ನೆಕ್ಸಾನ್ ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯ ತನ್ನ ಜನಪ್ರಿಯ ನೆಕ್ಸಾನ್ ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯ ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದೆ. ಟಾಟಾ ಮೋಟಾರ್ಸ್ ತನ್ನ ಪುಣೆಯ ರಂಜಂಗಾಂವ್ ಉತ್ಪಾದನಾ ಕೇಂದ್ರದಲ್ಲಿ 1,50,000ನೇ ನೆಕ್ಸಾನ್ ಕಾರನ್ನು ಉತ್ಪಾದಿಸಲಾಗಿದೆ.

ನೆಕ್ಸಾನ್ ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಮೋಟಾರ್ಸ್

ಟಾಟಾ ನೆಕ್ಸಾನ್ ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯನ್ನು 2017ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಿತ್ತು. ಅಂದಿನಿಂದ ಇದು ಅಪಾರ ಜನಪ್ರಿಯತೆಯನ್ನು ಗಳಿಸಿದೆ. 2018ರಲ್ಲಿ ಗ್ಲೋಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ 5-ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದ ಕಾರಣ ನೆಕ್ಸಾನ್ ದೇಶದ ಸುರಕ್ಷಿತ ಕಾರುಗಳಲ್ಲಿ ಒಂದಾಗಿದೆ. 5-ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದ ರೇಟಿಂಗ್‌ ಅನ್ನು ಪಡೆದ ಭಾರತದ ಮೊದಲ ಕಾರು ಎಂಬ ಹೆಗ್ಗಳಿಕೆ ನೆಕ್ಸಾನ್ ಮಾದರಿಗೆ ಸಲ್ಲುತ್ತದೆ.

ನೆಕ್ಸಾನ್ ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಮೋಟಾರ್ಸ್

ನಂತರದಲ್ಲಿ ಆಲ್ಟ್ರೊಜ್, ಟಿಯಾಗೋ ಮತ್ತು ಟಿಗೋರ್ ಇತರ ಕಾರುಗಳಿಗೆ ಆಯಾ ಪ್ರತಿಯೊಂದು ವಿಭಾಗಗಳಲ್ಲಿ ಕಾರು ಸುರಕ್ಷತೆಯಲ್ಲಿ ಹೊಸ ಮಾನದಂಡಗಳನ್ನು ಸ್ಥಾಪಿಸಲು ನೆಕ್ಸಾನ್ ದಾರಿ ಮಾಡಿಕೊಟ್ಟಿದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ನೆಕ್ಸಾನ್ ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಾರುಗಳ ಸರಣಿಯಲ್ಲಿ ಜನಪ್ರಿಯ ಮಾದರಿಗಳ ಪಟ್ಟಿಯಲ್ಲಿ ನೆಕ್ಸಾನ್ ಕಾಂಪ್ಯಾಕ್ಟ್-ಎಸ್‍ಯುವಿಯು ಅಗ್ರಸ್ಥಾನದಲ್ಲಿದೆ. ಟಾಟಾ ತನ್ನ ನೆಕ್ಸಾನ್ ಮಾದರಿಯ ಎಕ್ಸ್‌ಎಂ(ಎಸ್) ಎಂಬ ಹೊಸ ವೆರಿಯೆಂಟ್ ಅನ್ನು ಕೂಡ ಇತ್ತೀಚೆಗೆ ಪರಿಚಯಿಸಿತು.

