ನವೆಂಬರ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಐದು ಕಾರು ಮಾದರಿಗಳಿವು..!

ಕರೋನಾ ವೈರಸ್ ಪರಿಣಾಮ ಆರಂಭದಲ್ಲಿ ಸಾಕಷ್ಟು ನಷ್ಟ ಅನುಭವಿಸಿದ್ದ ಆಟೋ ಉದ್ಯಮವು ಇದೀಗ ಚೇತರಿಸಿಕೊಂಡಿದ್ದು, ಹೊಸ ವಾಹನಗಳ ಮಾರಾಟ ಪ್ರಕ್ರಿಯೆ ಜೋರಾಗಿದೆ. ಜೊತೆಗೆ ವಾಹನ ಬಿಡುಗಡೆ ಪ್ರಕ್ರಿಯೆಯೂ ಕೂಡಾ ಚೇತರಿಸಿಕೊಂಡಿದ್ದು, ನವೆಂಬರ್ ಅವಧಿಯಲ್ಲಿ ಹಲವು ಹೊಸ ಕಾರುಗಳು ಮಾರುಕಟ್ಟೆ ಪ್ರವೇಶಿಸಿವೆ.

ನವೆಂಬರ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು..!

ಕರೋನಾ ಭೀತಿಯಿಂದಾಗಿ ಸ್ವಂತ ವಾಹನಗಳ ಬಳಕೆಯಲ್ಲಿ ಸಾಕಷ್ಟು ಏರಿಕೆಯಾಗಿದ್ದು, ಇದೇ ಕಾರಣಕ್ಕೆ ಹಲವಾರು ಹೊಸ ವಾಹನಗಳು ನೀರಿಕ್ಷೆಗೂ ಮಿರಿ ಬೇಡಿಕೆ ಪಡೆದುಕೊಳ್ಳುತ್ತಿವೆ. ಮುಂಬರುವ ದಿನಗಳಲ್ಲಿ ವಾಹನ ಮಾರಾಟವು ಇನ್ನಷ್ಟು ಹೆಚ್ಚಳವಾಗುವ ನೀರಿಕ್ಷೆಗಳಿದ್ದು, ಇದೇ ಕಾರಣಕ್ಕೆ ಹೊಸ ವಾಹನಗಳ ಬಿಡುಗಡೆ ಪ್ರಕ್ರಿಯೆ ಜೋರಾಗಿದೆ. ಹಾಗಾದ್ರೆ ನವೆಂಬರ್‌ನಲ್ಲಿ ಬಿಡುಗಡೆಯಾದ ಪ್ರಮುಖ ಕಾರುಗಳು ಯಾವುವು? ಎಂಬುವುದನ್ನು ಈ ಲೇಖನದಲ್ಲಿ ನೋಡೋಣ.

ನವೆಂಬರ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು..!

ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಬಿಡುಗಡೆ

2005ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಂಡಿದ್ದ ಇನೋವಾ ಕಾರು ಮಾದರಿಯು ಕಳೆದ 2016ರಲ್ಲಿ ನ್ಯೂ ಜನರೇಷನ್ ಫೀಚರ್ಸ್‌ಗಳೊಂದಿಗೆ ಇನೋವಾ ಕ್ರಿಸ್ಟಾ ಮಾದರಿಯಾಗಿ ಬಿಡುಗಡೆಗೊಂಡಿತ್ತು. ಇದೀಗ ಹೊಸ ಬದಲಾವಣೆಯೊಂದಿಗೆ 2021ರ ಫೇಸ್‌ಲಿಫ್ಟ್ ಮಾದರಿಯನ್ನು ಬಿಡಗಡೆ ಮಾಡಲಾಗಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 16.26 ಲಕ್ಷದಿಂದ ಟಾಪ್ ಎಂಡ್ ಮಾದರಿಯು 24.33 ಲಕ್ಷ ಬೆಲೆ ಪಡೆದುಕೊಂಡಿದೆ.

ನವೆಂಬರ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು..!

ಹೊಸ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಮಾದರಿಯು ಜಿಎಕ್ಸ್, ವಿಎಕ್ಸ್ ಮತ್ತು ಜೆಡ್ಎಕ್ಸ್ ಎಂಬ ಮೂರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಫೀಚರ್ಸ್ ಅಳವಡಿಕೆ ನಂತರ ಕಾರಿನ ಬೆಲೆಯು ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ. 60 ಸಾವಿರದಿಂದ ರೂ.70 ಸಾವಿರದಷ್ಟು ಹೆಚ್ಚುವರಿ ಬೆಲೆ ಪಡೆದುಕೊಂಡಿದೆ. ಪ್ರೀಮಿಯಂ ಫೀಚರ್ಸ್ ಹೊರತಾಗಿ ಎಂಜಿನ್ ಆಯ್ಕೆಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ.

