Just In
Don't Miss!
- News
ಹುಣಸೋಡು ಜಿಲೆಟಿನ್ ಸ್ಪೋಟ: ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ
- Sports
ಯುವರಾಜ್ ಸಿಂಗ್ ಕೋಚಿಂಗ್ ಬಹಳ ಉಪಯೋಗಕ್ಕೆ ಬಂತು: ಗಿಲ್
- Lifestyle
ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ? ಈ ಆಹಾರ ಸೇವಿಸಿ
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಟಾಪ್ 5 ಆಟೋ ಸುದ್ದಿ: ಪಾರ್ಕಿಂಗ್ ನೀತಿ ಜಾರಿಗೆ ಸಿದ್ದತೆ, ಮ್ಯಾಗ್ನೈಟ್ ಕಾರು ಬಿಡುಗಡೆ, ಪ್ರವೈಗ್ ಇವಿ ಅನಾವರಣ..
ಭಾರತೀಯ ಆಟೋ ಉದ್ಯಮವು ಕರೋನಾ ವೈರಸ್ ಭೀತಿಯ ನಡುವೆಯೂ ಉತ್ತಮ ಬೆಳವಣಿಗೆ ಸಾಧಿಸಿದ್ದು, ಹಲವು ಆಟೋ ಕಂಪನಿಗಳು ಕಳೆದ ವರ್ಷಕ್ಕಿಂತಲೂ ಹೆಚ್ಚಿನ ಮಟ್ಟದ ಬೇಡಿಕೆ ದಾಖಲಿಸಿವೆ. ಇದರೊಂದಿಗೆ ಹೊಸ ವಾಹನಗಳ ಬಿಡುಗಡೆಯ ಪ್ರಕ್ರಿಯೆ ಜೊತೆಗೆ ನಮ್ಮ ಬೆಂಗಳೂರಿನಲ್ಲಿ ಹೊಸ ಹೊಸ ಪಾರ್ಕಿಂಗ್ ನೀತಿ ಜಾರಿಗೆ ಬರುತ್ತಿರುವುದು ಈ ವಾರದ ಪ್ರಮುಖ ಸುದ್ದಿಯಾಗಿದೆ.

ಈ ವಾರದ ಪ್ರಮುಖ ಸುದ್ದಿಗಳಲ್ಲಿ ಬೆಂಗಳೂರಿನಲ್ಲಿ ಜಾರಿಗೆ ಬರುತ್ತಿರುವ ಹೊಸ ಪಾರ್ಕಿಂಗ್ ನೀತಿ, ಮಾಲಿನ್ಯಕ್ಕೆ ಬ್ರೇಕ್ ಹಾಕುವ ಸಂಬಂಧ ಸಾರ್ವಜನಿಕ ಸಾರಿಗೆ ಸೇವೆಗಳಲ್ಲಿ ಎಲೆಕ್ಟ್ರಿಕ್ ಬಸ್‌ಗಳಿಗೆ ಗ್ರಿನ್ ಸಿಗ್ನಲ್, 100-ಆಕ್ಟೇನ್ ಪೆಟ್ರೋಲ್ ಮಾರಾಟಕ್ಕೆ ಚಾಲನೆ ಸೇರಿದಂತೆ ಅತಿ ಕಡಿಮೆ ಬೆಲೆಯಲ್ಲಿ ಬಿಡುಗಡೆಗೊಂಡಿರುವ ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‍ಯುವಿ ಬಿಡುಗಡೆಯಾಗಿರುವುದು ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.

ನಿಸ್ಸಾನ್ ಮ್ಯಾಗ್ನೈಟ್ ಬಿಡುಗಡೆ
ನಿಸ್ಸಾನ್ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನುಅತಿ ಕಡಿಮೆ ಬೆಲೆಯಲ್ಲಿ ಬಿಡುಗಡೆಗೊಳಿಸಿದ್ದು, ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಎಂಬ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

