ವಾರದ ವಿಶೇಷ: ಈ ವಾರದ ಟಾಪ್ 5 ಕಾರ್ ಸುದ್ದಿಗಳಿವು..

ಕರೋನಾ ವೈರಸ್ ಪರಿಣಾಮ ಸಂಪೂರ್ಣವಾಗಿ ನೆಲಕಚ್ಚಿದ್ದ ಆಟೋ ಉದ್ಯಮ ಇದೀಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ಹೊಸ ವಾಹನಗಳ ಮಾರಾಟ ಪ್ರಕ್ರಿಯೆಯಲ್ಲಿ ಹೆಚ್ಚಳ ಕಂಡುಬಂದಿದೆ. ಇದರಿಂದ ಹೊಸ ವಾಹನ ಬಿಡುಗಡೆ ಪ್ರಕ್ರಿಯೆಯೂ ಕೂಡಾ ಚುರುಕುಗೊಂಡಿದ್ದು, ಈ ವಾರದಲ್ಲೂ ಕೂಡಾ ಕೆಲವು ಹೊಸ ವಾಹನ ಮಾದರಿಗಳ ಬಿಡುಗಡೆಯ ಜೊತೆಗೆ ಬುಕ್ಕಿಂಗ್ ಪ್ರಕ್ರಿಯೆಗೂ ಚಾಲನೆ ಪಡೆದುಕೊಂಡಿವೆ.

ವಾರದ ವಿಶೇಷ: ಈ ವಾರದ ಟಾಪ್ 5 ಕಾರ್ ಸುದ್ದಿಗಳಿವು..

ದೇಶಾದ್ಯಂತ ಕರೋನಾ ವೈರಸ್ ಅಬ್ಬರ ಹೆಚ್ಚುತ್ತಿದ್ದರೂ ಕೂಡಾ ಹೊಸ ಸುರಕ್ಷಾ ಕ್ರಮಗಳಿಂದಾಗಿ ಆಟೋ ಉದ್ಯಮವು ಚೇತರಿಸಿಕೊಳ್ಳುತ್ತಿದೆ. ವೈರಸ್ ಭೀತಿಯಿಂದಾಗಿ ಹೊಸ ವಾಹನ ಮಾರಾಟವು ಚೇತರಿಸಿಕೊಳ್ಳುವಂತೆ ಮಾಡಿದ್ದು, ಬಹುತೇಕರು ಸಾರ್ವಜನಿಕ ಸಾರಿಗೆ ಸೌಲಭ್ಯವನ್ನು ಬಿಟ್ಟು ಸ್ವಂತ ವಾಹನಗಳಲ್ಲಿನ ಪ್ರಯಾಣಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಇದೇ ಕಾರಣಕ್ಕೆ ಆರ್ಥಿಕ ಸಂಕಷ್ಟದಲ್ಲೂ ಹೊಸ ವಾಹನಗಳ ಮಾರಾಟವು ಕೆಳೆದ ಎರಡು ತಿಂಗಳಿಂತಲೂ ಇದೀಗ ಸಾಕಷ್ಟು ಸುಧಾರಣೆ ಕಂಡಿದೆ. ಹಾಗಾದ್ರೆ ಈ ವಾರದ ಪ್ರಮುಖ ಕಾರು ಸುದ್ದಿಗಳನ್ನು ಈ ಲೇಖನದಲ್ಲಿ ನೋಡೋಣ.

ವಾರದ ವಿಶೇಷ: ಈ ವಾರದ ಟಾಪ್ 5 ಕಾರ್ ಸುದ್ದಿಗಳಿವು..

ಟೊಯೊಟಾ ಅರ್ಬನ್ ಕ್ರೂಸರ್ ಬಿಡುಗಡೆ

ಟೊಯೊಟಾ ಕಂಪನಿಯು ಮಾರುತಿ ಸುಜುಕಿ ಜೊತೆಗೂಡಿ ಅರ್ಬನ್ ಕ್ರೂಸರ್ ರೀಬ್ಯಾಡ್ಜ್ ಕಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆ ಮಾಡಿದ್ದು, ಮಿಡ್, ಹೈ ಮತ್ತು ಪ್ರೀಮಿಯಂ ಎಂಬ ಮೂರು ರೂಪಾಂತರಗಳಲ್ಲಿ ಖರೀದಿಗೆ ಲಭ್ಯವಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.40 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 11.30 ಲಕ್ಷ ಬೆಲೆ ಹೊಂದಿದೆ.

ವಾರದ ವಿಶೇಷ: ಈ ವಾರದ ಟಾಪ್ 5 ಕಾರ್ ಸುದ್ದಿಗಳಿವು..

