Just In
Don't Miss!
- Movies
'ದೀಪ್ ಸಿಧು ಜೊತೆ ನನಗೆ ಯಾವುದೇ ಸಂಬಂಧವಿಲ್ಲ': ಸಂಸದ, ನಟ ಸನ್ನಿ ಡಿಯೋಲ್ ಸ್ಪಷ್ಟನೆ
- News
ಭಾರತದಲ್ಲಿ ಬೇಕಾದಷ್ಟು ಲಸಿಕೆಯಿದೆ, ಆದರೆ... ಸಮಸ್ಯೆ ಬೇರೆಯೇ ಆಗಿದೆ
- Finance
ಬಜೆಟ್ 2021: ಸ್ಟ್ಯಾಂಡರ್ಡ್ ಡಿಡಕ್ಷನ್ ರು. 1 ಲಕ್ಷಕ್ಕೆ ಹೆಚ್ಚಳ ನಿರೀಕ್ಷೆ
- Sports
ಬೈರ್ಸ್ಟೋವ್ಗೆ 2 ಪಂದ್ಯಗಳ ವಿಶ್ರಾಂತಿ ನೀಡಿರುವುದನ್ನು ಸಮರ್ಥಿಸಿದ ಇಂಗ್ಲೆಂಡ್ ಕೋಚ್
- Education
WCD Chitradurga Recruitment 2021: ಅಂಗನವಾಡಿಯಲ್ಲಿ 129 ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!
2020ರ ಅವಧಿಯಲ್ಲಿ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲೂ ಕರೋನಾ ಮಾಹಾಮಾರಿಯಿಂದಾಗಿ ಸಾಕಷ್ಟು ಹಿನ್ನಡೆ ಅನುಭವಿಸಿದ್ದು ಸುಳ್ಳಲ್ಲ. ಆದರೆ ಇದೀಗ ಕರೋನಾ ವೈರಸ್ ಮಧ್ಯದಲ್ಲೂ ಹಲವಾರು ಕ್ಷೇತ್ರಗಳಲ್ಲಿ ಬೆಳವಣಿಗೆ ಕಂಡುಬರುತ್ತಿದ್ದು, ಇನ್ನು ಕೆಲವು ಕ್ಷೇತ್ರಗಳಲ್ಲಿ ಕರೋನಾ ವೈರಸ್ ಪರಿಣಾಮ ಈಗಲೂ ಕೂಡಾ ತೀವ್ರ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

ಆರ್ಥಿಕ ವರ್ಷದ ಕೊನೆಯ ಗಳಿಗೆಯಲ್ಲಿಯೇ ಲಾಕ್‌ಡೌನ್ ವಿಧಿಸಿದ್ದರಿಂದ ಆಟೋ ಮೊಬೈಲ್ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಹಿನ್ನಡೆ ಉಂಟಾಯಿತು. ತದನಂತರ ಲಾಕ್‌ಡೌನ್ ಸಡಿಲಿಕೆ ಮಾಡಿದರೂ ಆರ್ಥಿಕ ಕುಸಿತವು ಖರೀದಿ ಪ್ರಕ್ರಿಯೆಗೆ ಬ್ರೇಕ್ ಹಾಕಿತ್ತು. ಇದೀಗ ಕಳೆದ ಐದಾರು ತಿಂಗಳು ಹಿಂದಿನ ಪರಿಸ್ಥಿತಿಗೂ ಸದ್ಯದ ಪರಿಸ್ಥಿತಿಗೂ ಸಾಕಷ್ಟು ಬದಲಾವಣೆಯಾಗಿದ್ದು, ಕುಸಿತ ಕಂಡಿದ್ದ ಹೊಸ ವಾಹನಗಳ ಮಾರಾಟ ಪ್ರಕ್ರಿಯೆ ಚೇತರಿಸಿಕೊಂಡಿರುವುದಲ್ಲದೆ ಹೊಸ ವಾಹನಗಳ ಬಿಡುಗಡೆ ಪ್ರಕ್ರಿಯೆ ಸುಧಾರಣೆಗೊಂಡಿದೆ. ಹಾಗಾದ್ರೆ 2020ರ ಆರ್ಥಿಕ ಸಂಕಷ್ಟದಲ್ಲೂ ಬಿಡುಗಡೆಗೊಂಡು ಯಶಸ್ವಿಯಾಗಿ ಮಾರಾಟವಾಗುತ್ತಿರುವ ಪ್ರಮುಖ ಕಾರುಗಳ ಮಾಹಿತಿ ಇಲ್ಲಿದೆ.

