ಭಾರತದಲ್ಲಿ ಶೀಘ್ರದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರು ಬಿಡುಗಡೆಯ ಸುಳಿವು ನೀಡಿದ ಟೆಸ್ಲಾ

ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ಭಾರತ ಸೇರಿದಂತೆ ವಿಶ್ವಾದ್ಯಂತ ಬಹುತೇಕ ರಾಷ್ಟ್ರಗಳಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ನಿಟ್ಟಿನಲ್ಲಿ ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ಹಲವು ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳು ಮಾರುಕಟ್ಟೆ ಪ್ರವೇಶಿಸುತ್ತಿವೆ.

ಮಾಡೆಲ್ 3 ಎಲೆಕ್ಟ್ರಿಕ್ ಕಾರು ಬಿಡುಗಡೆಯ ಸುಳಿವು ನೀಡಿದ ಟೆಸ್ಲಾ

ಐಷಾರಾಮಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ಜನಪ್ರಿಯತೆ ಸಾಧಿಸಿರುವ ಅಮೆರಿಕದ ದೈತ್ಯ ಆಟೋ ಉತ್ಪಾದನಾ ಸಂಸ್ಥೆಯಾಗಿರುವ ಟೆಸ್ಲಾ ಕೂಡಾ ಮುಂದಿನ ಕೆಲವೇ ದಿನಗಳಲ್ಲಿ ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ತನ್ನ ಎಲೆಕ್ಟ್ರಿಕ್ ವಾಹನ ಮಾರಾಟ ಜಾಲವನ್ನು ವಿಸ್ತರಣೆ ಮಾಡಲು ಮುಂದಾಗಿದ್ದು, ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಭಾರತದಲ್ಲೂ ಹೊಸ ಕಾರುಗಳನ್ನು ಪರಿಚಯಿಸಲು ಉತ್ಸುಕವಾಗಿದೆ.

ಮಾಡೆಲ್ 3 ಎಲೆಕ್ಟ್ರಿಕ್ ಕಾರು ಬಿಡುಗಡೆಯ ಸುಳಿವು ನೀಡಿದ ಟೆಸ್ಲಾ

ಮಾಲಿನ್ಯವನ್ನು ತಗ್ಗಿಸಲು ಮತ್ತು ಪರಿಸರಕ್ಕೆ ಪೂರಕವಾದ ಎಲೆಕ್ಟ್ರಿಕ್ ಕಾರುಗಳ ಬಳಕೆಯನ್ನು ಉತ್ತೇಜಿಸಲು ವಿಶ್ವದ ಬಹುತೇಕ ರಾಷ್ಟ್ರಗಳು ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು, ಭಾರತ ಸರ್ಕಾರ ಕೂಡಾ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಂಸ್ಥೆಗಳಿಗೆ ಮತ್ತು ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೆ ಗರಿಷ್ಠ ಮಟ್ಟದ ಸಬ್ಸಡಿ, ಜಿಎಸ್‌ಟಿ ಇಳಿಕೆ ಮತ್ತು ತೆರಿಗೆ ವಿನಾಯ್ತಿಗಳನ್ನು ಘೋಷಣೆ ಮಾಡಿರುವುದು ಭಾರೀ ಬದಲಾವಣೆ ಕಾರಣವಾಗಿದೆ.

ಮಾಡೆಲ್ 3 ಎಲೆಕ್ಟ್ರಿಕ್ ಕಾರು ಬಿಡುಗಡೆಯ ಸುಳಿವು ನೀಡಿದ ಟೆಸ್ಲಾ

ಹೀಗಾಗಿ ಭಾರತದಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ತಮ್ಮ ಬಹುನೀರಿಕ್ಷಿತ ಇವಿ ವಾಹನಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಜಾಗತಿಕ ಮನ್ನಣೆ ಪಡೆದಿರುವ ಟೆಸ್ಲಾ ಕೂಡಾ ಭಾರತದತ್ತ ಮುಖಮಾಡಿದೆ.

