ಭಾರತದಲ್ಲಿ ಟೆಸ್ಲಾ ಎಲೆಕ್ಟ್ರಿಕ್ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಸಿಹಿಸುದ್ದಿ

ವಿಶ್ವಾದ್ಯಂತ ಬಹುತೇಕ ರಾಷ್ಟ್ರಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ಹಲವು ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳು ಗ್ರಾಹಕರನ್ನು ಆಕರ್ಷಿಸುತ್ತಿವೆ.

ಟೆಸ್ಲಾ ಎಲೆಕ್ಟ್ರಿಕ್ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಸಿಹಿಸುದ್ದಿ ನೀಡಿದ ಎಲಾನ್ ಮಸ್ಕ್

ಐಷಾರಾಮಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ಜನಪ್ರಿಯತೆ ಸಾಧಿಸಿರುವ ಅಮೆರಿಕದ ದೈತ್ಯ ಆಟೋ ಉತ್ಪಾದನಾ ಕಂಪನಿಯಾದ ಟೆಸ್ಲಾ ಕೂಡಾ ಮುಂದಿನ ಕೆಲವೇ ದಿನಗಳಲ್ಲಿ ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ತನ್ನ ಎಲೆಕ್ಟ್ರಿಕ್ ವಾಹನ ಮಾರಾಟ ಜಾಲವನ್ನು ವಿಸ್ತರಿಸುವ ಯೋಜನೆಯಲ್ಲಿದ್ದು, ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಭಾರತದಲ್ಲೂ ಕೂಡಾ ಹೊಸ ಕಾರುಗಳನ್ನು ಪರಿಚಯಿಸಲು ಸಿದ್ದತೆ ನಡೆಸಿದೆ.

ಟೆಸ್ಲಾ ಎಲೆಕ್ಟ್ರಿಕ್ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಸಿಹಿಸುದ್ದಿ ನೀಡಿದ ಎಲಾನ್ ಮಸ್ಕ್

ಮಾಲಿನ್ಯವನ್ನು ತಗ್ಗಿಸಲು ಮತ್ತು ಪರಿಸರಕ್ಕೆ ಪೂರಕವಾದ ಎಲೆಕ್ಟ್ರಿಕ್ ಕಾರುಗಳ ಬಳಕೆಯನ್ನು ಉತ್ತೇಜಿಸಲು ವಿಶ್ವದ ಬಹುತೇಕ ರಾಷ್ಟ್ರಗಳು ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು, ಭಾರತ ಸರ್ಕಾರ ಕೂಡಾ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕಂಪನಿಗಳಿಗೆ ಮತ್ತು ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೆ ಗರಿಷ್ಠ ಮಟ್ಟದ ಸಬ್ಸಡಿ, ಜಿಎಸ್‌ಟಿ ಇಳಿಕೆ ಮತ್ತು ತೆರಿಗೆ ವಿನಾಯ್ತಿಗಳನ್ನು ಘೋಷಣೆ ಮಾಡಿರುವುದು ಭಾರೀ ಬದಲಾವಣೆ ಕಾರಣವಾಗಿದೆ.

ಟೆಸ್ಲಾ ಎಲೆಕ್ಟ್ರಿಕ್ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಸಿಹಿಸುದ್ದಿ ನೀಡಿದ ಎಲಾನ್ ಮಸ್ಕ್

ಹೀಗಾಗಿ ಭಾರತದಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಹಲವು ಆಟೋ ಉತ್ಪಾದನಾ ಕಂಪನಿಗಳು ತಮ್ಮ ಬಹುನೀರಿಕ್ಷಿತ ಇವಿ ವಾಹನ ಮಾದರಿಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಜಾಗತಿಕ ಮನ್ನಣೆ ಪಡೆದಿರುವ ಟೆಸ್ಲಾ ಕೂಡಾ ಭಾರತದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಟೆಸ್ಲಾ ಎಲೆಕ್ಟ್ರಿಕ್ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಸಿಹಿಸುದ್ದಿ ನೀಡಿದ ಎಲಾನ್ ಮಸ್ಕ್

