Just In
Don't Miss!
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Movies
ಡಬ್ಬಿಂಗ್ ಸಿನಿಮಾಗಳ ಬಗ್ಗೆ ಹಿರಿಯ ನಟ ದೊಡ್ಡಣ್ಣ ಅಸಮಾಧಾನ
- News
ಕೊರೊನಾ ನಿಯಂತ್ರಣದಲ್ಲಿ ವಿಫಲ: ಇಟಲಿ ಪ್ರಧಾನಿ ಗಿಸೆಪ್ಪೆ ಕಾಂಟೆ ರಾಜೀನಾಮೆ
- Sports
ಐಎಸ್ಎಲ್: ಜೆಮ್ಷೆಡ್ಪುರ ವಿರುದ್ಧ ಕ್ಲೀನ್ ಶೀಟ್ ಗುರಿಯಲ್ಲಿ ಕೇರಳ ಬ್ಲಾಸ್ಟರ್ಸ್
- Finance
ಗಣರಾಜ್ಯೋತ್ಸವಕ್ಕೆ ಬಿಎಸ್ಎನ್ಎಲ್ನಿಂದ ವಿಶೇಷ ಆಫರ್
- Lifestyle
ನೀವು ಬಳಸಬಹುದಾದ ಡೈರಿ ಉತ್ಪನ್ನವಲ್ಲದ ಹಾಲುಗಳ ಬಗ್ಗೆ ಇಲ್ಲಿದೆ ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವ್ಯಾಗನ್ಆರ್ ಗುಣಮಟ್ಟದ ಕುರಿತು ಮಾರುತಿ ಸುಜುಕಿ ಕಾಲೆಳೆದ ಟಾಟಾ ಮೋಟಾರ್ಸ್
ಭಾರತದಲ್ಲಿ ಹೊಸ ವಾಹನ ಮಾರಾಟ ಹೆಚ್ಚಳದ ನಡುವೆ ವಾಹನಗಳ ಸುರಕ್ಷಾ ರೇಟಿಂಗ್ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ನಡೆಯುತ್ತಿದ್ದು, ಬಜೆಟ್ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಮಾರುತಿ ಸುಜುಕಿ ಕಂಪನಿಯು ಅತ್ಯಧಿಕ ಪ್ರಮಾಣದ ಕಾರು ಮಾರಾಟದೊಂದಿಗೆ ಸುರಕ್ಷತೆ ವಿಚಾರವಾಗಿ ಟೀಕೆಗೆ ಒಳಗಾಗುತ್ತಿದೆ.

ಸದ್ಯ ಭಾರತೀಯ ಆಟೋ ಉದ್ಯಮದಲ್ಲಿನ ಕಾರು ಮಾರಾಟ ವಿಭಾಗದಲ್ಲಿ ಅಗ್ರಸ್ಥಾನದಲ್ಲಿರುವ ಮಾರುತಿ ಸುಜುಕಿಯು ಟಾಪ್ 10 ಕಾರುಗಳ ಮಾರಾಟ ಪಟ್ಟಿಯಲ್ಲಿ ಬರೋಬ್ಬರಿ 7 ಕಾರು ಮಾದರಿಗಳನ್ನು ಹೊಂದಿದ್ದು, ಬಹುತೇಕ ಕಾರು ಮಾದರಿಗಳು ಮಾರಾಟದಲ್ಲಿ ದಾಖಲೆ ಮಟ್ಟದ ಮಾರಾಟ ಗುರಿಸಾಧಿಸಿವೆ. ಆದರೆ ಪ್ರಯಾಣಿಕರ ಸುರಕ್ಷತೆಯಲ್ಲಿ ಕಳಪೆ ಗುಣಮಟ್ಟ ಹೊಂದಿದ್ದು, ಪ್ರತಿ ಸ್ಪರ್ಧಿ ಕಾರು ಮಾದರಿಗಳು ಮಾರುತಿ ಕಾರುಗಳಿಗೆ ಸುರಕ್ಷಾ ವಿಚಾರವಾಗಿ ಟಕ್ಕರ್ ನೀಡುತ್ತಿವೆ.

