ಶೀಘ್ರದಲ್ಲೇ 300ಕ್ಕೂ ಹೆಚ್ಚು ಫಾಸ್ಟ್ ಇವಿ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲಿದೆ ಟಾಟಾ

ಟಿಯಾಗೋ ಎಲೆಕ್ಟ್ರಿಕ್ ಕಾರು ನಂತರ ನೆಕ್ಸಾನ್ ಎಲೆಕ್ಟ್ರಿಕ್ ಬಿಡುಗಡೆಗೊಳಿಸಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣದ ಮೇಲೆ ಹೆಚ್ಚಿನ ಗಮನಹರಿಸಿದ್ದು, 2020ರ ಮೇ ಹೊತ್ತಿಗೆ ದೇಶದ ವಿವಿಧ ನಗರಗಳಲ್ಲಿ ಬರೋಬ್ಬರಿ 300ಕ್ಕೂ ಹೆಚ್ಚು ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲು ಮುಂದಾಗಿದೆ.

ಶೀಘ್ರದಲ್ಲೇ 300ಕ್ಕೂ ಹೆಚ್ಚು ಫಾಸ್ಟ್ ಇವಿ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲಿದೆ ಟಾಟಾ

ದೇಶಾದ್ಯಂತ ಸದ್ಯ ಎಲೆಕ್ಟ್ರಿಕ್ ವಾಹನ ಮಾರಾಟವು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದರೂ ಸಹ ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆಯಿಂದಾಗಿ ಬಹುತೇಕ ಎಲೆಕ್ಟ್ರಿಕ್ ವಾಹನ ಖರೀದಿದಾರರು ಹಿಂದೇಟು ಹಾಕುತ್ತಿದ್ದಾರೆ. ಈ ವಿಚಾರವಾಗಿ ಮಹತ್ವದ ನಿರ್ಣಯ ಕೈಗೊಂಡಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ದೇಶದ ಪ್ರಮುಖ ನಗರಗಳಲ್ಲಿ 300ಕ್ಕೂ ಹೆಚ್ಚು ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲು ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಟಿಯಾಗೋ ಮತ್ತು ನೆಕ್ಸಾನ್ ಇವಿ ನಂತರ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ.

ಶೀಘ್ರದಲ್ಲೇ 300ಕ್ಕೂ ಹೆಚ್ಚು ಫಾಸ್ಟ್ ಇವಿ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲಿದೆ ಟಾಟಾ

ಪ್ರಸ್ತುತ ಮಾರುಕಟ್ಟೆಯಲ್ಲಿ ಹಲವಾರು ಎಲೆಕ್ಟ್ರಿಕ್ ವಾಹನಗಳು ಖರೀದಿಗೆ ಲಭ್ಯವಿದ್ದರೂ ಸಹ ಅವಶ್ಯಕತೆಗೆ ಅನುಗುಣವಾಗಿ ಚಾರ್ಜಿಂಗ್ ಸ್ಟೆಷನ್‌ಗಳು ಇಲ್ಲದಿರುವುದು ಇವಿ ವಾಹನ ಮಾರಾಟದಲ್ಲಿ ತೀವ್ರಗತಿಯ ಬೆಳವಣಿಗೆ ಸಾಧಿಸಲು ಸಾಧ್ಯವಾಗುತ್ತಿಲ್ಲ.

ಶೀಘ್ರದಲ್ಲೇ 300ಕ್ಕೂ ಹೆಚ್ಚು ಫಾಸ್ಟ್ ಇವಿ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲಿದೆ ಟಾಟಾ

ಕೇಂದ್ರ ಸರ್ಕಾರವು ಸಹ ಎಲೆಕ್ಟ್ರಿಕ್ ವಾಹನ ಮೇಲಿನ ಖರೀದಿಗೆ ಮಾತ್ರವಲ್ಲದೇ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣದ ಮೇಲೂ ಆಕರ್ಷಕ ಸಬ್ಸಡಿ ದರವನ್ನು ನೀಡುತ್ತಿದ್ದು, ಇದೀಗ ಟಾಟಾ ಸೇರಿದಂತೆ ಹಲವಾರು ಆಟೋ ಉತ್ಪಾದನಾ ಸಂಸ್ಥೆಗಳು ಫೇಮ್-2 ಯೋಜನೆ ಅಡಿ ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕೆ ಮುಂದಾಗಿವೆ.

ಶೀಘ್ರದಲ್ಲೇ 300ಕ್ಕೂ ಹೆಚ್ಚು ಫಾಸ್ಟ್ ಇವಿ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲಿದೆ ಟಾಟಾ

ಇನ್ನು ಟಾಟಾ ಸಂಸ್ಥೆಯು ಟಿಗೋರ್ ಎಲೆಕ್ಟ್ರಿಕ್ ಸೆಡಾನ್ ಕಾರು ಮಾರಾಟದಲ್ಲಿ ಸದ್ಯ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಸರ್ಕಾರಿ ಅಧಿಕಾರಿಗಳಿಗೆ ಮಾತ್ರವಲ್ಲದೆ ಖಾಸಗಿ ಕಾರು ಬಳಕೆದಾರರಿಗೂ ಹೊಸ ಕಾರನ್ನು ಮಾರಾಟ ಮಾಡುತ್ತಿದೆ. ಆದರೆ ಸಮರ್ಪಕವಾದ ಚಾರ್ಜಿಂಗ್ ಸ್ಟೆಷನ್‌ಗಳು ಇಲ್ಲದಿರುವುದು ಟಿಗೋರ್ ಎಲೆಕ್ಟ್ರಿಕ್ ಕಾರು ಖರೀದಿಗೆ ಖಾಸಗಿ ಕಾರು ಬಳಕೆದಾದರು ಹಿಂದೇಟು ಹಾಕುತ್ತಿದ್ದು, ಮಾರ್ಗ ಮಧ್ಯದಲ್ಲಿ ಚಾರ್ಜ್ ಖಾಲಿ ಆದಲ್ಲಿ ತೊಂದರೆಗೆ ಸಿಲುಕುವ ಪರಿಸ್ಥಿತಿ ಎದುರಾಗುತ್ತಿದೆ.