ಟಾಟಾ ಆಲ್‌ಟ್ರೊಜ್
ಜನವರಿ 22ರಂದು ಬಿಡುಗಡೆಯಾದ ಆಲ್‌ಟ್ರೊಜ್ ಕಾರು ಮಾದರಿಯ ಸದ್ಯ ಪ್ರೀಮಿಯಂ ಹ್ಯಾಚ್ ಕಾರು ಮಾದರಿಯ ಮಾರಾಟದಲ್ಲಿ ಅಗ್ರಸ್ಥಾನದಲ್ಲಿದ್ದು, ಬಿಎಸ್-6 ವೈಶಿಷ್ಟ್ಯತೆಯ 1.2-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಫೋರ್ ಸಿಲಿಂಡರ್ ರಿವೋಟಾರ್ಕ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಾಗಿದೆ. ಆಲ್‌ಟ್ರೊಜ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.5.44 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.9.09 ಲಕ್ಷ ಬೆಲೆ ಹೊಂದಿದೆ.

ಹ್ಯುಂಡೈ ಔರಾ
ಎಕ್ಸೆಂಟ್ ಕಾರು ಮಾದರಿಯನ್ನು ಸ್ಥಗಿತಗೊಳಿಸಿದ ನಂತರ ಹ್ಯುಂಡೈ ಕಂಪನಿಯು ಬಿಎಸ್-6 ವೈಶಿಷ್ಟ್ಯತೆಗಳನ್ನು ಒಳಗೊಂಡ ಔರಾ ಕಾರನ್ನು ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು 1.2-ಲೀಟರ್ ಕಪ್ಪಾ ಪೆಟ್ರೋಲ್, 1.0-ಲೀಟರ್ ಟರ್ಬೋ ಪೆಟ್ರೋಲ್ ಮತ್ತು 1.2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾ ಆರಂಭಿಕವಾಗಿ ರೂ. 5.85 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9.28 ಲಕ್ಷ ಬೆಲೆ ಹೊಂದಿದೆ.

ಮಾರುತಿ ಸುಜುಕಿ ವಿಟಾರಾ ಬ್ರೆಝಾ ಪೆಟ್ರೋಲ್
ಬಿಎಸ್-6 ಎಮಿಷನ್ ಪ್ರಕಾರ ತನ್ನ ಪ್ರಮುಖ ಕಾರುಗಳ ಮಾರಾಟದಲ್ಲಿ ಹಲವಾರು ಮಹತ್ವದ ಬದಲಾವಣೆಗಳನ್ನು ಪರಿಚಯಿಸಿರುವ ಮಾರುತಿ ಸುಜುಕಿಯು ಬ್ರೆಝಾ ಕಂಪ್ಯಾಕ್ಟ್ ಎಸ್‌ಯುವಿ ಕಾರಿನಲ್ಲಿ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿ ಹೊಸ ಪೆಟ್ರೋಲ್ ಮಾದರಿಯನ್ನು ಪರಿಚಯಿಸಿರುವುದು ಪ್ರಮುಖ ಆಕರ್ಷಣೆಯಾಗಿದೆ.

ವಿಟಾರಾ ಬ್ರೆಝಾದಲ್ಲಿ 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಮಾದರಿಯನ್ನು ಮಾತ್ರ ಮಾರಾಟವಾಗುತ್ತಿದ್ದು, ಹೊಸ ವಿಟಾರಾ ಬ್ರೆಝಾ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.7.34 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 11.41 ಲಕ್ಷ ಬೆಲೆ ಪಡೆದುಕೊಂಡಿದೆ.

ಟಾಟಾ ನೆಕ್ಸಾನ್ ಇವಿ
ವರ್ಷದ ಆರಂಭದಲ್ಲಿ ಬಿಡುಗಡೆಯಾದ ಟಾಟಾ ಮೋಟಾರ್ಸ್ ನಿರ್ಮಾಣದ ನೆಕ್ಸಾನ್ ಇವಿ ಕಾರು ಸದ್ಯ ಬಹುಬೇಡಿಕೆ ಎಲೆಕ್ಟ್ರಿಕ್ ಕಾರು ಮಾದರಿಯಾಗಿ ಹೊರಹೊಮ್ಮಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.16.25 ಲಕ್ಷ ಬೆಲೆಯೊಂದಿಗೆ ಪ್ರತಿ ಚಾರ್ಜ್‌ಗೆ 312 ಮೈಲೇಜ್ ಹಿಂದಿರುಗಿಸುತ್ತದೆ.

