ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಅಧಿಕ ಮೈಲೇಜ್ ಪ್ರೇರಿತ ನೆಕ್ಸಾನ್ ಎಲೆಕ್ಟ್ರಿಕ್
ಟಾಟಾ ಮೋಟಾರ್ಸ್ ಕಂಪನಿಯು ತನ್ನ ಬಹುನೀರಿಕ್ಷಿತ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಈಗಾಗಲೇ ಬಿಡುಗಡೆಗೊಳಿಸಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಗ್ರಾಹಕರ ಬೇಡಿಕೆ ಅನುಸಾರವಾಗಿ ಅಧಿಕ ಮೈಲೇಜ್ ಪ್ರೇರಿತ ವೆರಿಯೆಂಟ್ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಸದ್ಯ ಖರೀದಿಗೆ ಲಭ್ಯವಿರುವ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯು ಪ್ರತಿ ಚಾರ್ಜ್‌ಗೆ 312ಕಿ.ಮೀ ಮೈಲೇಜ್ ರೇಂಜ್ ಹೊಂದಿದ್ದು, ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಹೊಸ ವೆರಿಯೆಂಟ್ ಪ್ರತಿ ಚಾರ್ಜ್‌ಗೆ 420 ಕಿ.ಮೀ ಮೈಲೇಜ್ ಪ್ರೇರಣೆಯೊಂದಿಗೆ ಬಿಡುಗಡೆ ಮಾಡುವ ಸುಳಿವು ನೀಡಿದೆ. ನೆಕ್ಸಾನ್ ಖರೀದಿಗೆ ಬಯಸುತ್ತಿರುವ ಬಹುತೇಕ ಗ್ರಾಹಕರು ಹೆಚ್ಚು ಮೈಲೇಜ್ ಪ್ರೇರಿತ ವೆರಿಯೆಂಟ್ ಕುರಿತಾಗಿ ಬೇಡಿಕೆ ಸಲ್ಲಿಸುತ್ತಿದ್ದು, ಹೊಸ ಬ್ಯಾಟರಿ ಹೊಂದಿರುವ ಕಾರು ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

ಇನ್ನು ದೇಶಾದ್ಯಂತ ಎಲೆಕ್ಟ್ರಿಕ್ ವಾಹನ ಮಾರಾಟಕ್ಕೆ ಬಹುತೇಕ ಆಟೋ ಉತ್ಪಾದನಾ ಕಂಪನಿಗಳು ಚಾಲನೆ ನೀಡಿದ್ದು, ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳ ಸಂಖ್ಯೆ ಹೆಚ್ಚಿದಂತೆ ಎಲೆಕ್ಟ್ರಿಕ್ ವಾಹನಗಳ ಖರೀದಿ ಭರಾಟೆ ಕೂಡಾ ಜೋರಾಗುತ್ತಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಕೂಡಾ ಇದೀಗ ಅಧಿಕೃತವಾಗಿ ಖರೀದಿಗೆ ಲಭ್ಯವಾಗಿದ್ದು, ಹೊಸ ಕಾರಿನ ಮೊದಲ ಬ್ಯಾಚ್ ವಿತರಣೆ ಪ್ರಕ್ರಿಯೆಗೂ ಚಾಲನೆ ನೀಡಲಾಗಿದೆ. ಹೊಸ ಕಾರು ಬಿಡುಗಡೆಗೊಂಡ ಮೊದಲ ತಿಂಗಳಿನಲ್ಲೇ ಉತ್ತಮ ಬೇಡಿಕೆ ಪಡೆದುಕೊಂಡಿದೆ.

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.13.99 ಲಕ್ಷ ಬೆಲೆ ಪಡೆದುಕೊಂಡಿದ್ದು, ಟಾಪ್ ಎಂಡ್ ಮಾದರಿಯು ರೂ.15.99 ಲಕ್ಷ ಬೆಲೆ ಪಡೆದುಕೊಂಡಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಕಾರು ಗ್ರಾಹಕರ ಬೇಡಿಕೆಯೆಂತೆ ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರೆಯೆಂಟ್‌ಗಳಲ್ಲಿ ಬಿಡುಗಡೆಗೊಳಿಸಲಾಗಿದ್ದು, ಮೂರು ವೆರಿಯೆಂಟ್‌ಗಳಲ್ಲೂ ಹಲವಾರು ಹೊಸ ಫೀಚರ್ಸ್‌ಗಳಿವೆ.

ಈ ಎಲೆಕ್ಟ್ರಿಕ್ ಕಾರನ್ನು ನೆಕ್ಸಾನ್ ಫೇಸ್‍ಲಿಫ್ಟ್ ಸ್ಟ್ಯಾಂಡರ್ಡ್ ಕಾರಿನ ಆಧಾರದ ಮೇಲೆ ತಯಾರಿಸಲಾಗಿದ್ದು, ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ 95 ಕಿ.ವ್ಯಾಟ್ ಎಲೆಕ್ಟ್ರಿಕ್ ಮೋಟಾರ್ ಅಳವಡಿಸಲಾಗಿದೆ.

ಎಆರ್‍ಎಐ ಪ್ರಮಾಣ ಪತ್ರದಂತೆ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಒಂದು ಬಾರಿಗೆ ಪೂರ್ತಿಯಾಗಿ ಚಾರ್ಜ್ ಆದಲ್ಲಿ ಗರಿಷ್ಠ 312 ಕಿ.ಮೀವರೆಗೂ ಚಲಿಸುತ್ತದೆ.

ಆದರೆ ನೈಜ ಪರಿಸ್ಥಿತಿಗಳಿಗೆ ಅನುಗುಣವಾಗಿ ಈ ಕಾರು 250ಕಿ.ಮೀ ನಿಂದ 300ಕಿ.ಮೀವರೆಗೂ ಚಲಿಸುವುವುದು ಫಸ್ಟ್ ಡ್ರೈವ್‌ನಲ್ಲಿ ಸಾಬೀತಾಗಿದ್ದು, ಇದೀಗ ಬಿಡುಗಡೆಗೆ ಸಿದ್ದವಾಗುತ್ತಿರುವ ಹೊಸ ಕಾರು ಮತ್ತಷ್ಟು ಮೈಲೇಜ್ ರೇಂಜ್‌ನೊಂದಿಗೆ ಅತ್ಯಧಿಕ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.


Click it and Unblock the Notifications








