ಎಲೆಕ್ಟ್ರಿಕ್ ಕಾರುಗಳಿಗೆ ಭರ್ಜರಿ ಬೇಡಿಕೆ- ನೆಕ್ಸಾನ್ ಇವಿ ಮೊದಲ ಬ್ಯಾಚ್ ವಿತರಣೆ ಮಾಡಿದ ಟಾಟಾ ಮೋಟಾರ್ಸ್
ದೇಶಾದ್ಯಂತ ಎಲೆಕ್ಟ್ರಿಕ್ ವಾಹನ ಮಾರಾಟಕ್ಕೆ ಬಹುತೇಕ ಆಟೋ ಉತ್ಪಾದನಾ ಕಂಪನಿಗಳು ಚಾಲನೆ ನೀಡಿದ್ದು, ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳ ಸಂಖ್ಯೆ ಹೆಚ್ಚಿದಂತೆ ಎಲೆಕ್ಟ್ರಿಕ್ ವಾಹನಗಳ ಖರೀದಿ ಭರಾಟೆ ಕೂಡಾ ಜೋರಾಗುತ್ತಿದೆ.

ಇತ್ತೀಚೆಗೆ ಬಿಡುಗಡೆಗೊಂಡಿದ್ದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕೂಡಾ ಇದೀಗ ಅಧಿಕೃತವಾಗಿ ಖರೀದಿಗೆ ಲಭ್ಯವಾಗಿದ್ದು, ಹೊಸ ಕಾರಿನ ಮೊದಲ ಬ್ಯಾಚ್ ವಿತರಣೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಹೊಸ ಕಾರು ಬಿಡುಗಡೆಗೊಂಡ ಮೊದಲ ತಿಂಗಳಿನಲ್ಲೇ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಮಾರ್ಚ್ ಅವಧಿಯ ಕಾರು ಮಾರಾಟ ಪಟ್ಟಿಯಲ್ಲಿ ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಮಾರಾಟ ಪ್ರಮಾಣವು ಬಹಿರಂಗಗೊಳ್ಳಲಿದೆ.

ಸದ್ಯಕ್ಕೆ ಹೊಸ ನೆಕ್ಸಾನ್ ಇವಿ ಕಾರು ಆಯ್ದ ನಗರಗಳಲ್ಲಿ ಮಾತ್ರವೇ ಖರೀದಿಗೆ ಲಭ್ಯವಿದ್ದು, ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣ ಹೆಚ್ಚಿದಂತೆ ಹೊಸ ಕಾರಿನ ಮಾರಾಟವನ್ನು ವಿಸ್ತರಣೆ ಮಾಡಲಿದೆ.

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.13.99 ಲಕ್ಷ ಬೆಲೆ ಪಡೆದುಕೊಂಡಿದ್ದು, ಟಾಪ್ ಎಂಡ್ ಮಾದರಿಯು ರೂ.15.99 ಲಕ್ಷ ಬೆಲೆ ಪಡೆದುಕೊಂಡಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಕಾರು ಗ್ರಾಹಕರ ಬೇಡಿಕೆಯೆಂತೆ ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರೆಯೆಂಟ್‌ಗಳಲ್ಲಿ ಬಿಡುಗಡೆಗೊಳಿಸಲಾಗಿದ್ದು, ಮೂರು ವೆರಿಯೆಂಟ್‌ಗಳಲ್ಲೂ ಹಲವಾರು ಹೊಸ ಫೀಚರ್ಸ್‌ಗಳಿವೆ. ಈ ಎಲೆಕ್ಟ್ರಿಕ್ ಕಾರನ್ನು ನೆಕ್ಸಾನ್ ಫೇಸ್‍ಲಿಫ್ಟ್ ಸ್ಟ್ಯಾಂಡರ್ಡ್ ಕಾರಿನ ಆಧಾರದ ಮೇಲೆ ತಯಾರಿಸಲಾಗಿದ್ದು, ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ 95 ಕಿ.ವ್ಯಾಟ್ ಎಲೆಕ್ಟ್ರಿಕ್ ಮೋಟಾರ್ ಅಳವಡಿಸಲಾಗಿದೆ.

