ಹೊಸ ಬದಲಾವಣೆಯೊಂದಿಗೆ ಬಿಡುಗಡೆಗೆ ಸಿದ್ದವಾದ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್

ಎಂಜಿ ಮೋಟಾರ್ ಕಂಪನಿಯು ಶೀಘ್ರದಲ್ಲೇ ತನ್ನ ಜನಪ್ರಿಯ ಕಾರು ಮಾದರಿಯಾದ ಹೆಕ್ಟರ್ ಆವೃತ್ತಿಯಲ್ಲಿ ಫೇಸ್‌ಲಿಫ್ಟ್ ಮಾದರಿಯನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಫೇಸ್‌ಲಿಫ್ಟ್ ಕಾರು ಮಾದರಿಯು ಹಲವಾರು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಹೊಸ ಬದಲಾವಣೆಯೊಂದಿಗೆ ಬಿಡುಗಡೆಗೆ ಸಿದ್ದವಾದ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್

2019ರಲ್ಲಿ ಮೊದಲ ಬಾರಿಗೆ ಬಿಡುಗಡೆಯಾಗಿದ್ದ ಹೆಕ್ಟರ್ ಎಸ್‌ಯುವಿ ಮಾದರಿಯು ಈ ವರ್ಷದ ಆರಂಭದಲ್ಲಿ ಬಿಎಸ್-6 ಎಂಜಿನ್‌ನೊಂದಿಗೆ ಉನ್ನತೀಕರಣಗೊಂಡಿತ್ತು. ಬಿಎಸ್-6 ಎಂಜಿನ್‍‌ನೊಂದಿಗೆ ಬಿಡುಗಡೆಗೊಂಡ ನಂತರ ಯಾವುದೇ ತಾಂತ್ರಿಕ ಅಂಶಗಳನ್ನು ಬದಲಾವಣೆ ಮಾಡಲಾಗಿಲ್ಲ. ಇದೀಗ ಬಿಡುಗಡೆಗೆ ಸಿದ್ದವಾಗಿರುವ ಫೇಸ್‌ಲಿಫ್ಟ್ ಆವೃತ್ತಿಯು ಬಿಎಸ್-6 ಎಂಜಿನ್‌ನೊಂದಿಗೆ ಹೊರ ವಿನ್ಯಾಸದಲ್ಲಿ ಮಹತ್ವದ ಬದಲಾವಣೆ ಪಡೆದುಕೊಳ್ಳುತ್ತಿದೆ.

ಹೊಸ ಬದಲಾವಣೆಯೊಂದಿಗೆ ಬಿಡುಗಡೆಗೆ ಸಿದ್ದವಾದ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್

ಎಂಜಿ ಮೋಟಾರ್ ಕಂಪನಿಯು ಹೆಕ್ಟರ್ ಫೇಸ್‌ಲಿಫ್ಟ್ ಕಾರು ಮಾದರಿಯನ್ನು ಮುಂದಿನ ತಿಂಗಳು ಸಂಕ್ರಾಂತಿ ವೇಳೆಗೆ ಬಿಡುಗಡೆ ಮಾಡಬಹುದು ಎನ್ನಲಾಗಿದ್ದು, ಇತ್ತೀಚೆಗೆ ಹೊಸ ಕಾರು ಟಿವಿ ಜಾಹೀರಾತಿಗಾಗಿ ಚಿತ್ರೀಕರಣದಲ್ಲೂ ಭಾಗಿಯಾಗುವ ಮೂಲಕ ಗಮನಸೆಳೆದಿತ್ತು.

ಹೊಸ ಬದಲಾವಣೆಯೊಂದಿಗೆ ಬಿಡುಗಡೆಗೆ ಸಿದ್ದವಾದ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್

ಫೇಸ್‌ಲಿಫ್ಟ್ ಮಾದರಿಯಲ್ಲಿ ಹೆಕ್ಟರ್ ಪ್ಲಸ್‌ ಮಾದರಿಯಿಂದ ಎರವಲು ಪಡೆದುಕೊಳ್ಳಲಾದ ಕೆಲವು ಹೆಚ್ಚುವರಿ ತಾಂತ್ರಿಕ ಅಂಶಗಳನ್ನು ಎರವಲು ಪಡೆಯಲಾಗಿದ್ದು, ಜೊತೆಗೆ ಯುಎಸ್ಎದಲ್ಲಿ ಮಾರಾಟವಾಗುತ್ತಿರುವ ಷವರ್ಲೆ ಕಾಪ್ಟಿವಿಯಾದಲ್ಲಿರುವಂತೆ ಹೊರ ವಿನ್ಯಾಸವನ್ನು ಹೊಂದಿದೆ.

