ಮೊದಲ ಹಣಕಾಸು ವರ್ಷದ ಮೊದಲಾರ್ಧದಲ್ಲಿ ಅತ್ಯುತ್ತಮ ಬೇಡಿಕೆ ಪಡೆದುಕೊಂಡ ಟಾಟಾ ನೆಕ್ಸಾನ್ ಇವಿ

ದೇಶಾದ್ಯಂತ ಎಲೆಕ್ಟ್ರಿಕ್ ಕಾರುಗಳ ಮಾರಾಟವು ನಿಧಾನವಾಗಿ ಬೆಳವಣಿಗೆ ಸಾಧಿಸುತ್ತಿದ್ದು, ಕಳೆದ ವರ್ಷಕ್ಕಿಂತಲೂ ಇದೀಗ ಹೆಚ್ಚಿನ ಮಟ್ಟದ ಎಲೆಕ್ಟ್ರಿಕ್ ಕಾರುಗಳ ಮಾರಾಟವು ದಾಖಲಾಗಿದೆ. ಇದರಲ್ಲಿ ಟಾಟಾ ನೆಕ್ಸಾನ್, ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಮತ್ತು ಹ್ಯುಂಡೈ ಕೊನಾ ಕಾರುಗಳು ಅಗ್ರಸ್ಥಾನದಲ್ಲಿವೆ.

ಮೊದಲ ಹಣಕಾಸು ವರ್ಷದ ಮೊದಲಾರ್ಧದಲ್ಲಿ ಅತ್ಯುತ್ತಮ ಬೇಡಿಕೆ ಪಡೆದುಕೊಂಡ ಟಾಟಾ ನೆಕ್ಸಾನ್ ಇವಿ

ಪ್ರಸ್ತುತ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಕಾರುಗಳ ಮಾರಾಟವು ಕಡಿಮೆ ಸಂಖ್ಯೆ ಹೊಂದಿದ್ದರೂ ಕಳೆದ ವರ್ಷಕ್ಕಿಂತಲೂ ಹೆಚ್ಚು ಬೇಡಿಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಸಾರ್ವಜನಿಕ ಬಳಕೆಯ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ಹೆಚ್ಚಿದಂತೆ ಇವಿ ಕಾರುಗಳ ಮಾರಾಟವು ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿವೆ. ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಟಾಟಾ ನೆಕ್ಸಾನ್ ಇವಿ ಪ್ರಥಮ ಸ್ಥಾನದಲ್ಲಿದ್ದು, ತದನಂತರ ಎಂಜಿ ಜೆಡ್ಎಸ್ ಮತ್ತು ಹ್ಯುಂಡೈ ಕೊನಾ ಕಾರುಗಳು ಎರಡನೇ ಮತ್ತು ಮೂರನೇ ಸ್ಥಾನದಲ್ಲಿವೆ.

ಮೊದಲ ಹಣಕಾಸು ವರ್ಷದ ಮೊದಲಾರ್ಧದಲ್ಲಿ ಅತ್ಯುತ್ತಮ ಬೇಡಿಕೆ ಪಡೆದುಕೊಂಡ ಟಾಟಾ ನೆಕ್ಸಾನ್ ಇವಿ

ಟಾಟಾ ಮೋಟಾರ್ಸ್ ಕಂಪನಿಯು ಈ ವರ್ಷದ ಹಣಕಾಸು ಮೊದಲಾರ್ಧದಲ್ಲಿ ಒಟ್ಟು 1151 ಯುನಿಟ್ ನೆಕ್ಸಾನ್ ಇವಿ ಮಾರಾಟಗೊಳಿಸುವ ಮೂಲಕ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಟೋಟಿ ನೀಡುತ್ತಿದೆ.

ಮೊದಲ ಹಣಕಾಸು ವರ್ಷದ ಮೊದಲಾರ್ಧದಲ್ಲಿ ಅತ್ಯುತ್ತಮ ಬೇಡಿಕೆ ಪಡೆದುಕೊಂಡ ಟಾಟಾ ನೆಕ್ಸಾನ್ ಇವಿ

ಟಾಟಾ ಮೋಟಾರ್ಸ್ ಕಂಪನಿಯು ಇವಿ ವಾಹನಗಳ ಕಾರ್ಯಕ್ಷಮತೆ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳಲು ಸುಧಾರಿತ ತಂತ್ರಜ್ಞಾನ ಪ್ರೇರಿತ ಜಿಪ್‌ಟ್ರಾನ್ ತಂತ್ರಜ್ಞಾನ ಬಳಕೆ ಮಾಡುತ್ತಿದ್ದು, ಇವಿ ವಾಹನಗಳ ಮೇಲೆ ಗರಿಷ್ಠ ಎಂಟು ವರ್ಷಗಳ ವಾರಂಟಿ ನೀಡುತ್ತಿರುವುದು ಪ್ರಮುಖ ಆಕರ್ಷಣೆಯಾಗಿದೆ ಎನ್ನಬಹುದು.