ಮಾಡೆಲ್ 3 ಎಲೆಕ್ಟ್ರಿಕ್ ಕಾರು ಬಿಡುಗಡೆಯ ಸುಳಿವು ನೀಡಿದ ಟೆಸ್ಲಾ

2015ರಿಂದಲೇ ಎಲೆಕ್ಟ್ರಿಕ್ ವಾಹನ ಉತ್ಪಾದನೆಯಲ್ಲಿ ಹೊಸ ಹೊಸ ಆವಿಷ್ಕಾರ ಮತ್ತು ಸಂಶೋಧನೆಗಳನ್ನು ನಡೆಸುತ್ತಿರುವ ಟೆಸ್ಲಾ ಸಂಸ್ಥೆಯು ಕಳೆದ 2017ರಲ್ಲಿ ತನ್ನ ಮೊದಲ ಕಾರು ಮಾದರಿಯಾದ ಮಾಡೆಲ್ 3 ಮತ್ತು ಮಾಡೆಲ್ ಎಕ್ಸ್ ಕಾರುಗಳನ್ನು ಬಿಡುಗಡೆ ಮಾಡಿತ್ತು. ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭಾರೀ ಪ್ರಮಾಣದಲ್ಲಿ ಮಾರಾಟವಾಗಿರುವ ಟೆಸ್ಲಾ ಎಲೆಕ್ಟ್ರಿಕ್ ಕಾರುಗಳು ಹಲವಾರು ಐಷಾರಾಮಿ ಕಾರುಗಳನ್ನು ಹಿಂದಿಕ್ಕಿದೆ.

ಮಾಡೆಲ್ 3 ಎಲೆಕ್ಟ್ರಿಕ್ ಕಾರು ಬಿಡುಗಡೆಯ ಸುಳಿವು ನೀಡಿದ ಟೆಸ್ಲಾ

ಅತ್ಯುತ್ತಮ ದರ್ಜೆಯ ಬ್ಯಾಟರಿ ಸೌಲಭ್ಯ ಮತ್ತು ಡಿಸಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯದಿಂದಾಗಿ ಹೊಸ ಕಾರುಗಳು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ನೀರಿಕ್ಷೆಗೂ ಬೇಡಿಕೆ ಪಡೆದುಕೊಂಡಿದ್ದಲ್ಲದೇ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರ ಸ್ಥಾನ ಕಾಯ್ದುಕೊಂಡಿದೆ.

ಮಾಡೆಲ್ 3 ಎಲೆಕ್ಟ್ರಿಕ್ ಕಾರು ಬಿಡುಗಡೆಯ ಸುಳಿವು ನೀಡಿದ ಟೆಸ್ಲಾ

ಕೇವಲ ಅಮೆರಿಕದಲ್ಲಿ ಮಾತ್ರವಲ್ಲ ವಿದೇಶಿ ಮಾರುಕಟ್ಟೆಗಳಿಗೂ ಅತಿ ಹೆಚ್ಚು ರಫ್ತುಗೊಳ್ಳುವ ಎಲೆಕ್ಟ್ರಿಕ್ ಕಾರು ಮಾದರಿಯಾಗಿರುವ ಟೆಸ್ಲಾ ಮಾಡೆಲ್ 3 ಮತ್ತು ಮಾಡೆಲ್ ಎಕ್ಸ್ ಕಾರುಗಳು ಪ್ರತಿ ಚಾರ್ಜ್‌ಗೆ 300 ಕಿ.ಮಿ ನಿಂದ 480 ಕಿ.ಮಿ ಮೈಲೇಜ್ ರೇಂಜ್ ಪಡೆದುಕೊಂಡಿವೆ. ಹೀಗಾಗಿ ಭಾರತೀಯ ಮಾರುಕಟ್ಟೆಯಲ್ಲೂ ಟೆಸ್ಲಾ ಕಾರುಗಳನ್ನು ದುಬಾರಿ ಬೆಲೆಯೊಂದಿಗೆ ಆಮದು ಮಾಡಿಕೊಳ್ಳಲಾಗುತ್ತಿದ್ದು, ಇದೀಗ ಟೆಸ್ಲಾ ಕಂಪನಿಯೇ ಭಾರತದಲ್ಲಿ ಅಧಿಕೃತ ಮಾರುಕಟ್ಟೆ ಪ್ರವೇಶಿಸುತ್ತಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಮಾಡೆಲ್ 3 ಎಲೆಕ್ಟ್ರಿಕ್ ಕಾರು ಬಿಡುಗಡೆಯ ಸುಳಿವು ನೀಡಿದ ಟೆಸ್ಲಾ

