ವಾರದ ಪ್ರಮುಖ ಆಟೋ ಸುದ್ದಿಗಳು: ಐಎಸ್ಐ ಹೆಲ್ಮೆಟ್ ಕಡ್ದಾಯ, ಇನೋವಾ ಫೇಸ್‌ಲಿಫ್ಟ್ ಬಿಡುಗಡೆ, ಆಟೋ ಕಂಪನಿಗಳಿಗೆ ಬಿಗ್ ರಿಲೀಫ್..

ಭಾರತೀಯ ಆಟೋ ಉದ್ಯಮ ಹಬ್ಬದ ಸಂಭ್ರಮಗಳ ನಂತರವೂ ಉತ್ತಮ ಸ್ಥಿರತೆ ಕಾಯ್ದುಕೊಂಡಿದ್ದು, ಹೊಸ ವಾಹನಗಳ ಬಿಡುಗಡೆ ಪ್ರಕ್ರಿಯೆ ಮತ್ತಷ್ಟು ಹೆಚ್ಚಳವಾಗಿದೆ. ಇದಲ್ಲದೆ ಬಿಎಸ್-4 ವಾಹನಗಳ ನೋಂದಣಿ ಕುರಿತಂತೆ ಸಂಕಷ್ಟಕ್ಕೆ ಸಿಲುಕಿದ್ದ ಆಟೋ ಕಂಪನಿಗಳಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಗುಣಮಟ್ಟದ ಹೆಲ್ಮೆಟ್ ಬಳಕೆಗೂ ಕಠಿಣ ಕಾನೂನು ಜಾರಿಗೆ ತರಲು ಸಾರಿಗೆ ಇಲಾಖೆ ಖಡಕ್ ಆದೇಶ ನೀಡಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು..

ಈ ವಾರದ ಪ್ರಮುಖ ಸುದ್ದಿಗಳಲ್ಲಿ ಹೊಸ ವಾಹನಗಳ ಬಿಡುಗಡೆ ಮತ್ತು ಬಿಡುಗಡೆಯಾಗಲಿರುವ ಹೊಸ ವಾಹನಗಳ ಮಾಹಿತಿಯೊಂದಿಗೆ ಆಟೋ ಉದ್ಯಮದಲ್ಲಿ ಮಹತ್ವದ ಬೆಳವಣಿಗಳ ಕುರಿತಾದ ಮಾಹಿತಿ ನೀಡಲಾಗಿದ್ದು, ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಬಿಡುಗಡೆ, ಮಹೀಂದ್ರಾ ನ್ಯೂ ಜನರೇಷನ್ ಥಾರ್ ಸೇಫ್ಟಿ ರೇಟಿಂಗ್ಸ್ ಪ್ರಕಟ, ಬಿಎಸ್-4 ವಾಹನಗಳ ಕುರಿತಾದ ಗೊಂದಲಕ್ಕೆ ತೆರೆ ಸೇರಿದಂತೆ ಬೈಕ್ ಸವಾರರ ಸುರಕ್ಷತೆಗಾಗಿ ಗುಣಮಟ್ಟದ ಹೆಲ್ಮೆಟ್ ಬಳಕೆ ಸಾರಿಗೆ ಇಲಾಖೆಯಿಂದ ಹೊಸ ನಿಯಮ ಜಾರಿ ಕುರಿತಾದ ಸಮಗ್ರ ಮಾಹಿತಿಗಳು ಇಲ್ಲಿವೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು..

ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಬಿಡುಗಡೆ

2005ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಂಡಿದ್ದ ಇನೋವಾ ಕಾರು ಮಾದರಿಯು ಕಳೆದ 2016ರಲ್ಲಿ ನ್ಯೂ ಜನರೇಷನ್ ಫೀಚರ್ಸ್‌ಗಳೊಂದಿಗೆ ಇನೋವಾ ಕ್ರಿಸ್ಟಾ ಮಾದರಿಯಾಗಿ ಬಿಡುಗಡೆಗೊಂಡಿತ್ತು. ಇದೀಗ ಹೊಸ ಬದಲಾವಣೆಯೊಂದಿಗೆ 2021ರ ಫೇಸ್‌ಲಿಫ್ಟ್ ಮಾದರಿಯನ್ನು ಬಿಡಗಡೆ ಮಾಡಲಾಗಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 16.26 ಲಕ್ಷದಿಂದ ಟಾಪ್ ಎಂಡ್ ಮಾದರಿಯು 24.33 ಲಕ್ಷ ಬೆಲೆ ಪಡೆದುಕೊಂಡಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು..