ಮಾರುತಿ ಸುಜುಕಿಗೆ ಟಾಂಗ್ ನೀಡುತ್ತಿರುವ ಕಂಪನಿಗಳ ಪೈಕಿ ಟಾಟಾ ಮೋಟಾರ್ಸ್ ಅಗ್ರಸ್ಥಾನದಲ್ಲಿದ್ದು, ಮಾರುತಿ ಸುಜುಕಿ ನಿರ್ಮಾಣದ ಪ್ರತಿ ಕಾರು ಮಾದರಿಗಳನ್ನು ವಿಭಿನ್ನವಾಗಿ ಕಾಲೆಳೆಯುತ್ತಿದೆ.

ಕೇವಲ ಮಾರುತಿ ಸುಜುಕಿ ಮಾತ್ರವಲ್ಲ ಸುರಕ್ಷಾ ವಿಚಾರವಾಗಿ ಹ್ಯುಂಡೈ ಮೋಟಾರ್ಸ್ ಕೂಡಾ ಟಾಟಾ ಮೋಟಾರ್ಸ್ ಕಂಪನಿಯಿಂದ ಮುಜುಗರಕ್ಕೆ ಒಳಗಾಗಿದ್ದು, ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಮಾರುತಿ ಸುಜುಕಿ ಮತ್ತು ಹ್ಯುಂಡೈ ಕಾರುಗಳಿಂತಲೂ ಟಾಟಾ ಮೋಟಾರ್ಸ್ ಅತ್ಯುತ್ತಮ ರೇಟಿಂಗ್ ಪಡೆದುಕೊಂಡಿದೆ.

ಕಳೆದ ವಾರವಷ್ಟೇ ಮಾರುತಿ ಸುಜುಕಿ ನಿರ್ಮಾಣದ ಎಸ್-ಪ್ರೆಸ್ಸೊ ಮತ್ತು ಹ್ಯುಂಡೈ ನಿರ್ಮಾಣದ ಗ್ರ್ಯಾಂಡ್ ಐ10 ನಿಯೋಸ್ ಕಾರು ಮಾದರಿಯ ಕ್ರ್ಯಾಶ್ ಟೆಸ್ಟಿಂಗ್ ರೇಟಿಂಗ್ ಬಗೆಗೆ ಕಾಲೆಳೆದಿದ್ದ ಟಾಟಾ ಮೋಟಾರ್ಸ್ ಕಂಪನಿಯ ಇದೀಗ ಮಾರುತಿ ಸುಜುಕಿ ನಿರ್ಮಾಣದ ಮತ್ತೊಂದು ಜನಪ್ರಿಯ ಕಾರು ಮಾದರಿಯಾದ ವ್ಯಾಗನ್‌ಆರ್ ಮಾದರಿಯ ಕ್ರ್ಯಾಶ್ ಟೆಸ್ಟಿಂಗ್ ರೇಟಿಂಗ್ ಕುರಿತಾಗಿ ಟಾಂಗ್ ಕೊಟ್ಟಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ರೇಟಿಂಗ್‌ಗೆ ಕೇವಲ 2 ಸ್ಟಾರ್ ರೇಟಿಂಗ್ ಪಡೆದುಕೊಂಡಿರುವ ವ್ಯಾಗನ್‌ಆರ್ ಕಾರು ಮಾದರಿಯು ಕಳಪೆ ಮಾದರಿಯಾಗಿ ಗುರುತಿಸಿಕೊಂಡಿದ್ದು, ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಉತ್ತಮ ಕಾರು ಮಾದರಿಯಾಗಿ ಗುರಿತಿಸಿಕೊಳ್ಳಲು ಕನಿಷ್ಠ 3 ಸ್ಟಾರ್ ರೇಟಿಂಗ್ಸ್ ಪಡೆದುಕೊಳ್ಳಬೇಕು.