ಶೀಘ್ರದಲ್ಲೇ 300ಕ್ಕೂ ಹೆಚ್ಚು ಫಾಸ್ಟ್ ಇವಿ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲಿದೆ ಟಾಟಾ

ಈ ಹಿನ್ನಲೆಯಲ್ಲಿ ನಗರದ ಪ್ರಮುಖ ಆಯ್ದ ಪ್ರದೇಶಗಳಲ್ಲಿ ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲು ಸಿದ್ದತೆ ನಡೆಸಿದ್ದು, ಇದು ಎಲೆಕ್ಟ್ರಿಕ್ ಕಾರು ಖರೀದಿದಾರರನ್ನು ಮತ್ತಷ್ಟು ಆಕರ್ಷಿಸುವುದರಲ್ಲಿ ಎರಡು ಮಾತಿಲ್ಲ.

ಶೀಘ್ರದಲ್ಲೇ 300ಕ್ಕೂ ಹೆಚ್ಚು ಫಾಸ್ಟ್ ಇವಿ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲಿದೆ ಟಾಟಾ

ಇನ್ನು ಟಾಟಾ ಮೋಟಾರ್ಸ್ ಸಂಸ್ಥೆಯು ತನ್ನ ನೆಕ್ಸಾನ್ ಎಲೆಕ್ಟಿಕ್ ಕಾರ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದು, ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.13.99 ಲಕ್ಷ ಬೆಲೆ ಪಡೆದುಕೊಂಡಿದೆ.

ಶೀಘ್ರದಲ್ಲೇ 300ಕ್ಕೂ ಹೆಚ್ಚು ಫಾಸ್ಟ್ ಇವಿ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲಿದೆ ಟಾಟಾ

ನೆಕ್ಸಾನ್ ಎಲೆಕ್ಟ್ರಿಕ್ ಕಾರ್ ಅನ್ನು ಎಕ್ಸ್ ಎಂ, ಎಕ್ಸ್ ಝಡ್ ಪ್ಲಸ್, ಎಕ್ಸ್ ಝಡ್‍ ಪ್ಲಸ್ ಲಕ್ಸ್ ಎಂಬ ಮೂರು ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ಟಾಪ್ ಎಂಡ್ ಮಾದರಿಯ ಬೆಲೆಯು ಭಾರತದ ಎಕ್ಸ್ ಶೋರೂಂ ದರದಂತೆ ರೂ.15.99 ಲಕ್ಷಗಳಾಗಿದೆ. ಈ ಎಲ್ಲಾ ಮೂರು ಮಾದರಿಗಳಲ್ಲೂ ಹಲವಾರು ಫೀಚರ್ ಹಾಗೂ ಅಪ್‍‍ಡೇಟ್‍‍ಗಳಿವೆ.

ಶೀಘ್ರದಲ್ಲೇ 300ಕ್ಕೂ ಹೆಚ್ಚು ಫಾಸ್ಟ್ ಇವಿ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲಿದೆ ಟಾಟಾ

ಈ ಎಲೆಕ್ಟ್ರಿಕ್ ಕಾರ್ ಅನ್ನು ನೆಕ್ಸಾನ್ ಫೇಸ್‍‍ಲಿಫ್ಟ್ ಸ್ಟ್ಯಾಂಡರ್ಡ್ ಕಾರಿನ ಆಧಾರದ ಮೇಲೆ ತಯಾರಿಸಲಾಗಿದ್ದು, ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ 95 ಕಿ.ವ್ಯಾನ ಎಲೆಕ್ಟ್ರಿಕ್ ಮೋಟಾರ್ ಅಳವಡಿಸಲಾಗಿದೆ.

ಶೀಘ್ರದಲ್ಲೇ 300ಕ್ಕೂ ಹೆಚ್ಚು ಫಾಸ್ಟ್ ಇವಿ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲಿದೆ ಟಾಟಾ

ಎ‍ಆರ್‍ಎ‍ಐ ಪ್ರಮಾಣಪತ್ರದಂತೆ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಒಂದು ಬಾರಿಗೆ ಪೂರ್ತಿಯಾಗಿ ಚಾರ್ಜ್ ಆದರೆ 312 ಕಿ.ಮೀವರೆಗೂ ಚಲಿಸುತ್ತದೆ ಎನ್ನಲಾಗಿದ್ದು, ಆದರೆ ನೈಜ ಪರಿಸ್ಥಿತಿಗಳಿಗೆ ಅನುಗುಣವಾಗಿ ಈ ಕಾರು 250 - 300 ಕಿ.ಮೀವರೆಗೂ ಚಲಿಸಬಹುದೆಂದು ಎನ್ನಲಾಗಿದೆ.

Most Read Articles

Kannada
English summary
Tata power plans to expand EV charging stations network. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X