ಲಾಕ್‌ಡೌನ್ ವಿನಾಯ್ತಿ ನಂತರ ಮೊದಲ ಬಾರಿಗೆ ನೆಕ್ಸಾನ್ ಇವಿ ವಿತರಣೆ ಪುನಾರಂಭಿಸಿದ ಟಾಟಾ
ಲಾಕ್‌ಡೌನ್ ನಡುವೆಯೂ ಕೇಂದ್ರ ಸರ್ಕಾರವು ಆಟೋ ಉದ್ಯಮ ವ್ಯವಹಾರಗಳಿಗೆ ಹಲವಾರು ವಿನಾಯ್ತಿ ನೀಡಿದ್ದು, ಬಹುತೇಕ ಆಟೋ ಕಂಪನಿಗಳು ವಾಹನ ಉತ್ಪಾದನೆಯ ಜೊತೆಗೆ ಮಾರಾಟ ಪ್ರಕ್ರಿಯೆಗೂ ಮರುಚಾಲನೆ ನೀಡಿವೆ.

ಟಾಟಾ ಮೋಟಾರ್ಸ್ ಕೂಡಾ ಕಳೆದ ಎರಡು ವಾರಗಳಿಂದಲೇ ಹೊಸ ವಾಹನ ಮಾರಾಟವನ್ನು ಹೊಸ ಸುರಕ್ಷಾ ಮಾರ್ಗಸೂಚಿ ಅಡಿ ಪುನಾರಂಭಗೊಳಿಸಿದ್ದು, ಇದೀಗ ಎಲೆಕ್ಟ್ರಿಕ್ ಕಾರು ಮಾದರಿಯಾದ ನೆಕ್ಸಾನ್ ಇವಿ ವಿತರಣೆಗೂ ಚಾಲನೆ ನೀಡಿದೆ. ನೆಕ್ಸಾನ್ ಇವಿ ಕಾರು ಸದ್ಯ ದೇಶದ ಪ್ರಮುಖ ಮೆಟ್ರೋ ಸಿಟಿಗಳಲ್ಲಿ ಮಾತ್ರವೇ ಖರೀದಿಗೆ ಲಭ್ಯವಿದ್ದು, ಬೆಂಗಳೂರು, ಮುಂಬೈ, ಚೆನ್ನೈ ಮತ್ತು ದೆಹಲಿಯಲ್ಲಿ ನೆಕ್ಸಾನ್ ಇವಿ ಮಾರಾಟಕ್ಕೆ ಮರುಚಾಲನೆ ನೀಡಲಾಗಿದೆ.

ಸದ್ಯ ಲಾಕ್‌ಡೌನ್‌ಗೂ ಮೊದಲು ಬೇಡಿಕೆ ಸಲ್ಲಿಸಿದ್ದ ಗ್ರಾಹಕರಿಗೆ ಹೊಸ ಕಾರನ್ನು ವಿತರಣೆ ಮಾಡಲಾಗುತ್ತಿದ್ದು, ವೈರಸ್ ಭೀತಿ ಹಿನ್ನಲೆಯಲ್ಲಿ ಗರಿಷ್ಠ ಸುರಕ್ಷಾ ಕ್ರಮಗಳೊಂದಿಗೆ ವಾಹನ ವಿತರಣೆ ಮಾಡುವುದನ್ನ ಕಡ್ಡಾಯಗೊಳಿಸಿದೆ.

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.13.99 ಲಕ್ಷ ಬೆಲೆ ಪಡೆದುಕೊಂಡಿದ್ದು, ಟಾಪ್ ಎಂಡ್ ಮಾದರಿಯು ರೂ.15.99 ಲಕ್ಷ ಬೆಲೆ ಪಡೆದುಕೊಂಡಿದೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ನೆಕ್ಸಾನ್ ಎಲೆಕ್ಟ್ರಿಕ್ ಕಾರು ಗ್ರಾಹಕರ ಬೇಡಿಕೆಯೆಂತೆ ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರೆಯೆಂಟ್‌ಗಳಲ್ಲಿ ಬಿಡುಗಡೆಗೊಳಿಸಲಾಗಿದ್ದು, ಮೂರು ವೆರಿಯೆಂಟ್‌ಗಳಲ್ಲೂ ಹಲವಾರು ಹೊಸ ಫೀಚರ್ಸ್‌ಗಳಿವೆ. ಈ ಎಲೆಕ್ಟ್ರಿಕ್ ಕಾರನ್ನು ನೆಕ್ಸಾನ್ ಫೇಸ್‍ಲಿಫ್ಟ್ ಸ್ಟ್ಯಾಂಡರ್ಡ್ ಕಾರಿನ ಆಧಾರದ ಮೇಲೆ ತಯಾರಿಸಲಾಗಿದ್ದು, ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ 95 ಕಿ.ವ್ಯಾಟ್ ಎಲೆಕ್ಟ್ರಿಕ್ ಮೋಟಾರ್ ಅಳವಡಿಸಲಾಗಿದೆ.

