ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಉತ್ತಮ ಬೇಡಿಕೆ ಪಡೆದುಕೊಂಡ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಖರೀದಿ ಪ್ರಮಾಣವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಸಹ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುವ ಮೂಲಕ ಪ್ರತಿಸ್ಪರ್ಧಿ ಕಾರುಗಳಿಂತಲೂ ಹೆಚ್ಚು ಮಾರಾಟ ಪ್ರಮಾಣವನ್ನು ತನ್ನದಾಗಿಸಿಕೊಂಡಿದೆ.

ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಉತ್ತಮ ಬೇಡಿಕೆ ಪಡೆದುಕೊಂಡ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ದೇಶಾದ್ಯಂತ ಸದ್ಯ ಲಾಕ್‌ಡೌನ್‌ನಿಂದಾಗಿ ಎಲ್ಲ ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಮಾಡಲಾಗಿದ್ದು, ಕಳೆದ ತಿಂಗಳ ಮೊದಲಾರ್ಧದಲ್ಲಿ ವಾಹನಗಳ ಮಾರಾಟವು ಜೋರಾಗಿಯೇ ನಡೆದಿದೆ. ಈ ವೇಳೆ ಮೊದಲ ಬಾರಿಗೆ ಮಾರಾಟಕ್ಕೆ ಚಾಲನೆ ನೀಡಲಾಗಿದ್ದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಮತ್ತು ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರುಗಳಿಂತಲೂ ಹೆಚ್ಚು ಮಾರಾಟವಾಗಿದೆ.

ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಉತ್ತಮ ಬೇಡಿಕೆ ಪಡೆದುಕೊಂಡ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ನೆಕ್ಸಾನ್ ಕಾರು ಮಾರಾಟ ಆರಂಭಿಸಿದ ಮಾರ್ಚ್ ಮೊದಲ ವಾರದಲ್ಲೇ 198 ಯುನಿಟ್ ಮಾರಾಟಗೊಂಡಿದ್ದು, ಇದೇ ಅವಧಿಯಲ್ಲಿ ಎಂಜಿ ಜೆಡ್ಎಸ್ ಇವಿ ಕಾರು 116 ಯುನಿಟ್ ಮತ್ತು ಹ್ಯುಂಡೈ ಕೊನಾ ಕಾರು 82 ಯುನಿಟ್ ಮಾರಾಟಗೊಂಡಿದೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಉತ್ತಮ ಬೇಡಿಕೆ ಪಡೆದುಕೊಂಡ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ಸದ್ಯಕ್ಕೆ ಹೊಸ ನೆಕ್ಸಾನ್ ಇವಿ ಕಾರು ಆಯ್ದ ನಗರಗಳಲ್ಲಿ ಮಾತ್ರವೇ ಖರೀದಿಗೆ ಲಭ್ಯವಿದ್ದು, ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣ ಹೆಚ್ಚಿದಂತೆ ಹೊಸ ಕಾರಿನ ಮಾರಾಟವನ್ನು ವಿಸ್ತರಣೆ ಮಾಡಲು ಯೋಜಿಸಲಾಗಿದೆ.

ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಉತ್ತಮ ಬೇಡಿಕೆ ಪಡೆದುಕೊಂಡ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.13.99 ಲಕ್ಷ ಬೆಲೆ ಪಡೆದುಕೊಂಡಿದ್ದು, ಟಾಪ್ ಎಂಡ್ ಮಾದರಿಯು ರೂ.15.99 ಲಕ್ಷ ಬೆಲೆ ಪಡೆದುಕೊಂಡಿದೆ.ನೆಕ್ಸಾನ್ ಎಲೆಕ್ಟ್ರಿಕ್ ಕಾರು ಗ್ರಾಹಕರ ಬೇಡಿಕೆಯೆಂತೆ ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್‍ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರೆಯೆಂಟ್‌ಗಳಲ್ಲಿ ಬಿಡುಗಡೆಗೊಳಿಸಲಾಗಿದ್ದು, ಮೂರು ವೆರಿಯೆಂಟ್‌ಗಳಲ್ಲೂ ಹಲವಾರು ಹೊಸ ಫೀಚರ್ಸ್‌ಗಳಿವೆ.

MOST READ: ಕರೋನಾ ಕಾರಣಕ್ಕೆ ಕಾರಿನಲ್ಲೇ ತಂಗುತ್ತಿರುವ ವೈದ್ಯ..!

ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಉತ್ತಮ ಬೇಡಿಕೆ ಪಡೆದುಕೊಂಡ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ಹೊಸ ಎಲೆಕ್ಟ್ರಿಕ್ ಕಾರನ್ನು ನೆಕ್ಸಾನ್ ಫೇಸ್‍‍ಲಿಫ್ಟ್ ಸ್ಟ್ಯಾಂಡರ್ಡ್ ಕಾರಿನ ಆಧಾರದ ಮೇಲೆ ತಯಾರಿಸಲಾಗಿದ್ದು, ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ 95 ಕಿ.ವ್ಯಾಟ್ ಎಲೆಕ್ಟ್ರಿಕ್ ಮೋಟಾರ್ ಅಳವಡಿಸಲಾಗಿದೆ.

ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಉತ್ತಮ ಬೇಡಿಕೆ ಪಡೆದುಕೊಂಡ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ಎ‍ಆರ್‌ಎಐ ಪ್ರಮಾಣ ಪತ್ರದಂತೆ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಒಂದು ಬಾರಿಗೆ ಪೂರ್ತಿಯಾಗಿ ಚಾರ್ಜ್ ಆದಲ್ಲಿ ಗರಿಷ್ಠ 312 ಕಿ.ಮೀವರೆಗೂ ಚಲಿಸುತ್ತದೆ ಎನ್ನಲಾಗಿದ್ದು, ಆದರೆ ನೈಜ ಪರಿಸ್ಥಿತಿಗಳಿಗೆ ಅನುಗುಣವಾಗಿ ಈ ಕಾರು 250 ಕಿ.ಮೀನಿಂದ- 300ಕಿ.ಮೀವರೆಗೂ ಚಲಿಸುವುವುದು ಫಸ್ಟ್ ಡ್ರೈವ್‌ ಚಾಲನೆಯಲ್ಲಿ ಸಾಬೀತಾಗಿದೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಭಾರೀ ಪ್ರಮಾಣದ ದೇಣಿಗೆ ನೀಡಿದ ಟಿವಿಎಸ್ ಮೋಟಾರ್

ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಉತ್ತಮ ಬೇಡಿಕೆ ಪಡೆದುಕೊಂಡ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ಇನ್ನು ದೇಶಾದ್ಯಂತ ಸದ್ಯ ಎಲೆಕ್ಟ್ರಿಕ್ ವಾಹನ ಮಾರಾಟವು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದರೂ ಸಹ ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆಯಿಂದಾಗಿ ಬಹುತೇಕ ಎಲೆಕ್ಟ್ರಿಕ್ ವಾಹನ ಖರೀದಿದಾರರು ಹಿಂದೇಟು ಹಾಕುತ್ತಿದ್ದಾರೆ.

ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಉತ್ತಮ ಬೇಡಿಕೆ ಪಡೆದುಕೊಂಡ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ಈ ವಿಚಾರವಾಗಿ ಮಹತ್ವದ ನಿರ್ಣಯ ಕೈಗೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ದೇಶದ ಪ್ರಮುಖ ನಗರಗಳಲ್ಲಿ 300ಕ್ಕೂ ಹೆಚ್ಚು ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲು ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಟಿಯಾಗೋ ಮತ್ತು ನೆಕ್ಸಾನ್ ಇವಿ ನಂತರ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ರೂ.100 ಕೋಟಿ ದೇಣಿಗೆ ನೀಡಿದ ಬಜಾಜ್ ಗ್ರೂಪ್

ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಉತ್ತಮ ಬೇಡಿಕೆ ಪಡೆದುಕೊಂಡ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ಪ್ರಸ್ತುತ ಮಾರುಕಟ್ಟೆಯಲ್ಲಿ ಹಲವಾರು ಎಲೆಕ್ಟ್ರಿಕ್ ವಾಹನಗಳು ಖರೀದಿಗೆ ಲಭ್ಯವಿದ್ದರೂ ಸಹ ಅವಶ್ಯಕತೆಗೆ ಅನುಗುಣವಾಗಿ ಚಾರ್ಜಿಂಗ್ ಸ್ಟೆಷನ್‌ಗಳು ಇಲ್ಲದಿರುವುದು ಇವಿ ವಾಹನ ಮಾರಾಟದಲ್ಲಿ ತೀವ್ರಗತಿಯ ಬೆಳವಣಿಗೆ ಸಾಧಿಸಲು ಸಾಧ್ಯವಾಗುತ್ತಿಲ್ಲ.

ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಉತ್ತಮ ಬೇಡಿಕೆ ಪಡೆದುಕೊಂಡ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ಕೇಂದ್ರ ಸರ್ಕಾರವು ಸಹ ಎಲೆಕ್ಟ್ರಿಕ್ ವಾಹನ ಮೇಲಿನ ಖರೀದಿಗೆ ಮಾತ್ರವಲ್ಲದೇ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣದ ಮೇಲೂ ಆಕರ್ಷಕ ಸಬ್ಸಡಿ ದರವನ್ನು ನೀಡುತ್ತಿದ್ದು, ಇದೀಗ ಟಾಟಾ ಸೇರಿದಂತೆ ಹಲವಾರು ಆಟೋ ಉತ್ಪಾದನಾ ಸಂಸ್ಥೆಗಳು ಫೇಮ್-2 ಯೋಜನೆ ಅಡಿ ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕೆ ಮುಂದಾಗಿವೆ.

Most Read Articles

Kannada
English summary
Tata Nexon EV March 2020 Sales. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X