ಹೊಸ ಕಾರು ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.35 ಲಕ್ಷ ಬೆಲೆ ಪಡೆದುಕೊಂಡಿದ್ದು, 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳೊಂದಿಗೆ ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿದೆ. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಟಾಟಾ ಎಲೆಕ್ಟ್ರಿಕ್ ಬಸ್‌ಗಳ ಚಾಲನೆಗೆ ಗ್ರೀನ್ ಸಿಗ್ನಲ್
ಎಲೆಕ್ಟ್ರಿಕ್ ವಾಹನಗಳನ್ನು ಬಳಕೆಯನ್ನು ಪ್ರೊತ್ಸಾಹಿಸುವ ಕೇಂದ್ರ ಸರ್ಕಾರದ ಫೇಮ್ 2 ಯೋಜನೆ ಅಡಿ ಟಾಟಾ ಮೋಟಾರ್ಸ್ ಕಂಪನಿಯು ವಿವಿಧ ರಾಜ್ಯ ಸಾರಿಗೆ ಸಂಸ್ಥೆಗಳಿಂದ 1 ಸಾವಿರಕ್ಕೂ ಅಧಿಕ ಎಲೆಕ್ಟ್ರಿಕ್ ಬಸ್‌ಗಳ ಪೂರೈಕೆಗಾಗಿ ಬೇಡಿಕೆ ಪಡೆದುಕೊಂಡಿದ್ದು, ಉತ್ಪಾದನಾ ಸಾಮರ್ಥ್ಯದ ಮೇಲೆ ಹೊಸ ಇ-ಬಸ್‌ಗಳನ್ನು ಹಂತ-ಹಂತವಾಗಿ ವಿತರಣೆ ಮಾಡುತ್ತಿದೆ.

ಬೃಹನ್ ಮುಂಬೈ ಎಲೆಕ್ಟ್ರಿಕ್ ಸಫ್ಲೈ ಅಂಡ್ ಟ್ರಾನ್ಸ್‌ಪೋರ್ಟ್(BEST) ಸಂಸ್ಥೆಯು ಕೂಡಾ 340 ಎಲೆಕ್ಟ್ರಿಕ್ ಬಸ್‌ಗಳಿಗೆ ಬೇಡಿಕೆ ಸಲ್ಲಿಸಿದ್ದು, 340 ಎಲೆಕ್ಟ್ರಿಕ್ ಬಸ್‌ಗಳಲ್ಲಿ ಮೊದಲ ಹಂತವಾಗಿ 26 ಎಲೆಕ್ಟ್ರಿಕ್ ಬಸ್‌ಗಳನ್ನು ವಿತರಣೆ ಮಾಡಿರುವ ಟಾಟಾ ಕಂಪನಿಯು ಹಂತ ಹಂತವಾಗಿ ಮುಂದಿನ ಒಂದು ವರ್ಷದಲ್ಲಿ ಪೂರ್ಣ ಪ್ರಮಾಣದಲ್ಲಿ ಪೂರೈಕೆ ಮಾಡುವ ಯೋಜನೆಯಲ್ಲಿದೆ. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

100-ಆಕ್ಟೇನ್ ಪೆಟ್ರೋಲ್ ಮಾರಾಟಕ್ಕೆ ಅಧಿಕೃತ ಚಾಲನೆ
ಸೂಪರ್ ವಾಹನ ಮಾದರಿಗಳ ಎಂಜಿನ್ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಸಲುವಾಗಿ ಹೈ ಗ್ರೆಡ್ ಪೆಟ್ರೋಲ್ ಮಾದರಿಗೆ ಹೆಚ್ಚಿನ ಬೇಡಿಕೆಯಿದ್ದು, ಇಂಡಿಯನ್ ಆಯಿಲ್ ಕಂಪನಿಯು ದೇಶದ ಪ್ರಮುಖದ ನಗರಗಳಲ್ಲಿ ಪ್ರತ್ಯೇಕಾವಾಗಿ ಹೈ ಆಕ್ಟೇನ್(100-ಆಕ್ಟೇನ್) ಪೆಟ್ರೋಲ್ ಮಾದರಿಯನ್ನು ಮಾರಾಟ ಮಾಡುವ ಸೌಲಭ್ಯಕ್ಕೆ ಚಾಲನೆ ನೀಡಿದೆ. ಇಂಡಿಯನ್ ಆಯಿಲ್ ಕಂಪನಿಯು ಪರಿಚಯಿಸಿರುವ ಎಕ್ಸ್‌ಪಿ 100 ಪೆಟ್ರೋಲ್ ಮಾದರಿಯು ದೇಶದ ಮೊದಲ ಹೈ ಆಕ್ಟೇನ್ ಗ್ರೇಡ್ ಮಾದಿಯಾಗಿದ್ದು, ಇದು ಸಾಮಾನ್ಯ ಪೆಟ್ರೋಲ್ ಮಾದರಿಗಿಂತಲೂ ದುಪ್ಪಟ್ಟು ದರ ಹೊಂದಿದೆ.

