ವರ್ಷಾಂತ್ಯದೊಳಗೆ ಮೂರು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಟಾಟಾ ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ಹೊಸ ಕಾರುಗಳ ಅಭಿವೃದ್ದಿ ಮತ್ತು ಮಾರಾಟದಲ್ಲಿ ಉತ್ತಮ ಬೇಡಿಕೆ ಕಾಯ್ದಕೊಂಡಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡಲು ಸಿದ್ದವಾಗಿದೆ.

ವರ್ಷಾಂತ್ಯದೊಳಗೆ ಮೂರು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಮೂರು ಹೊಸ ಕಾರುಗಳನ್ನು ಇದೇ ವರ್ಷಾಂತ್ಯದೊಳಗೆ ಬಿಡುಗಡೆ ಮಾಡಲು ನಿರ್ಧರಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಕಾರುಗಳ ಮೂಲಕ ಮತ್ತಷ್ಟು ಜನಪ್ರಿಯತೆ ಪಡೆದುಕೊಳ್ಳಲಿದೆ. ಹಾಗಾದ್ರೆ ಬಿಡುಗಡೆಯಾಗಲಿರುವ ಕಾರುಗಳ ಯಾವವು? ಮತ್ತು ಹೊಸ ಕಾರುಗಳ ಬಿಡುಗಡೆ ಮತ್ತು ತಾಂತ್ರಿಕ ಅಂಶಗಳ ಕುರಿತಾಗಿ ಇಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ.

ವರ್ಷಾಂತ್ಯದೊಳಗೆ ಮೂರು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಹೆಚ್‌ಬಿಎಕ್ಸ್(ಮೈಕ್ರೊ ಎಸ್‌ಯುವಿ)

ಮೈಕ್ರೊ ಎಸ್‌ಯುವಿ ಕಾರುಗಳಲ್ಲಿ ಗಮನಸೆಳೆಯುವಂತಹ ಉದ್ದಳತೆ ಹೊಂದಿರುವ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರು 3,822-ಎಂಎಂ ಉದ್ದ, 1,822-ಎಂಎಂ ಉದ್ದ, 1,635-ಎಂಎಂ ಅಗಲ ಮತ್ತು 2,450-ಎಂಎಂ ವೀಲ್ಹ್‌ಬೆಸ್ ಹೊಂದಿದ್ದು, ಇದು ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನ ಉದ್ದಳತೆಗೆ ಸಮನಾವಾಗಿದೆ.

ವರ್ಷಾಂತ್ಯದೊಳಗೆ ಮೂರು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಇದರೊಂದಿಗೆ ಹ್ಯಾಚ್‌ಬ್ಯಾಕ್ ಕಾರುಗಳ ಮಾರಾಟದಲ್ಲೂ ಸದ್ದು ಮಾಡಲಿರುವ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರು 1.2-ಲೀಟರ್ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 86-ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯವನ್ನು ಹೊಂದಿದೆ.

ವರ್ಷಾಂತ್ಯದೊಳಗೆ ಮೂರು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರು ಕೇವಲ ಪೆಟ್ರೋಲ್ ಆವೃತ್ತಿಯಲ್ಲಿ ಮಾತ್ರವಲ್ಲ ಎಲೆಕ್ಟ್ರಿಕ್ ಆವೃತ್ತಿಯಲ್ಲೂ ಬಿಡುಗಡೆಗೆ ಸಿದ್ದತೆ ನಡೆಸಲಾಗುತ್ತಿದ್ದು, ಮೊದಲು ಪೆಟ್ರೋಲ್ ಆವೃತ್ತಿಯ ಬಿಡುಗಡೆಯ ನಂತರವಷ್ಟೇ ಎಲೆಕ್ಟ್ರಿಕ್ ವರ್ಷನ್ ಮಾರುಕಟ್ಟೆ ಪ್ರವೇಶಿಸಲಿದೆ. ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ.5 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.50 ಲಕ್ಷ ಬೆಲೆ ಪಡೆದುಕೊಳ್ಳಬಹುದೆಂದು ಅಂದಾಜಿಸಲಾಗಿದ್ದು, ವರ್ಷದ ಕೊನೆಯಲ್ಲಿ(ನವೆಂಬರ್ ಅಥವಾ ಡಿಸೆಂಬರ್) ಬಿಡುಗಡೆಯಾಗಲಿದೆ.

ವರ್ಷಾಂತ್ಯದೊಳಗೆ ಮೂರು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಗ್ರಾವಿಟಾಸ್ ಎಸ್‌ಯುವಿ

ಕಳೆದ ತಿಂಗಳು ಫೆಬ್ರುವರಿಯಲ್ಲಿ ಅನಾವರಣಗೊಂಡಿದ್ದ ಗ್ರಾವಿಟಾಸ್ ಕಾರು ಟಾಟಾ ಉತ್ಪಾದನೆಯ ವಿಶೇಷ ವಿನ್ಯಾಸದ ಎಸ್‌ಯುವಿ ಆವೃತ್ತಿಯಾಗಿದ್ದು, ಹ್ಯಾರಿಯರ್ ಉತ್ಪಾದನೆಗಾಗಿ ಉತ್ಪಾದನೆಗೆ ಬಳಕೆ ಮಾಡಲಾಗಿದ್ದ OMEGA ಪ್ಲ್ಯಾಟ್‌ಫಾರ್ಮ್‌ನಡಿಯಲ್ಲೇ ಹೊಸ ಗ್ರಾವಿಟಾಸ್ ಕೂಡಾ ಅಭಿವೃದ್ದಿಗೊಳ್ಳುತ್ತಿದೆ.

