Just In
- 6 hrs ago
ವಾಣಿಜ್ಯ ವಾಹನಗಳ ಖರೀದಿಗಾಗಿ ಹಲವು ಆಕರ್ಷಕ ಸಾಲಸೌಲಭ್ಯಗಳಿಗೆ ಚಾಲನೆ ನೀಡಿದ ಟಾಟಾ
- 6 hrs ago
2021ರ ಜೀಪ್ ಕಂಪಾಸ್ ಫೇಸ್ಲಿಫ್ಟ್ ಎಸ್ಯುವಿ ವೆರಿಯೆಂಟ್ ಮಾಹಿತಿ ಬಹಿರಂಗ
- 7 hrs ago
ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಟ್ಟ ಮೇಡ್ ಇನ್ ಇಂಡಿಯಾ ಹೋಂಡಾ ಹೈನೆಸ್ ಸಿಬಿ 350
- 7 hrs ago
ಎಂಟೇ ನಿಮಿಷಗಳಲ್ಲಿ ರಸ್ತೆ ಗುಂಡಿಗಳನ್ನು ಸರಿ ಪಡಿಸಲಿದೆ ಜೆಸಿಬಿಯ ಈ ಹೊಸ ಯಂತ್ರ
Don't Miss!
- News
Biden Inauguration live updates: ಅಮೆರಿಕ ಅಧ್ಯಕ್ಷರಾಗಿ ಜೋ ಬೈಡನ್ ಪದಗ್ರಹಣದ ನೇರಪ್ರಸಾರ
- Finance
ಸಿಯೆಟ್ ಲಿಮಿಟೆಡ್ ಲಾಭದ ಪ್ರಮಾಣ ಎರಡೂವರೆ ಪಟ್ಟು ಹೆಚ್ಚಳ
- Sports
ಐಎಸ್ಎಲ್: ಹೈದರಾಬಾದ್ ಜಯಕ್ಕೆ ಅಡ್ಡಿಯಾದ ಕಳಿಂಗ ವಾರಿಯರ್ಸ್
- Education
AAI Recruitment 2021: 7 ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಅಂಧ ವ್ಯಕ್ತಿಯ ಬಾಳಿಗೆ ಬೆಳಕಾದ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ
- Lifestyle
ಜ. 25ಕ್ಕೆ ಕುಂಭ ರಾಶಿಗೆ ಬುಧನ ಸಂಚಾರ: 12 ರಾಶಿಗಳ ಮೇಲೆ ಇದರ ಪ್ರಭಾವವೇನು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವಾರಂಟಿ ಅವಧಿಯನ್ನು ಹಠಾತ್ತನೆ ಕಡಿಮೆಗೊಳಿಸಿದ ಖ್ಯಾತ ಕಾರು ತಯಾರಕ ಕಂಪನಿ
ವಾಹನ ತಯಾರಕ ಕಂಪನಿಗಳು ಹೊಸ ವಾಹನಗಳನ್ನು ಮಾತ್ರವಲ್ಲದೆ ಬಳಸಿದ ವಾಹನಗಳನ್ನು ಸಹ ಮಾರಾಟ ಮಾಡುತ್ತಿವೆ. ಮಾರುತಿ ಸುಜುಕಿ ಕಂಪನಿಯಿಂದ ಫೋಕ್ಸ್ವ್ಯಾಗನ್ವರೆಗೆ ಹಲವು ಕಂಪನಿಗಳು ಭಾರತದಲ್ಲಿ ಸೆಕೆಂಡ್ ಹ್ಯಾಂಡ್ ಕಾರುಗಳನ್ನು ಮಾರಾಟ ಮಾಡುತ್ತಿವೆ.

ಬಳಸಿದ ಕಾರುಗಳನ್ನು ಮಾರಾಟ ಮಾಡುವುದರಿಂದ ಉತ್ತಮ ಆದಾಯ ಇರುವುದರಿಂದ ಅನೇಕ ಪ್ರಮುಖ ವಾಹನ ತಯಾರಕ ಕಂಪನಿಗಳು ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟದಲ್ಲಿ ತೊಡಗಿಸಿಕೊಂಡಿವೆ. ಜನಪ್ರಿಯ ಎಲೆಕ್ಟ್ರಿಕ್ ಕಾರು ತಯಾರಕ ಕಂಪನಿಯಾದ ಟೆಸ್ಲಾ ಕೂಡ ಸೆಕೆಂಡ್ ಹ್ಯಾಂಡ್ ಕಾರುಗಳನ್ನು ಮಾರಾಟ ಮಾಡುತ್ತಿದೆ.

