ಟಿಯಾಗೋ ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯ ತನ್ನ ಜನಪ್ರಿಯ ಟಿಯಾಗೋ ಕಾರಿನ ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದೆ. ಟಾಟಾ ಮೋಟಾರ್ಸ್ ತನ್ನ ಗುಜರಾತ್‌ನ ಸನಂದ್ ಉತ್ಪಾದನಾ ಕೇಂದ್ರದಲ್ಲಿ 3,00,000ನೇ ಟಿಯಾಗೋ ಕಾರನ್ನು ಉತ್ಪಾದಿಸಲಾಗಿದೆ.

ಟಿಯಾಗೋ ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಮೋಟಾರ್ಸ್

ಬ್ರ್ಯಾಂಡ್‌ನ ಇಂಪ್ಯಾಕ್ಟ್ ವಿನ್ಯಾಸದಡಿಯಲ್ಲಿ ಉತ್ಪಾದಿಸಿದ ಮೊದಲ ಮಾದರಿ ಇದಾಗಿದೆ. ಟಿಯಾಗೋ ಹ್ಯಾಚ್‌ಬ್ಯಾಕ್ ಅನ್ನು ಮೊದಲ ಬಾರಿಗೆ 2016ರಲ್ಲಿ ಪ್ರಾರಂಭಿಸಲಾಗಿತ್ತು. ತಂತ್ರಜ್ಞಾನ ಮತ್ತು ಡ್ರೈವಿಂಗ್ ಡೈನಾಮಿಕ್ಸ್ ವಿಷಯದಲ್ಲಿ ಇದು ಬ್ರ್ಯಾಂಡ್‌ಗೆ ಅದ್ಭುತ ಮಾದರಿಯಾಗಿದೆ. 2018ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್ ಎಂಬ ಖ್ಯಾತಿಯನ್ನು ಹೊಂದಿದೆ.

ಟಿಯಾಗೋ ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಮೋಟಾರ್ಸ್

ಈ ವರ್ಷದ ಆರಂಭದಲ್ಲಿ ಟಾಟಾ ಕಂಪನಿಯು ಬಿಎಸ್ 6 ಆವೃತ್ತಿಯಲ್ಲಿ ಟಿಯಾಗೋ ಕಾರನ್ನು ಬಿಡುಗಡೆಗೊಳಿಸಿತು. ನಂತರದಲ್ಲಿ ಇದು ಬ್ರ್ಯಾಂಡ್‌ನ ಹೊಸ ‘ಫಾರೆವರ್' ಮಾದರಿಗಳ ಭಾಗವಾಯಿತು.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಟಿಯಾಗೋ ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಮೋಟಾರ್ಸ್

ಟಾಟಾ ಟಿಯಾಗೋ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್ ನಲ್ಲಿ 4-ಸ್ಟಾರ್ ಅಡಲ್ಟ್ ಸುರಕ್ಷತಾ ರೇಟಿಂಗ್ ಅನ್ನು ಪಡೆದುಕೊಂಡಿದೆ. ಇನ್ನು ಈ ಟಿಯಾಗೋ ಕಾರಿನಲ್ಲಿ ಸುರಕ್ಷತೆಗಾಗಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದ್ದಾರೆ.

ಟಿಯಾಗೋ ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಮೋಟಾರ್ಸ್

ಟಿಯಾಗೋ ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಡ್ಯುಯಲ್ ಏರ್‌ಬ್ಯಾಗ್‌ಗಳು, (ಎಬಿಎಸ್) ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಂ ವಿತ್ (ಸಿಎಸ್‌ಸಿ) ಕಾರ್ನರ್ ಸ್ಟೆಬಿಲಿಟಿ ಕಂಟ್ರೋಲ್ ಮತ್ತು (ಇಬಿಡಿ), ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡೆಲಿವೆರಿ ಮತ್ತು ಪಾರ್ಕಿಕ್ ಅಸಿಸ್ಟ್ ಅನ್ನು ಸ್ಟ್ಯಾಂಡರ್ಡ್ ಆಗಿ ಹೊಂದಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಟಿಯಾಗೋ ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಮೋಟಾರ್ಸ್

ಟಾಟಾ ಟಿಯಾಗೋ ಬ್ರ್ಯಾಂಡ್‌ನ ಎಂಟ್ರಿ ಲೆವೆಲ್ ಮಾದರಿಯಾಗಿದೆ. ಟಿಯಾಗೋ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.4.69 ಲಕ್ಷದಿಂದ 6.73 ಲಕ್ಷಗಳಾಗಿದೆ. ಅಲ್ಲದೇ ಕಂಪನಿಯು ಪ್ರಸ್ತುತ ಆಕರ್ಷಕ ರಿಯಾಯಿತಿಗಳು ಮತ್ತು ಸುಲಭ ಹಣಕಾಸು ಯೋಜನೆಯನ್ನು ಸಹ ನೀಡುತ್ತಿದೆ.

ಟಿಯಾಗೋ ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಮೋಟಾರ್ಸ್

ಟಾಟಾ ಟಿಯಾಗೋ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದ ಬಳಿಕ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ಮಾರಾಟ ಮಾಡಲಾಗುತ್ತಿದೆ. ಇದರಲ್ಲಿ 1.2-ಲೀಟರ್, ಮೂರು-ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಟಿಯಾಗೋ ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಮೋಟಾರ್ಸ್

ಈ ಎಂಜಿನ್ 85 ಬಿಹೆಚ್‍ಪಿ ಪವರ್ ಮತ್ತು 113 ಎನಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಫೀಡ್ ಎಎಂಟಿ ಯುನಿಟ್ ಅನ್ನು ಜೋಡಿಸಲಾಗಿದೆ.

ಟಿಯಾಗೋ ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಮೋಟಾರ್ಸ್

ಈ ಹ್ಯಾಚ್‌ಬ್ಯಾಕ್‌ನಲ್ಲಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ, ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್ ಮತ್ತು ಪವರ್-ಫೋಲ್ಡಿಂಗ್ ವಿಂಗ್ ಮಿರರ್ ನೊಂದಿಗೆ 7.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ.

ಟಿಯಾಗೋ ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಮೋಟಾರ್ಸ್

ಟಾಟಾ ಟಿಯಾಗೋ ಕಾರು ಭಾರತೀಯ ಮಾರುಕಟ್ಟೆಯಲ್ಲಿ ದಟ್ಸನ್ ಗೋ, ಹ್ಯುಂಡೈ ಸ್ಯಾಂಟ್ರೊ, ಮಾರುತಿ ಸುಜುಕಿ ಸೆಲೆರಿಯೊ ಮತ್ತು ವ್ಯಾಗನ್ಆರ್ ಕಾರುಗಳಿಗೆ ಪೈಪೋಟಿ ನೀಡುತ್ತದೆ. ಟಿಯಾಗೋ ಟಾಟಾ ಕಾರುಗಳಲ್ಲಿ ಜನಪ್ರಿಯ ಮಾದರಿಗಳಲ್ಲಿ ಒಂದಾಗಿದೆ.

Most Read Articles

Kannada
English summary
Tata Tiago Production Crosses 3 Lakh Unit Mark. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X