ಬಿಎಸ್-6 ಟಿಗೋರ್, ಟಿಯಾಗೋ ಮತ್ತು ನೆಕ್ಸಾನ್ ಫೇಸ್‌ಲಿಫ್ಟ್ ವರ್ಷನ್ ಬಿಡುಗಡೆ ಮಾಹಿತಿ ಬಹಿರಂಗ

ಟಾಟಾ ಮೋಟಾರ್ಸ್ ಸಂಸ್ಥೆಯು ತನ್ನ ಬಹುನೀರಿಕ್ಷಿತ ಟಿಗೋರ್, ಟಿಯಾಗೋ ಮತ್ತು ನೆಕ್ಸಾನ್ ಫೇಸ್‌ಲಿಫ್ಟ್ ಕಾರುಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಹೊಸ ಕಾರುಗಳು ಅಧಿಕೃತವಾಗಿ ಇದೇ ತಿಂಗಳು 22ಕ್ಕೆ ಮಾರುಕಟ್ಟೆ ಪ್ರವೇಶಿಸಲಿವೆ.

ಬಿಎಸ್-6 ಟಿಗೋರ್, ಟಿಯಾಗೋ ಮತ್ತು ನೆಕ್ಸಾನ್ ಫೇಸ್‌ಲಿಫ್ಟ್ ವರ್ಷನ್ ಬಿಡುಗಡೆ ಮಾಹಿತಿ ಬಹಿರಂಗ

ಬಿಎಸ್-6 ಎಂಜಿನ್ ಹೊಂದಿರುವ ಟಿಗೋರ್, ಟಿಯಾಗೋ ಮತ್ತು ನೆಕ್ಸಾನ್ ಫೇಸ್‌ಲಿಫ್ಟ್ ಕಾರುಗಳು ಹೊಸ ಎಂಜಿನ್ ಜೊತೆಗೆ ವಿನ್ಯಾಸದಲ್ಲೂ ಹಲವು ಹೊಸ ವಿನ್ಯಾಸಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಕಾರು ಮಾದರಿಗಳ ಖರೀದಿಗಾಗಿ ಈಗಾಗಲೇ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಹೊಸ ಕಾರು ಪ್ರಸ್ತುತ ಮಾದರಿಗಿಂತಲೂ ಹಲವಾರು ಪ್ರೀಮಿಯಂ ಸೌಲಭ್ಯಗಳನ್ನು ಪಡೆದುಕೊಳ್ಳಲಿದ್ದು, ಬೆಲೆಯಲ್ಲೂ ತುಸು ದುಬಾರಿ ಎನ್ನಿಸಲಿವೆ.

ಬಿಎಸ್-6 ಟಿಗೋರ್, ಟಿಯಾಗೋ ಮತ್ತು ನೆಕ್ಸಾನ್ ಫೇಸ್‌ಲಿಫ್ಟ್ ವರ್ಷನ್ ಬಿಡುಗಡೆ ಮಾಹಿತಿ ಬಹಿರಂಗ

ಟಾಟಾ ಸದ್ಯ ಹೊಸ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆಗಳನ್ನು ಪರಿಚಯಿಸುತ್ತಿದ್ದು, ಹೊಚ್ಚ ಹೊಸ ಕಾರು ಮಾದರಿಗಳಾದ ಆಲ್‌ಟ್ರೊಜ್, ನೆಕ್ಸಾನ್ ಎಲೆಕ್ಟ್ರಿಕ್, ಗ್ರಾವಿಟಾಸ್ ಜೊತೆಗೆ ಬಿಎಸ್-6 ಮಾದರಿಗಳಾದ ನೆಕ್ಸಾನ್, ಹ್ಯಾರಿಯರ್, ಟಿಗೋರ್, ಟಿಯಾಗೋ ಮತ್ತು ಹೆಕ್ಸಾ ಮಾದರಿಗಳನ್ನು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಆವೃತ್ತಿಗಿಂತಲೂ ಹೊಸ ವಿನ್ಯಾಸ ಮತ್ತು ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಳಿಸಿದೆ.