ಆದರೆ ಟೆಸ್ಲಾ ಕಂಪನಿಯು ತನ್ನ ಕಾರುಗಳನ್ನು ಮಾತ್ರ ಮಾರಾಟ ಮಾಡುತ್ತದೆ. ಟೆಸ್ಲಾ ಕಂಪನಿಯು ಸೆಕೆಂಡ್ ಹ್ಯಾಂಡ್ ಕಾರುಗಳ ಮೇಲೆ ನೀಡುತ್ತಿದ್ದ ವಾರಂಟಿ ಅವಧಿಯನ್ನು ಕಡಿಮೆ ಮಾಡಿದೆ. ಯಾವ ಕಾರಣಕ್ಕೆ ವಾರಂಟಿ ಅವಧಿಯನ್ನು ಕಡಿಮೆ ಮಾಡಲಾಗಿದೆ ಎಂಬ ಬಗ್ಗೆ ಕಂಪನಿಯು ಯಾವುದೇ ವಿವರಣೆಯನ್ನು ನೀಡಿಲ್ಲ.
MOSTREAD: ಟ್ರ್ಯಾಕ್ಟರ್ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್ಗಳಿರಲು ಕಾರಣಗಳಿವು

ಟೆಸ್ಲಾ ಕಂಪನಿಯು ತನ್ನ ಹೊಸ ಕಾರುಗಳ ಮೇಲೆ ಎರಡರಿಂದ ನಾಲ್ಕು ವರ್ಷಗಳ ವಾರಂಟಿ ನೀಡುತ್ತದೆ. ಅದರಂತೆ ಕಂಪನಿಯು ತನ್ನ ಸೆಕೆಂಡ್ ಹ್ಯಾಂಡ್ ಕಾರುಗಳಾದ ಮಾಡೆಲ್ ಎಸ್ ಹಾಗೂ ಮಾಡೆಲ್ ಎಕ್ಸ್ ಕಾರುಗಳ ಮೇಲೂ ಎರಡರಿಂದ ನಾಲ್ಕು ವರ್ಷಗಳ ವಾರಂಟಿ ನೀಡುತ್ತಿತ್ತು.

ಇನ್ನು ಮುಂದೆ ಸೆಕೆಂಡ್ ಹ್ಯಾಂಡ್ ಕಾರುಗಳ ಮೇಲೆ ಗರಿಷ್ಠ ವಾರಂಟಿಯನ್ನು ನೀಡುವುದಿಲ್ಲವೆಂದು ಟೆಸ್ಲಾ ಕಂಪನಿ ಹೇಳಿದೆ. ಇನ್ನು ಮುಂದೆ ಸೆಕೆಂಡ್ ಹ್ಯಾಂಡ್ ಕಾರುಗಳಿಗೆ ಕೇವಲ ಒಂದು ವರ್ಷ ಅಥವಾ 10 ಸಾವಿರ ಕಿ.ಮೀಗಳ ವಾರಂಟಿ ನೀಡುವುದಾಗಿ ತಿಳಿಸಿದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಟೆಸ್ಲಾ ಕಂಪನಿಯ ಈ ಕ್ರಮದಿಂದ ಗ್ರಾಹಕರು ಆಘಾತಕ್ಕೊಳಗಾಗಿದ್ದಾರೆ. ಈ ಕಾರಣಕ್ಕೆ ಇನ್ನು ಮುಂದೆ ಟೆಸ್ಲಾ ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಲು ಗ್ರಾಹಕರು ಹಿಂದೇಟು ಹಾಕಬಹುದು ಎಂದು ಹೇಳಲಾಗಿದೆ.