2015ರಿಂದಲೇ ಎಲೆಕ್ಟ್ರಿಕ್ ವಾಹನ ಉತ್ಪಾದನೆಯಲ್ಲಿ ಹೊಸ ಹೊಸ ಆವಿಷ್ಕಾರ ಮತ್ತು ಸಂಶೋಧನೆಗಳನ್ನು ನಡೆಸುತ್ತಿರುವ ಟೆಸ್ಲಾ ಸಂಸ್ಥೆಯು ಕಳೆದ 2017ರಲ್ಲಿ ತನ್ನ ಮೊದಲ ಇವಿ ಕಾರು ಮಾದರಿಯಾದ ಮಾಡೆಲ್ 3 ಮತ್ತು ಮಾಡೆಲ್ ಎಕ್ಸ್ ಕಾರುಗಳನ್ನು ಬಿಡುಗಡೆ ಮಾಡಿತ್ತು. ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭಾರೀ ಪ್ರಮಾಣದಲ್ಲಿ ಮಾರಾಟವಾಗಿರುವ ಟೆಸ್ಲಾ ಹೊಸ ಎಲೆಕ್ಟ್ರಿಕ್ ಕಾರುಗಳು ಹಲವಾರು ಐಷಾರಾಮಿ ಕಾರುಗಳ ಮಾರಾಟವನ್ನು ಹಿಂದಿಕ್ಕಿದೆ.

ಟೆಸ್ಲಾ ಎಲೆಕ್ಟ್ರಿಕ್ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಸಿಹಿಸುದ್ದಿ ನೀಡಿದ ಎಲಾನ್ ಮಸ್ಕ್

ಅತ್ಯುತ್ತಮ ದರ್ಜೆಯ ಬ್ಯಾಟರಿ ಸೌಲಭ್ಯ ಮತ್ತು ಡಿಸಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯದಿಂದಾಗಿ ಹೊಸ ಕಾರುಗಳು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಂಡಿದ್ದಲ್ಲದೇ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರ ಸ್ಥಾನ ಕಾಯ್ದುಕೊಂಡಿದೆ.

ಟೆಸ್ಲಾ ಎಲೆಕ್ಟ್ರಿಕ್ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಸಿಹಿಸುದ್ದಿ ನೀಡಿದ ಎಲಾನ್ ಮಸ್ಕ್

ಕೇವಲ ಅಮೆರಿಕದಲ್ಲಿ ಮಾತ್ರವಲ್ಲ ವಿದೇಶಿ ಮಾರುಕಟ್ಟೆಗಳಿಗೂ ಅತಿ ಹೆಚ್ಚು ರಫ್ತುಗೊಳ್ಳುವ ಎಲೆಕ್ಟ್ರಿಕ್ ಕಾರು ಮಾದರಿಯಾಗಿರುವ ಟೆಸ್ಲಾ ಮಾಡೆಲ್ 3 ಮತ್ತು ಮಾಡೆಲ್ ಎಕ್ಸ್ ಕಾರುಗಳು ಪ್ರತಿ ಚಾರ್ಜ್‌ಗೆ 300 ಕಿ.ಮಿ ನಿಂದ 480 ಕಿ.ಮಿ ಮೈಲೇಜ್ ರೇಂಜ್ ಪಡೆದುಕೊಂಡಿವೆ. ಹೀಗಾಗಿ ಭಾರತೀಯ ಮಾರುಕಟ್ಟೆಯಲ್ಲೂ ಟೆಸ್ಲಾ ಎಲೆಕ್ಟ್ರಿಕ್ ಕಾರುಗಳಿಗೆ ಉತ್ತಮ ಬೇಡಿಕೆ ಹರಿದು ಬರುತ್ತಿದ್ದು, ಆಮದು ಪ್ರಮಾಣದ ಹೆಚ್ಚಾದ ಹಿನ್ನಲೆಯಲ್ಲಿ ಟೆಸ್ಲಾ ಕಂಪನಿಯೇ ಭಾರತದಲ್ಲಿ ಅಧಿಕೃತವಾಗಿ ಮಾರಾಟ ಪ್ರಕ್ರಿಯೆ ಆರಂಭಿಸುತ್ತಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಟೆಸ್ಲಾ ಎಲೆಕ್ಟ್ರಿಕ್ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಸಿಹಿಸುದ್ದಿ ನೀಡಿದ ಎಲಾನ್ ಮಸ್ಕ್

ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಭಾರತದಲ್ಲಿ ಬಿಡುಗಡೆ ಕುರಿತಂತೆ ಖಚಿತ ಮಾಹಿತಿ ಹಂಚಿಕೊಂಡಿರುವ ಟೆಸ್ಲಾ ಸಿಇಒ ಎಲಾನ್ ಮಸ್ಕ್ ಅವರು 2021ಕ್ಕೆ ಹೊಸ ಇವಿ ಕಾರು ಬಿಡುಗಡೆ ಮಾಡುವ ಸುಳಿವು ನೀಡಿದ್ದು, ಶೀಘ್ರದಲ್ಲೇ ಅಧಿಕೃತ ವೆಬ್‌ಸೈಟ್ ಮೂಲಕ ಬುಕ್ಕಿಂಗ್ ಪ್ರಕ್ರಿಯೆಯನ್ನು ಆರಂಭಿಸುವುದಾಗಿ ಟೆಸ್ಲಾ ಇಂಡಿಯಾ ಕ್ಲಬ್ ಫ್ಯಾನ್ಸ್ ಪೇಜ್‌ಗೆ ಪ್ರತಿಕ್ರಿಯಿಸಿದ್ದಾರೆ.

ಟೆಸ್ಲಾ ಎಲೆಕ್ಟ್ರಿಕ್ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಸಿಹಿಸುದ್ದಿ ನೀಡಿದ ಎಲಾನ್ ಮಸ್ಕ್

ಜೊತೆಗೆ ನಮ್ಮ ಬೆಂಗಳೂರಿನಲ್ಲಿ ಟೆಸ್ಲಾ ರಿಸರ್ಚ್ ಸೆಂಟರ್ ಆರಂಭಿಸಲು ಕರ್ನಾಟಕ ಸರ್ಕಾರದೊಂದಿಗೆ ಜೊತೆ ವಿವಿಧ ಹಂತದ ಚರ್ಚೆ ನಡೆಸಲಾಗಿದ್ದು, ಮಾತುಕತೆ ಯಶಸ್ವಿಯಾದಲ್ಲಿ ಟೆಸ್ಲಾ ಕಂಪನಿಯ ಎರಡನೇ ಸಂಶೋಧನಾ ಮತ್ತು ಅಭಿವೃದ್ದಿ ಕೇಂದ್ರವು ಭಾರತದ ಪಾಲಾಗಲಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಟೆಸ್ಲಾ ಎಲೆಕ್ಟ್ರಿಕ್ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಸಿಹಿಸುದ್ದಿ ನೀಡಿದ ಎಲಾನ್ ಮಸ್ಕ್

ಬೆಂಗಳೂರಿನಲ್ಲಿ ಈಗಾಗಲೇ ಜಾಗತಿಕ ಕಂಪನಿಗಳಾದ ಡೈಮ್ಲರ್, ಬಾಷ್ ಮತ್ತು ಮಹೀಂದ್ರಾ ಎಲೆಕ್ಟ್ರಿಕ್ ಕಂಪನಿಗಳ ಸಂಶೋಧನಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಹಲವು ಇವಿ ಸ್ಟಾರ್ಟ್ ಕಂಪನಿಗಳು ಬೆಂಗಳೂರಿನಲ್ಲಿಯೇ ನೆಲೆಯೂರಿವೆ. ಹೀಗಾಗಿ ಟೆಸ್ಲಾ ಕೂಡಾ ತನ್ನ ರಿಸರ್ಚ್ ಸೆಂಟರ್ ಅನ್ನು ಬೆಂಗಳೂರಿನಲ್ಲಿಯೇ ತೆರೆಯುವ ಸಿದ್ದತೆಯಲ್ಲಿದ್ದು, ಭಾರತದಲ್ಲಿ ಕಾರ್ಯಾಚರಣೆ ಕುರಿತು ಶೀಘ್ರದಲ್ಲೇ ಮತ್ತಷ್ಟು ಮಾಹಿತಿಗಳು ಲಭ್ಯವಾಗಲಿವೆ.

Most Read Articles

Kannada
Read more on ಟೆಸ್ಲಾ tesla
English summary
Tesla is planning to add booking order configurator for India by January, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X