ಟೊಯೊಟಾ ಅರ್ಬನ್ ಕ್ರೂಸರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಮಾರುತಿ ಸುಜುಕಿ ವಿಟಾರಾ ಬ್ರೆಝಾ ಮಾದರಿಯಂತೆ ಎಂಜಿನ್ ಆಯ್ಕೆ ಹೊಂದಿದೆ. ಬಿಎಸ್-6 ಪ್ರೇರಿತ ಕೆ-ಸೀರಿಸ್ 1.5-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ 104-ಬಿಎಚ್‌ಪಿ ಮತ್ತು 138-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ. ಪೆಟ್ರೋಲ್ ಎಂಜಿನ್ ಮಾದರಿಯು ಆರಂಭಿಕ ಆವೃತ್ತಿಗಳಲ್ಲಿ 5-ಸ್ಪೀಡ್ ಮ್ಯಾನುವಲ್ ಮತ್ತು ಹೈ ಎಂಡ್ ಮಾದರಿಗಳಲ್ಲಿ 4-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ..

ವಾರದ ವಿಶೇಷ: ಈ ವಾರದ ಟಾಪ್ 5 ಕಾರ್ ಸುದ್ದಿಗಳಿವು..

ಎಂಜಿ ಗ್ಲೊಸ್ಟರ್ ಎಸ್‌ಯುವಿ ಬುಕ್ಕಿಂಗ್ ಶುರು

ಪ್ರೀಮಿಯಂ ಎಸ್‌ಯುವಿ ಕಾರು ಮಾದರಿಯಾಗಿರುವ ಗ್ಲೊಸ್ಟರ್ ಮಾದರಿಯನ್ನು ಮೊದಲ ಬಾರಿಗೆ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಿದ್ದ ಎಂಜಿ ಮೋಟಾರ್ ಕಂಪನಿಯು ಇದೀಗ ಅಧಿಕೃತವಾಗಿ ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು 2.0-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಲೆವಲ್ 1 ಅಟೊನೊಮಸ್ ಸಿಸ್ಟಂ ಸೇರಿ ಹತ್ತಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ರಸ್ತೆಗಿಳಿಯುತ್ತಿದೆ.

ವಾರದ ವಿಶೇಷ: ಈ ವಾರದ ಟಾಪ್ 5 ಕಾರ್ ಸುದ್ದಿಗಳಿವು..

ಮುಂದಿನ ತಿಂಗಳು ಅಕ್ಟೋಬರ್ ಮಧ್ಯಂತರದಲ್ಲಿ ಬಿಡುಗಡೆಯಾಗುವ ಹೊಸ ಕಾರು ಖರೀದಿಗೆ ಈಗಾಗಲೇ ರೂ.1 ಲಕ್ಷ ಮುಂಗಡದೊಂದಿಗೆ ಬುಕ್ಕಿಂಗ್ ಸಲ್ಲಿಸಬಹುದಾಗಿದ್ದು, ಹೊಸ ಕಾರು ಪ್ರೀಮಿಯಂ ಫೀಚರ್ಸ್ ಮತ್ತು ಎಂಜಿನ್ ಸೌಲಭ್ಯಕ್ಕೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 35 ಲಕ್ಷದಿಂದ ರೂ.40 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ..

ವಾರದ ವಿಶೇಷ: ಈ ವಾರದ ಟಾಪ್ 5 ಕಾರ್ ಸುದ್ದಿಗಳಿವು..

ಫೋರ್ಡ್ ಎಂಡೀವರ್ ಸ್ಪೋರ್ಟ್ ಬಿಡುಗಡೆ

ಫೋರ್ಡ್ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಎಸ್‌ಯುವಿ ಕಾರು ಮಾದರಿಯಾದ ಎಂಡೀವರ್ ಆವೃತ್ತಿಯಲ್ಲಿ ಸ್ಪೋರ್ಟ್ ವೆರಿಯೆಂಟ್ ಬಿಡುಗಡೆ ಮಾಡಿದ್ದು, ಟೈಟಾನಿಯಂ ಪ್ಲಸ್ 4x4 ಮಾದರಿಯನ್ನು ಆಧರಿಸಿರುವ ಹೊಸ ಕಾರು ಆವೃತ್ತಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.35.10 ಲಕ್ಷ ಬೆಲೆ ಹೊಂದಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ವಾರದ ವಿಶೇಷ: ಈ ವಾರದ ಟಾಪ್ 5 ಕಾರ್ ಸುದ್ದಿಗಳಿವು..

ಟೊಯೊಟಾ ಫಾರ್ಚೂನರ್ ಟಿಆರ್‌ಡಿ ಸ್ಪೋರ್ಟಿ ಎಸ್‍ಯುವಿ ಕಾರಿಗೆ ಪೈಪೋಟಿ ನೀಡಲು ಫೋರ್ಡ್ ಕಂಪನಿಯು ಈ ಹೊಸ ಎಂಡೀವರ್ ಸ್ಪೋರ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿದ್ದು, 2.0-ಲೀಟರ್ ಇಕೋಬ್ಲ್ಯೂ ಡೀಸೆಲ್ ಎಂಜಿನ್ ಪ್ರೇರಿತ ಹೊಸ ಕಾರಿನಲ್ಲಿ ಹಲವಾರು ಸ್ಪೋರ್ಟಿ ವಿನ್ಯಾಸದ ಜೊತೆಗೆ ಬ್ಲ್ಯಾಕ್ ಥೀಮ್ ನೀಡಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ..

