Just In
Don't Miss!
- News
ಹುಣಸೋಡು ಸ್ಪೋಟದ ಸುತ್ತ ಒಂದು ನೋಟ: ಇಂದು ಸಿಎಂ ಯಡಿಯೂರಪ್ಪ ಭೇಟಿ
- Sports
'ಭಾರತೀಯರಿಗೆ ಹೋಲಿಸಿದರೆ ಯುವ ಆಸೀಸ್ ಇನ್ನೂ ಪ್ರೈಮರಿ ಶಾಲೆಯಲ್ಲಿದೆ'
- Lifestyle
ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ? ಈ ಆಹಾರ ಸೇವಿಸಿ
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಜನವರಿ 1ರಿಂದ ಕ್ಯಾಶ್ಲೆಸ್ ಆಗಲಿವೆ ಟೋಲ್ ಪ್ಲಾಜಾಗಳು
ಕೇಂದ್ರ ಸರ್ಕಾರವು 2021ರ ಜನವರಿ 1ರಿಂದ ದೇಶದ ಎಲ್ಲಾ ಟೋಲ್ ಪ್ಲಾಜಾಗಳನ್ನು 100%ನಷ್ಟು ಕ್ಯಾಶ್ ಲೆಸ್ ಮಾಡುವ ಗುರಿಯನ್ನು ಹೊಂದಿದೆ. ಹೊಸ ವರ್ಷದ ಮೊದಲ ತಿಂಗಳಿಂದ ಫಾಸ್ಟ್‌ಟ್ಯಾಗ್ ಮೂಲಕ ಮಾತ್ರ ಟೋಲ್ ಸಂಗ್ರಹಿಸಲಾಗುವುದು ಎಂದು ಹೇಳಲಾಗಿದೆ.

ಸದ್ಯಕ್ಕೆ ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಟೋಲ್ ಗಳಲ್ಲಿ 75%ನಷ್ಟು ಲೇನ್‌ಗಳನ್ನು ಫಾಸ್ಟ್‌ಟ್ಯಾಗ್ ಹೊಂದಿರುವ ವಾಹನಗಳಿಗೆ ಮೀಸಲಿಡಲಾಗಿದ್ದು, 25%ನಷ್ಟು ಲೇನ್‌ಗಳನ್ನು ಫಾಸ್ಟ್‌ಟ್ಯಾಗ್ ಹೊಂದಿಲ್ಲದ ವಾಹನಗಳಿಗೆ ಮೀಸಲಿಡಲಾಗಿದೆ.

ಇಟಿ ಆಟೋ ವರದಿಯ ಪ್ರಕಾರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್‌ಹೆಚ್‌ಎಐ) ಶೀಘ್ರದಲ್ಲೇ ಹೆದ್ದಾರಿ ಬಳಕೆದಾರರಿಗಾಗಿ ಜಾಗೃತಿ ಅಭಿಯಾನವನ್ನು ಆರಂಭಿಸಲಿದೆ. ಫಾಸ್ಟ್‌ಟ್ಯಾಗ್ ವಿತರಣೆಯನ್ನು ತ್ವರಿತಗೊಳಿಸಲು ಎನ್‌ಹೆಚ್‌ಎಐ ಪ್ರತಿ ಟೋಲ್ ಪ್ಲಾಜಾದಲ್ಲಿ ಪಾಯಿಂಟ್-ಆಫ್-ಸೇಲ್ ಸೆಂಟರ್ ಗಳನ್ನು ಸ್ಥಾಪಿಸಲಿದೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಇತ್ತೀಚೆಗೆ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಕಾರ್ಯದರ್ಶಿ ಗಿರಿಧರ್ ಅರ್ಮಾನೆ ಅವರು ಉತ್ತರ ಪ್ರದೇಶದಲ್ಲಿನ ಟೋಲ್ ಪ್ಲಾಜಾಗೆ ಭೇಟಿ ನೀಡಿ ಪರಿಶೀಲಿಸಿದ್ದು, ಟೋಲ್ ಗಳಲ್ಲಿ ಡಿಜಿಟಲ್ ಪಾವತಿಯನ್ನು ಶೀಘ್ರದಲ್ಲೇ ಸಂಪೂರ್ಣವಾಗಿ ಜಾರಿಗೊಳಿಸುವ ಸಾಧ್ಯತೆಗಳಿವೆ.