ಮೊದಲ ಹಣಕಾಸು ವರ್ಷದ ಮೊದಲಾರ್ಧದಲ್ಲಿ ಅತ್ಯುತ್ತಮ ಬೇಡಿಕೆ ಪಡೆದುಕೊಂಡ ಟಾಟಾ ನೆಕ್ಸಾನ್ ಇವಿ

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯು ಗ್ರಾಹಕರ ಬೇಡಿಕೆ ಅನುಸಾರವಾಗಿ ಪ್ರಮುಖ ವೆರಿಯೆಂಟ್‌ನೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.16.25 ಲಕ್ಷ ಬೆಲೆ ಪಡೆದುಕೊಂಡಿದ್ದು, ಎ‍ಆರ್‌ಎಐ ಪ್ರಮಾಣ ಪತ್ರದಂತೆ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಒಂದು ಬಾರಿಗೆ ಪೂರ್ತಿಯಾಗಿ ಚಾರ್ಜ್ ಆದಲ್ಲಿ ಗರಿಷ್ಠ 312 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಮೊದಲ ಹಣಕಾಸು ವರ್ಷದ ಮೊದಲಾರ್ಧದಲ್ಲಿ ಅತ್ಯುತ್ತಮ ಬೇಡಿಕೆ ಪಡೆದುಕೊಂಡ ಟಾಟಾ ನೆಕ್ಸಾನ್ ಇವಿ

ನೆಕ್ಸಾನ್ ಎಲೆಕ್ಟ್ರಿಕ್ ಕಾರು ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್‍ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರೆಯೆಂಟ್‌ಗಳಲ್ಲಿ ಬಿಡುಗಡೆಗೊಳಿಸಲಾಗಿದ್ದು, ಮೂರು ವೆರಿಯೆಂಟ್‌ಗಳಲ್ಲೂ ಹಲವಾರು ಹೊಸ ಪ್ರೀಮಿಯಂ ಫೀಚರ್ಸ್‌ಗಳಿವೆ.

ಮೊದಲ ಹಣಕಾಸು ವರ್ಷದ ಮೊದಲಾರ್ಧದಲ್ಲಿ ಅತ್ಯುತ್ತಮ ಬೇಡಿಕೆ ಪಡೆದುಕೊಂಡ ಟಾಟಾ ನೆಕ್ಸಾನ್ ಇವಿ

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರನ್ನು ಸಾಮಾನ್ಯ ಮಾದರಿಯ ನೆಕ್ಸಾನ್ ಫೇಸ್‍‍ಲಿಫ್ಟ್ ಸ್ಟ್ಯಾಂಡರ್ಡ್ ಕಾರಿನ ಆಧಾರದ ಮೇಲೆ ತಯಾರಿಸಲಾಗಿದ್ದು, ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ 95 ಕಿ.ವ್ಯಾಟ್ ಎಲೆಕ್ಟ್ರಿಕ್ ಮೋಟಾರ್ ಅಳವಡಿಸಲಾಗಿದೆ.

ಮೊದಲ ಹಣಕಾಸು ವರ್ಷದ ಮೊದಲಾರ್ಧದಲ್ಲಿ ಅತ್ಯುತ್ತಮ ಬೇಡಿಕೆ ಪಡೆದುಕೊಂಡ ಟಾಟಾ ನೆಕ್ಸಾನ್ ಇವಿ

ಎ‍ಆರ್‌ಎಐ ಪ್ರಮಾಣ ಪತ್ರದಂತೆ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಒಂದು ಬಾರಿಗೆ ಪೂರ್ತಿಯಾಗಿ ಚಾರ್ಜ್ ಆದಲ್ಲಿ ಗರಿಷ್ಠ 312 ಕಿ.ಮೀವರೆಗೂ ಚಲಿಸುತ್ತದೆ ಎನ್ನಲಾಗಿದ್ದು, ಆದರೆ ನೈಜ ಪರಿಸ್ಥಿತಿಗಳಿಗೆ ಅನುಗುಣವಾಗಿ ಈ ಕಾರು 250 ಕಿ.ಮೀನಿಂದ- 300ಕಿ.ಮೀವರೆಗೂ ಚಲಿಸುವುವುದು ಫಸ್ಟ್ ಡ್ರೈವ್‌ ಟೆಸ್ಟಿಂಗ್‌ನಲ್ಲಿ ಸಾಬೀತಾಗಿದೆ.