ನವೆಂಬರ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು..!

ನ್ಯೂ ಜನರೇಷನ್ ಹ್ಯುಂಡೈ ಐ20 ಬಿಡುಗಡೆ

ಹ್ಯುಂಡೈ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಮಾದರಿಯಾದ ಐ20 ನ್ಯೂ ಜನರೇಷನ್ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದ್ದು, ಹೊಸ ಕಾರು ಸ್ಪೋರ್ಟಿ ವಿನ್ಯಾಸದೊಂದಿಗೆ ಹ್ಯಾಚ್‌ಬ್ಯಾಕ್ ಕಾರು ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸಿದೆ,.ಹೊಸ ಕಾರು ಪ್ರಮುಖ ಮೂರು ಎಂಜಿನ್ ಮಾದರಿಗಳೊಂದಿಗೆ ಬಿಡುಗಡೆಗೊಂಡಿದ್ದು, ಹೊಸ ಕಾರಿನ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.79 ಲಕ್ಷದಿಂದ ಟಾಪ್ ಎಂಡ್ ಮಾದರಿಯ ಬೆಲೆಯನ್ನು ರೂ. 11.17 ಲಕ್ಷಕ್ಕೆ ನಿಗದಿಪಡಿಸಲಾಗಿದೆ.

ನವೆಂಬರ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು..!

ಹೊಸ ಕಾರಿನಲ್ಲಿ ಒಂದು ಡೀಸೆಲ್ ಮತ್ತು ಎರಡು ಪೆಟ್ರೋಲ್ ಎಂಜಿನ್‌ಗಳ ಆಯ್ಕೆ ನೀಡಿದ್ದು, 1.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಮಾದರಿಯು ಡಿಸಿಟಿ ಅಥವಾ ಆರು-ಸ್ಪೀಡಿನ ಐಎಂಟಿ ಟ್ರಾನ್ಸ್ ಮಿಷನ್‌ನೊಂದಿಗೆ 120-ಬಿಹೆಚ್‌ಪಿ ಉತ್ಪಾದಿಸುತ್ತದೆ. 1.2-ಲೀಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ ಹೊಂದಿರುವ ಎನ್‌ಎ ಕಪ್ಪಾ ಎಂಜಿನ್ ಮಾದರಿಯು ಐದು-ಸ್ಪೀಡಿನ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 83-ಬಿಹೆಚ್‌ಪಿ ಪವರ್ ಉತ್ಪಾದಿಸಲಿದ್ದರೆ, 1.5-ಲೀಟರಿನ ಡೀಸೆಲ್ ಎಂಜಿನ್ ಮಾದರಿಯು ಆರು-ಸ್ಪೀಡಿನ ಮ್ಯಾನ್ಯುವಲ್ ಗೇರ್‌ಬಾಕ್ಸ್‌ ಆಯ್ಕೆಯೊಂದಿಗೆ 100-ಬಿಹೆಚ್‌ಪಿ ಮತ್ತು 240-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ನವೆಂಬರ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು..!

ಟಾಟಾ ಹ್ಯಾರಿಯರ್ ಕ್ಯಾಮೊ ಎಡಿಷನ್ ಬಿಡುಗಡೆ

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಜನಪ್ರಿಯ ಮಧ್ಯಮ ಕ್ರಮಾಂಕದ ಎಸ್‌ಯುವಿ ಮಾದರಿಯಾದ ಹ್ಯಾರಿಯರ್ ಕಾರಿನಲ್ಲಿ ಹೊಸ ಬಣ್ಣದ ಆಯ್ಕೆ ಹೊಂದಿರುವ ಕ್ಯಾಮೊ ಎಡಿಷನ್ ಬಿಡುಗಡೆ ಮಾಡಿದ್ದು, ಹೊಸ ಆವೃತ್ತಿಯು ವಿವಿಧ ವೆರಿಯೆಂಟ್‌ಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 16.40 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 20.30 ಲಕ್ಷ ಬೆಲೆ ಹೊಂದಿದೆ.

ನವೆಂಬರ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು..!

ಹ್ಯಾರಿಯರ್ ಕ್ಯಾಮೊ ಎಡಿಷನ್ ಮಾದರಿಯು ಎಕ್ಸ್‌ಟಿ , ಎಕ್ಸ್‌ಟಿ ಪ್ಲಸ್, ಎಕ್ಸ್‌ಜೆಡ್, ಎಕ್ಸ್‌ಜೆಡ್ ಪ್ಲಸ್, ಎಕ್ಸ್‌ಜೆಡ್ಎ ಮತ್ತು ಎಕ್ಸ್‌ಜೆಡ್ಎ ಪ್ಲಸ್ ವೆರಿಯೆಂಟ್ ಹೊಂದಿದ್ದು, ಕ್ಯಾಮೊ ಎಡಿಷನ್ ಮಾದರಿಯು ಸ್ಟ್ಯಾಂಡರ್ಡ್ ಮಾದರಿಗಿಂತ ಹೆಚ್ಚುವರಿಯಾಗಿ ರೂ.10 ಸಾವಿರದಿಂದ ರೂ.30 ಸಾವಿರದಷ್ಟು ದುಬಾರಿಯಾಗಿರಲಿದೆ.

