ಭಾರತದಲ್ಲಿ ಬಿಡುಗಡೆಗಾಗಿ ಸಜ್ಜಾಗಿವೆ ಬಜೆಟ್ ಬೆಲೆಯ ಟಾಪ್ 5 ಎಲೆಕ್ಟ್ರಿಕ್ ಕಾರುಗಳು

ಭಾರತದಲ್ಲಿ ಸದ್ಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟ ಪ್ರಕ್ರಿಯೆಯು ಜೋರಾಗಿದ್ದು, ವಿವಿಧ ಕಾರು ಉತ್ಪಾದನಾ ಸಂಸ್ಥೆಗಳು ಭಾರತೀಯ ಗ್ರಾಹಕರ ಅಭಿರುಚಿಗೆ ತಕ್ಕಂತೆ ಹಲವು ಹೊಸ ಮಾದರಿಯ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಸಜ್ಜಾಗುತ್ತಿವೆ.

ಭಾರತದಲ್ಲಿ ಬಿಡುಗಡೆಗಾಗಿ ಸಜ್ಜಾಗಿವೆ ಬಜೆಟ್ ಬೆಲೆಯ ಟಾಪ್ 5 ಎಲೆಕ್ಟ್ರಿಕ್ ಕಾರುಗಳು

ಭಾರತದಲ್ಲಿ ಈಗಾಗಲೇ ಹಲವು ಕಾರು ಉತ್ಪಾದನಾ ಸಂಸ್ಥೆಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಇದೀಗ ಮತ್ತಷ್ಟು ಕಾರುಗಳು ಬಿಡುಗಡೆಗೆ ಸಜ್ಜಾಗಿವೆ. ಬಿಡುಗಡೆಗೂ ಮುನ್ನ ಹೊಸ ಕಾರುಗಳು ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದ್ದು, ಗ್ರಾಹಕರ ಬೇಡಿಕೆಯೆಂತೆ ಈ ಹೊಸ ಕಾರುಗಳು ಬಜೆಟ್ ಬೆಲೆಯೊಂದಿಗೆ ಹೊಸ ಸಂಚಲನ ಮೂಡಿಸುವ ನೀರಿಕ್ಷೆಯಲ್ಲಿವೆ.

ಭಾರತದಲ್ಲಿ ಬಿಡುಗಡೆಗಾಗಿ ಸಜ್ಜಾಗಿವೆ ಬಜೆಟ್ ಬೆಲೆಯ ಟಾಪ್ 5 ಎಲೆಕ್ಟ್ರಿಕ್ ಕಾರುಗಳು

ರೆನಾಲ್ಟ್ ಕ್ವಿಡ್ ಎಲೆಕ್ಟ್ರಿಕ್

ಕ್ವಿಡ್ ಮಾದರಿಯ ಎಲೆಕ್ಟ್ರಿಕ್ ವರ್ಷನ್ ಕೆ-ಜೆಡ್ಇ ಮಾದರಿಯು ಈಗಾಗಲೇ ವಿದೇಶಿ ಮಾರುಕಟ್ಟೆಗಳಲ್ಲಿ ಖರೀದಿಗೆ ಲಭ್ಯವಾಗಿದ್ದು, ಇದೀಗ ಮೊದಲ ಬಾರಿಗೆ ಭಾರತದಲ್ಲಿ ಅನಾವರಣಗೊಳ್ಳುವ ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಯಾಗುವ ಸುಳಿವು ನೀಡಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಜ್ಜಾಗಿವೆ ಬಜೆಟ್ ಬೆಲೆಯ ಟಾಪ್ 5 ಎಲೆಕ್ಟ್ರಿಕ್ ಕಾರುಗಳು

26.8kWh ಲಿಥೀಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿರುವ ಕೆ-ಜೆಡ್ಇ ಕಾರು ಪ್ರತಿ ಚಾರ್ಜ್‌ಗೆ 271 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, 2020ರ ಮಧ್ಯಂತರದಲ್ಲಿ ಗ್ರಾಹಕರ ಕೈಸೆರಲಿರುವ ಹೊಸ ಕಾರು ರೂ. 7 ಲಕ್ಷದಿಂದ ರೂ.9 ಲಕ್ಷ ಅಂತರದಲ್ಲಿ ಮಾರಾಟವಾಗಲಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಜ್ಜಾಗಿವೆ ಬಜೆಟ್ ಬೆಲೆಯ ಟಾಪ್ 5 ಎಲೆಕ್ಟ್ರಿಕ್ ಕಾರುಗಳು

