Just In
- 25 min ago
ಭಾರತದಲ್ಲಿ ಸೆಲ್ಟೊಸ್ ಫೇಸ್‌ಲಿಫ್ಟ್ ಆವೃತ್ತಿಯ ಬಿಡುಗಡೆಗಾಗಿ ಸಿದ್ದವಾದ ಕಿಯಾ ಮೋಟಾರ್ಸ್
- 10 hrs ago
ಕೋವಿಡ್ ವ್ಯಾಕ್ಸಿನ್ ಸಾಗಾಣಿಕೆಗಾಗಿ ಹೊಸ ಮಾದರಿಯ ಟ್ರಕ್ ಸಿದ್ದಪಡಿಸಿದ ಭಾರತ್ ಬೆಂಝ್
- 11 hrs ago
ಮೊದಲ ವರ್ಷದ ಸಂಭ್ರಮ- ಟಾಟಾ ನೆಕ್ಸಾನ್ ಇವಿ ಖರೀದಿ ಮೇಲೆ ಹೊಸ ಆಫರ್
- 12 hrs ago
ಸ್ಥಗಿತವಾಯ್ತು ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಮತ್ತು ಸ್ಟ್ರೀಟ್ ರಾಡ್ ಬೈಕುಗಳು
Don't Miss!
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- News
ಭಾರತದಿಂದ 2 ಮಿಲಿಯನ್ ಕೊರೊನಾವೈರಸ್ ಲಸಿಕೆ ಪಡೆದ ಬ್ರೆಜಿಲ್
- Lifestyle
"ಶನಿವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ "
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Sports
ಭಾರತ vs ಆಸೀಸ್: ಕಾಕತಾಳೀಯ, ಕುತೂಹಲಕಾರಿ ಅಂಕಿ-ಅಂಶಗಳು!
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪ್ರಮುಖ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ 2021ರ ಫೋರ್ಡ್ ಇಕೋಸ್ಪೋರ್ಟ್
ಕಂಪ್ಯಾಕ್ಟ್ ಎಸ್‌ಯುವಿ ಮಾರಾಟಾದಲ್ಲಿ ತೀವ್ರ ಪೈಪೋಟಿ ಎದುರಿಸುತ್ತಿರುವ ಇಕೋಸ್ಪೋರ್ಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಶೀಘ್ರದಲ್ಲೇ ಹಲವು ಹೊಸ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಫೇಸ್‌ಲಿಫ್ಟ್ ಆವೃತ್ತಿಯ ಮೂಲಕ ಗ್ರಾಹಕರ ಬೇಡಿಕೆಯಲ್ಲಿ ಮತ್ತೆ ಮುಂಚೂಣಿ ಸಾಧಿಸುವ ತವಕದಲ್ಲಿದೆ.

ಸಬ್ ಫೋರ್ ಮೀಟರ್ ವಿನ್ಯಾಸದ ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಕಳೆದ ಕೆಲ ವರ್ಷಗಳಲ್ಲಿ ಹಲವು ಹೊಸ ಕಾರು ಮಾದರಿಗಳು ಬಿಡುಗಡೆಗೊಂಡಿದ್ದು, ಇಕೋಸ್ಪೋರ್ಟ್ ಕಾರಿಗಿಂತಲೂ ಕಡಿಮೆ ಮತ್ತು ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ಭರ್ಜರಿ ಪೈಪೋಟಿ ನೀಡುತ್ತಿವೆ. ಆದರೆ ಇಕೋಸ್ಪೋರ್ಟ್ ಮಾದರಿಯಲ್ಲಿ ಕೆಲವು ಸಣ್ಣಪುಟ್ಟ ಬದಲಾವಣೆ ಹೊರತುಪಡಿಸಿ ಯಾವುದೇ ಪ್ರಮುಖ ಬದಲಾಣೆ ತರದ ಫೋರ್ಡ್ ಕಂಪನಿಯು ತೀವ್ರ ಹಿನ್ನಡೆ ಅನುಭವಿಸುತ್ತಿದೆ.

