ನೆಕ್ಸಾನ್ ಎಲೆಕ್ಟ್ರಿಕ್ ಕಾಂಪ್ಯಾಕ್ಟ್ ಎಸ್‍ಯುವಿಯ ಬೆಲೆ ಹೆಚ್ಚಿಸಿದ ಟಾಟಾ

ಟಾಟಾ ಮೋಟಾರ್ಸ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ನೆಕ್ಸಾನ್ ಎಲೆಕ್ಟ್ರಿಕ್ ಕಾಂಪ್ಯಾಕ್ಟ್ ಎಸ್‍ಯುವಿಯ ಬೆಲೆಯನ್ನು ಹೆಚ್ಚಿಸಿದೆ. ಟಾಟಾ ಮೋಟರ್‌ನ ಪೋರ್ಟ್ಫೋಲಿಯೊದಲ್ಲಿನ ಏಕೈಕ ಎಲೆಕ್ಟ್ರಿಕ್ ಕಾರು ಈಗ ರೂ.26,000 ಗಳವರೆಗೆ ಹೆಚ್ಚಿಸಲಾಗಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಕಾಂಪ್ಯಾಕ್ಟ್ ಎಸ್‍ಯುವಿಯ ಬೆಲೆ ಹೆಚ್ಚಿಸಿದ ಟಾಟಾ

ಎಲೆಕ್ಟ್ರಿಕ್ ಎಸ್‍ಯುವಿಯು ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್ ಮತ್ತು ಎಕ್ಸ್‌ಝಡ್ ಪ್ಲಸ್ ಲಕ್ಸ್ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದೆ. ಆದರೆ ಬೇಸ್ ಎಕ್ಸ್‌ಎಂ ರೂಪಾಂತರದಲ್ಲಿ ಬೆಲೆಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಉಳಿದ ಎಕ್ಸ್‌ಝಡ್ ಪ್ಲಸ್ ಮತ್ತು ಎಕ್ಸ್‌ಝಡ್ ಪ್ಲಸ್ ಲಕ್ಸ್ ಎಂಬ ಎರಡು ರೂಪಾಂತರಗಳ ಬೆಲೆಯನ್ನು ಹೆಚ್ಚಿಸಲಾಗಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಕಾಂಪ್ಯಾಕ್ಟ್ ಎಸ್‍ಯುವಿಯ ಬೆಲೆ ಹೆಚ್ಚಿಸಿದ ಟಾಟಾ

ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾಂಪ್ಯಾಕ್ಟ್ ಎಸ್‍ಯುವಿಯಲ್ಲಿ 30.2 ಕಿಲೋವ್ಯಾಟ್ ಲಿಥಿಯಂ-ಐಯಾನ್ ಬ್ಯಾಟರಿಯನ್ನು ಹೊಂದಿದೆ. ಇದು 127 ಬಿಹೆಚ್‌ಪಿ ಮತ್ತು 245 ಎನ್‌ಎಂ ಗರಿಷ್ಠ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ನೆಕ್ಸಾನ್ ಎಲೆಕ್ಟ್ರಿಕ್ ಕಾಂಪ್ಯಾಕ್ಟ್ ಎಸ್‍ಯುವಿಯ ಬೆಲೆ ಹೆಚ್ಚಿಸಿದ ಟಾಟಾ

ಬ್ಯಾಟರಿ ಪ್ಯಾಕ್ 8 ವರ್ಷದ ವಾರಂಟಿ ಮತ್ತು ಐಪಿ 67 ವಾಟರ್ ಫ್ರೋಫ್ ಆಗಿದೆ. ಎಲೆಕ್ಟ್ರಿಕ್ ಎಸ್‌ಯುವಿ ಕೇವಲ 9.9 ಸೆಕೆಂಡುಗಳಲ್ಲಿ 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ.

ನೆಕ್ಸಾನ್ ಎಲೆಕ್ಟ್ರಿಕ್ ಕಾಂಪ್ಯಾಕ್ಟ್ ಎಸ್‍ಯುವಿಯ ಬೆಲೆ ಹೆಚ್ಚಿಸಿದ ಟಾಟಾ

ಇನ್ನು ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾಂಪ್ಯಾಕ್ಟ್ ಎಸ್‍ಯುವಿಯ ಪೀಚರ್ಸ್ ಗಳ ಬಗ್ಗೆ ಹೇಳುವುದಾದರೆ, ಇದು ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ ಮತ್ತು ಇನ್-ಕಾರ್ ಕನೆಕ್ಟಿವಿಟಿ ಟೆಕ್ನಾಲಜಿ ಐಆರ್ಎಯೊಂದಿಗೆ 7 ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಹೊಂದಿದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ನೆಕ್ಸಾನ್ ಎಲೆಕ್ಟ್ರಿಕ್ ಕಾಂಪ್ಯಾಕ್ಟ್ ಎಸ್‍ಯುವಿಯ ಬೆಲೆ ಹೆಚ್ಚಿಸಿದ ಟಾಟಾ

ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾಂಪ್ಯಾಕ್ಟ್ ಎಸ್‍ಯುವಿಯ 7-ಇಂಚಿನ ಸಂಪೂರ್ಣ ಡಿಜಿಟಲ್ ಮಾಹಿತಿ ಪ್ರದರ್ಶನ, ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್, ಸನ್‌ರೂಫ್, ರೈನ್ ಸೆನ್ಸಾಸಿಂಗ್, ಇಂಟಿಗ್ರೇಟೆಡ್ ಟರ್ನ್ ಇಂಡೀಕೇಟರ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು ಮತ್ತು ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಒಳಗೊಂಡಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಕಾಂಪ್ಯಾಕ್ಟ್ ಎಸ್‍ಯುವಿಯ ಬೆಲೆ ಹೆಚ್ಚಿಸಿದ ಟಾಟಾ

ನೆಕ್ಸಾನ್ ಎಲೆಕ್ಟ್ರಿಕ್ ಕಾಂಪ್ಯಾಕ್ಟ್ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ ಹೆಚ್ಚಿನ ಪ್ರಮುಖ್ಯತೆಯನ್ನು ನೀಡಿದೆ. ನೆಕ್ಸಾನ್ ಎಲೆಕ್ಟ್ರಿಕ್ ಕಾಂಪ್ಯಾಕ್ಟ್ ಎಸ್‍ಯುವಿಯಲ್ಲಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ವಿಥ್ ಇಬಿಡಿ, ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್ ಸಿಸ್ಟಮ್, ರಿಯರ್ ಪಾರ್ಕಿಂಗ್ ಕ್ಯಾಮೆರಾ ಮತ್ತು ಐಎಸ್‌ಒಫಿಕ್ಸ್ ಚೈಲ್ಡ್ ಸೀಟ್ ಅನ್ನು ಹೊಂದಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ನೆಕ್ಸಾನ್ ಎಲೆಕ್ಟ್ರಿಕ್ ಕಾಂಪ್ಯಾಕ್ಟ್ ಎಸ್‍ಯುವಿಯ ಬೆಲೆ ಹೆಚ್ಚಿಸಿದ ಟಾಟಾ

ನೆಕ್ಸಾನ್ ಎಲೆಕ್ಟ್ರಿಕ್ ಕಾಂಪ್ಯಾಕ್ಟ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲೊ ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಮತ್ತು ಎಂಜಿ ಝಡ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

ನೆಕ್ಸಾನ್ ಎಲೆಕ್ಟ್ರಿಕ್ ಕಾಂಪ್ಯಾಕ್ಟ್ ಎಸ್‍ಯುವಿಯ ಬೆಲೆ ಹೆಚ್ಚಿಸಿದ ಟಾಟಾ

ಇನ್ನು ಭಾರತದಲ್ಲಿ ಬಿಡುಗಡೆಯಾಗಲಿರುವ ಮಹೀಂದ್ರಾ ಇಎಕ್ಸ್‌ಯುವಿ 300 ಮಾದರಿಯು ನೆಕ್ಸಾನ್ ಎಲೆಕ್ಟ್ರಿಕ್ ಕಾಂಪ್ಯಾಕ್ಟ್ ಎಸ್‍ಯುವಿಗೆ ನೇರವಾಗಿ ಪೈಪೋಟಿಯನ್ನು ನೀಡುತ್ತದೆ. ಮಹೀಂದ್ರಾ ಇಎಕ್ಸ್‌ಯುವಿ 300 ಮಾದರಿಯನ್ನು ಗ್ರೇಟರ್ ನೋಯ್ಡಾದಲ್ಲಿ ನಡೆದ ಈ ವರ್ಷದ ಆಟೋಎಕ್ಸ್‌ಪೋದಲ್ಲಿ ಪ್ರದರ್ಶಿಸಲಾಗಿತ್ತು.

Most Read Articles

Kannada
English summary
Tata Nexon Electric Gets Its First Price Hike. Read In Kannada.
Story first published: Wednesday, October 14, 2020, 19:47 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X