ಅಕ್ಟೋಬರ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್ ಕಾರುಗಳಿವು

ದೇಶಿಯ ಮಾರುಕಟ್ಟೆಯಲ್ಲಿ ಹ್ಯಾಚ್‌ಬ್ಯಾಕ್ ಕಾರುಗಳು ತಮ್ಮದೇ ಆದ ಸ್ಥಾನವನ್ನು ಹೊಂದಿವೆ. ಮಾರುತಿ ಸುಜುಕಿ ಕಂಪನಿಯ ಹ್ಯಾಚ್‌ಬ್ಯಾಕ್ ಕಾರುಗಳು ಭಾರತದಲ್ಲಿರುವ ಇತರ ಕಂಪನಿಯ ಹ್ಯಾಚ್‌ಬ್ಯಾಕ್ ಕಾರುಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತವೆ.

ಅಕ್ಟೋಬರ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್ ಕಾರುಗಳಿವು

ಕಳೆದ ಅಕ್ಟೋಬರ್ ತಿಂಗಳು ಸಹ ಇದಕ್ಕೆ ಹೊರತಾಗಿರಲಿಲ್ಲ. ಅಕ್ಟೋಬರ್‌ ತಿಂಗಳಿನಲ್ಲಿ ಭಾರತದಲ್ಲಿ ಹೆಚ್ಚು ಮಾರಾಟವಾದ ಟಾಪ್ 10 ಹ್ಯಾಚ್‌ಬ್ಯಾಕ್‌ ಕಾರುಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ. ಈ ಪಟ್ಟಿಯಲ್ಲಿ ಮಾರುತಿ ಸುಜುಕಿ ಕಂಪನಿಯ ಸ್ವಿಫ್ಟ್ ಪ್ರಥಮ ಸ್ಥಾನ ಪಡೆದಿದೆ. ಈ ವರ್ಷದ ಅಕ್ಟೋಬರ್‌ನಲ್ಲಿ 24,589 ಯೂನಿಟ್ ಸ್ವಿಫ್ಟ್ ಕಾರುಗಳು ಮಾರಾಟವಾಗಿವೆ.

ಅಕ್ಟೋಬರ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್ ಕಾರುಗಳಿವು

2019ರ ಅಕ್ಟೋಬರ್‌ ತಿಂಗಳಿನಲ್ಲಿ 19,401 ಯೂನಿಟ್ ಸ್ವಿಫ್ಟ್ ಕಾರುಗಳು ಮಾರಾಟವಾಗಿದ್ದವು. ಸ್ವಿಫ್ಟ್ ಕಾರಿನ ಮಾರಾಟವು ಕಳೆದ ವರ್ಷದ ಮಾರಾಟಕ್ಕೆ ಹೋಲಿಸಿದರೆ ಈ ವರ್ಷ 27%ನಷ್ಟು ಹೆಚ್ಚಾಗಿದೆ. ಇದರ ಜೊತೆಗೆ ಸ್ವಿಫ್ಟ್ ಕಾಂಪ್ಯಾಕ್ಟ್ ಹ್ಯಾಚ್‌ಬ್ಯಾಕ್ ಕಾರು ಸೆಪ್ಟೆಂಬರ್ ತಿಂಗಳಿಗೆ ಹೋಲಿಸಿದರೆ ಅಕ್ಟೋಬರ್ ತಿಂಗಳಿನಲ್ಲಿ 9%ನಷ್ಟು ಹೆಚ್ಚು ಮಾರಾಟವನ್ನು ದಾಖಲಿಸಿದೆ.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಅಕ್ಟೋಬರ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್ ಕಾರುಗಳಿವು

ಈ ವರ್ಷದ ಸೆಪ್ಟೆಂಬರ್‌ನಲ್ಲಿ 22,643 ಯೂನಿಟ್ ಸ್ವಿಫ್ಟ್‌ ಕಾರುಗಳು ಮಾರಾಟವಾಗಿದ್ದವು. ಮಾರುತಿ ಸುಜುಕಿ ಬಲೆನೊ ಕಾರು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಳೆದ ತಿಂಗಳು ನೆಕ್ಸಾ ಪ್ರೀಮಿಯಂ ಮಾರಾಟಗಾರರಿಂದ ಹೆಚ್ಚು ಮಾರಾಟವಾದ ಕಾರು ಎಂಬ ಹೆಗ್ಗಳಿಕೆಯನ್ನು ಪಡೆದಿದೆ.

