ಎಲೆಕ್ಟ್ರಿಕ್ ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ನೆಕ್ಸಾನ್ ಇವಿ
ಟಾಟಾ ಮೋಟಾರ್ಸ್ ಕಂಪನಿಯು ಭಾರತದಲ್ಲಿ ನೆಕ್ಸಾನ್ ಎಲೆಕ್ಟ್ರಿಕ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡಿ ಸುಮಾರು 6 ತಿಂಗಳು ಪೂರೈಸಿದ್ದು, ಹೊಸ ಕಾರು ಮಾರುಕಟ್ಟೆಯಲ್ಲಿ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಸಾರ್ವಜನಿಕ ಬಳಕೆಯ ಚಾರ್ಜಿಂಗ್ ನಿಲ್ದಾಣ ಕೊರತೆ ಮತ್ತು ದುಬಾರಿ ಬೆಲೆಗಳಿಂದಾಗಿ ಎಲೆಕ್ಟ್ರಿಕ್ ವಾಹನಗಳಿಗೆ ನೀರಿಕ್ಷಿತ ಮಟ್ಟದ ಬೇಡಿಕೆ ಹರಿದುಬರುತ್ತಿಲ್ಲವಾದರೂ ಟಾಟಾ ಕಂಪನಿಯು ಕೈಗೆಟುಕುವ ಬೆಲೆಯೊಂದಿಗೆ ನೆಕ್ಸಾನ್ ಇವಿ ಮಾದರಿಯನ್ನು ಬಿಡುಗಡೆ ಮಾಡುವಲ್ಲಿ ಯಶಸ್ವಿಯಾಗಿದ್ದು, ನಿಧಾನವಾಗಿ ಗ್ರಾಹಕರು ಪೆಟ್ರೋಲ್ ಮತ್ತು ಡೀಸೆಲ್ ಕಾರು ಮಾದರಿಗಳ ಬದಲಾಗಿ ಎಲೆಕ್ಟ್ರಿಕ್ ವಾಹನ ಮಾದರಿಗಳತ್ತ ಮುಖಮಾಡುತ್ತಿದ್ದಾರೆ.

ನೆಕ್ಸಾನ್ ಇವಿ ಕಾರು ಬಿಡುಗಡೆಯಾದ ನಂತರ ಇದುವರೆಗೆ ಒಂದು ಸಾವಿರಕ್ಕೂ ಹೆಚ್ಚು ಯುನಿಟ್‌ಗಳಿಗೆ ಬೇಡಿಕೆ ಪಡೆದುಕೊಂಡಿದ್ದು, ಟಾಟಾ ಕಂಪನಿಯು ಬೇಡಿಕೆಯ ಆಧಾರದ 1 ಸಾವಿರ ಯುನಿಟ್ ಉತ್ಪಾದನೆಯನ್ನು ಇತ್ತೀಚೆಗೆ ಗುರಿತಲುಪಿದೆ.

ಹೊಸ ಎಲೆಕ್ಟ್ರಿಕ್ ಕಾರು ಮಾದರಿಯು ಗ್ರಾಹಕರ ಬೇಡಿಕೆ ಅನುಸಾರವಾಗಿ ಪ್ರಮುಖ ವೆರಿಯೆಂಟ್‌ನೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.15.99 ಲಕ್ಷ ಬೆಲೆ ಪಡೆದುಕೊಂಡಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಕಾರು ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರೆಯೆಂಟ್‌ಗಳಲ್ಲಿ ಬಿಡುಗಡೆಗೊಳಿಸಲಾಗಿದ್ದು, ಮೂರು ವೆರಿಯೆಂಟ್‌ಗಳಲ್ಲೂ ಹಲವಾರು ಹೊಸ ಫೀಚರ್ಸ್‌ಗಳಿವೆ.