ಇದರಿಂದ ಫೇಸ್‌ಲಿಫ್ಟ್ ಮಾದರಿಯ ಮೂಲಕ ಗ್ರಾಹಕರ ಬೇಡಿಕೆಯಲ್ಲಿ ಹೊಸ ಬದಲಾವಣೆಯ ನೀರಿಕ್ಷೆಯಲ್ಲಿರುವ ಫೋರ್ಡ್ ಕಂಪನಿಯು ನ್ಯೂ ಜನರೇಷನ್ ಫೀಚರ್ಸ್‌ಗಳನ್ನು ಜೋಡಣೆ ಮಾಡಲು ನಿರ್ಧರಿಸಿದ್ದು, ಹೊಸ ಕಾರುನ್ನು ಮುಂಬರುವ 2021ರ ಫೆಬ್ರುವರಿಯಲ್ಲಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಫೋರ್ಡ್ ಕಂಪನಿಯು ಇಕೋಸ್ಪೋರ್ಟ್ ಹೊಸ ಕಾರಿನಲ್ಲಿ ಸುಧಾರಿತ ತಂತ್ರಜ್ಞಾನ ಪ್ರೇರಿತ ಆಕ್ಟಿವ್ ವರ್ಷನ್ ಅನ್ನು ಕೂಡಾ ವಿದೇಶಿ ಮಾರುಕಟ್ಟೆಗಳಿಗಾಗಿ ಅಭಿವೃದ್ದಿಗೊಳಿಸುತ್ತಿದ್ದು, ಹೊಸ ವರ್ಷನ್ ಮುಂದಿನ ಕೆಲವೇ ದಿನಗಳಲ್ಲಿ ಯುಎಸ್ಎ ಮತ್ತು ಯುರೋಪಿನ ಪ್ರಮುಖ ಮಾರುಕಟ್ಟೆಯಲ್ಲಿ ಮಾರಾಟಗೊಳ್ಳಲಿದೆ.

ಹೊಸ ಕಾರು ಮಾದರಿಯು ಭಾರತದಲ್ಲೂ ಬಿಡುಗಡೆಯಾಗಲಿದೆಯಾ ಎನ್ನುವ ಯಾವುದೇ ಮಾಹಿತಿಯು ಲಭ್ಯವಾಗಿಲ್ಲವಾದರೂ ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿರುವುದು ಭಾರತದಲ್ಲೂ ಸುಳಿವು ನೀಡಿದ್ದು, ಗ್ರಾಹಕರ ಬೇಡಿಕೆಯಲ್ಲಿ ಸತತವಾಗಿ ಹಿನ್ನಡೆ ಅನುಭವಿಸುತ್ತಿರುವ ಇಕೋಸ್ಪೋರ್ಟ್ ಮಾದರಿಯ ಬೇಡಿಕೆಯ ಸುಧಾರಣೆಗೆ ಹೊಸ ಬದಲಾವಣೆ ತುರ್ತು ಅವಶ್ಯಕತೆಯಿದೆ.

ಹೊಸ ಇಕೋಸ್ಪೋರ್ಟ್ ಆಕ್ಟಿವ್ ಕಾರು ಮಾದರಿಯು ಫೋರ್ಡ್ ನಿರ್ಮಾಣದ ಜನಪ್ರಿಯ 1.0-ಲೀಟರ್ ಇಕೋಬೂಸ್ಟ್ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗುತ್ತಿದ್ದು, ಆನ್‌ರೋಡ್‌ನಲ್ಲಿ ಮಾತ್ರವಲ್ಲ ಆಫ್ ರೋಡ್ ಚಾಲನೆಯಲ್ಲೂ ಇದು ಅತ್ಯುತ್ತಮ ಪ್ರದರ್ಶನ ಹೊಂದಿದೆ.