ಆದರೆ ಈ ಕುರಿತು ಸಾರಿಗೆ ಇಲಾಖೆಯು ಯಾವುದೇ ಅಧಿಕೃತ ಮಾಹಿತಿಯನ್ನು ಬಿಡುಗಡೆಗೊಳಿಸಿಲ್ಲ. ಈ ಹಿಂದಿನ ಅಧಿಸೂಚನೆಯ ಪ್ರಕಾರ ಕೇಂದ್ರ ಸರ್ಕಾರವು 2021ರ ಜನವರಿ 1ರಿಂದ ಎಲ್ಲಾ ನಾಲ್ಕು ಚಕ್ರ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಅನ್ನು ಕಡ್ಡಾಯಗೊಳಿಸಿದೆ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

2017ರ ಡಿಸೆಂಬರ್ 1ಕ್ಕೂ ಮುನ್ನ ಮಾರಾಟವಾದ ಎಲ್ಲಾ ನಾಲ್ಕು ಚಕ್ರ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಅನ್ನು ಕಡ್ಡಾಯಗೊಳಿಸಲಾಗಿದೆ. 2017ರ ಡಿಸೆಂಬರ್ 1ರ ನಂತರ ಮಾರಾಟವಾದ ಎಲ್ಲಾ ನಾಲ್ಕು ಚಕ್ರ ವಾಹನಗಳ ನೋಂದಣಿಯೊಂದಿಗೆ ಫಾಸ್ಟ್‌ಟ್ಯಾಗ್ ಅನ್ನು ಕಡ್ಡಾಯಗೊಳಿಸಲಾಗಿದೆ.

ಮೋಟಾರು ವಾಹನ ಕಾಯ್ದೆ 1989ರ ಅಡಿಯಲ್ಲಿ ಕೇಂದ್ರ ಸರ್ಕಾರವು ಎಲ್ಲಾ ವಾಹನ ತಯಾರಕ ಕಂಪನಿಗಳಿಗೆ ಹಾಗೂ ಡೀಲರ್ ಗಳಿಗೆ ನಾಲ್ಕು ಚಕ್ರ ವಾಹನಗಳ ನೋಂದಣಿ ಸಮಯದಲ್ಲಿ ಫಾಸ್ಟ್‌ಟ್ಯಾಗ್ ಅಳವಡಿಸುವಂತೆ ಸೂಚನೆ ನೀಡಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಫಾಸ್ಟ್‌ಟ್ಯಾಗ್ ಎನ್ನುವುದು ವಾಹನಗಳ ಮುಂಭಾಗದಲ್ಲಿರುವ ಗ್ಲಾಸಿನ ಮೇಲೆ ಅಳವಡಿಸಲಾಗುವ ಡಿಜಿಟಲ್ ಸ್ಟಿಕ್ಕರ್ ಆಗಿದ್ದು, ರೇಡಿಯೋ ಫ್ರಿಕ್ವೆನ್ಸಿ ಐಡೆಂಟಿಫಿಕೇಶನ್ ಟೆಕ್ನಾಲಜಿಯೊಂದಿಗೆ ಕಾರ್ಯನಿರ್ವಹಿಸುತ್ತದೆ.

ಫಾಸ್ಟ್‌ಟ್ಯಾಗ್ ಹೊಂದಿರುವ ವಾಹನಗಳು ಟೋಲ್ ಪ್ಲಾಜಾ ಮೂಲಕ ಹಾದುಹೋದಾಗ ಟೋಲ್ ಪ್ಲಾಜಾಗಳಲ್ಲಿರುವ ಸ್ಕ್ಯಾನರ್ ಮೂಲಕ ಸ್ಕ್ಯಾನ್ ಆಗಿ ಹಣವು ಫಾಸ್ಟ್‌ಟ್ಯಾಗ್ ಪ್ರಿಪೇಯ್ಡ್ ಖಾತೆಯಿಂದ ಆಟೋಮ್ಯಾಟಿಕ್ ಆಗಿ ಕಡಿತಗೊಳ್ಳುತ್ತದೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಇದರಿಂದಾಗಿ ಟೋಲ್ ಪ್ಲಾಜಾಗಳಲ್ಲಿ ಹಣ ಪಾವತಿಸಲು ವಾಹನಗಳನ್ನು ನಿಲ್ಲಿಸುವ ಅಗತ್ಯವಿಲ್ಲ. ಇದರಿಂದ ಟೋಲ್ ಪ್ಲಾಜಾಗಳಲ್ಲಿ ಗಂಟೆಗಟ್ಟಲೇ ಕಾಯುವುದು ತಪ್ಪುತ್ತದೆ.

ಫಾಸ್ಟ್‌ಟ್ಯಾಗ್ ವಿತರಿಸುವ ಕಾರ್ಯವನ್ನು 23 ಬ್ಯಾಂಕ್‌ಗಳಿಗೆ ವಹಿಸಲಾಗಿದ್ದು, ಪಾಯಿಂಟ್-ಆಫ್-ಸೇಲ್ ಮೂಲಕ ಖರೀದಿಸಬಹುದು. ಇದರ ಜೊತೆಗೆ ಫಾಸ್ಟ್‌ಟ್ಯಾಗ್'ಗಳನ್ನು ಸಾರಿಗೆ ಕಚೇರಿ, ಟೋಲ್ ಪ್ಲಾಜಾ ಅಥವಾ ಆನ್‌ಲೈನ್ ಮೂಲಕವೂ ಖರೀದಿಸಬಹುದು.