ಭಾರತದಲ್ಲಿ ಇದುವರೆಗೆ ಹಿಂದೂಸ್ತಾನ್ ಪೆಟ್ರೋಲಿಯಂ ಮಾರಾಟ ಮಾಡುತ್ತಿದ್ದ ಪವರ್ 99 (99-ಆಕ್ಟೇನ್) ಪೆಟ್ರೋಲ್ ಮಾದರಿಯೇ ಹೆಚ್ಚಿನ ಗ್ರೇಡ್ ಹೊಂದಿತ್ತು. ಇದೀಗ ಇಂಡಿಯನ್ ಆಯಿಲ್ ಕಂಪನಿಯು 100-ಆಕ್ಟೇನ್ ಹೊಂದಿರುವ ಎಕ್ಸ್‌ಪಿ100 ಪೆಟ್ರೋಲ್ ಮಾರಾಟಕ್ಕೆ ಚಾಲನೆ ನೀಡಿದೆ. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಬೆಂಗಳೂರಿನಲ್ಲಿ ಹೊಸ ವಾಹನ ಮತ್ತಷ್ಟು ಕಠಿಣ
ಬೆಂಗಳೂರಿನಲ್ಲಿ ಈಗಾಗಲೇ ಒಂದು ಅಂದಾಜಿನ ಪ್ರಕಾರ ಸುಮಾರು 90 ಲಕ್ಷಕ್ಕೂ ಅಧಿಕ ವಾಹನಗಳಿದ್ದು, ಆರ್‌ಟಿಒ ಮಾಹಿತಿಗಳ ಪ್ರಕಾರ ಬೆಂಗಳೂರು ಒಂದರಲ್ಲೇ ಪ್ರತಿ ದಿನ ಕನಿಷ್ಠ 1 ಸಾವಿರದಿಂದ ಒಂದೂವರೆ ಸಾವಿರ ಹೊಸ ವಾಹನಗಳು ನೋಂದಣಿಯಾತ್ತಿವೆ. ಅಂದರೆ ಬೆಂಗಳೂರಿನಲ್ಲಿ ಪ್ರತಿ ತಿಂಗಳು ಕನಿಷ್ಠ 30 ಸಾವಿರ ವಾಹನಗಳು ರಸ್ತೆಗಿಳಿಯುತ್ತಿದ್ದು, ಹೊಸದಾಗಿ ರಸ್ತೆಗಿಳಿಯುವ ವಾಹನಗಳಿಂದ ಟ್ರಾಫಿಕ್ ದಟ್ಟಣೆ ಹೆಚ್ಚಿತ್ತಿರುವುದಲ್ಲದೆ ಪಾರ್ಕಿಂಗ್ ಸಮಸ್ಯೆಯನ್ನು ಮತ್ತಷ್ಟು ಬಿಗಡಾಯಿಸುವಂತೆ ಮಾಡಿದೆ.

