ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಹೊಸ ಹ್ಯುಂಡೈ ಐ20

ಹ್ಯುಂಡೈ ಕಂಪನಿಯು ತನ್ನ ಹೊಸ ತಲೆಮಾರಿನ ಐ20 ಕಾರನ್ನು ಶೀಘ್ರದಲ್ಲೇ ಬಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಇದೀಗ ಬಹುನೀರಿಕ್ಷಿತ ಹ್ಯುಂಡೈ ಐ20 ಕಾರಿನ ಪ್ರಮುಖ ಮಾಹಿತಿಗಳು ಬಹಿರಂಗವಾಗಿದೆ.

ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ಐ20

ಹೊಸ ಐ20 ಕಾರಿನ ಹೊರಭಾಗದ ಮತ್ತು ಒಳಭಾಗದ ಚಿತ್ರಗಳು ಬಹಿರಂಗವಾಗಿದೆ. ಇದರಿಂದಾಗಿ 2020ರ ಹ್ಯುಂಡೈ ಐ20 ಕಾರಿನ ವಿನ್ಯಾಸ ಮತ್ತು ಫೀಚರ್ಸ್‍‍ಗಳ ಮಾಹಿತಿ ಬಹಿರಂಗವಾಗಿದೆ. ಈ ಹೊಸ ಐ20 ಕಾರು ಸಾಕಷ್ಟು ಸ್ಪೋರ್ಟಿಯರ್ ಮತ್ತು ಸ್ಟೈಲಿಶ್ ಲುಕ್ ಅನ್ನು ಹೊಂದಿದೆ. ಐ20 ಹ್ಯುಂಡೈ ಕಂಪನಿಯ ಸರಣಿಯಲ್ಲಿರುವ ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ.

ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ಐ20

ಹೊಸ ಹ್ಯುಂಡೈ ಕಾರಿನ ಇಂಟಿರಿಯರ್‍‍ನಲ್ಲಿ 4 ಸ್ಫೋಕ್ ಸ್ಟೀಟಿಯರಿಂಗ್ ವ್ಹೀಲ್ ಅನ್ನು ಅಳವಡಿಸಲಾಗಿದೆ. ಇದು ಹೊಸ ಹ್ಯುಂಡೈ ಕ್ರೆಟಾ ಕಾರಿನಲ್ಲಿರುವ ಸ್ಟಿಟಿಯರಿಂಗ್ ಮಾದರಿಯಲ್ಲಿದೆ. ಹೊಸ ಹ್ಯುಂಡೈ ಐ20 ಕಾರಿನಲ್ಲಿ ಆಡಿಯೊ ಸಿಸ್ಟಂ, ಕ್ರೂಸ್ ಕಂಟ್ರೋಲ್ ಮತ್ತು ಫುಲ್-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‌ ಅನ್ನು ಒಳಗೊಂಡಿದೆ.

ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ಐ20

ಈ ಹೊಸ ಕಾರಿನಲ್ಲಿ 10.25 ಇಂಚಿನ ಡಿಜಿಟಲ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಈ ಕಾರಿನ ಇಂಟಿರಿಯರ್‍‍ನಲ್ಲಿ ಆ್ಯಪಲ್ ಕಾರ್‍‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ, ಹ್ಯುಂಡೈನ ಕನೆಕ್ಟಿವಿಟಿ ಸೂಟ್ ಮತ್ತು ಇತರ ಹಲವಾರು ಫೀಚರ್‍‍ಗಳನ್ನು ಹೊಂದಿದೆ. ಯುಎಸ್‌ಬಿ ಪೋರ್ಟ್‌ ಮತ್ತು ವೈರ್‌ಲೆಸ್ ಚಾರ್ಜಿಂಗ್ ಪ್ಯಾಡ್ ಅನ್ನು ಸಹ ಹೊಂದಿದೆ.

ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ಐ20

ಕಾರಿನ ಮುಂಭಾಗದಲ್ಲಿ ಹೊಸ ಹನಿಕೊಂಬ್ ಗ್ರಿಲ್ ಅನ್ನು ಹೊಂದಿದೆ. ಈ ಕಾರಿನ ಮ್ಯಾಟ್ ಕಪ್ಪು ಬಣ್ಣವನ್ನು ಹೊಂದಿದೆ. ಹೊಸ ಹ್ಯುಂಡೈ ಐ20 ಕಾರಿನಲ್ಲಿ ಹೊಸ ಕ್ರೆಟಾದಲ್ಲಿರುವಂತಹ ಕ್ಯಾಸ್ಕೇಡಿಂಗ್ ಗ್ರಿಲ್‍ ಅನ್ನು ಹೊಂದಿದೆ.

ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ಐ20

ಹೊಸ ಹ್ಯುಂಡೈ ಐ20 ಕಾರಿನಲ್ಲಿ ಎಲ್‍ಇಡಿ ಹೆಡ್‍ಲೈಟ್, ಹೊಸ 16 ಡ್ಯುಯಲ್ ಟೋನ್ ಅಲಾಯ್ ವ್ಹೀಲ್‍‍ಗಳು, ಇಂಟಿಗ್ರೇಟೆಡ್ ಟರ್ನ್ ಇಂಡಿಕೇಟರ್‍‍ಗಳೊಂದಿಗೆ ಸ್ಲಿಕ್ ಒಆರ್‍‍ವಿಎಂಗಳು ಮತ್ತು ಶಾರ್ಕ್ ಫಿನ್ ಆಂಟೆನಾವನ್ನು ಕೂಡ ಆಳವಡಿಸಲಾಗಿದೆ.

ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ಐ20

ಬಹಿರಂಗವಾಗಿರುವ ಚಿತ್ರದಲ್ಲಿ 2020ರ ಹ್ಯುಂಡೈ ಐ20 ಕಾರು ನೀಲಿ ಬಣ್ಣವನ್ನು ಹೊಂದಿದೆ. ಹೊಸ ಹುಂಡೈ ಐ20 ಕಾರಿನ ಬದಿಯ ಪಿಲ್ಲರ್‍‍ಗಳು ಕಪ್ಪು ಬಣ್ಣವನ್ನು ಹೊಂದಿದೆ. ಎರಡು ಟೇಲ್‍ ಲ್ಯಾಂಪ್‍‍ಗಳನ್ನು ಅಳವಡಿಸಲಾಗಿದೆ. ವಿಡಬ್ಲ್ಯೂ ಟೈಗನ್‍‍‍ನಲ್ಲಿ ಇರುವಂತಹ ಕೆಂಪು ಇ‍ಲ್‍ಇಡಿ ಡಿಆರ್‍ಎಲ್ ಸ್ಟಾಪ್ ಲೈಟ್ ಹಿಂಭಾಗದಲ್ಲಿ ಟೇಲ್‍‍ಲೈಟ್ ಹೊಂದಿದೆ.

ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ಐ20

ಇದರೊಂದಿಗೆ ಗ್ರ್ಯಾಂಡ್ ಐ10 ನಿಯೋಸ್ ಕಾರಿನಲ್ಲಿರುವ ಮಾದರಿಯ 1.0 ಲೀಟರ್ ಪೆಟ್ರೋಲ್ ಟರ್ಬೊ ಎಂಜಿನ್ ಅನ್ನು ಅಳವಡಿಸುವ ಸಾಧ್ಯತೆಗಳಿದೆ. ಈ ಎಂಜಿನ್ 100 ಬಿ‍‍ಹೆಚ್‍‍ಪಿ ಪವರ್ ಮತ್ತು 172 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍‍ನೊಂದಿಗೆ 5 ಸ್ಫೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಿದೆ. ಈ ಎಂಜಿನ್ ಪ್ರತಿ ಲೀಟರ್‍‍ಗೆ 20.3 ಕಿ.ಮೀ ಮೈಲೇಜ್ ನೀಡಬಹುದು.

ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ಐ20

ಹೊಸ ಹ್ಯುಂಡೈ ಐ20 ಕಾರು ಬಿಡುಗಡೆಯಾದ ನಂತರ ಮಾರುತಿ ಸುಜುಕಿ ಕಂಪನಿಯ ಬಲೆನೊ, ಫೋರ್ಡ್ ಫ್ರೀ‍‍ಸ್ಟೈಲ್, ಟಾಟಾ ಆಲ್ಟ್ರೋಜ್ ಹಾಗೂ ಹೋಂಡಾ ಜಾಜ್‍ ಕಾರುಗಳಿಗೆ ಪೈಪೋಟಿ ನೀಡುತ್ತದೆ.

Article Published On: Monday, March 9, 2020, 17:43 [IST]
English summary
2020 Hyundai Elite i20 To Get 1.0L Turbo Petrol Engine In India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+