ಎಆರ್‍ಎಐ ಪ್ರಮಾಣ ಪತ್ರದಂತೆ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಒಂದು ಬಾರಿಗೆ ಪೂರ್ತಿಯಾಗಿ ಚಾರ್ಜ್ ಆದಲ್ಲಿ ಗರಿಷ್ಠ 312 ಕಿ.ಮೀವರೆಗೂ ಚಲಿಸುತ್ತದೆ ಎನ್ನಲಾಗಿದ್ದು, ಆದರೆ ನೈಜ ಪರಿಸ್ಥಿತಿಗಳಿಗೆ ಅನುಗುಣವಾಗಿ ಈ ಕಾರು 250ಕಿ.ಮೀನಿಂದ- 300ಕಿ.ಮೀವರೆಗೂ ಚಲಿಸುವುವುದು ಫಸ್ಟ್ ಡ್ರೈವ್‌ನಲ್ಲಿ ಸಾಬೀತಾಗಿದೆ.

ಇನ್ನು ದೇಶಾದ್ಯಂತ ಸದ್ಯ ಎಲೆಕ್ಟ್ರಿಕ್ ವಾಹನ ಮಾರಾಟವು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದರೂ ಸಹ ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆಯಿಂದಾಗಿ ಬಹುತೇಕ ಎಲೆಕ್ಟ್ರಿಕ್ ವಾಹನ ಖರೀದಿದಾರರು ಹಿಂದೇಟು ಹಾಕುತ್ತಿದ್ದಾರೆ.

ಈ ವಿಚಾರವಾಗಿ ಮಹತ್ವದ ನಿರ್ಣಯ ಕೈಗೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ದೇಶದ ಪ್ರಮುಖ ನಗರಗಳಲ್ಲಿ 300ಕ್ಕೂ ಹೆಚ್ಚು ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲು ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಟಿಯಾಗೋ ಮತ್ತು ನೆಕ್ಸಾನ್ ಇವಿ ನಂತರ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಹಲವಾರು ಎಲೆಕ್ಟ್ರಿಕ್ ವಾಹನಗಳು ಖರೀದಿಗೆ ಲಭ್ಯವಿದ್ದರೂ ಸಹ ಅವಶ್ಯಕತೆಗೆ ಅನುಗುಣವಾಗಿ ಚಾರ್ಜಿಂಗ್ ಸ್ಟೆಷನ್‌ಗಳು ಇಲ್ಲದಿರುವುದು ಇವಿ ವಾಹನ ಮಾರಾಟದಲ್ಲಿ ತೀವ್ರಗತಿಯ ಬೆಳವಣಿಗೆ ಸಾಧಿಸಲು ಸಾಧ್ಯವಾಗುತ್ತಿಲ್ಲ.

ಕೇಂದ್ರ ಸರ್ಕಾರವು ಸಹ ಎಲೆಕ್ಟ್ರಿಕ್ ವಾಹನ ಮೇಲಿನ ಖರೀದಿಗೆ ಮಾತ್ರವಲ್ಲದೇ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣದ ಮೇಲೂ ಆಕರ್ಷಕ ಸಬ್ಸಡಿ ದರವನ್ನು ನೀಡುತ್ತಿದ್ದು, ಇದೀಗ ಟಾಟಾ ಸೇರಿದಂತೆ ಹಲವಾರು ಆಟೋ ಉತ್ಪಾದನಾ ಸಂಸ್ಥೆಗಳು ಫೇಮ್-2 ಯೋಜನೆ ಅಡಿ ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕೆ ಮುಂದಾಗಿವೆ.


Click it and Unblock the Notifications