ಫೋರ್ಡ್ ಕಂಪನಿಯು ತನ್ನ ಪ್ರಮುಖ ಎಸ್‌ಯುವಿ ಮತ್ತು ಕ್ರಾಸ್ ಓವರ್ ಎಸ್‌ಯುವಿ ಮಾದರಿಗಳನ್ನು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ನಿರಂತರವಾಗಿ ಉನ್ನತೀಕರಿಸುತ್ತಿದ್ದು, ಫೋರ್ಡ್ ಮತ್ತೊಂದು ಜನಪ್ರಿಯ ಕಾರು ಮಾದರಿಯಾದ ಪುಮಾ ಆವೃತ್ತಿಯಿಂದಲೂ ಕೆಲವು ಫೀಚರ್ಸ್‌ಗಳನ್ನು ಹೊಸ ಇಕೋಸ್ಪೋರ್ಟ್ ಆಕ್ಟಿವ್ ಮಾದರಿಯಾಗಿ ಎರವಲು ಪಡೆದುಕೊಳ್ಳಲಾಗಿದೆ.

ಇಕೋಸ್ಪೋರ್ಟ್ ಆಕ್ಟಿವ್ ಮಾದರಿಯು ಸ್ಟ್ಯಾಂಡರ್ಡ್ ಇಕೋಸ್ಪೋರ್ಟ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಬದಲಾವಣೆಗಳನ್ನು ಹೊಂದಿದ್ದು, ಹೊರಭಾಗದಲ್ಲಿ ಮಾತ್ರವಲ್ಲ ಒಳಭಾಗದ ವಿನ್ಯಾಸದಲ್ಲೂ ಬದಲಾವಣೆ ಪಡೆದುಕೊಂಡಿದೆ. ಹೊಸ ಕಾರಿನಲ್ಲಿ ಫ್ಲಕ್ಸ್ ಸ್ಕೀಡ್ ಪ್ಲೇಟ್, ನವೀಕೃತ ರಿಯರ್ ಬಂಪರ್, ಬ್ಲ್ಯಾಕ್ ಪ್ಲಾಸ್ಟಿಕ್ ಕ್ಲ್ಯಾಡಿಂಗ್, ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ಫ್ರಂಟ್ ಸೀಟ್‌ನಲ್ಲಿ ಆಕ್ಟಿವ್ ಬ್ಯಾಡ್ಜ್ ನೀಡಲಾಗಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಇದಲ್ಲದೆ ಇಕೋಸ್ಪೋಟ್ ಆಕ್ಟಿವಾದಲ್ಲಿ ಮಡಿಕೆ ಮಾಡಬಹುದಾದ 8-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಆ್ಯಪಲ್ ಕಾರ್ ಪ್ಲೇ, ಅಂಡ್ರಾಯಿಡ್ ಆಟೋ, ಸ್ಮಾಟ್‌ಫೋನ್ ಇಂಟ್ರಾಕ್ಷನ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಮಲ್ಟಿ ಫಂಕ್ಷನ್ ಹೊಂದಿರುವ ಸ್ಟೀರಿಂಗ್ ವೀಲ್ಹ್ ಮೌಂಟೆಡ್ ಸೌಲಭ್ಯವಿದೆ.

ಭಾರತದಲ್ಲಿ ಸದ್ಯ ಮಾರಾಟವಾಗುತ್ತಿರುವ ಬಿಎಸ್-6 ಇಕೋಸ್ಪೋರ್ಟ್ ಮಾದರಿಯು 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಮಾರಾಟವಾಗುತ್ತಿದ್ದು, ಆಕ್ಟಿವಾ ಸ್ಪೆಷಲ್ ಎಡಿಷನ್‌ನಲ್ಲಿ ಯುರೋ ಹೊಸ ಎಮಿಷನ್ ಅನುಸಾರವಾಗಿ ಅಭಿವೃದ್ದಿಗೊಂಡ 1.0-ಇಕೋಬೂಸ್ಟ್ ಟರ್ಬೋ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಳ್ಳಲಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಭಾರತದಲ್ಲಿ ಮಾರಾಟವಾಗುವ ಇಕೋಸ್ಪೋರ್ಟ್ ಕಾರಿನ ಬೆಲೆಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.19 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 11.73 ಲಕ್ಷ ಮಾರಾಟಗೊಳ್ಳುತ್ತಿದ್ದು, ಪ್ರೀಮಿಯಂ ಫೀಚರ್ಸ್‌ವುಳ್ಳ ಆಕ್ಟಿವಾ ಆವೃತ್ತಿಯು ತುಸು ದುಬಾರಿ ಬೆಲೆ ಹೊಂದಿದ್ದರೂ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.