ಬಿಎಸ್-6 ಟಿಗೋರ್, ಟಿಯಾಗೋ ಮತ್ತು ನೆಕ್ಸಾನ್ ಫೇಸ್‌ಲಿಫ್ಟ್ ವರ್ಷನ್ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಕಾರುಗಳ ಉತ್ಪಾದನೆಗಾಗಿ ಟಾಟಾ ಸಂಸ್ಥೆಯು ಒಮೆಗಾ ಮತ್ತು ಅಲ್ಫಾ ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಬಳಕೆ ಮಾಡುತ್ತಿದ್ದು, ಎಂಜಿನ್ ಮತ್ತು ಪ್ರೀಮಿಯಂ ಸೌಲಭ್ಯಗಳಲ್ಲಿ ಮಾತ್ರವಲ್ಲದೇ ಪ್ರಯಾಣಿಕರ ಸುರಕ್ಷತೆಯಲ್ಲೂ ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸಿದೆ.

ಬಿಎಸ್-6 ಟಿಗೋರ್, ಟಿಯಾಗೋ ಮತ್ತು ನೆಕ್ಸಾನ್ ಫೇಸ್‌ಲಿಫ್ಟ್ ವರ್ಷನ್ ಬಿಡುಗಡೆ ಮಾಹಿತಿ ಬಹಿರಂಗ

ಇದರಲ್ಲಿ ಮೊದಲ ಹಂತವಾಗಿ ಟಿಗೋರ್, ಟಿಯಾಗೋ ಮತ್ತು ನೆಕ್ಸಾನ್ ಫೇಸ್‌ಲಿಫ್ಟ್ ಕಾರುಗಳನ್ನು ಬಿಡುಗಡೆಗೊಳಿಸಲಾಗುತ್ತಿದ್ದು, ತದನಂತರ ಆಲ್‌ಟ್ರೊಜ್, ನೆಕ್ಸಾನ್ ಎಲೆಕ್ಟ್ರಿಕ್ ಕಾರುಗಳು ಬಿಡುಗಡೆಗೊಳ್ಳಲಿವೆ. ಮಾರ್ಚ್ ಹೊತ್ತಿಗೆ ಹೆಕ್ಸಾ ಮತ್ತು ಹ್ಯಾರಿಯರ್ ಬಿಎಸ್-6 ಕಾರುಗಳು ಬಿಡುಗಡೆಯಾಗಲಿದ್ದು, ಜೂನ್ ಆರಂಭದಲ್ಲಿ ಟಾಟಾ ಬಹುನೀರಿಕ್ಷಿತ 7 ಸೀಟರ್ ಗ್ರಾವಿಟಾಸ್ ಎಸ್‌ಯುವಿ ಕಾರು ಖರೀದಿಗೆ ಲಭ್ಯವಾಗಲಿದೆ ಎನ್ನಲಾಗುತ್ತಿದೆ.

ಬಿಎಸ್-6 ಟಿಗೋರ್, ಟಿಯಾಗೋ ಮತ್ತು ನೆಕ್ಸಾನ್ ಫೇಸ್‌ಲಿಫ್ಟ್ ವರ್ಷನ್ ಬಿಡುಗಡೆ ಮಾಹಿತಿ ಬಹಿರಂಗ

ಇದರಲ್ಲಿ ಸದ್ಯ ಮಾರುಕಟ್ಟೆಯಲ್ಲಿ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿರುವ ನೆಕ್ಸಾನ್ ಕಾರು ಫೇಸ್‌ಲಿಫ್ಟ್ ಆವೃತ್ತಿಯಲ್ಲೂ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಂಜಿನ್ ಆಯ್ಕೆಗಳನ್ನೇ ಉನ್ನತೀಕರಿಸಲಾಗಿದೆ.