ವರ್ಷಾಂತ್ಯದೊಳಗೆ ಮೂರು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

OMEGA(ಆಪ್ಟಿಮಲ್ ಮಾಡ್ಯುಲರ್ ಎಫಿಶಿಯೆಂಟ್ ಗ್ಲೋಬಲ್ ಅಡ್ವಾನ್ಸ್ಡ್ ಪ್ಲಾಟ್‍ಫಾರ್ಮ್)ತಂತ್ರಜ್ಞಾನವನ್ನು ಲ್ಯಾಂಡ್ ರೋವರ್ ಡಿಸ್ಕವರಿ ಕಾರಿನಲ್ಲಿಯೂ ಕೂಡಾ ಕಾಣಬಹುದಾಗಿದ್ದು, ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯಲಿದೆ.

ವರ್ಷಾಂತ್ಯದೊಳಗೆ ಮೂರು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

7 ಸೀಟರ್ ಆವೃತ್ತಿಯಾಗಿರುವ ಗ್ರಾವಿಟಾಸ್ ಕಾರು 4,661-ಎಂಎಂ ಉದ್ದ, 1786-ಎಂಎಂ ಎತ್ತರ ಮತ್ತು 2,741-ಎಂಎಂ ವೀಲ್ಹ್ ಬೆಸ್‌ನೊಂದಿಗೆ ಹ್ಯಾರಿಯರ್‌ಗಿಂತಲೂ 63-ಎಂಎಂ ಹೆಚ್ಚು ಉದ್ದ, 80-ಎಂಎಂ ಕಡಿಮೆ ಎತ್ತರ ಪಡೆದುಕೊಂಡಿದ್ದು, ಫ್ಲೇರ್ಡ್ ಆರ್ಚೆಸ್, ಮುಂಭಾಗದ ಬಂಪರ್‍‍ಗಳಿಗೆ ಟ್ರೈ ಆರೋ ಡಿಸೈನ್, ಡ್ಯುಯಲ್ ಟೋನ್ ಬಂಪರ್, ಎಲ್ಇಡಿ ಹೆಡ್‍ಲೈಟ್, ವ್ರಾಪ್ಡ್ ಅರೌಂಡ್ ಟೈಲ್ ಲೈಟ್ ಮತ್ತು ಸ್ಕಿಡ್ ಪ್ಲೇಟ್‍‍ಗಳಿಂದ ಸಜ್ಜುಗೊಂಡಿದೆ.

ವರ್ಷಾಂತ್ಯದೊಳಗೆ ಮೂರು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

2.0-ಲೀಟರ್ ಕ್ರೆಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಮಾತ್ರ ಬಿಡುಗಡೆಯಾಗಲಿರುವ ಗ್ರಾವಿಟಾಸ್ ಕಾರು ಮುಂಬರುವ ಜುಲೈ ಅಥವಾ ಅಗಸ್ಟ್ ಹೊತ್ತಿಗೆ ಬಿಡುಗಡೆಯಾಗಲಿದ್ದು, ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.20 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ.23 ಲಕ್ಷ ಬೆಲೆ ಹೊಂದಿರಬಹುದೆಂದು ನೀರಿಕ್ಷಿಸಲಾಗಿದೆ.

ವರ್ಷಾಂತ್ಯದೊಳಗೆ ಮೂರು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಆಲ್‌ಟ್ರೊಜ್ ಎಲೆಕ್ಟ್ರಿಕ್

ಸಾಮಾನ್ಯ ಆಲ್‌ಟ್ರೊಜ್ ಕಾರು ಮಾದರಿಯಲ್ಲೇ ಅಭಿವೃದ್ದಿಗೊಂಡಿರುವ ಆಲ್‌ಟ್ರೊಜ್ ಎಲೆಕ್ಟ್ರಿಕ್ ಕಾರು ಮಾದರಿಯು ಅತ್ಯುತ್ತಮ ಬ್ಯಾಟರಿ ಬಳಕೆ ಹೊಂದಿದ್ದು, ನೆಕ್ಸಾನ್ ಇವಿ ಕಾರಿನಿಂದಲೂ ಫೀಚರ್ಸ್‌ಗಳನ್ನು ಎರವಲು ಪಡೆದುಕೊಂಡಿದೆ.

ವರ್ಷಾಂತ್ಯದೊಳಗೆ ಮೂರು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಮಾಹಿತಿಗಳ ಪ್ರಕಾರ ಹೊಸ ಆಲ್‌ಟ್ರೊಜ್ ಕಾರು ಗ್ರಾವಿಟಾಸ್ ಕಾರು ಬಿಡುಗಡೆಯ ನಂತರವಷ್ಟೇ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ರೂ.9 ಲಕ್ಷದಿಂದ ರೂ.11 ಲಕ್ಷ ಬೆಲೆ ಅಂತರದೊಂದಿಗೆ ಪ್ರತಿ ಚಾರ್ಜಿಗೆ 250 ಕಿ.ಮೀ ಮೈಲೇಜ್ ಹಿಂದಿರುಗಿಸುವ ಸಾಧ್ಯತೆಗಳಿವೆ.

Article Published On: Wednesday, March 25, 2020, 16:19 [IST]
English summary
Tata to launch 3 New models in India this year. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+