ್ಸ್‌ಪೋ 2020: ಬರೋಬ್ಬರಿ 26 ಹೊಸ ವಾಹನಗಳನ್ನು ಪ್ರದರ್ಶನಗೊಳಿಸಲಿದೆ ಟಾಟಾ ಮೋಟಾರ್ಸ್

ಬಿಎಸ್-6 ವೈಶಿಷ್ಟ್ಯತೆಯಿಂದಾಗಿ ಸದ್ಯ ಮಾರುಕಟ್ಟೆಯಲ್ಲಿರುವ ಪ್ರಮುಖ ಕಾರುಗಳು ಹೊಸ ಎಂಜಿನ್ ಮತ್ತು ಕೆಲವು ಸುಧಾರಿತ ವಿನ್ಯಾಸಗಳೊಂದಿಗೆ ಮರು ಅಭಿವೃದ್ಧಿಗೊಳ್ಳುತ್ತಿದ್ದು, ಮಾಲಿನ್ಯ ಹೊರಸೂಸುವಿಕೆ ಪ್ರಮಾಣದಲ್ಲಿ ಸಾಕಷ್ಟು ಸುಧಾರಣೆ ಕಂಡಿವೆ.

ಆಟೋ ಎಕ್ಸ್‌ಪೋ 2020: ಬರೋಬ್ಬರಿ 26 ಹೊಸ ವಾಹನಗಳನ್ನು ಪ್ರದರ್ಶನಗೊಳಿಸಲಿದೆ ಟಾಟಾ ಮೋಟಾರ್ಸ್

ಇದರೊಂದಿಗೆ ಹೊಸ ಕಾರುಗಳ ಬೆಲೆಯಲ್ಲೂ ತುಸು ಏರಿಕೆಯಾಗಲಿದ್ದು, ಬಿಎಸ್-4 ಕಾರುಗಳ ಬೆಲೆಗಳಿಂತಲೂ ಬಿಎಸ್-6 ಕಾರುಗಳ ಬೆಲೆಯು ತಾಂತ್ರಿಕ ಸೌಲಭ್ಯಗಳ ಅಳವಡಿಕೆಯ ಆಧಾರದ ಮೇಲೆ ಪೆಟ್ರೋಲ್ ಕಾರುಗಳು ರೂ.15ರಿಂದ ರೂ.30 ಸಾವಿರ ತನಕ ಮತ್ತು ಡೀಸೆಲ್ ಕಾರುಗಳು ರೂ. 80 ಸಾವಿರದಿಂದ ಲಕ್ಷದಿಂದ ರೂ. 1.50 ಲಕ್ಷದ ತನಕ ಹೆಚ್ಚಿನ ಬೆಲೆ ಪಡೆದುಕೊಳ್ಳಬಹುದು ಎಂದು ನೀರಿಕ್ಷಿಸಲಾಗಿದೆ.

Most Read Articles

Kannada
English summary
Tata Motors To Showcase 26 Vehicles At Auto Expo 2020. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X