ನಾಳೆ ಬಿಡುಗಡೆಗೊಳ್ಳಲಿರುವ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ವಿಶೇಷತೆ ಏನು?

ಟಾಟಾ ಬಹುನೀರಿಕ್ಷಿತ ನೆಕ್ಸಾನ್ ಎಲೆಕ್ಟ್ರಿಕ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಇದೇ ತಿಂಗಳು 28ರಂದು ಅಧಿಕೃತವಾಗಿ ಬಿಡುಗಡೆಯಾಗುತ್ತಿದ್ದು, ಹೊಸ ಕಾರು ಕೈಗೆಟುಕುವ ಬೆಲೆಯೊಂದಿಗೆ ಅತ್ಯುತ್ತಮ ಮೈಲೇಜ್ ಮತ್ತು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ನಾಳೆ ಬಿಡುಗಡೆಗೊಳ್ಳಲಿರುವ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ವಿಶೇಷತೆ ಏನು?

ಹೊಸ ಕಾರುಗಳ ಉತ್ಪಾದನೆಯಲ್ಲಿ ಸದ್ಯ ಭಾರೀ ಬದಲಾವಣೆ ತರುವ ಮೂಲಕ ಗ್ರಾಹಕರ ಆಕರ್ಷಣೆ ಕಾರಣವಾಗಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ಸಾಮಾನ್ಯ ಕಾರುಗಳ ಜೊತೆಗೆ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಸಹ ಅಭಿವೃದ್ದಿಗೊಳಿಸಿ ಮಾರಾಟ ಮಾಡುತ್ತಿದ್ದು, ಇದೀಗ ಬಿಡುಗಡೆಗೊಳಿಸಲಾಗುತ್ತಿರುವ ನೆಕ್ಸಾನ್ ಎಲೆಕ್ಟ್ರಿಕ್ ಮಾದರಿಯು ಹೊಸ ವಿನ್ಯಾಸ ಮತ್ತು ಸುಧಾರಿತ ತಂತ್ರಜ್ಞಾನ ಪ್ರೇರಿತ ಜಿಪ್ ಟ್ರಾನ್ ಪವರ್‌ಟ್ರೈನ್‌ನೊಂದಿಗೆ ಸಿದ್ದಗೊಂಡಿರುವುದು ಗ್ರಾಹಕರ ಆಕರ್ಷಣೆಗೆ ಕಾರಣವಾಗಿದೆ.

ನಾಳೆ ಬಿಡುಗಡೆಗೊಳ್ಳಲಿರುವ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ವಿಶೇಷತೆ ಏನು?

ನೆಕ್ಸಾನ್ ಎಲೆಕ್ಟ್ರಿಕ್ ಕಾರು 30.2 ಕಿ.ವ್ಯಾಟ್ ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಹೊಂದಿದ್ದು, ಈ ಬ್ಯಾಟರಿಯು ಶಾಶ್ವತ ಮ್ಯಾಗ್ನೆಟ್ ಎಸಿ ಮೋಟಾರ್‌ನೊಂದಿಗೆ ಜೋಡಣೆ ಮಾಡಿರುವ ಹಿನ್ನಲೆಯಲ್ಲಿ ಧೂಳು ಹಾಗೂ ನೀರು ನಿರೋಧಕ ಐಪಿ 67 ಸರ್ಟಿಫಿಕೇಷನ್‍‍ನೊಂದಿಗೆ ಬರಲಿದೆ.

ನಾಳೆ ಬಿಡುಗಡೆಗೊಳ್ಳಲಿರುವ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ವಿಶೇಷತೆ ಏನು?

ಈ ಮೂಲಕ ಒಂದು ಬಾರಿ ಚಾರ್ಜ್‌ ಮಾಡಿದರೆ ಗರಿಷ್ಠ 320 ಕಿ.ಮೀವರೆಗೂ ಚಲಿಸುವುದರೊಂದಿಗೆ 245-ಎನ್‍ಎಂ ಟಾರ್ಕ್ ಉತ್ಪಾದಿಸುವುದಲ್ಲದೆ 9.9 ಸೆಕೆಂಡುಗಳಲ್ಲಿ ಸೊನ್ನೆಯಿಂದ 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ ಎಂದು ಹೇಳಲಾಗಿದೆ.

ನಾಳೆ ಬಿಡುಗಡೆಗೊಳ್ಳಲಿರುವ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ವಿಶೇಷತೆ ಏನು?

