ಕರೋನಾ ಅಬ್ಬರದ ನಡುವೆ ಈ ವಾರದ ಟಾಪ್ 5 ಕಾರು ಸುದ್ದಿಗಳಿವು..!

ದೇಶದಲ್ಲಿ ಕರೋನಾ ವೈರಸ್ ಅಬ್ಬರ ಹೆಚ್ಚುತ್ತಿದ್ದರೂ ಹೊಸ ಸುರಕ್ಷಾ ಕ್ರಮಗಳಿಂದಾಗಿ ಆಟೋ ಉದ್ಯಮವು ಚೇತರಿಸಿಕೊಳ್ಳುತ್ತಿದೆ. ಲಾಕ್‌ಡೌನ್ ಸಂದರ್ಭದಲ್ಲಿ ಸಂಪೂರ್ಣವಾಗಿ ನೆಲಕಚ್ಚಿದ್ದ ಕಾರು ಮಾರಾಟವು ಇದೀಗ ನಿಧಾನವಾಗಿ ಏರಿಕೆಯಾಗುತ್ತಿದ್ದು, ಈ ವಾರದ ಪ್ರಮುಖ ಕಾರು ಸುದ್ದಿಗಳನ್ನು ಇಲ್ಲಿ ಚರ್ಚಿಸಲಾಗಿದೆ.

ಕರೋನಾ ಅಬ್ಬರದ ನಡುವೆ ಈ ವಾರದ ಟಾಪ್ 5 ಕಾರು ಸುದ್ದಿಗಳಿವು..!

ವೈರಸ್ ಭೀತಿಯಿಂದಾಗಿ ಹೊಸ ವಾಹನ ಮಾರಾಟವು ಚೇತರಿಸಿಕೊಳ್ಳುವಂತೆ ಮಾಡಿದ್ದು, ಬಹುತೇಕರು ಸಾರ್ವಜನಿಕ ಸಾರಿಗೆ ಸೌಲಭ್ಯವನ್ನು ಬಿಟ್ಟು ಸ್ವಂತ ವಾಹನಗಳಲ್ಲಿನ ಓಡಾಟಕ್ಕೆ ಆದ್ಯತೆ ನೀಡುತ್ತಿದ್ದಾರೆ. ಇದೇ ಕಾರಣಕ್ಕೆ ಆರ್ಥಿಕ ಸಂಕಷ್ಟದಲ್ಲೂ ಹೊಸ ವಾಹನಗಳ ಮಾರಾಟವು ಕೆಳೆದ ಎರಡು ತಿಂಗಳಿಂತ ಇದೀಗ ಸಾಕಷ್ಟು ಸುಧಾರಣೆ ಕಂಡಿದ್ದು, ಹಲವು ಹೊಸ ಕಾರು ಮಾದರಿಗಳು ಬಿಡುಗಡೆಯಾಗದಲ್ಲಿ ಇನ್ನು ಕೆಲವು ಕಾರು ಮಾದರಿಗಳು ಮಾರುಕಟ್ಟೆ ಪ್ರವೇಶಿಕ್ಕೆ ಸಜ್ಜುಗೊಂಡಿವೆ. ಹಾಗಾದ್ರೆ ಟಾಪ್ 5 ಸುದ್ದಿಗಳಲ್ಲಿ ಯಾವೆಲ್ಲಾ ಹೊಸ ಕಾರುಗಳ ಮಾಹಿತಿಯಿದೆ ಎಂಬುವುದನ್ನು ಇಲ್ಲಿ ನೋಡಬಹುದು.

ಕರೋನಾ ಅಬ್ಬರದ ನಡುವೆ ಈ ವಾರದ ಟಾಪ್ 5 ಕಾರು ಸುದ್ದಿಗಳಿವು..!

01. ಬಿಎಸ್-6 ಹೋಂಡಾ ಜಾಝ್ ಬಿಡುಗಡೆ

ಹೊಸ ಜಾಝ್ ಬಿಎಸ್-6 ಮಾದರಿಯು ವಿ, ವಿಎಕ್ಸ್ ಮತ್ತು ಜೆಡ್ಎಕ್ಸ್ ವೆರಿಯೆಂಟ್‌ಗಳೊಂದಿಗೆ ಪ್ರತಿ ವೆರಿಯೆಂಟ್‌ನಲ್ಲೂ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಮಾದರಿಗಳಿದ್ದು, 1.2-ಲೀಟರ್ ಐ-ವಿಟೆಕ್ ಪೆಟ್ರೋಲ್ ಎಂಜಿನ್‍ನೊಂದಿಗೆ ಖರೀದಿಗೆ ಲಭ್ಯವಿದೆ.