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರನ್ನು ಸಾಮಾನ್ಯ ಮಾದರಿಯ ನೆಕ್ಸಾನ್ ಫೇಸ್‍ಲಿಫ್ಟ್ ಸ್ಟ್ಯಾಂಡರ್ಡ್ ಕಾರಿನ ಆಧಾರದ ಮೇಲೆ ತಯಾರಿಸಲಾಗಿದ್ದು, ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ 95 ಕಿ.ವ್ಯಾಟ್ ಎಲೆಕ್ಟ್ರಿಕ್ ಮೋಟಾರ್ ಅಳವಡಿಸಲಾಗಿದೆ.

ಎಆರ್‌ಎಐ ಪ್ರಮಾಣ ಪತ್ರದಂತೆ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಒಂದು ಬಾರಿಗೆ ಪೂರ್ತಿಯಾಗಿ ಚಾರ್ಜ್ ಆದಲ್ಲಿ ಗರಿಷ್ಠ 312 ಕಿ.ಮೀವರೆಗೂ ಚಲಿಸುತ್ತದೆ ಎನ್ನಲಾಗಿದ್ದು, ಆದರೆ ನೈಜ ಪರಿಸ್ಥಿತಿಗಳಿಗೆ ಅನುಗುಣವಾಗಿ ಈ ಕಾರು 250 ಕಿ.ಮೀನಿಂದ- 300ಕಿ.ಮೀವರೆಗೂ ಚಲಿಸುವುವುದು ಫಸ್ಟ್ ಡ್ರೈವ್ ಟೆಸ್ಟಿಂಗ್‌ನಲ್ಲಿ ಸಾಬೀತಾಗಿದೆ.

ಇನ್ನು ದೇಶಾದ್ಯಂತ ಸದ್ಯ ಎಲೆಕ್ಟ್ರಿಕ್ ವಾಹನ ಮಾರಾಟವು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದರೂ ಸಹ ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆಯಿಂದಾಗಿ ಬಹುತೇಕ ಎಲೆಕ್ಟ್ರಿಕ್ ವಾಹನ ಖರೀದಿದಾರರು ಹಿಂದೇಟು ಹಾಕುತ್ತಿದ್ದಾರೆ.
MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಈ ವಿಚಾರವಾಗಿ ಮಹತ್ವದ ನಿರ್ಣಯ ಕೈಗೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ದೇಶದ ಪ್ರಮುಖ ನಗರಗಳಲ್ಲಿ 300ಕ್ಕೂ ಹೆಚ್ಚು ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲು ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಟಿಯಾಗೋ ಮತ್ತು ನೆಕ್ಸಾನ್ ಇವಿ ನಂತರ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಹಲವಾರು ಎಲೆಕ್ಟ್ರಿಕ್ ವಾಹನಗಳು ಖರೀದಿಗೆ ಲಭ್ಯವಿದ್ದರೂ ಸಹ ಅವಶ್ಯಕತೆಗೆ ಅನುಗುಣವಾಗಿ ಚಾರ್ಜಿಂಗ್ ಸ್ಟೆಷನ್‌ಗಳು ಇಲ್ಲದಿರುವುದು ಇವಿ ವಾಹನ ಮಾರಾಟದಲ್ಲಿ ತೀವ್ರಗತಿಯ ಬೆಳವಣಿಗೆ ಸಾಧಿಸಲು ಸಾಧ್ಯವಾಗುತ್ತಿಲ್ಲ.
MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

ಕೇಂದ್ರ ಸರ್ಕಾರವು ಸಹ ಎಲೆಕ್ಟ್ರಿಕ್ ವಾಹನ ಮೇಲಿನ ಖರೀದಿಗೆ ಮಾತ್ರವಲ್ಲದೇ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣದ ಮೇಲೂ ಆಕರ್ಷಕ ಸಬ್ಸಡಿ ದರವನ್ನು ನೀಡುತ್ತಿದ್ದು, ಇದೀಗ ಟಾಟಾ ಸೇರಿದಂತೆ ಹಲವಾರು ಆಟೋ ಉತ್ಪಾದನಾ ಸಂಸ್ಥೆಗಳು ಫೇಮ್-2 ಯೋಜನೆ ಅಡಿ ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕೆ ಮುಂದಾಗಿವೆ.


Click it and Unblock the Notifications