ನೆಕ್ಸಾನ್ ಎಲೆಕ್ಟ್ರಿಕ್ ಕಾರಿನಲ್ಲಿರುವ ಬ್ಯಾಟರಿಯು ಫಾಸ್ಟ್ ಚಾರ್ಜಿಂಗ್ ಟೆಕ್ನಾಲಜಿಯನ್ನು ಹೊಂದಿದ್ದು, ಕೇವಲ 60 ನಿಮಿಷಗಳಲ್ಲಿ ಬ್ಯಾಟರಿಯನ್ನು ಶೇ. 80 ರಷ್ಟು ಚಾರ್ಜ್ ಮಾಡಬಹುದಲ್ಲದೇ ಸ್ಟಾಂಡರ್ಡ್ ಚಾರ್ಜಿಂಗ್‍‍ನಲ್ಲಿ 8 ಗಂಟೆ ತಗೆದುಕೊಳ್ಳುತ್ತದೆ. ನೆಕ್ಸಾನ್ ಎಲೆಕ್ಟ್ರಿಕ್ ಕಾರಿನಲ್ಲಿರುವ ಬ್ಯಾಟರಿಗಳು ಬಿಎಂಎಸ್ (ಬ್ಯಾಟರಿ ಮ್ಯಾನೇಜ್‍‍ಮೆಂಟ್ ಸಿಸ್ಟಂ)ನೊಂದಿಗೆ ಬರಲಿದ್ದು, ಈ ಸಿಸ್ಟಂ ಸ್ಥಿರವಾದ ಪರ್ಫಾಮೆನ್ಸ್ ನೊಂದಿಗೆ 8 ವರ್ಷಗಳವರೆಗೆ ಬಾಳಿಕೆ ಬರುತ್ತದೆ.

ನಾಳೆ ಬಿಡುಗಡೆಗೊಳ್ಳಲಿರುವ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ವಿಶೇಷತೆ ಏನು?

ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಪವರ್‌ಟ್ರೇನ್‌ನಲ್ಲಿ ಕೂಲಿಂಗ್ ಸರ್ಕ್ಯೂಟ್ ಸಹ ಅಳವಡಿಸಲಾಗಿದ್ದು, ಇದು ಬಿಸಿಯಾದ ವಾತಾವರಣದಲ್ಲಿಯೂ ಸಹ ಸ್ಮೂಥ್ ಆದ ಪರ್ಫಾಮೆನ್ಸ್ ನೀಡುವ ಮೂಲಕ ಎಂಜಿನ್ ದಕ್ಷತೆ ಹೆಚ್ಚಿಸುತ್ತೆ.

ನಾಳೆ ಬಿಡುಗಡೆಗೊಳ್ಳಲಿರುವ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ವಿಶೇಷತೆ ಏನು?

ಹಾಗೆಯೇ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ವಿನ್ಯಾಸದ ಬಗೆಗೆ ಹೇಳುವುದಾದರೇ, ಹೊಸ ಕಾರು ಸಾಮಾನ್ಯ ಪೆಟ್ರೋಲ್ ಎಂಜಿನ್ ಹೊಂದಿರುವ ಫೇಸ್‍‍ಲಿಫ್ಟ್ ಆವೃತ್ತಿಯಂತಿದ್ದು, ನೆಕ್ಸಾನ್ ಕಾರಿನ ಫೇಸ್‍‍ಲಿಫ್ಟ್ ಆವೃತ್ತಿಯು ಕೂಡಾ ಈಗಾಗಲೇ ಮಾರುಕಟ್ಟೆ ಪ್ರವೇಶಿಸಿದೆ.

ನಾಳೆ ಬಿಡುಗಡೆಗೊಳ್ಳಲಿರುವ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ವಿಶೇಷತೆ ಏನು?

ಜೊತೆಗೆ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನಲ್ಲಿ ಎಲ್ಇಡಿ ಡಿಆರ್‍‍ಎಲ್‍‍ಗಳನ್ನು ಹೊಂದಿರುವ ಪ್ರೊಜೆಕ್ಟರ್ ಹೆಡ್‍‍ಲ್ಯಾಂಪ್‍‍ಗಳಿರಲಿದ್ದು, ಹೆಡ್‌ಲ್ಯಾಂಪ್‌ಗಳ ಮಧ್ಯದಲ್ಲಿ ಅಪ್‍‍‍‍ಡೇಟ್ ಮಾಡಲಾದ ಫ್ರಂಟ್ ಗ್ರಿಲ್‍‍ಗಳಿವೆ. ಮುಂಭಾಗದ ಬಂಪರ್‌ನಲ್ಲಿ ಹೊಸ ಫಾಗ್ ಲ್ಯಾಂಪ್ ಹಾಗೂ ಅಪ್‍‍ಡೇಟೆಡ್ ಸೆಂಟ್ರಲ್ ಏರ್ ಇನ್‍‍ಟೇಕ್‍‍ಗಳಿವೆ.

ನಾಳೆ ಬಿಡುಗಡೆಗೊಳ್ಳಲಿರುವ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ವಿಶೇಷತೆ ಏನು?