ಹೊಸ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಮಾದರಿಯು ಜಿಎಕ್ಸ್, ವಿಎಕ್ಸ್ ಮತ್ತು ಜೆಡ್ಎಕ್ಸ್ ಎಂಬ ಮೂರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಫೀಚರ್ಸ್ ಅಳವಡಿಕೆ ನಂತರ ಕಾರಿನ ಬೆಲೆಯು ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ. 60 ಸಾವಿರದಿಂದ ರೂ.70 ಸಾವಿರದಷ್ಟು ಹೆಚ್ಚುವರಿ ಬೆಲೆ ಪಡೆದುಕೊಂಡಿದೆ. ಪ್ರೀಮಿಯಂ ಫೀಚರ್ಸ್ ಹೊರತಾಗಿ ಎಂಜಿನ್ ಆಯ್ಕೆಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಈ ವಾರದ ಪ್ರಮುಖ ಆಟೋ ಸುದ್ದಿಗಳು..

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಮಿಂಚಿದ ಮಹೀಂದ್ರಾ ಥಾರ್

ಸುರಕ್ಷಿತ ಕಾರು ಮಾದರಿಗಳ ನಿರ್ಮಾಣದಲ್ಲಿ ಮುಂಚೂಣಿ ಸಾಧಿಸುತ್ತಿರುವ ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ300 ನಂತರ ನ್ಯೂ ಜನರೇಷನ್ ಥಾರ್ ಕಾರು ಮಾದರಿಯ ಸುರಕ್ಷತೆಯಲ್ಲೂ ಗಮನಸೆಳೆದಿದ್ದು, ಹೊಸ ಕಾರು ಮಾದರಿಯು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿದೆ. ಥಾರ್ ಹೊಸ ಕಾರು ಗರಿಷ್ಠ ಸೇಫ್ಟಿ ಫೀಚರ್ಸ್‌ಗಳ ಮೂಲಕ ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ 4 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿದ್ದು, ವಯಸ್ಕ ಪ್ರಯಾಣಿಕರ ಸುರಕ್ಷತೆಯಲ್ಲಿ 4 ಸ್ಟಾರ್ ರೇಟಿಂಗ್ಸ್ ಮತ್ತು ಮಕ್ಕಳ ಸುರಕ್ಷತೆಗಾಗಿ 4 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಮೂಲಕ ಒಟ್ಟಾರೆ 4 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು..

ಪ್ರಯಾಣಿಕ ಸುರಕ್ಷತೆ ವಿಚಾರವಾಗಿ ವಯಸ್ಕ ಪ್ರಯಾಣಿಕರಿಗೆ 5 ಸ್ಟಾರ್ ಸೇಫ್ಟಿ ರೇಟಿಂಗ್ ಮತ್ತು ಮಕ್ಕಳ ಸುರಕ್ಷತೆಗಾಗಿ 4 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡಿದ್ದ ಎಕ್ಸ್‌ಯುವಿ300 ಮಾದರಿಗಿಂತಲೂ ಹೊಸ ಥಾರ್ ಕಾರು ಮಾದರಿಯು ವಯಸ್ಕ ಪ್ರಯಾಣಿಕರ ಸುರಕ್ಷತೆಯಲ್ಲಿ ತುಸು ಹಿನ್ನಡೆ ಅನುಭವಿಸಿದ್ದರೂ ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಉತ್ತಮ ಸೇಫ್ಟಿ ಫೀಚರ್ಸ್ ಪಡೆದುಕೊಂಡಿದೆ. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಈ ವಾರದ ಪ್ರಮುಖ ಆಟೋ ಸುದ್ದಿಗಳು..

ಬಿಎಂಡಬ್ಲ್ಯು ಎಕ್ಸ್5 ಎಂ ಕಾಂಪಿಟೇಷನ್

ಜರ್ಮನ್ ಮೂಲದ ವಾಹನ ತಯಾರಕ ಕಂಪನಿಯಾದ ಬಿಎಂಡಬ್ಲ್ಯು ತನ್ನ ಹೊಸ ಎಕ್ಸ್5 ಎಂ ಕಾಂಪಿಟೇಷನ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಬಿಎಂಡಬ್ಲ್ಯು ಎಕ್ಸ್5 ಎಂ ಕಾಂಪಿಟೇಷನ್ ಎಸ್‍ಯುವಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ. 1.94 ಕೋಟಿಗಳಾಗಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು..

ಹೊಸ ಬಿಎಂಡಬ್ಲ್ಯು ಎಕ್ಸ್5 ಎಂ ಕಾಂಪಿಟೇಷನ್ ಪರ್ಫಾಮೆನ್ಸ್-ಆಧಾರಿತ ಎಸ್‍ಯುವಿಯಾಗಿದ್ದು, 4.4-ಲೀಟರ್ ಎಂ-ಟ್ವಿನ್-ಟರ್ಬೋಚಾರ್ಜ್ಡ್ ವಿ8 ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಹೈ-ರಿವೈವಿಂಗ್ ಎಂಜಿನ್ ಮಾದರಿಯು 625-ಬಿಹೆಚ್‍ಪಿ ಪವರ್ ಮತ್ತು 750-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಈ ವಾರದ ಪ್ರಮುಖ ಆಟೋ ಸುದ್ದಿಗಳು..