ಅಕ್ಟೋಬರ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್ ಕಾರುಗಳಿವು

ಹಾರ್ಟ್ ಟೆಕ್ ಪ್ಲಾಟ್‌ಫಾರಂನಲ್ಲಿ ನಿರ್ಮಾಣವಾಗಿರುವ ಈ 5 ಸೀಟರ್ ಗಳ ಕಾರಿನ 21,971 ಯೂನಿಟ್‌ಗಳು ಅಕ್ಟೋಬರ್ ತಿಂಗಳಿನಲ್ಲಿ ಮಾರಾಟವಾಗಿವೆ. 2019ರ ಅಕ್ಟೋಬರ್‌ ತಿಂಗಳಿನಲ್ಲಿ 16,237 ಯೂನಿಟ್‌ಗಳು ಮಾರಾಟವಾಗಿದ್ದವು.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಅಕ್ಟೋಬರ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್ ಕಾರುಗಳಿವು

ಕಳೆದ ವರ್ಷಕ್ಕಿಂತ ಈ ವರ್ಷದ ಮಾರಾಟ ಪ್ರಮಾಣವು 35%ನಷ್ಟು ಹೆಚ್ಚಾಗಿದೆ. ಮಾರುತಿ ಸುಜುಕಿ ವ್ಯಾಗನ್ಆರ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಮಾರುತಿ ಸುಜುಕಿ ಕಂಪನಿಯು ಅಕ್ಟೋಬರ್‌ ತಿಂಗಳಿನಲ್ಲಿ 18,703 ಯೂನಿಟ್ ವ್ಯಾಗನ್ ಆರ್ ಕಾರುಗಳನ್ನು ಮಾರಾಟ ಮಾಡಿದೆ.

ಅಕ್ಟೋಬರ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್ ಕಾರುಗಳಿವು

ಈ ಪ್ರಮಾಣವು 2019ರ ಅಕ್ಟೋಬರ್‌ ತಿಂಗಳಿಗೆ ಹೋಲಿಸಿದರೆ 30%ನಷ್ಟು ಹೆಚ್ಚಾಗಿದೆ. ಈ ವರ್ಷದ ಸೆಪ್ಟೆಂಬರ್‌ ತಿಂಗಳಿಗೆ ಹೋಲಿಸಿದರೆ 6%ನಷ್ಟು ಹೆಚ್ಚಾಗಿದೆ. ಮಾರುತಿ ಸುಜುಕಿ ಆಲ್ಟೊ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಅಕ್ಟೋಬರ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್ ಕಾರುಗಳಿವು

ಮಾರುತಿ ಸುಜುಕಿ ಕಂಪನಿಯ ಈ ಎಂಟ್ರಿ ಲೆವೆಲ್ ಹ್ಯಾಚ್‌ಬ್ಯಾಕ್ ಕಾರಿನ 17,850 ಯೂನಿಟ್‌ಗಳು ಅಕ್ಟೋಬರ್ ತಿಂಗಳಿನಲ್ಲಿ ಮಾರಾಟವಾಗಿವೆ. 2019ರ ಅಕ್ಟೋಬರ್ ನಲ್ಲಿ 17,903 ಯೂನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಆಲ್ಟೊ ಕಾರಿನ ಮಾರಾಟದಲ್ಲಿ ಯಾವುದೇ ದೊಡ್ಡ ಬೆಳವಣಿಗೆಯಾಗಲಿ ಅಥವಾ ಕುಸಿತವಾಗಲಿ ಕಂಡುಬಂದಿಲ್ಲ.

ಅಕ್ಟೋಬರ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್ ಕಾರುಗಳಿವು

ಐದನೇ ಸ್ಥಾನದಲ್ಲಿರುವ ಹ್ಯುಂಡೈ ಗ್ರ್ಯಾಂಡ್ ಐ 10 ನಿಯೋಸ್ ಕಾರಿನ 14,003 ಯೂನಿಟ್‌ಗಳು ಮಾರಾಟವಾಗಿದ್ದರೆ, ಆರನೇ ಸ್ಥಾನದಲ್ಲಿರುವ ಮಾರುತಿ ಸುಜುಕಿ ಎಸ್-ಪ್ರೆಸ್ಸೊವಿನ 10,612 ಯೂನಿಟ್‌ಗಳು ಮಾರಾಟವಾಗಿವೆ. ಹ್ಯುಂಡೈನ ಎಲೈಟ್ ಐ 20 ಕಾರು 8,399 ಯೂನಿಟ್ ಮಾರಾಟದೊಂದಿಗೆ 7ನೇ ಸ್ಥಾನದಲ್ಲಿದ್ದರೆ, ಮಾರುತಿ ಸುಜುಕಿ ಸೆಲೆರಿಯೊ 7,574 ಯೂನಿಟ್ ಮಾರಾಟದೊಂದಿಗೆ 8ನೇ ಸ್ಥಾನದಲ್ಲಿದೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಅಕ್ಟೋಬರ್ ತಿಂಗಳಿನಲ್ಲಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್ ಕಾರುಗಳಿವು

ಟಾಟಾ ಮೋಟಾರ್ಸ್ ಕಂಪನಿಯ ಆಲ್ಟ್ರೋಜ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು 6,730 ಯೂನಿಟ್‌ಗಳ ಮಾರಾಟದೊಂದಿಗೆ 9ನೇ ಸ್ಥಾನದಲ್ಲಿದೆ. ಟಾಟಾ ಮೋಟಾರ್ಸ್ ಕಂಪನಿಯ ಟಿಯಾಗೋ 6,003 ಯೂನಿಟ್‌ಗಳ ಮಾರಾಟದೊಂದಿಗೆ ಹತ್ತನೇ ಸ್ಥಾನದಲ್ಲಿದೆ.

Most Read Articles

Kannada
English summary
Top 10 hatchback cars sold during October 2020 in domestic market. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X