ಕರೋನಾ ಅಬ್ಬರದ ನಡುವೆ ಈ ವಾರದ ಟಾಪ್ 5 ಕಾರು ಸುದ್ದಿಗಳಿವು..!

ಎಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬಂದಿರುವ ಹೊಸ ಎಮಿಷನ್ ನಿಯಮ ಅನುಸಾರವಾಗಿ ಬಹುತೇಕ ಕಾರು ಮಾದರಿಗಳನ್ನು ಉನ್ನತೀಕರಿಸಿ ಬಿಡುಗಡೆ ಮಾಡಿರುವ ಹೋಂಡಾ ಕಾರ್ಸ್ ಕಂಪನಿಯು ಇದೀಗ ಜಾಝ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯನ್ನು ಬಿಡುಗಡೆ ಮಾಡಿದೆ. ಪೆಟ್ರೋಲ್ ಮಾದರಿಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರುವ ಜಾಝ್ ಕಾರು ಒಟ್ಟು ಮೂರು ವೆರಿಯೆಂಟ್‌ಗಳೊಂದಿಗೆ ಎಕ್ಸ್‌ಶೋರೂಂ ಪ್ರಕಾರ ರೂ. 7.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9.73 ಲಕ್ಷ ಬೆಲೆ ಹೊಂದಿದೆ. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಒತ್ತಿ...

ಕರೋನಾ ಅಬ್ಬರದ ನಡುವೆ ಈ ವಾರದ ಟಾಪ್ 5 ಕಾರು ಸುದ್ದಿಗಳಿವು..!

02. ಬಿಎಸ್-6 ಮಹೀಂದ್ರಾ ಎಕ್ಸ್‌ಯುವಿ ಡಿಸೇಲ್ ಎಟಿ ಬಿಡುಗಡೆ

ಮಹೀಂದ್ರಾ ಎಕ್ಸ್‌ಯುವಿ500 ಡೀಸೆಲ್ ಮ್ಯಾನುವಲ್ ಮಾದರಿಯು ಈಗಾಗಲೇ ಮಾರುಕಟ್ಟೆಗೆ ಖರೀದಿ ಲಭ್ಯವಿದ್ದು, ಇದೀಗ ಆಟೋಮ್ಯಾಟಿಕ್ ಆವೃತ್ತಿಯು ಸಹ ಬಿಡುಗಡೆಗೊಂಡಿದೆ. ಆಟೋಮ್ಯಾಟಿಕ್ ಆವೃತ್ತಿಯು ಪುಣೆ ಎಕ್ಸ್‌ಶೋರೂಂ ಪ್ರಕಾರ ರೂ. 15.65 ಲಕ್ಷ ಬೆಲೆ ಪಡೆದುಕೊಂಡಿದ್ದು, ಡಬ್ಲ್ಯು7, ಡಬ್ಲ್ಯು9 ಮತ್ತು ಡಬ್ಲ್ಯು9(ಆಪ್ಷನ್) ಆವೃತ್ತಿಗಳಲ್ಲಿ ಆಟೋಮ್ಯಾಟಿಕ್ ಆವೃತ್ತಿಯು ಖರೀದಿಗೆ ಲಭ್ಯವಿರಲಿದೆ.

ಕರೋನಾ ಅಬ್ಬರದ ನಡುವೆ ಈ ವಾರದ ಟಾಪ್ 5 ಕಾರು ಸುದ್ದಿಗಳಿವು..!