ಹೈಮಾ ಇ1 ಎಲೆಕ್ಟ್ರಿಕ್ ಕಾರು

ಅತಿ ಕಡಿಮೆ ಬೆಲೆಯಲ್ಲಿ ಅತ್ಯುತ್ತಮ ಮೈಲೇಜ್ ಪ್ರೇರಿತ ಇ1 ಮೈಕ್ರೋ ಎಸ್‌ಯುವಿ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಪ್ರದರ್ಶನಗೊಳಿಸಿರುವ ಹೈಮಾ ಸಂಸ್ಥೆಯು ಹೊಸ ಕಾರನ್ನು ರೂ.8 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ. ಸುಧಾರಿತ ತಂತ್ರಜ್ಞಾನ ಪ್ರೇರಿತ ಲೀಥಿಯಂ ಬ್ಯಾಟರಿ ಪ್ಯಾಕ್ ಮೂಲಕ ಪ್ರತಿ ಚಾರ್ಜ್‌ಗೆ ಕನಿಷ್ಠ 302 ಕಿ.ಮೀ ಮೈಲೇಜ್ ಹಿಂದಿರುಗಿಸಲಿರುವ ಹೈಮಾ ಇ1 ಎಲೆಕ್ಟ್ರಿಕ್ ಕಾರು ಭಾರತದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಜ್ಜಾಗಿವೆ ಬಜೆಟ್ ಬೆಲೆಯ ಟಾಪ್ 5 ಎಲೆಕ್ಟ್ರಿಕ್ ಕಾರುಗಳು

ಚೀನಿ ಐಷಾರಾಮಿ ಕಾರು ಉತ್ಪಾದನಾ ಸಂಸ್ಥೆಯಾದ ಫಾವ್ ಗ್ರೂಪ್‌ ಸಂಸ್ಥೆ ಅಡಿ ಕಾರ್ಯನಿರ್ವಹಣೆ ಮಾಡುತ್ತಿರುವ ಹೈಮಾ ಸಂಸ್ಥೆಯು ಹೊಸ ಕಾರುಗಳ ಅಭಿವೃದ್ದಿಗಾಗಿ ಗ್ಲೊಬಲ್ ಆರ್ಕಿಟೆಕ್ಚರ್ ಪ್ಲ್ಯಾಟ್‌ಫಾರ್ಮ್ ಬಳಕೆ ಮಾಡುತ್ತಿರುವುದು ಗ್ರಾಹಕರ ಮೆಚ್ಚುಗೆಗೆ ಕಾರಣವಾಗಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಜ್ಜಾಗಿವೆ ಬಜೆಟ್ ಬೆಲೆಯ ಟಾಪ್ 5 ಎಲೆಕ್ಟ್ರಿಕ್ ಕಾರುಗಳು

ಜಿಡಬ್ಲ್ಯುಎಂ ಆರ್1 ಎಲೆಕ್ಟ್ರಿಕ್

ಚೀನಿ ಜನಪ್ರಿಯ ವಾಹನ ಉತ್ಪಾದನಾ ಸಂಸ್ಥೆಯಾಗಿರುವ ಗ್ರೇಟ್ ವಾಲ್ ಮೋಟಾರ್ಸ್(ಜಿಡಬ್ಲ್ಯುಎಂ) ಸಂಸ್ಥೆಯು ಭಾರತದಲ್ಲಿ ಭಾರೀ ಪ್ರಮಾಣದ ಹೂಡಿಕೆಯೊಂದಿಗೆ ವಿವಿಧ ಮಾದರಿಯ ಕಾರು ಆವೃತ್ತಿಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಆರ್ 1 ಎಲೆಕ್ಟ್ರಿಕ್ ಕಾರು ಪ್ರಮುಖ ಆಕರ್ಷಣೆಯಾಗಲಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಜ್ಜಾಗಿವೆ ಬಜೆಟ್ ಬೆಲೆಯ ಟಾಪ್ 5 ಎಲೆಕ್ಟ್ರಿಕ್ ಕಾರುಗಳು

33.1 kWh ಲೀಥಿಯಂ ಬ್ಯಾಟರಿ ಪ್ಯಾಕ್ ಹೊಂದಿರುವ ಆರ್1 ಕಾರು ಪ್ರತಿ ಚಾರ್ಜ್‌ಗೆ ಗರಿಷ್ಠ 351 ಕಿ.ಮೀ ಮೈಲೇಜ್ ನೀಡಲಿದ್ದು, ಹೊಸ ಕಾರು ಭಾರತದಲ್ಲಿ ರೂ.5 ಲಕ್ಷದಿಂದ ರೂ.7 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಜ್ಜಾಗಿವೆ ಬಜೆಟ್ ಬೆಲೆಯ ಟಾಪ್ 5 ಎಲೆಕ್ಟ್ರಿಕ್ ಕಾರುಗಳು