ಬಿಎಸ್-4 ವಾಹನಗಳ ನೋಂದಣಿ ವಿಚಾರವಾಗಿ ಆಟೋ ಕಂಪನಿಗಳಿಗೆ ಬಿಗ್ ರಿಲೀಫ್

ಹೊಸ ಎಮಿಷನ್ ನಿಯಮಕ್ಕೆ ವಿರುದ್ದವಾಗಿ ಬಿಎಸ್-4 ವಾಹನಗಳ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದ್ದು, ಫೆಡರೇಶನ್ ಆಫ್ ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಶನ್‌ ಮನವಿಗೆ ಗ್ರೀನ್ ಸಿಗ್ನಲ್ ನೀಡಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು..

ಬಿಎಸ್ 4 ವಾಹನಗಳ ನೋಂದಣಿ ಕುರಿತು ಅಂತಿಮ ತೀರ್ಪು ಪ್ರಕಟಿಸಿರುವ ಸುಪ್ರೀಂಕೋರ್ಟ್ ನಿಗದಿತ ಅವಧಿಯಲ್ಲಿ ಮಾರಾಟಗೊಳಿಸಲಾದ ವಾಹನಗಳ ನೋಂದಣಿಯನ್ನು ಮಾನ್ಯ ಮಾಡಿದ್ದು, ಫೆಡರೇಶನ್ ಆಫ್ ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಶನ್‌ನ (ಎಫ್‌ಎಡಿಎ) ಮನವಿಯನ್ನು ಪರಿಸ್ಥಿತಿಗೆ ಅನುಗುಣವಾಗಿ ಅಂಗೀಕರಿಸಿದೆ. ಹೊಸ ತೀರ್ಪಿನಿಂದ ಆರ್‌ಸಿ ಪಡೆದುಕೊಳ್ಳಲು ಕಾಯುತ್ತಿರುವ ಬಿಎಸ್-4 ವಾಹನಗಳಿಗೆ ಶೀಘ್ರದಲ್ಲೇ ಆರ್‌ಸಿ ವಿತರಣೆಯಾಗಲಿದ್ದು, ಸುಪ್ರೀಂಕೋರ್ಟ್ ತೀರ್ಪಿನ ಬಗೆಗೆ ಫಾಡಾ ಸಂತಸ ವ್ಯಕ್ತಪಡಿಸಿದೆ. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಈ ವಾರದ ಪ್ರಮುಖ ಆಟೋ ಸುದ್ದಿಗಳು..

ಕಳಪೆ ಹೆಲ್ಮೆಟ್ ಬಳಕೆಗೆ ಬ್ರೇಕ್ ಹಾಕಿದ ಸಾರಿಗೆ ಇಲಾಖೆ

ಭಾರತದಲ್ಲಿ ಬೈಕ್ ಸವಾರರಿಗೆ ಕಡ್ಡಾಯವಾಗಿ ಹೆಲ್ಮೆಟ್ ಬಳಕೆಯನ್ನು ಜಾರಿಗೆ ತರುವಲ್ಲಿ ಆಯಾ ರಾಜ್ಯಗಳ ಸಾರಿಗೆ ಇಲಾಖೆಗಳು ಉತ್ತಮ ಬದಲಾವಣೆ ತರುವಲ್ಲಿ ಯಶಸ್ವಿಯಾಗುತ್ತಿದ್ದರೂ ಕಳಪೆ ಹೆಲ್ಮೆಟ್ ಬಳಕೆಯನ್ನು ತಡೆಯುವಲ್ಲಿ ವಿಫಲವಾಗುತ್ತಿವೆ. ವಾಹನ ಸವಾರರು ದುಬಾರಿ ದಂಡದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಗುಣಮಟ್ಟದ ಬಗ್ಗೆ ತಡೆಕೆಡಿಸಿಕೊಳ್ಳದೆ ಮಾರುಕಟ್ಟೆಯಲ್ಲಿ ಲಭ್ಯವಾಗುವ ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನು ಬಳಸುತ್ತಿರುವುದು ವಾಹನ ಸವಾರರ ಪ್ರಾಣ ಹಾನಿಗೆ ಕಾರಣವಾಗುತ್ತಿವೆ.

ವಾರದ ಪ್ರಮುಖ ಆಟೋ ಸುದ್ದಿಗಳು

ಇದೇ ವಿಚಾರವಾಗಿ ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿರುವ ಕೇಂದ್ರ ಸಾರಿಗೆ ಇಲಾಖೆಯು ಸುಪ್ರೀಂಕೋರ್ಟ್ ನಿರ್ದೇಶನದಂತೆ ಹೊಸ ನಿಯಮವೊಂದನ್ನು ಜಾರಿಗೆ ತಂದಿದ್ದು, 2021ರ ಜೂನ್‌ 1 ರಿಂದ ಐಎಸ್ಐ ಪ್ರಮಾಣೀಕೃತ ಹೆಲ್ಮೆಟ್‌ಗಳನ್ನು ಮಾತ್ರ ಬಳಕೆ ಮಾಡಬೇಕು ಎಂಬ ಆದೇಶ ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

Most Read Articles

Kannada
English summary
Top Auto News Of The Week. Read in Kannada.
Story first published: Sunday, November 29, 2020, 13:18 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X