ಡಬ್ಲ್ಯು7 ಆಟೋಮ್ಯಾಟಿಕ್ ಆವೃತ್ತಿಯು ಪುಣೆ ಎಕ್ಸ್‌ಶೋರೂಂ ಪ್ರಕಾರ ರೂ. 15.65 ಲಕ್ಷಕ್ಕೆ, ಡಬ್ಲ್ಯು9 ಆಟೋಮ್ಯಾಟಿಕ್ ಮಾದರಿಯು ರೂ. 17.36 ಲಕ್ಷ ಮತ್ತು ಡಬ್ಲ್ಯು9(ಆಪ್ಷನ್) ಆಟೋಮ್ಯಾಟಿಕ್ ಆವೃತ್ತಿಯು ರೂ. 18.88 ಲಕ್ಷ ಬೆಲೆ ಹೊಂದಿದೆ. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಒತ್ತಿ..

ಕರೋನಾ ಅಬ್ಬರದ ನಡುವೆ ಈ ವಾರದ ಟಾಪ್ 5 ಕಾರು ಸುದ್ದಿಗಳಿವು..!

03. ಕಿಯಾ ಸೊನೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ

ಕಿಯಾ ಸೊನೆಟ್ ಹೊಸ ಕಾರು ಬಿಡುಗಡೆಗೂ ಮುನ್ನವೇ 10 ಸಾವಿರಕ್ಕೂ ಅಧಿಕ ಯುನಿಟ್‌ಗಳಿಗಾಗಿ ಬುಕ್ಕಿಂಗ್ ದಾಖಲಾಗಿದ್ದು, ಬಿಡುಗಡೆಗೆ ವೇಳೆಗೆ ಹೊಸ ಕಾರಿನ ಬುಕ್ಕಿಂಗ್ ಪ್ರಮಾಣವು ದಾಖಲೆ ಮಟ್ಟಕ್ಕೆ ಏರಿಕೆಯಾಗಲಿದೆ. ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಸಬ್ ಫೋರ್ ಮೀಟರ್ ಕಾರು ಮಾದರಿಗಳಲ್ಲೇ ವಿಶೇಷ ವಿನ್ಯಾಸ ಮತ್ತು ಎಂಜಿನ್ ಆಯ್ಕೆ ಹೊಂದಿರುವ ಸೊನೆಟ್ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹೊಸ ಕಾರಿನಲ್ಲಿ ಪ್ರಮುಖ ಮೂರು ಎಂಜಿನ್ ಆಯ್ಕೆಗಳೊಂದಿಗೆ ಒಟ್ಟು 17 ವೆರಿಯೆಂಟ್‌ ಹೊಂದಿದೆ.

ಕರೋನಾ ಅಬ್ಬರದ ನಡುವೆ ಈ ವಾರದ ಟಾಪ್ 5 ಕಾರು ಸುದ್ದಿಗಳಿವು..!

ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ವೆನ್ಯೂ ಕಾರಿನಿಂದ ಎರವಲು ಪಡೆದುಕೊಂಡಿರುವ ಬಿಎಸ್-6 ವೈಶಿಷ್ಟ್ಯತೆಯ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದ್ದು, ಪರ್ಫಾಮೆನ್ಸ್ ಪ್ರಿಯರಿಗಾಗಿ 1.-0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯ ಆಯ್ಕೆ ನೀಡಲಾಗಿದೆ. ಹೆಚ್ಚಿನ ಮಾಹಿತಿ ಈ ಲಿಂಕ್ ಒತ್ತಿ..

ಕರೋನಾ ಅಬ್ಬರದ ನಡುವೆ ಈ ವಾರದ ಟಾಪ್ 5 ಕಾರು ಸುದ್ದಿಗಳಿವು..!

04. ಟೊಯೊಟಾ ಅರ್ಬನ್ ಕ್ರೂಸರ್ ಮಾಹಿತಿ ಬಹಿರಂಗ

ಅರ್ಬನ್ ಕ್ರೂಸರ್ ಕಾರು ವಿಟಾರಾ ಬ್ರೆಝಾ ಕಾರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಪಡೆದುಕೊಂಡಿರಲಿದ್ದು, ಗ್ಲಾಂಝಾ ರೀಬ್ಯಾಡ್ಜ್ ಕಾರು ಮಾದರಿಯ ನಂತರ ಮತ್ತಷ್ಟು ಹೊಸ ರೀಬ್ಯಾಡ್ಜ್ ಕಾರುಗಳನ್ನು ಬಿಡುಗಡೆ ಮಾಡಲು ಬೃಹತ್ ಯೋಜನೆ ರೂಪಿಸಿರುವ ಟೊಯೊಟಾ ಮತ್ತು ಮಾರುತಿ ಸುಜುಕಿ ಕಂಪನಿಗಳು ಅರ್ಬನ್ ಕ್ರೂಸರ್ ಮೂಲಕ ಕ್ರೆಟಾ ಮತ್ತು ಸೆಲ್ಟೊಸ್ ಕಾರಿಗೆ ಪೈಪೋಟಿ ನೀಡುವ ತವಕದಲ್ಲಿವೆ.

