2020ರಲ್ಲಿ ಬಿಡುಗಡೆಯಾದ ಟಾಪ್ 5 ಐಷಾರಾಮಿ ಕಾರುಗಳಿವು
2020ರ ಅವಧಿಯಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಕೊರೊನಾ ವೈರಸ್ ಆರ್ಭಟದ ನಡುವೆ ಹಲವಾರು ಜನಪ್ರಿಯ ಕಾರುಗಳು ಬಿಡುಗಡೆಯಾಗಿವೆ. ಐಷಾರಾಮಿ ಕಾರು ವಿಭಾಗವು ಇದಕ್ಕೆ ಹೊರತಾಗಿಲ್ಲ. ಈ ವರ್ಷ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಟಾಪ್ 5 ಐಷಾರಾಮಿ ಕಾರುಗಳ ಮಾಹಿತಿ ಇಲ್ಲಿವೆ.

ಆಡಿ ಕ್ಯೂ2
ಆಡಿ ಇಂಡಿಯ ಕಂಪನಿಯು ತನ್ನ ಜನಪ್ರಿಯ ಎಂಟ್ರಿ ಲೆವೆಲ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ 2020ರ ಅಕ್ಟೋಬರ್ 16 ರಂದು ಬಿಡುಗಡೆಗೊಳಿಸಿತ್ತು. ಆಡಿ ಕ್ಯೂ2 ಎಂಕ್ಯೂಬಿ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ, ಇನ್ನು ಈ ಹೊಸ ಆಡಿ ಕ್ಯೂ2 ಎಸ್‍ಯುವಿಯಲ್ಲಿ 2.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 190 ಬಿಹೆಚ್ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 7-ಸ್ಪೀಡ್ ಡ್ಯುಯಲ್-ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ.

ಹೊಸ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾಂಡ್ ಕೂಪೆ
ಬವೇರಿಯನ್ ಕಾರು ತಯಾರಕರ ಭಾರತೀಯ ಸಾಲಿನಲ್ಲಿ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾಂಡ್ ಕೂಪೆ 4-ಡೋರಿನ ಸೆಡಾನ್ ಆಗಿದೆ. ಈ ಐಷಾರಾಮಿ ಕಾರನ್ನು 2020ರ ಅಕ್ಟೋಬರ್ 15ರಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಿತ್ತು.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಈ ಎಂಟ್ರಿ ಲೆವೆಲ್ ಬಿಎಂಡಬ್ಲ್ಯು 2-ಸೀರಿಸ್ ಕಾರು ಫ್ರಂಟ್-ವ್ಹೀಲ್-ಡ್ರೈವ್ ಕಾನ್ಫಿಗರೇಶನ್ ಹೊಂದಿದೆ. ಈ ಹೊಸ ಬಿಎಂಡಬ್ಲ್ಯು 2-ಸೀರಿಸ್ ಗ್ರ್ಯಾನ್ ಕೂಪೆ ಕಾರು ಯುಕೆಎಲ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ. ಇನ್ನು ಎಫ್‌ಎಆರ್ ಪ್ಲಾಟ್‌ಫಾರ್ಮ್ ಅನ್ನು ಬಿಎಂಡಬ್ಲ್ಯು ಗ್ರೂಪ್‌ನ ಭಾಗವಾಗಿರುವ ಮಿನಿ ಬ್ರಾಂಡ್‌ನಿಂದ ಪಡೆಯಲಾಗಿದೆ.

ಈ ಹೊಸ ಬಿಎಂಡಬ್ಲ್ಯು 2 ಸೀರಿಸ್ ಗ್ರ್ಯಾಂಡ್ ಕೂಪೆ ಕಾರಿನಲ್ಲಿ ಲೀಟರ್ 4-ಸಿಲಿಂಡರ್ ಟರ್ಬೊ-ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈಎಂಜಿನ್ 187 ಬಿಹೆಚ್‌ಪಿ ಪವರ್ ಮತ್ತು 400 ಎನ್‌ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 8-ಸ್ಪೀಡ್ ಸ್ಟೆಪ್ಟ್ರಾನಿಕ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ನೀಡಲಾಗಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಲ್ಯಾಂಡ್ ರೋವರ್ ಡಿಫೆಂಡರ್ ಎಸ್‍ಯುವಿ
ಲ್ಯಾಂಡ್ ರೋವರ್ ಕಂಪನಿಯು ತನ್ನ ಬಹುನಿರೀಕ್ಷಿತ ಡಿಫೆಂಡರ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ 2020ರ ಅಕ್ಟೋಬರ್ 16 ರಂದು ಭಾರತದಲ್ಲಿ ಬಿಡುಗಡೆಗೊಳಿಸಿತು. ಲ್ಯಾಂಡ್ ರೋವರ್ ಡಿಫೆಂಡರ್ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮೆಚ್ಚುಗೆಯನ್ನು ಪಡೆದುಕೊಂಡ ಐಕಾನಿಕ್ ಆಫ್-ರೋಡ್ ಎಸ್‍ಯುವಿಯಾಗಿದೆ.