ನವೆಂಬರ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು..!

ಮರ್ಸಿಡಿಸ್-ಎಎಂಜಿ ಜಿಎಲ್‌ಸಿ 43 ಕೂಪೆ ಬಿಡುಗಡೆ

ಮರ್ಸಿಡಿಸ್ ಬೆಂಝ್ ಇಂಡಿಯಾ ಕಂಪನಿಯು ಭಾರತದಲ್ಲೇ ಪೂರ್ಣ ಪ್ರಮಾಣದ ಕಾರು ಅಭಿವೃದ್ದಿಗಾಗಿ ಹಂತ-ಹಂತವಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಇದೀಗ ಹೊಸ ಯೋಜನೆ ಅಡಿ ನಿರ್ಮಾಣವಾದ ಮೊದಲ ಹೈ ಪರ್ಫಾಮೆನ್ಸ್ ಕಾರು ಆವೃತ್ತಿಯಾದ ಮರ್ಸಿಡಿಸ್-ಎಎಂಜಿ ಜಿಎಲ್‌ಸಿ 43 ಕೂಪೆ ಕಾರು ಮಾದರಿಯನ್ನು ಬಿಡುಗಡೆ ಮಾಡಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ನವೆಂಬರ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು..!

ಪುಣೆಯಲ್ಲಿರುವ ಚಾಕನ್ ಕಾರು ಉತ್ಪಾದನಾ ಘಟಕದಲ್ಲಿ ಮರ್ಸಿಡಿಸ್-ಎಎಂಜಿ ಜಿಎಲ್‌ಸಿ 43 ಕೂಪೆ ಮಾದರಿಯನ್ನು ಅಭಿವೃದ್ದಿಗೊಳಿಸಿರುವ ಮರ್ಸಿಡಿಸ್ ಬೆಂಝ್ ಕಂಪನಿಯು ಹೊಸ ಕಾರಿನ ಬೆಲೆಯನ್ನು ಎಕ್ಸ್‌ಶೋರೂಂ ದರದಂತೆ ರೂ.76.70 ಲಕ್ಷಕ್ಕೆ ನಿಗದಿಪಡಿಸಿದ್ದು, ಹೊಸ ಕಾರು 3.0-ಲೀಟರ್ ವಿ6 ಪೆಟ್ರೋಲ್ ಎಂಜಿನ್‌ನೊಂದಿಗೆ 390-ಬಿಎಚ್‌ಪಿ ಮತ್ತು 520-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ನವೆಂಬರ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು..!

ಬಿಎಂಡಬ್ಲ್ಯು ಎಕ್ಸ್5 ಎಂ ಕಾಂಪಿಟೇಷನ್ ಬಿಡುಗಡೆ

ಜರ್ಮನ್ ಮೂಲದ ವಾಹನ ತಯಾರಕ ಕಂಪನಿಯಾದ ಬಿಎಂಡಬ್ಲ್ಯು ತನ್ನ ಹೊಸ ಎಕ್ಸ್5 ಎಂ ಕಾಂಪಿಟೇಷನ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಬಿಎಂಡಬ್ಲ್ಯು ಎಕ್ಸ್5 ಎಂ ಕಾಂಪಿಟೇಷನ್ ಎಸ್‍ಯುವಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ. 1.94 ಕೋಟಿಗಳಾಗಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ನವೆಂಬರ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು..!

ಹೊಸ ಬಿಎಂಡಬ್ಲ್ಯು ಎಕ್ಸ್5 ಎಂ ಕಾಂಪಿಟೇಷನ್ ಪರ್ಫಾಮೆನ್ಸ್-ಆಧಾರಿತ ಎಸ್‍ಯುವಿಯಾಗಿದ್ದು, 4.4-ಲೀಟರ್ ಎಂ-ಟ್ವಿನ್-ಟರ್ಬೋಚಾರ್ಜ್ಡ್ ವಿ8 ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಹೈ-ರಿವೈವಿಂಗ್ ಎಂಜಿನ್ ಮಾದರಿಯು 625-ಬಿಹೆಚ್‍ಪಿ ಪವರ್ ಮತ್ತು 750-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

Most Read Articles

Kannada
English summary
New Car Launched In November 2020. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X