ನೆಕ್ಸಾನ್ ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಮೋಟಾರ್ಸ್

ಎಲೆಕ್ಟ್ರಿಕ್ ಸನ್‌ರೂಫ್ ಸೇರ್ಪಡೆಯ ಹೊರತಾಗಿ, ಹೊಸ ನೆಕ್ಸನ್ ಎಕ್ಸ್‌ಎಂ(ಎಸ್) ವರಿಯೆಂಟ್‌ನಲ್ಲಿ ಹಲವು ಪ್ರೀಮಿಯಂ ಫೀಚರ್ ಗಳನ್ನು ಹೊಂದಿದೆ. ಈ ಎಕ್ಸ್‌ಎಂ(ಎಸ್) ವೆರಿಯೆಂಟ್‌ನಲ್ಲಿ ಹೆಡ್‌ಲ್ಯಾಂಪ್, ರೈನ್-ಸೆನ್ಸಿಂಗ್ ವೈಪರ್‌ಗಳು ಮತ್ತು ಸ್ಟೀಯರಿಂಗ್-ಮೌಂಟಡ್ ಕಂಟ್ರೋಲ್ ಗಳನ್ನು ಒಳಗೊಂಡಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ನೆಕ್ಸಾನ್ ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಮೋಟಾರ್ಸ್

ಹೊಸ ಟಾಟಾ ನೆಕ್ಸಾನ್ ಎಕ್ಸ್‌ಎಂ(ಎಸ್) ವರಿಯೆಂಟ್‌ನಲ್ಲಿ ‘ಎಕ್ಸ್‌ಎಂ' ಮಾದರಿಯಲ್ಲಿರುವಂತಹ ಎಲ್‌ಇಡಿ ಡಿಆರ್‌ಎಲ್‌ಗಳು, ಕನೆಕ್ಟ್ ನೆಕ್ಸ್ಟ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಹಿಲ್-ಹೋಲ್ಡ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು ಮತ್ತು ಇತರ ಫೀಚರ್ ಗಳನ್ನು ಒಳಗೊಂಡಿದೆ.

ನೆಕ್ಸಾನ್ ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಮೋಟಾರ್ಸ್

ಇದರೂಂದಿಗೆ ಇಕೋ, ಸಿಟಿ ಮತ್ತು ಸ್ಪೋರ್ಟ್ ಎಂಬ ಮಲ್ಟಿಪಲ್ ಡ್ರೈವ್ ಮೋಡ್‌ಗಳನ್ನು ಹೊಂದಿವೆ. ಟಾಟಾ ನೆಕ್ಸಾನ್ ಎಕ್ಸ್‌ಎಂ(ಎಸ್) ವರಿಯೆಂಟ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳನ್ನು ನೀಡಲಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ನೆಕ್ಸಾನ್ ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಮೋಟಾರ್ಸ್

ಟಾಟಾ ನೆಕ್ಸಾನ್ ಕಾರಿನಲ್ಲಿ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 118 ಬಿಹೆಚ್‍ಪಿ ಪವರ್ ಮತ್ತು 170 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ನೆಕ್ಸಾನ್ ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಮೋಟಾರ್ಸ್

ಇನ್ನು 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 108 ಬಿಹೆಚ್‍ಪಿ ಪವರ್ ಮತ್ತು 260 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಅಥವಾಆ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ.

ನೆಕ್ಸಾನ್ ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಮೋಟಾರ್ಸ್

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಹೊಸ ಟಾಟಾ ನೆಕ್ಸನ್ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮವಾಗಿ ಮಾರಾಟವಾಗುತ್ತಿದೆ. ಹೆಚ್ಚಿನ ಗ್ರಾಹಕರನ್ನು ಬ್ರಾಂಡ್‌ನತ್ತ ಆಕರ್ಷಿಸಲು ನೆಕ್ಸಾನ್ ಕಾರಿಗೆ ಕೆಲವು ಆಫರ್ ಗಳನ್ನು ನೀಡಲಾಗುತ್ತಿದೆ. ಟಾಟಾ ನೆಕ್ಸಾನ್ ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೊನೆಟ್ ಕಾಂಪ್ಯಾಕ್ಟ್ ಎಸ್‍ಯುವಿಗೆ ಉತ್ತಮ ಪೈಪೋಟಿಯನ್ನು ನೀಡುತ್ತಿದೆ.

Most Read Articles

Kannada
English summary
Tata Nexon Production Crosses 1.5 Lakh Units In 3 Years. Read In Kannada.
Story first published: Thursday, November 5, 2020, 19:33 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X