ಯುರೋ ಎನ್‌ಸಿಎಪಿ ಇತ್ತೀಚೆಗೆ ನಡೆಸಿದ ಕ್ರ್ಯಾಶ್ ಟೆಸ್ಟ್ನಲ್ಲಿ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‍ಯುವಿಯು 5 ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದುಕೊಂಡಿದೆ. ಹೊಸ ಡಿಫೆಂಡರ್ ಭಾರತಕ್ಕೆ ಕಂಪ್ಲೀಟ್ ಬಿಲ್ಟ್ ಯುನಿಟ್ (ಸಿಬಿಯು) ಆಗಿ ತರಲಾಗಿದೆ. ಇದು ಬೇಸ್, ಎಸ್, ಎಸ್ಇ, ಹೆಚ್ಎಸ್ಇ ಮತ್ತು ಫಸ್ಟ್ ಎಡಿಷನ್ ಎಂಬ ಐದು ರೂಪಾಂತರಗಳಲ್ಲಿ ಲಭ್ಯವಿದೆ. 3-ಡೋರಿನ ಮಾದರಿಯನ್ನು ಡಿಫೆಂಡರ್ 90 ಆದರೆ 5-ಡೋರಿನ ಮಾದರಿಯು ಡಿಫೆಂಡರ್ 110 ಎಂದು ಕರೆಯಲಾಗುತ್ತದೆ.
MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಇಂಡಿಯಾ-ಸ್ಪೆಕ್ ಡಿಫೆಂಡರ್ ಎಸ್‍ಯುವಿಯಲ್ಲಿ 2.0-ಲೀಟರ್, ನಾಲ್ಕು ಸಿಲಿಂಡರ್, ಬಿಎಸ್ 6 ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 92 ಬಿಹೆಚ್‌ಪಿ ಮತ್ತು 400 ಎನ್‌ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತದೆ. ಹೊಸ ಡಿಫೆಂಡರ್ ಲ್ಯಾಂಡ್ ರೋವರ್‌ನ ಟೆರೈನ್ ರೆಸ್ಪಾನ್ಸ್ 2 ಸಿಸ್ಟಂ ಅನ್ನು ಸಹ ಪಡೆಯುತ್ತದೆ.

ಮರ್ಸಿಡಿಸ್ ಬೆಂಝ್ ಇಕ್ಯೂಸಿ
ಐಷಾರಾಮಿ ಕಾರು ತಯಾರಕ ಕಂಪನಿಯಾದ ಮರ್ಸಿಡಿಸ್ ಬೆಂಝ್ ತನ್ನ ಮೊದಲ ಪ್ರೀಮಿಯಂ ಎಲೆಕ್ಟ್ರಿಕ್ ಎಸ್‍ಯುವಿಯಾದ ಇಕ್ಯೂಸಿ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ 2020ರ ಅಕ್ಟೋಬರ್ 8ರಂದು ಬಿಡುಗಡೆಗೊಳಿಸಿತ್ತು. ಈ ಐಷಾರಾಮಿ ಇಕ್ಯೂಸಿಯನ್ನು ಮುಂಬೈ, ಪುಣೆ, ದೆಹಲಿ, ಹೈದರಾಬಾದ್, ಚೆನ್ನೈ ಮತ್ತು ಬೆಂಗಳೂರಿನಲ್ಲಿ ಮಾರಾಟ ಮಾಡಲಾಗುವುದು.

ಈ ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯನ್ನು ಭಾರತಕ್ಕೆ ಸಿಬಿಯು ಮಾರ್ಗದ ಮೂಲಕ ತರಲಾಗುತ್ತಿದೆ. ಈ ಹೊಸ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯಲ್ಲಿ 80 ಕಿ.ವ್ಯಾಟ್ ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕನ್ನು ಅಳವಡಿಸಲಾಗಿದೆ.ಈ ಬ್ಯಾಟರಿಯನ್ನು ಪೂರ್ತಿಯಾಗಿ ಚಾರ್ಜ್ ಮಾಡಿದರೆ 471 ಕಿ.ಮೀಗಳವರೆಗೆ ಚಲಿಸುತ್ತದೆ.

ಮರ್ಸಿಡಿಸ್-ಎಎಂಜಿ ಜಿಎಲ್‌ಸಿ 43 ಕೂಪೆ
ಮರ್ಸಿಡಿಸ್ ಬೆಂಝ್ ತನ್ನ ಮರ್ಸಿಡಿಸ್-ಎಎಂಜಿ ಜಿಎಲ್‌ಸಿ 43 ಕೂಪೆ ಮಾದರಿಯನ್ನು 2020ರ ನವೆಂಬರ್ 3 ರಂದು ಭಾರತದಲ್ಲಿ ಬಿಡುಗಡೆಗೊಳಿಸಿತ್ತು. ಈ ಹೊಸ ಮರ್ಸಿಡಿಸ್-ಎಎಂಜಿ ಜಿಎಲ್‌ಸಿ 43 ಕೂಪೆ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.20 ಕೋಟಿಗಳಾಗಿದೆ.

ಮರ್ಸಿಡಿಸ್-ಎಎಂಜಿ ಜಿಎಲ್‌ಸಿ 43 ಕೂಪೆ ಮಾದರಿಯಲ್ಲಿ ಲೀಟರ್ ಟ್ವಿನ್-ಟರ್ಬೊ ಎಂಜಿನ್ ಅನ್ನು ಅಳವಡಿಸಳಾಗಿದೆ. ಈ ಎಂಜಿನ್ 435 ಬಿಹೆಚ್ಪಿ ಪವರ್ ಮತ್ತು 520 ಎನ್‌ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.ಈ ಇನ್ನು ಹೊಸ ಮರ್ಸಿಡಿಸ್-ಎಎಂಜಿ ಜಿಎಲ್‌ಸಿ 43 ಕೂಪೆ 250 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಈ ಮರ್ಸಿಡಿಸ್ ಬೆಂಝ್ ಎಎಂಜಿ ಜಿಎಲ್‌ಸಿ 43 ಕೂಪೆ ಕೇವಲ 5.3 ಸೆಕೆಂಡುಗಳಲ್ಲಿ 0-100 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ.


Click it and Unblock the Notifications