ಇದರೊಂದಿಗೆ ಹೊಸ ಕಾರಿನಲ್ಲಿ ಕೀ ಲೆಸ್ ಎಂಟ್ರಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಡ್ಯುಯಲ್ ಡ್ರೈವಿಂಗ್ ಮೋಡ್, ಪುಶ್-ಬಟನ್ ಸ್ಟಾರ್ಟ್ / ಸ್ಟಾಪ್, ಆಪಲ್ ಕಾರ್ ಪ್ಲೇ ಹಾಗೂ ಆಂಡ್ರಾಯಿಡ್ ಆಟೋ ಹೊಂದಿರುವ 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೇನ್‌ಮೆಂಟ್ ಸಿಸ್ಟಂ, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್‌ ಹಾಗೂ ವೈಪರ್, 16 ಇಂಚಿನ ಡೈಮಂಡ್ ಕಟ್ ಅಲಾಯ್ ವ್ಹೀಲ್, ಆಟೋಮ್ಯಾಟಿಕ್ ಸನ್‌ರೂಫ್ ಸೇರಿದಂತೆ ಇನ್ನಿತರ ಫೀಚರ್‍‍ಗಳಿವೆ.

ನಾಳೆ ಬಿಡುಗಡೆಗೊಳ್ಳಲಿರುವ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ವಿಶೇಷತೆ ಏನು?

ಹೊಸ ಕಾರಿನಲ್ಲಿರುವ ಬಹುತೇಕ ತಾಂತ್ರಿಕ ಅಂಶಗಳನ್ನು ಜೆಡ್ ಕನೆಕ್ಟ್ ಆಪ್ ಮೂಲಕವೇ ಸಂಪೂರ್ಣ ನಿಯಂತ್ರಣ ಮಾಡಬಹುದಾಗಿದ್ದು, ಬ್ಯಾಟರಿ ಬಾಳಿಕೆ, ಟ್ರಾಕ್ಷನ್ ಮೋಟಾರ್ ಕಂಡೀಷನ್, ಹೆಚ್‌ವಿ ಸಿಸ್ಟಂ ಕಂಡೀಷನ್, ಏರ್‌ಬ್ಯಾಗ್ ಕಂಡೀಷನ್, ಎಬಿಎಸ್/ಬ್ರೇಕ್ ಕಂಡೀಷನ್ ಮತ್ತು ಸರ್ವೀಸ್ ರಿಮೆಂಡರ್‌ ಸೇರಿದಂತೆ ವಿವಿಧ ಬಗೆಯ 35 ತಾಂತ್ರಿಕ ಅಂಶಗಳ ಸ್ಥಿತಿಗತಿ ಬಗ್ಗೆ ಒಂದೇ ಸೂರಿನಡಿ ಮಾಹಿತಿ ಪಡೆಯಬಹುದಾಗಿದೆ.

ನಾಳೆ ಬಿಡುಗಡೆಗೊಳ್ಳಲಿರುವ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ವಿಶೇಷತೆ ಏನು?

ಸೆಫ್ಟಿ ಫೀಚರ್ಸ್

ನೆಕ್ಸಾನ್ ಕಾರು ಈಗಾಗಲೇ ಕ್ರ್ಯಾಶ್‌ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ರೇಟಿಂಗ್ ಪಡೆದುಕೊಳ್ಳುವ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಅತಿ ಹೆಚ್ಚು ಸುರಕ್ಷತೆಯುಳ್ಳ ಕಾರು ಮಾದರಿಯಾಗಿ ಹೊರಹೊಮ್ಮಿದ್ದು, ಇದೀಗ ನೆಕ್ಸಾನ್ ಎಲೆಕ್ಟ್ರಿಕ್ ಸಹ ಗರಿಷ್ಠ ರೇಟಿಂಗ್‌ನೊಂದಿಗೆ ಗ್ರಾಹಕರನ್ನು ಸೆಳೆಯಲಿದೆ.

ನಾಳೆ ಬಿಡುಗಡೆಗೊಳ್ಳಲಿರುವ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ವಿಶೇಷತೆ ಏನು?

ಅಂದಾಜು ಬೆಲೆ(ಎಕ್ಸ್‌ಶೋರೂಂ ಪ್ರಕಾರ)

ನೆಕ್ಸಾನ್ ಎಲೆಕ್ಟ್ರಿಕ್ ಕಾರು ಟಾಟಾ ಮೋಟಾರ್ಸ್ ಕಂಪನಿಯ ಮೊದಲ ಎಲೆಕ್ಟ್ರಿಕ್ ಕಾರು ಅಲ್ಲದಿದ್ದರೂ ಕಂಪನಿಯ ಹೊಸ ಜಿಪ್‍‍ಟ್ರಾನ್ ಪವರ್‌ಟ್ರೈನ್ ಹೊಂದಿದ ಮೊದಲ ಕಾರು ಮಾದರಿಯಾಗಿದೆ. ಹೀಗಾಗಿ ಹೊಸ ಎಲೆಕ್ಟ್ರಿಕ್ ಕಾರಿನ ಬೆಲೆಯು ಭಾರತದಲ್ಲಿ ಎಕ್ಸ್ ಶೋರೂಂ ಪ್ರಕಾರ ರೂ.15 ಲಕ್ಷದಿಂದ ರೂ.18 ಲಕ್ಷ ಆಗಿರಬಹುದೆಂದು ಅಂದಾಜಿಸಲಾಗಿದೆ.

Most Read Articles

Kannada
English summary
tata nexon ev india launch tommmorrow. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X