ಹೊಸ ಬದಲಾವಣೆಯೊಂದಿಗೆ ಬಿಡುಗಡೆಗೆ ಸಿದ್ದವಾದ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್

ಷವರ್ಲೆ ಕಾಪ್ಟಿವಿಯಾ ಎಸ್‌ಯುವಿ ಕಾರು ಎಂಜಿ ಹೆಕ್ಟರ್ ಕಾರಿನ ರೀಬ್ಯಾಡ್ಜ್ ಆವೃತ್ತಿಯಾಗಿ ಮಾರಾಟಗೊಳ್ಳುತ್ತಿದ್ದು, ಹೆಕ್ಟರ್ ಫೇಸ್‌ಲಿಫ್ಟ್‌ನಲ್ಲಿ ಸ್ಟ್ಯಾಂಡರ್ಡ್ ಆಗಿ ಹೊಸ ವಿನ್ಯಾಸದ 18-ಇಂಚಿನ ಅಲಾಯ್ ವೀಲ್ಹ್, ಆಟೋ ಡಿಮ್ಮಿಂಗ್ ರಿಯಲ್ ವ್ಯೂ ಮಿರರ್ ನೀಡಲಾಗಿದೆ. ಹಾಗೆಯೇ ಫೇಸ್‌ಲಿಫ್ಟ್ ಮಾದರಿಯಲ್ಲಿ ಹೊಸದಾಗಿ ಮರುವಿನ್ಯಾಸಗೊಳಿಸಲಾದ ಗ್ರಿಲ್ ಮತ್ತು ಡ್ಯುಯಲ್ ಕಲರ್ ಇಂಟಿರಿಯರ್ ಸಹ ನೀಡಲಾಗಿದ್ದು, ವಿನ್ಯಾಸದಲ್ಲಿನ ಬದಲಾವಣೆ ಹೊರತುಪಡಿಸಿ ಎಂಜಿನ್ ಆಯ್ಕೆಯಲ್ಲಿ ಬಿಎಸ್-6 ಮಾದರಿಯಲ್ಲಿರುವಂತೆಯೇ ಮುಂದುವರಿಸಲಾಗಿದೆ.

ಹೊಸ ಬದಲಾವಣೆಯೊಂದಿಗೆ ಬಿಡುಗಡೆಗೆ ಸಿದ್ದವಾದ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್

ಈ ಮೂಲಕ ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾರಾಟದಲ್ಲಿ ಸದ್ಯ ತನ್ನದೆ ಆದ ಜನಪ್ರಿಯತೆ ಹೊಂದಿರುವ ಎಂಜಿ ಹೆಕ್ಟರ್ ಕಾರು ಮಾದರಿಯು ಫೇಸ್‌ಲಿಫ್ಟ್ ಮಾದರಿಯೊಂದಿಗೆ ಮತ್ತಷ್ಟು ಗ್ರಾಹಕರನ್ನು ಆಕರ್ಷಣೆ ಮಾಡುವ ತವಕದಲ್ಲಿದೆ.

ಹೊಸ ಬದಲಾವಣೆಯೊಂದಿಗೆ ಬಿಡುಗಡೆಗೆ ಸಿದ್ದವಾದ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್

ಫೇಸ್‌ಲಿಫ್ಟ್ ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವಂತೆ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ಅತ್ಯುತ್ತಮ ಬೆಲೆಯೊಂದಿಗೆ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ಹೊಸ ಬದಲಾವಣೆಯೊಂದಿಗೆ ಬಿಡುಗಡೆಗೆ ಸಿದ್ದವಾದ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್

ಹೆಕ್ಟರ್ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.84 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.18.09 ಲಕ್ಷ ಬೆಲೆ ಹೊಂದಿದ್ದು, ಕಳೆದ ಕೆಲ ದಿನಗಳ ಹಿಂದೆ ಹೆಕ್ಟರ್ ಕಾರಿನಲ್ಲಿ ಸ್ಪೆಷಲ್ ಎಡಿಷನ್ ಕೂಡಾ ಪರಿಚಯಿಸಲಾಗಿತ್ತು.