ಆದರೆ ಮಾರುತಿ ಸುಜುಕಿ ನಿರ್ಮಾಣದ ಬಹುತೇಕ ಕಾರು ಮಾದರಿಗಳು 2 ಸ್ಟಾರ್ ಮತ್ತು ಹೈ ಎಂಡ್ ಮಾದರಿಗಳು ಗರಿಷ್ಠ 3 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಯಾಗಿರುವ ಟಾಟಾ ಮೋಟಾರ್ಸ್ ಕಂಪನಿಯು ಕಾರು ಮಾದರಿಗಳಿಗೆ ಅನುಗುಣವಾಗಿ 4 ಸ್ಟಾರ್ ರೇಟಿಂಗ್ಸ್‌ನಿಂದ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಆರಂಭಿಕ ಕಾರು ಮಾದರಿಯಾದ ಟಿಯಾಗೋ ಹ್ಯಾಚ್‌ಬ್ಯಾಕ್ ಕಾರು ಮಾದರಿಯು ಕೂಡಾ 4 ಸ್ಟಾರ್ ಸೇಫ್ಟಿ ರೇಟಿಂಗ್ಸ್‌ನೊಂದಿಗೆ ಎಂಟ್ರಿ ಲೆವಲ್ ಕಾರು ಮಾದರಿಗಳಲ್ಲೇ ಅತ್ಯುತ್ತಮ ಕಾರು ಮಾದರಿಯಾಗಿ ಹೊರಹೊಮ್ಮಿದ್ದು, 2 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಹೊಂದಿರುವ ಮಾರುತಿ ವ್ಯಾಗನ್ಆರ್ ಕಾರಿಗೆ ಭರ್ಜರಿಯಾಗಿ ಟಾಂಗ್ ನೀಡಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ವ್ಯಾಗನ್ಆರ್ ಸೇಫ್ಟಿ ರೇಟಿಂಗ್ಸ್ ಕುರಿತಾಗಿ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿರುವ ಟಾಟಾ ಕಂಪನಿಯು ಚಕ್ರ ಕಳಚಿ ಹೋದ ಚಕ್ಕಡಿವೊಂದನ್ನು ವ್ಯಾಗನ್ಆರ್ ಕಾರಿಗೆ ಹೋಲಿಕೆ ಮಾಡಿ ಕಾಲೆಳೆದಿದ್ದು, ಸುರಕ್ಷಿತ ಪ್ರಯಾಣಕ್ಕೆ ವ್ಯಾಗನ್‌ಆರ್ ಕಾರಿನ ಬೆಲೆಗೆ ಸಮನಾಗಿರುವ ಟಿಗೋರ್ ಆಯ್ಕೆಗೆ ಮಾಡುವಂತೆ ವಿಭಿನ್ನವಾಗಿ ಜಾಹೀರಾತು ನೀಡುತ್ತಿದೆ.

4 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿರುವ ಟಾಟಾ ಟಿಯಾಗೋ ಕಾರು ಮಾದರಿಯು ಬಜೆಟ್ ಬೆಲೆಯಲ್ಲಿ ಅತ್ಯುತ್ತಮ ಫೀಚರ್ಸ್ ಹೊಂದಿದ್ದು, 1.2-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 4.70 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.74 ಲಕ್ಷ ಬೆಲೆ ಹೊಂದಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಹಾಗೆಯೇ ಮಾರುತಿ ಸುಜುಕಿ ವ್ಯಾಗನ್ಆರ್ ಕಾರು ಮಾದರಿಯು 1.0-ಲೀಟರ್ ಮತ್ತು 1.2-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಗಳ ಜೊತೆಗೆ ಸಿಎನ್‌ಜಿ ಮಾದರಿಗಳ ಆಯ್ಕೆ ಹೊಂದಿದ್ದು, ಹೊಸ ಕಾರು ಆರಂಭಿಕವಾಗಿ ರೂ. 4.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 5.99 ಲಕ್ಷ ಬೆಲೆ ಹೊಂದಿದೆ. ಬಜೆಟ್ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿಯಲ್ಲಿದ್ದರೂ ಸುರಕ್ಷಾ ವಿಚಾರವಾಗಿ ಕಳಪೆ ಪ್ರದರ್ಶನ ಹೊಂದಿರುವ ಮಾರುತಿ ಸುಜುಕಿ ಕಾರುಗಳು ಗ್ರಾಹಕರ ಬೇಡಿಕೆಯೆಂತೆ ಗುಣಮಟ್ಟ ಸುಧಾರಣೆ ಮಾಡಿಕೊಳ್ಳುವ ಅವಶ್ಯಕತೆಯಿದೆ.