ಹೊಸ ಕಾರುಗಳನ್ನು ಭಾರತದಲ್ಲಿ ಬಿಡುಗಡೆ ಕುರಿತಂತೆ ಗ್ರಾಹಕರ ಪ್ರಶ್ನೆಗಳಿಗೆ ಪ್ರಕ್ರಿಯೆಸಿರುವ ಟೆಸ್ಲಾ ಕಂಪನಿಯು 2020ರ ಕೊನೆಯಲ್ಲಿ ಬಿಡುಗಡೆಗೊಳಿಸುವ ಸುಳಿವು ನೀಡಿದ್ದು, ಟೆಸ್ಲಾ ಹೊಸ ಕಾರುಗಳು ಐಷಾರಾಮಿ ಕಾರು ವಿಭಾಗದಲ್ಲಿ ಹೊಸ ಸಂಚಲನ ಸೃಷ್ಠಿಸಲಿವೆ.

ಮಾಡೆಲ್ 3 ಎಲೆಕ್ಟ್ರಿಕ್ ಕಾರು ಬಿಡುಗಡೆಯ ಸುಳಿವು ನೀಡಿದ ಟೆಸ್ಲಾ

ಇನ್ನು ಟೆಸ್ಲಾ ಕಂಪನಿಯು ಕಳೆದ ದಿನಗಳ ಹಿಂದೆ ಬಿಡುಗಡೆಗೊಳಿಸಿರುವ ಹೊಚ್ಚ ಹೊಸ ಮಾಡೆಲ್ ವೈ ಎಲೆಕ್ಟ್ರಿಕ್ ಸೆಡಾನ್ ಕೂಡಾ ಸಾಕಷ್ಟು ಸದ್ದು ಮಾಡುತ್ತಿದ್ದು, ಸಿಂಗಲ್ ಚಾರ್ಜ್‌ನಲ್ಲಿ 400ಕಿ.ಮಿ ಮೈಲೇಜ್ ರೇಂಜ್‌ನೊಂದಿಗೆ ಎಲೆಕ್ಟ್ರಿಕ್ ಕಾರು ಪ್ರಿಯರ ಆಕರ್ಷಣೆಗೆ ಕಾರಣವಾಗಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಮಾಡೆಲ್ 3 ಎಲೆಕ್ಟ್ರಿಕ್ ಕಾರು ಬಿಡುಗಡೆಯ ಸುಳಿವು ನೀಡಿದ ಟೆಸ್ಲಾ

ಭಾರತೀಯ ಬೆಲೆಗಳ ಪ್ರಕಾರ ರೂ. 33 ಲಕ್ಷದಿಂದ ರೂ.40 ಲಕ್ಷ ಬೆಲೆ ಹೊಂದಿರುವ ಮಾಡೆಲ್ 3 ಮತ್ತು ಮಾಡೆಲ್ ವೈ ಎಲೆಕ್ಟ್ರಿಕ್ ಕಾರು ಐಷಾರಾಮಿ ಕಾರುಗಳ ವಿಭಾಗದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಲಿದ್ದು, ಭಾರತೀಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಅಭಿವೃದ್ಧಿಗೊಳಿಸಲು ಬಗ್ಗೆ ಟೆಸ್ಲಾ ಚಿಂತನೆ ನಡೆಸಿದೆ.

More from DriveSpark

Article Published On: Saturday, July 11, 2020, 18:30 [IST]
English summary
Tesla Model 3 Likely To Launch In The Indian Market Soon. Read in Kannada.
Read more on ಟೆಸ್ಲಾ tesla
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+