ವಾರದ ವಿಶೇಷ: ಈ ವಾರದ ಟಾಪ್ 5 ಕಾರ್ ಸುದ್ದಿಗಳಿವು..

ಕಿಯಾ ಸೊನೆಟ್ ಜಿಟಿಎಕ್ಸ್ ಪ್ಲಸ್ ಬೆಲೆ ಮಾಹಿತಿ

ಕಿಯಾ ಮೋಟಾರ್ಸ್ ಕಂಪನಿಯು ಕಳೆದ ವಾರವಷ್ಟೇ ತನ್ನ ಬಹುನೀರಿಕ್ಷಿತ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡಿತ್ತು. ಈ ವೇಳೆ ಜಿಟಿಎಕ್ಸ್ ಪ್ಲಸ್ ಆಟೋಮ್ಯಾಟಿಕ್ ಆವೃತ್ತಿಗಳ ಬೆಲೆ ಮಾಹಿತಿ ಹಂಚಿಕೊಂಡಿರಲಿಲ್ಲ. ಇದೀಗ ಹೊಸ ಮಾದರಿಗಳ ಬೆಲೆ ಮಾಹಿತಿ ಹಂಚಿಕೊಂಡಿದ್ದು, ಹೊಸ ಕಾರು ಇದೀಗ ಕಂಪ್ಯಾಕ್ಟ್ ಎಸ್‌ಯುವಿ ಕಾರಿನಲ್ಲೇ ದುಬಾರಿ ಕಾರು ಮಾದರಿಯಾಗಿರಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ವಾರದ ವಿಶೇಷ: ಈ ವಾರದ ಟಾಪ್ 5 ಕಾರ್ ಸುದ್ದಿಗಳಿವು..

ಸೊನೆಟ್ ಕಾರು ಇದೀಗ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.71 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.89 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರು ಜಿಟಿ-ಲೈನ್ ಮತ್ತು ಟೆಕ್ ಲೈನ್ ಖರೀದಿಗೆ ಲಭ್ಯವಿರಲಿವೆ. ಕಿಯಾ ಸೊನೆಟ್ ಕಾರು ಮಾದರಿಯಲ್ಲಿ ಮೂರು ಮಾದರಿಯ ಎಂಜಿನ್ ಆಯ್ಕೆ ನೀಡಲಾಗಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ 1.2-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಮಾದರಿಯನ್ನು ನೀಡಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ..

ವಾರದ ವಿಶೇಷ: ಈ ವಾರದ ಟಾಪ್ 5 ಕಾರ್ ಸುದ್ದಿಗಳಿವು..

ಮರ್ಸಿಡಿಸ್-ಎಎಂಜಿ ಜಿಎಲ್ಇ 53 ಕೂಪೆ

ಮರ್ಸಿಡಿಸ್ ಬೆಂಝ್ ಇಂಡಿಯಾ ಕಂಪನಿಯು ತನ್ನ ಹೊಸ ಮರ್ಸಿಡಿಸ್-ಎಎಂಜಿ ಜಿಎಲ್ಇ 53 ಕೂಪೆ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದು, ಹೊಸ ಕೂಪೆ ಕಾರು ಪ್ಯಾನ್ ಇಂಡಿಯಾ ಎಕ್ಸ್ ಶೋರೂಂ ಪ್ರಕಾರ ರೂ.1.20 ಕೋಟಿ ಬೆಲೆ ಹೊಂದಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ವಾರದ ವಿಶೇಷ: ಈ ವಾರದ ಟಾಪ್ 5 ಕಾರ್ ಸುದ್ದಿಗಳಿವು..

ಮರ್ಸಿಡಿಸ್-ಎಎಂಜಿ ಜಿಎಲ್ಇ 53 ಕೂಪೆಯಲ್ಲಿ 3.0-ಲೀಟರ್ ಸಿಕ್ಸ್ ಸಿಲಿಂಡರ್, ಟ್ವಿನ್-ಟರ್ಬೋಚಾರ್ಜ್ಡ್ ಎಂಜಿನ್ ಅನ್ನು ಅಳವಡಿಸಲಾಗಿದ್ದು, ಈ ಎಂಜಿನ್ ಕಂಪನಿಯ 48-ವೋಲ್ಟ್ ಇಕ್ಯೂ ಬೂಸ್ಟ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಣೆ ಹೊಂದಿದೆ.ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ..

Most Read Articles
https://kannada.drivespark.com/four-wheelers/2020/mg-zs-ev-delivery-starts-eesl-gets-first-order-018034.html

Kannada
English summary
Top Car News Of The Week. Read in Kannada.
Story first published: Sunday, September 27, 2020, 15:27 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X