ಹೊಸ ಬದಲಾವಣೆಯೊಂದಿಗೆ ಬಿಡುಗಡೆಗೆ ಸಿದ್ದವಾದ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್

ಹೆಕ್ಟರ್ ಎಸ್‌ಯುವಿ ಬಿಡುಗಡೆ ಮಾಡಲಾದ ಮೊದಲ ವರ್ಷದ ಸಂಭ್ರಮಕ್ಕಾಗಿ ಸ್ಪೆಷಲ್ ಎಡಿಷನ್ ಬಿಡುಗಡೆಗೊಳಿಸಿದ್ದ ಎಂಜಿ ಮೋಟಾರ್ ಕಂಪನಿಯು ಈ ತಿಂಗಳಾಂತ್ಯದ ತನಕ ಮಾತ್ರ ಮಾರಾಟ ಮಾಡಲಿದ್ದು, ಫೇಸ್‌ಲಿಫ್ಟ್ ಬಿಡುಗಡೆಯ ನಂತರ ಸ್ಪೆಷಲ್ ಎಡಿಷನ್ ಮಾದರಿಯ ಮಾರಾಟವನ್ನು ಸ್ಥಗಿತಗೊಳಿಸಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹೊಸ ಬದಲಾವಣೆಯೊಂದಿಗೆ ಬಿಡುಗಡೆಗೆ ಸಿದ್ದವಾದ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್

ಸ್ಪೆಷಲ್ ಎಡಿಷನ್ ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲೂ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಪೆಟ್ರೋಲ್ ಮಾದರಿಯ ಬೆಲೆಯನ್ನು ರೂ.13.64 ಲಕ್ಷಕ್ಕೆ ಮತ್ತು ಡೀಸೆಲ್ ಮಾದರಿಯ ಬೆಲೆಯನ್ನು ರೂ.15 ಲಕ್ಷಕ್ಕೆ ನಿಗದಿಪಡಿಸಲಾಗಿದೆ.

ಹೊಸ ಬದಲಾವಣೆಯೊಂದಿಗೆ ಬಿಡುಗಡೆಗೆ ಸಿದ್ದವಾದ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್

ಸ್ಟ್ಯಾಂಡರ್ಡ್ ಸೂಪರ್ ವೆರಿಯೆಂಟ್‌ಗಿಂತಲೂ ಆನಿವರ್ಸರಿ ಎಡಿಷನ್ ಮಾದರಿಯಲ್ಲಿ ಯಾವುದೇ ಹೆಚ್ಚುವರಿ ಬೆಲೆ ಏರಿಕೆಯಿಲ್ಲದೆ ಕೆಲವು ಹೆಚ್ಚುವರಿ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಆನಿವರ್ಸರಿ ಎಡಿಷನ್ ಮಾದರಿಯು ಸೀಮಿತ ಅವಧಿಗೆ ಮಾತ್ರ ಖರೀದಿಗೆ ಲಭ್ಯವಿರಲಿವೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೊಸ ಬದಲಾವಣೆಯೊಂದಿಗೆ ಬಿಡುಗಡೆಗೆ ಸಿದ್ದವಾದ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್

ಆನಿವರ್ಸರಿ ಎಡಿಷನ್‌ನಲ್ಲಿ 10.3-ಇಂಚಿನ ಹೆಚ್‌ಡಿ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಡಿಸ್‌ಪ್ಲೇ, ವೈರ್‌ಲೆಸ್ ಚಾರ್ಜರ್, ಏರ್ ಪ್ಲೂರಿಫ್ಲೈರ್, ಮೆಡ್‌ಕಿನ್ ಕಿಟ್ ಅಳವಡಿಸಲಾಗಿದ್ದು, ಫೇಸ್‌ಲಿಫ್ಟ್ ಮಾದರಿಯ ನಂತರ ಸ್ಪೆಷಲ್ ಎಡಿಷನ್ ಮಾರಾಟವು ಸ್ಥಗಿತವಾಗಿ ಸ್ಟ್ಯಾಂಡರ್ಡ್ ಮಾದರಿಯ ಮಾರಾಟ ಮುಂದುವರಿಯಲಿದೆ.

More from DriveSpark

Article Published On: Friday, December 25, 2020, 15:27 [IST]
English summary
Things To Know About MG Hector Facelift SUV. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+