ಕರೋನಾ ಅಬ್ಬರದ ನಡುವೆ ಈ ವಾರದ ಟಾಪ್ 5 ಕಾರು ಸುದ್ದಿಗಳಿವು..!

ಹೊಸ ಅರ್ಬನ್ ಕ್ರೂಸರ್ ಕಾರು ವಿಟಾರಾ ಬ್ರೆಝಾದಲ್ಲಿ ಜೋಡಣೆ ಮಾಡಲಾಗಿರುವ 1.5-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ಹೈಬ್ರಿಡ್ ತಂತ್ರಜ್ಞಾನವನ್ನು ಪಡೆದುಕೊಳ್ಳಲಿದ್ದು, ಪರ್ಫಾಮೆನ್ಸ್ ಜೊತೆಗೆ ಉತ್ತಮ ಇಂಧನ ದಕ್ಷತೆಯನ್ನು ಹೊಂದಿರಲಿದೆ. ಈ ಮೂಲಕ ಗ್ರಾಹಕನ್ನು ಸೆಳೆಯುವ ಯೋಜನೆಯಲ್ಲಿರುವ ಟೊಯೊಟಾ ಕಂಪನಿಯು ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದೆ. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಒತ್ತಿ..

ಕರೋನಾ ಅಬ್ಬರದ ನಡುವೆ ಈ ವಾರದ ಟಾಪ್ 5 ಕಾರು ಸುದ್ದಿಗಳಿವು..!

05. ಬಿಡುಗಡೆಗಾಗಿ ಅಂತಿಮ ಹಂತದಲ್ಲಿ ನಿಸ್ಸಾನ್ ಮ್ಯಾಗ್ನೈಟ್

ನಿಸ್ಸಾನ್ ಕಂಪನಿಯು ತನ್ನ ಬಹುನೀರಿಕ್ಷಿತ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರನ್ನು ಕಳೆದ ವಾರವಷ್ಟೇ ಅನಾವರಣಗೊಳಿಸಿತ್ತು. ಇದೀಗ ಹೊಸ ಕಾರಿನ ಇಂಟಿರಿಯರ್ ಚಿತ್ರಗಳನ್ನು ಬಹಿರಂಗಪಡಿಸಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಳ್ಳಲಿದೆ.

ಕರೋನಾ ಅಬ್ಬರದ ನಡುವೆ ಈ ವಾರದ ಟಾಪ್ 5 ಕಾರು ಸುದ್ದಿಗಳಿವು..!

ಕಿಕ್ಸ್ ಕಾರಿನ ನಂತರ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆ ಮಾಡುತ್ತಿರುವ ನಿಸ್ಸಾನ್ ಕಂಪನಿಯು ಹೊಸ ಕಾರಿನ ಮೇಲೆ ಭಾರೀ ನೀರಿಕ್ಷೆಯಿಟ್ಟುಕೊಂಡಿದ್ದು, ಪ್ರತಿ ಸ್ಪರ್ಧಿ ಕಾರುಗಳಿಗೆ ಪೈಪೋಟಿಯಾಗಿ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಅಳವಡಿಸಿದೆ. ಕಾನ್ಸೆಪ್ಟ್ ಮಾದರಿಯು ಹಲವಾರು ಐಷಾರಾಮಿ ಸೌಲಭ್ಯಗಳನ್ನು ಪಡೆದುಕೊಂಡಿದ್ದು, ಬೆಲೆ ವಿಚಾರದಲ್ಲೂ ಗಮನಸೆಳೆಯಲಿವೆ.ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಒತ್ತಿ..

Most Read Articles

Kannada
English summary
Top Car News Of The Week. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X