ಟಾಟಾ ಆಲ್‌ಟ್ರೊಜ್ ಎಲೆಕ್ಟ್ರಿಕ್

ಕಳೆದ ತಿಂಗಳು ನೆಕ್ಸಾನ್ ಎಲೆಕ್ಟ್ರಿಕ್ ಮತ್ತು ಆಲ್‌ಟ್ರೊಜ್ ಸಾಮಾನ್ಯ ಕಾರು ಬಿಡುಗಡೆ ಮಾಡಿರುವ ಟಾಟಾ ಸಂಸ್ಥೆಯು ಸದ್ಯದಲ್ಲೇ ಆಲ್‌ಟ್ರೊಜ್ ಎಲೆಕ್ಟ್ರಿಕ್ ಕಾರು ಆವೃತ್ತಿಯನ್ನು ಸಹ ಬಿಡುಗಡೆ ಮಾಡಲಿದ್ದು, ಹೊಸ ಕಾರು 250 ಕಿ.ಮೀ ಮೈಲೇಜ್ ರೇಂಜ್ ಹೊಂದಿರಲಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಜ್ಜಾಗಿವೆ ಬಜೆಟ್ ಬೆಲೆಯ ಟಾಪ್ 5 ಎಲೆಕ್ಟ್ರಿಕ್ ಕಾರುಗಳು

ರೂ.14 ಲಕ್ಷ ಬೆಲೆ ಅಂತರದಲ್ಲಿ ನೆಕ್ಸಾನ್ ಎಲೆಕ್ಟ್ರಿಕ್ ಬಿಡುಗಡೆಗೊಳಿಸಿರುವ ಟಾಟಾ ಸಂಸ್ಥೆಯು ಸಣ್ಣ ಗಾತ್ರದ ಆಲ್‌ಟ್ರೊಜ್ ಮಾದರಿಯನ್ನು ರೂ.7 ಲಕ್ಷದಿಂದ ರೂ.9 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಗೊಳಿಸಲಿದ್ದು, ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ ಜೊತೆಗೆ ಅತ್ಯುತ್ತಮ ಸೆಫ್ಟಿ ಫೀಚರ್ಸ್ ನೀಡಲಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಜ್ಜಾಗಿವೆ ಬಜೆಟ್ ಬೆಲೆಯ ಟಾಪ್ 5 ಎಲೆಕ್ಟ್ರಿಕ್ ಕಾರುಗಳು

ಕಿಯಾ ಸೊಲ್ ಎಲೆಕ್ಟ್ರಿಕ್

ಕಿಯಾ ಮೋಟಾರ್ಸ್ ಸಂಸ್ಥೆಯು ಭಾರತದಲ್ಲಿ ಹಲವಾರು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಸಾಮಾನ್ಯ ಕಾರು ಮಾದರಿಗಳಲ್ಲದೇ ವಿವಿಧ ಮಾದರಿಯ ಎಲೆಕ್ಟ್ರಿಕ್ ಕಾರು ಆವೃತ್ತಿಗಳನ್ನು ಸಹ ಬಿಡುಗಡೆಗೊಳಿಸಲು ಭರ್ಜರಿ ಸಿದ್ದತೆ ನಡೆಸಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಜ್ಜಾಗಿವೆ ಬಜೆಟ್ ಬೆಲೆಯ ಟಾಪ್ 5 ಎಲೆಕ್ಟ್ರಿಕ್ ಕಾರುಗಳು

ಪ್ರತಿ ಚಾರ್ಜ್‌ಗೆ 400ಕಿ.ಮೀ ನಿಂದ 450 ಕಿ.ಮೀ ಮೈಲೇಜ್ ಹೊಂದಿರುವ ಸೊಲ್ ಕಾರು ಭಾರತದಲ್ಲಿ ರೂ. 10 ಲಕ್ಷದಿಂದ ರೂ. 12 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದ್ದು, ಹೊಸ ಕಾರು ಮುಂದಿನ ಜೂನ್ ಅಥವಾ ಜುಲೈ ಕೊನೆಯಲ್ಲಿ ಬಿಡುಗಡೆಯಾಗಲಿದೆ.

More from DriveSpark

Article Published On: Friday, February 7, 2020, 18:31 [IST]
English summary
Budget electric cars revealed at Auto Expo. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+