ಬಿಎಸ್-6 ಟಿಗೋರ್, ಟಿಯಾಗೋ ಮತ್ತು ನೆಕ್ಸಾನ್ ಫೇಸ್‌ಲಿಫ್ಟ್ ವರ್ಷನ್ ಬಿಡುಗಡೆ ಮಾಹಿತಿ ಬಹಿರಂಗ

ಅದರ ಹೊರತಾಗಿ ಹೊಸ ನೆಕ್ಸಾನ್ ಕಾರಿನಲ್ಲಿ ಈ ಬಾರಿ ಮರುವಿನ್ಯಾಸಗೊಳಿಸಲಾದ ಫ್ರಂಟ್ ಬ್ಯಾನೆಟ್, ಬಂಪರ್ ಡಿಸೈನ್, ಫುಲ್ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಹೊಸ ತಂತ್ರಜ್ಞಾನ ಪ್ರೇರಿತ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಆಟೋಮ್ಯಾಟಿಕ್ ಸನ್‌ರೂಫ್, ಹೈ ಎಂಡ್ ಮಾದರಿಯಲ್ಲಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಕ್ಯಾಬಿನ್ ವಿನ್ಯಾಸದಲ್ಲಿ ಮಹತ್ವದ ಬದಲಾವಣೆ ಪಡೆದುಕೊಂಡಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಬೆಲೆಗಿಂತ ಹೆಚ್ಚುವರಿಯಾಗಿ ರೂ.30 ಸಾವಿರದಿಂದ ರೂ.1.20 ಲಕ್ಷದ ತನಕ ದುಬಾರಿ ಬೆಲೆ ಪಡೆಯಲಿದೆ.

ಬಿಎಸ್-6 ಟಿಗೋರ್, ಟಿಯಾಗೋ ಮತ್ತು ನೆಕ್ಸಾನ್ ಫೇಸ್‌ಲಿಫ್ಟ್ ವರ್ಷನ್ ಬಿಡುಗಡೆ ಮಾಹಿತಿ ಬಹಿರಂಗ

ಇದರೊಂದಿಗೆ ಟಿಗೋರ್ ಮತ್ತು ಟಿಯಾಗೋ ಫೇಸ್‌ಲಿಫ್ಟ್ ಕೂಡಾ ಹೊರಭಾಗದ ವಿನ್ಯಾಸದಲ್ಲಿ ಸಾಕಷ್ಟು ಬದಲಾವಣೆಗೊಂಡಿದ್ದು, ಗ್ರಿಲ್, ಬ್ಯಾನೆಟ್ ಮತ್ತು ಬಂಪರ್ ವಿನ್ಯಾಸವನ್ನು ಬದಲಾವಣೆಗೊಳಿಸಿರುವುದು ಗ್ರಾಹಕರ ಆಕರ್ಷಣೆಗೆ ಕಾರಣವಾಗಲಿವೆ.

ಬಿಎಸ್-6 ಟಿಗೋರ್, ಟಿಯಾಗೋ ಮತ್ತು ನೆಕ್ಸಾನ್ ಫೇಸ್‌ಲಿಫ್ಟ್ ವರ್ಷನ್ ಬಿಡುಗಡೆ ಮಾಹಿತಿ ಬಹಿರಂಗ

ಹಾಗೆಯೇ ಹೊಸ ಕಾರಿನಲ್ಲಿ ಮರುವಿನ್ಯಾಸಗೊಳಿಸಲಾದ ಟೈಲ್‌ಲ್ಯಾಂಪ್ ಕ್ಲಸ್ಟರ್ ಡಿಸೈನ್, ಅಲಾಯ್ ವೀಲ್ಹ್ ಸೇರಿದಂತೆ ಹಲವಾರು ಪ್ರೀಮಿಯಂ ಸೌಲಭ್ಯಗಳನ್ನು ಹೊಂದಿದ್ದು, ಟಿಯಾಗೋ ಕಾರಿನಲ್ಲಿ ಈ ಬಾರಿ ಪೆಟ್ರೋಲ್ ಆವೃತ್ತಿ ಮಾತ್ರವೇ ಖರೀದಿಗೆ ಲಭ್ಯವಾಗಲಿದೆ.

ಬಿಎಸ್-6 ಟಿಗೋರ್, ಟಿಯಾಗೋ ಮತ್ತು ನೆಕ್ಸಾನ್ ಫೇಸ್‌ಲಿಫ್ಟ್ ವರ್ಷನ್ ಬಿಡುಗಡೆ ಮಾಹಿತಿ ಬಹಿರಂಗ

ಬಿಎಸ್-6 ನಿಯಮ ಜಾರಿಯಿಂದಾಗಿ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಕಡಿಮೆ ಸಾಮಾರ್ಥ್ಯದ ಡೀಸೆಲ್ ಎಂಜಿನ್ ಆಯ್ಕೆಯನ್ನು ಕೈಬಿಡುತ್ತಿದ್ದು, ಟಾಟಾ ಕೂಡಾ ಪ್ರಸ್ತುತ ಮಾರುಕಟ್ಟೆಯಲ್ಲಿರುವ 1.1-ಲೀಟರ್ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿ 1.2-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ಮುಂದುವರಿಸಲಿದೆ.

Most Read Articles

Kannada
English summary
tata tiago, tigor, nexon facelift launching on 22nd january. Read in kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X