ಟೆಸ್ಲಾ ಬೆರಳೆಣಿಕೆಯಷ್ಟು ದೇಶಗಳಲ್ಲಿ ಮಾತ್ರ ಕಾರ್ಯನಿರ್ವಹಿಸುತ್ತಿದೆ. ಟೆಸ್ಲಾ ಕಂಪನಿಯು ಚೀನಾದಲ್ಲಿಯೂ ಇದೇ ರೀತಿಯ ಘೋಷಣೆ ಮಾಡಿದೆ. ಚೀನಾದಲ್ಲಿ ವಾರಂಟಿ ಅವಧಿಯನ್ನು ಒಂದು ವರ್ಷ ಅಥವಾ 20,000 ಕಿ.ಮೀಗಳಿಗೆ ಸೀಮಿತಗೊಳಿಸಲಾಗಿದೆ.
MOSTREAD: ಲಾಕ್ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಟೆಸ್ಲಾ ತನ್ನ ವಿಶೇಷ ಸೇವೆಗಳನ್ನು ಹಠಾತ್ತನೆ ನಿಲ್ಲಿಸುತ್ತಿರುವುದು ಇದೇ ಮೊದಲ ಬಾರಿಯಲ್ಲ. ಈ ಹಿಂದೆ, ಹೊಸದಾಗಿ ಟೆಸ್ಲಾ ಎಲೆಕ್ಟ್ರಿಕ್ ಕಾರನ್ನು ಖರೀದಿಸುವವರು ಕಾರು ಇಷ್ಟವಾಗದಿದ್ದರೆ ಏಳು ದಿನಗಳಲ್ಲಿ ಹಿಂದಿರುಗಿಸುವ ಯೋಜನೆಯನ್ನು ನೀಡುತ್ತಿತ್ತು. ಕಾರು ಹಿಂದಿರುಗಿಸುವ ಗ್ರಾಹಕರಿಗೆ ಪೂರ್ತಿ ಹಣವನ್ನು ಮರುಪಾವತಿ ಮಾಡಲಾಗುತ್ತಿತ್ತು.

ಆದರೆ ಈ ಯೋಜನೆಯನ್ನು ಸಹ ಯಾವುದೇ ಕಾರಣ ನೀಡದೇ ರದ್ದುಪಡಿಸಲಾಗಿದೆ. ಈಗ ಹೊಸ ಟೆಸ್ಲಾ ಎಲೆಕ್ಟ್ರಿಕ್ ಕಾರನ್ನು ಹಿಂದಿರುಗಿಸಲು ಬಯಸಿದರೆ ಗ್ರಾಹಕ ಸೇವಾ ಅಧಿಕಾರಿಯನ್ನು ಸಂಪರ್ಕಿಸಬೇಕಾಗಿದೆ. ಅಲ್ಲಿ ಗ್ರಾಹಕರಿಗೆ ಯಾವ ರೀತಿಯ ಮಾರ್ಗಸೂಚಿಗಳನ್ನು ನೀಡಲಾಗುತ್ತದೆ ಎಂಬುದರ ಕುರಿತು ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಟೆಸ್ಲಾ ಕಂಪನಿಯು ಕಳೆದ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ 1,12,000 ಯುನಿಟ್ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದರೆ, ಈ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ 1,39,300 ಯುನಿಟ್ ಗಳನ್ನು ಮಾರಾಟ ಮಾಡಿದೆ.

ಟೆಸ್ಲಾ ಕಂಪನಿಯು ಭಾರತದಲ್ಲಿ ಇನ್ನೂ ಸಹ ತನ್ನ ಮಾರಾಟವನ್ನು ಆರಂಭಿಸಿಲ್ಲ. ಕಂಪನಿಯು ತನ್ನ ಸಂಶೋಧನಾ ಕೇಂದ್ರವನ್ನು ಬೆಂಗಳೂರಿನಲ್ಲಿ ಆರಂಭಿಸಲು ಯೋಜಿಸಿರುವ ಬಗ್ಗೆ ಇತ್ತೀಚೆಗೆ ವರದಿಯಾಗಿತ್ತು.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಮಹಾರಾಷ್ಟ್ರ ರಾಜ್ಯ ಸರ್ಕಾರವು ಉತ್ಪಾದನಾ ಘಟಕವನ್ನು ಮಹಾರಾಷ್ಟ್ರದಲ್ಲಿ ಆರಂಭಿಸುವಂತೆ ಟೆಸ್ಲಾ ಕಂಪನಿಗೆ ಆಹ್ವಾನ ನೀಡಿದೆ. ಈ ಕಾರಣಗಳಿಂದಾಗಿ ಟೆಸ್ಲಾ ಕಂಪನಿಯು ಶೀಘ್ರದಲ್ಲೇ ತನ್ನ ಎಲೆಕ್ಟ್ರಿಕ್ ಕಾರುಗಳನ್ನು ಭಾರತದಲ್ಲಿ ಬಿಡುಗಡೆಗೊಳಿಸುವ ನಿರೀಕ್ಷೆಗಳಿವೆ.