ಎಆರ್‌ಎಐ ಪ್ರಮಾಣ ಪತ್ರದಂತೆ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಒಂದು ಬಾರಿಗೆ ಪೂರ್ತಿಯಾಗಿ ಚಾರ್ಜ್ ಆದಲ್ಲಿ ಗರಿಷ್ಠ 312 ಕಿ.ಮೀವರೆಗೂ ಚಲಿಸುತ್ತದೆ ಎನ್ನಲಾಗಿದ್ದು, ಆದರೆ ನೈಜ ಪರಿಸ್ಥಿತಿಗಳಿಗೆ ಅನುಗುಣವಾಗಿ ಈ ಕಾರು 250ಕಿ.ಮೀನಿಂದ- 300ಕಿ.ಮೀವರೆಗೂ ಚಲಿಸುವುವುದು ಫಸ್ಟ್ ಡ್ರೈವ್‌ನಲ್ಲಿ ಸಾಬೀತಾಗಿದೆ.
MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಇನ್ನು ದೇಶಾದ್ಯಂತ ಸದ್ಯ ಎಲೆಕ್ಟ್ರಿಕ್ ವಾಹನ ಮಾರಾಟವು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದರೂ ಸಹ ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆಯಿಂದಾಗಿ ಬಹುತೇಕ ಎಲೆಕ್ಟ್ರಿಕ್ ವಾಹನ ಖರೀದಿದಾರರು ಹಿಂದೇಟು ಹಾಕುತ್ತಿದ್ದಾರೆ.

ಈ ವಿಚಾರವಾಗಿ ಮಹತ್ವದ ನಿರ್ಣಯ ಕೈಗೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ದೇಶದ ಪ್ರಮುಖ ನಗರಗಳಲ್ಲಿ 300ಕ್ಕೂ ಹೆಚ್ಚು ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲು ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಟಿಯಾಗೋ ಮತ್ತು ನೆಕ್ಸಾನ್ ಇವಿ ನಂತರ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ.
MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಪ್ರಸ್ತುತ ಮಾರುಕಟ್ಟೆಯಲ್ಲಿ ಹಲವಾರು ಎಲೆಕ್ಟ್ರಿಕ್ ವಾಹನಗಳು ಖರೀದಿಗೆ ಲಭ್ಯವಿದ್ದರೂ ಸಹ ಅವಶ್ಯಕತೆಗೆ ಅನುಗುಣವಾಗಿ ಚಾರ್ಜಿಂಗ್ ಸ್ಟೆಷನ್‌ಗಳು ಇಲ್ಲದಿರುವುದು ಇವಿ ವಾಹನ ಮಾರಾಟದಲ್ಲಿ ತೀವ್ರಗತಿಯ ಬೆಳವಣಿಗೆ ಸಾಧಿಸಲು ಸಾಧ್ಯವಾಗುತ್ತಿಲ್ಲ.

ಕೇಂದ್ರ ಸರ್ಕಾರವು ಸಹ ಎಲೆಕ್ಟ್ರಿಕ್ ವಾಹನ ಮೇಲಿನ ಖರೀದಿಗೆ ಮಾತ್ರವಲ್ಲದೇ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣದ ಮೇಲೂ ಆಕರ್ಷಕ ಸಬ್ಸಡಿ ದರವನ್ನು ನೀಡುತ್ತಿದ್ದು, ಇದೀಗ ಟಾಟಾ ಸೇರಿದಂತೆ ಹಲವಾರು ಆಟೋ ಉತ್ಪಾದನಾ ಸಂಸ್ಥೆಗಳು ಫೇಮ್-2 ಯೋಜನೆ ಅಡಿ ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕೆ ಮುಂದಾಗಿವೆ.


Click it and Unblock the Notifications