ಎಂಜಿ ಜೆಡ್ಎಸ್ ಇವಿ
ಈ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಪ್ರಮುಖ ಕಾರುಗಳಲ್ಲಿ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯು ಒಂದಾಗಿದ್ದು, ಹೊಸ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.20.58 ಲಕ್ಷ ಮತ್ತು ಎಕ್ಸ್‌ಕ್ಲೂಸಿವ್ ಆವೃತ್ತಿಗೆ ರೂ.23.58 ಲಕ್ಷ ಬೆಲೆಯೊಂದಿಗೆ ಪ್ರತಿ ಚಾರ್ಜ್‌ಗೆ 340 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ನ್ಯೂ ಜನರೇಷನ್ ಹ್ಯುಂಡೈ ಕ್ರೆಟಾ
ಹ್ಯುಂಡೈ ಕಾರುಗಳ ಮಾರಾಟ ಪೈಕಿ ಅತಿ ಹೆಚ್ಚು ಬೇಡಿಕೆ ಹೊಂದಿರುವ ಕ್ರೆಟಾ ಕಾರು ಕಳೆದ ಮಾರ್ಚ್‌ನಲ್ಲಿ ನ್ಯೂ ಜನರೇಷನ್ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಗೊಂಡಿತ್ತು. ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಆರಂಭಿಕವಾಗಿ ರೂ. 9.81 ಲಕ್ಷ, ಟಾಪ್ ಎಂಡ್ ಮಾದರಿಯು ರೂ. 17.31 ಲಕ್ಷ ಬೆಲೆ ಹೊಂದಿದ್ದು, ಬಿಎಸ್-6 ವೈಶಿಷ್ಟ್ಯತೆಯ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯ ಆಯ್ಕೆ ಹೊಂದಿದೆ.

ಕಿಯಾ ಸೊನೆಟ್
ಕಿಯಾ ಮೋಟಾರ್ಸ್ ನಿರ್ಮಾಣದ ಮೂರನೇ ಕಾರು ಮಾದರಿಯಾಗಿ ಬಿಡುಗಡೆಯಾಗಿರುವ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಗ್ರಾಹಕರ ಬೇಡಿಕೆಯೆಂತೆ 1.2-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಂಡಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.6.71 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.89 ಲಕ್ಷ ಬೆಲೆ ಹೊಂದಿದೆ.

ನ್ಯೂ ಜನರೇಷನ್ ಹ್ಯುಂಡೈ ಐ20
ಹ್ಯುಂಡೈ ಇಂಡಿಯಾ ಕಂಪನಿಯು ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಮಾದರಿಯಾದ ಐ20 ನ್ಯೂ ಜನರೇಷನ್ ಮಾದರಿಯನ್ನು ಭಾರೀ ಬದಲಾವಣೆ ಬಿಡುಗಡೆ ಮಾಡಿದ್ದು, ಹೊಸ ಕಾರು 1.2-ಲೀಟರ್ ಕಪ್ಪಾ ಪೆಟ್ರೋಲ್, 1.0-ಲೀಟರ್ ಟರ್ಬೋ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.79 ಲಕ್ಷದಿಂದ ರೂ. 11.17 ಲಕ್ಷಕ್ಕೆ ನಿಗದಿಪಡಿಸಲಾಗಿದೆ.

ನಿಸ್ಸಾನ್ ಮ್ಯಾಗ್ನೈಟ್
ನಿಸ್ಸಾನ್ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಅತಿ ಕಡಿಮೆ ಬೆಲೆಯಲ್ಲಿ ಬಿಡುಗಡೆ ಮಾಡಿದೆ. 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9.35 ಲಕ್ಷ ಬೆಲೆ ಹೊಂದಿದೆ.

ನ್ಯೂ ಜನರೇಷನ್ ಮಹೀಂದ್ರಾ ಥಾರ್
ಭಾರೀ ಬದಲಾವಣೆಯೊಂದಿಗೆ ಬಿಡುಗಡೆಯಾಗಿರುವ ಹೊಸ ಥಾರ್ ಕಾರು ಮಾದರಿಯು 2.2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಮೊದಲ ಬಾರಿಗೆ 2.0-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ಪಡೆದುಕೊಂಡಿದ್ದು, ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.90 ಲಕ್ಷದಿಂದ ಟಾಪ್ ಮಾದರಿಯು ರೂ. 12.95 ಲಕ್ಷ ಬೆಲೆ ಪಡೆದುಕೊಂಡಿದೆ.

ಎಂಜಿ ಗ್ಲೊಸ್ಟರ್
ಟೊಯೊಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಕಾರು ಮಾದರಿಗಳಿಗೆ ಪೈಪೋಟಿಯಾಗಿ ಬಿಡುಗಡೆಯಾಗಿರುವ ಎಂಜಿ ಗ್ಲೊಸ್ಟರ್ ಕಾರು ಎಸ್‌ಯುವಿ ವಿಭಾಗದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕಾರು 2.0-ಲೀಟರ್ ಟ್ವಿನ್ ಟರ್ಬೋ ಡೀಸೆಲ್ ಎಂಜಿನ್‌ನೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 29.98 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯ ಬೆಲೆಯನ್ನು ರೂ.35.58 ಲಕ್ಷ ಬೆಲೆ ಪಡೆದುಕೊಂಡಿದೆ.