ಹೊಸ ವಾಹನ ಖರೀದಿ ಮಾಡುವ ಶೇ.60ರಷ್ಟು ಗ್ರಾಹಕರು ಸೂಕ್ತವಾದ ಪಾರ್ಕಿಂಗ್ ಸೌಲಭ್ಯವಿಲ್ಲವಾದರೂ ಸಾರ್ವಜನಿಕ ಸ್ಥಳಗಳಲ್ಲೇ ಪಾರ್ಕಿಂಗ್ ಸೌಲಭ್ಯಕ್ಕಾಗಿ ನೆಚ್ಚಿಕೊಂಡಿದ್ದು, ಹೊಸ ವಾಹನಗಳ ಸಂಖ್ಯೆ ಹೆಚ್ಚುತ್ತಾ ಹೋದಲ್ಲಿ ಇದು ಇದು ಗಂಭೀರ ಸಮಸ್ಯೆಗಳಿಗೆ ಎಡೆಮಾಡಿಕೊಡಲಿದೆ. ಇದೇ ಕಾರಣಕ್ಕೆ ಬೆಂಗಳೂರು ನಗರದಲ್ಲಿ ಹೊಸ ವಾಹನ ಖರೀದಿಯನ್ನು ಕಠಿಣಗೊಳಿಸುತ್ತಿರುವ ರಾಜ್ಯ ಸರ್ಕಾರವು ಪಾರ್ಕಿಂಗ್ ಪಾಲಿಸಿ 2.0 ಜಾರಿಗೆ ತರಲು ಸಿದ್ದವಾಗಿದ್ದು, ಹೊಸ ನೀತಿಯು ಅಧಿಕೃತವಾಗಿ ಜಾರಿಗೆ ಬಂದಲ್ಲಿ ಹೊಸ ವಾಹನಗಳ ಖರೀದಿ ಮಾಡುವುದು ಇನ್ಮುಂದೆ ಅಷ್ಟು ಸುಲಭವಲ್ಲ. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಕಳಪೆ ಗುಣಮಟ್ಟದ ಕಾರು ಮಾರಾಟ ಒಪ್ಪಿಕೊಂಡ ಮಾರುತಿ ಸುಜುಕಿ
ಭಾರತದಲ್ಲಿ ಹೊಸ ವಾಹನಗಳ ಮಾರಾಟ ಹೆಚ್ಚಳದ ನಡುವೆ ವಾಹನಗಳ ಸುರಕ್ಷಾ ರೇಟಿಂಗ್ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಬಜೆಟ್ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಮಾರುತಿ ಸುಜುಕಿ ಕಂಪನಿಯು ಅತ್ಯಧಿಕ ಪ್ರಮಾಣದ ಕಾರು ಮಾರಾಟ ಹೊಂದಿದ್ದರು ಸುರಕ್ಷತೆಯ ವಿಚಾರವಾಗಿ ಗ್ರಾಹಕರಿಂದ ಟೀಕೆಗೆ ಒಳಗಾಗುತ್ತಿದೆ.

ಬಜೆಟ್ ಬೆಲೆಗಳಲ್ಲಿ ಪ್ರತಿಯೊಬ್ಬರಿಗೂ ಕಾರು ಖರೀದಿಯ ಕನಸನ್ನು ನನಸು ಮಾಡುವಲ್ಲಿ ಯಶಸ್ವಿಯಾಗುತ್ತಿರುವ ಮಾರುತಿ ಸುಜುಕಿಯು ಪ್ರಯಾಣಿಕ ಸುರಕ್ಷಾ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ವಾಹನಗಳನ್ನು ಮಾರಾಟಗೊಳಿಸುತ್ತಿದ್ದು, ಇತ್ತೀಚೆಗೆ ಎಸ್-ಪ್ರೆಸ್ಸೊ ಕಾರಿನ ಕ್ರ್ಯಾಶ್ ಟೆಸ್ಟಿಂಗ್ ಫಲಿತಾಂಶವು ಭಾರತದಲ್ಲಿ ಮಾತ್ರವಲ್ಲ ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಪ್ರವೈಗ್ ಎಕ್ಸ್ಟಿಷನ್ ಎಂಕೆ1 ಅನಾವರಣ
ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚುತ್ತಿದ್ದು, ಹಲವಾರು ಸ್ಟಾರ್ಟ್ಅಪ್ ಕಂಪನಿಗಳು ವಿವಿಧ ಮಾದರಿಯ ಹೊಸ ಎಲೆಕ್ಟ್ರಿಕ್ ವಾಹನಗಳನ್ನು ಸಿದ್ದಪಡಿಸುತ್ತಿದ್ದು, ನಮ್ಮ ಬೆಂಗಳೂರು ಮೂಲದ ಪ್ರವೈಗ್ ಡೈನಾಮಿಕ್ ಕೂಡಾ ವಿಶೇಷ ವಿನ್ಯಾಸದ ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಸೆಡಾನ್ ಮಾದರಿಯನ್ನು ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಳಿಸಿದೆ.

ಎಕ್ಸ್ಟಿಷನ್ ಎಂಕೆ1 ಹೈ ಎಂಡ್ ಕಾರು ಮಾದರಿಯು ಪ್ರತಿ ಚಾರ್ಜ್‌ಗೆ ಗರಿಷ್ಠ 504ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಸಾಮಾನ್ಯ ಕಾರುಗಳಂತೆ ಎಕ್ಸ್ಟಿಷನ್ ಎಂಕೆ1 ಎಲೆಕ್ಟ್ರಿಕ್ ಕಾರು ಕೂಡಾ ಫರ್ಪಾಮೆನ್ಸ್‌ನಲ್ಲೂ ಗಮನಸೆಳೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.