ಮೊದಲ ಹಣಕಾಸು ವರ್ಷದ ಮೊದಲಾರ್ಧದಲ್ಲಿ ಅತ್ಯುತ್ತಮ ಬೇಡಿಕೆ ಪಡೆದುಕೊಂಡ ಟಾಟಾ ನೆಕ್ಸಾನ್ ಇವಿ

ಇನ್ನು ದೇಶಾದ್ಯಂತ ಸದ್ಯ ಎಲೆಕ್ಟ್ರಿಕ್ ವಾಹನ ಮಾರಾಟವು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದರೂ ಸಹ ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆಯಿಂದಾಗಿ ಬಹುತೇಕ ಎಲೆಕ್ಟ್ರಿಕ್ ವಾಹನ ಖರೀದಿದಾರರು ಹಿಂದೇಟು ಹಾಕುತ್ತಿದ್ದಾರೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಮೊದಲ ಹಣಕಾಸು ವರ್ಷದ ಮೊದಲಾರ್ಧದಲ್ಲಿ ಅತ್ಯುತ್ತಮ ಬೇಡಿಕೆ ಪಡೆದುಕೊಂಡ ಟಾಟಾ ನೆಕ್ಸಾನ್ ಇವಿ

ಈ ವಿಚಾರವಾಗಿ ಮಹತ್ವದ ನಿರ್ಣಯ ಕೈಗೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ದೇಶದ ಪ್ರಮುಖ ನಗರಗಳಲ್ಲಿ 300ಕ್ಕೂ ಹೆಚ್ಚು ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲು ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಟಿಯಾಗೋ ಮತ್ತು ನೆಕ್ಸಾನ್ ಇವಿ ನಂತರ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ.

ಮೊದಲ ಹಣಕಾಸು ವರ್ಷದ ಮೊದಲಾರ್ಧದಲ್ಲಿ ಅತ್ಯುತ್ತಮ ಬೇಡಿಕೆ ಪಡೆದುಕೊಂಡ ಟಾಟಾ ನೆಕ್ಸಾನ್ ಇವಿ

ಪ್ರಸ್ತುತ ಮಾರುಕಟ್ಟೆಯಲ್ಲಿ ಹಲವಾರು ಎಲೆಕ್ಟ್ರಿಕ್ ವಾಹನಗಳು ಖರೀದಿಗೆ ಲಭ್ಯವಿದ್ದರೂ ಸಹ ಅವಶ್ಯಕತೆಗೆ ಅನುಗುಣವಾಗಿ ಚಾರ್ಜಿಂಗ್ ಸ್ಟೆಷನ್‌ಗಳು ಇಲ್ಲದಿರುವುದು ಇವಿ ವಾಹನ ಮಾರಾಟದಲ್ಲಿ ತೀವ್ರಗತಿಯ ಬೆಳವಣಿಗೆ ಸಾಧಿಸಲು ಸಾಧ್ಯವಾಗುತ್ತಿಲ್ಲ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಮೊದಲ ಹಣಕಾಸು ವರ್ಷದ ಮೊದಲಾರ್ಧದಲ್ಲಿ ಅತ್ಯುತ್ತಮ ಬೇಡಿಕೆ ಪಡೆದುಕೊಂಡ ಟಾಟಾ ನೆಕ್ಸಾನ್ ಇವಿ

ಕೇಂದ್ರ ಸರ್ಕಾರವು ಸಹ ಎಲೆಕ್ಟ್ರಿಕ್ ವಾಹನ ಮೇಲಿನ ಖರೀದಿಗೆ ಮಾತ್ರವಲ್ಲದೇ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣದ ಮೇಲೂ ಆಕರ್ಷಕ ಸಬ್ಸಡಿ ದರವನ್ನು ನೀಡುತ್ತಿದ್ದು, ಇದೀಗ ಟಾಟಾ ಸೇರಿದಂತೆ ಹಲವಾರು ಆಟೋ ಉತ್ಪಾದನಾ ಸಂಸ್ಥೆಗಳು ಫೇಮ್-2 ಯೋಜನೆ ಅಡಿ ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕೆ ಮುಂದಾಗಿವೆ.

Most Read Articles

Kannada
English summary
Tata Nexon EV Is The Best-Selling Electric Car In The First Half Of This Fiscal Year. Read in Kannada.
Story first published: Monday, November 2, 2020, 8:25 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X