Just In
- 6 hrs ago
ವಾಣಿಜ್ಯ ವಾಹನಗಳ ಖರೀದಿಗಾಗಿ ಹಲವು ಆಕರ್ಷಕ ಸಾಲಸೌಲಭ್ಯಗಳಿಗೆ ಚಾಲನೆ ನೀಡಿದ ಟಾಟಾ
- 6 hrs ago
2021ರ ಜೀಪ್ ಕಂಪಾಸ್ ಫೇಸ್ಲಿಫ್ಟ್ ಎಸ್ಯುವಿ ವೆರಿಯೆಂಟ್ ಮಾಹಿತಿ ಬಹಿರಂಗ
- 7 hrs ago
ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಟ್ಟ ಮೇಡ್ ಇನ್ ಇಂಡಿಯಾ ಹೋಂಡಾ ಹೈನೆಸ್ ಸಿಬಿ 350
- 7 hrs ago
ಎಂಟೇ ನಿಮಿಷಗಳಲ್ಲಿ ರಸ್ತೆ ಗುಂಡಿಗಳನ್ನು ಸರಿ ಪಡಿಸಲಿದೆ ಜೆಸಿಬಿಯ ಈ ಹೊಸ ಯಂತ್ರ
Don't Miss!
- News
Biden Inauguration live updates: ಅಮೆರಿಕ ಅಧ್ಯಕ್ಷರಾಗಿ ಜೋ ಬೈಡನ್ ಪದಗ್ರಹಣದ ನೇರಪ್ರಸಾರ
- Finance
ಸಿಯೆಟ್ ಲಿಮಿಟೆಡ್ ಲಾಭದ ಪ್ರಮಾಣ ಎರಡೂವರೆ ಪಟ್ಟು ಹೆಚ್ಚಳ
- Sports
ಐಎಸ್ಎಲ್: ಹೈದರಾಬಾದ್ ಜಯಕ್ಕೆ ಅಡ್ಡಿಯಾದ ಕಳಿಂಗ ವಾರಿಯರ್ಸ್
- Education
AAI Recruitment 2021: 7 ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಅಂಧ ವ್ಯಕ್ತಿಯ ಬಾಳಿಗೆ ಬೆಳಕಾದ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ
- Lifestyle
ಜ. 25ಕ್ಕೆ ಕುಂಭ ರಾಶಿಗೆ ಬುಧನ ಸಂಚಾರ: 12 ರಾಶಿಗಳ ಮೇಲೆ ಇದರ ಪ್ರಭಾವವೇನು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವಾರದ ಪ್ರಮುಖ ಸುದ್ದಿಗಳು:ರೆನಾಲ್ಟ್ ಕಿಗರ್ ಅನಾವರಣ, ಬಿಡುಗಡೆಗೆ ಸಿದ್ದವಾದ ಮ್ಯಾಗ್ನೈಟ್, 250 ಅಡ್ವೆಂಚರ್ ಬಿಡುಗಡೆ
ಕರೋನಾ ವೈರಸ್ ಪರಿಣಾಮ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಆಟೋ ಕಂಪನಿಗಳು ಪ್ರಸಕ್ತ ಹಣಕಾಸು ವರ್ಷದಲ್ಲಿ ಮೊದಲ ಬಾರಿಗೆ ಅತಿ ಹೆಚ್ಚು ವಾಹನ ಮಾರಾಟ ಗುರಿಸಾಧಿಸಿದ್ದು, ಮಂಬರುವ ದಿನಗಳಲ್ಲಿ ವಾಹನ ಮಾರಾಟ ಇನ್ನಷ್ಟು ಏರಿಕೆಯಾಗುವ ನೀರಿಕ್ಷೆಯಿದೆ. ಇದರಿಂದ ಹೊಸ ವಾಹನಗಳ ಬಿಡುಗಡೆ ಜೊತೆಗೆ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಹಲವು ವಾಹನ ಮಾದರಿಗಳು ಗ್ರಾಹಕರ ಬೇಡಿಕೆಯೆಂತೆ ಉನ್ನತೀಕರಣಗೊಂಡಿವೆ.

ಈ ವಾರದ ಪ್ರಮುಖ ಆಟೋ ಉತ್ಪಾದನಾ ಸುದ್ದಿಗಳಲ್ಲಿ ಹೊಸ ವಾಹನಗಳ ಬಿಡುಗಡೆಯ ಮಾಹಿತಿಯ ಜೊತೆಗೆ ಬಿಡುಗಡೆಯ ನೀರಿಕ್ಷೆಯಲ್ಲಿರುವ ವಾಹನಗಳ ಅನಾವರಣ ಹಾಗೂ ಉನ್ನತೀಕರಣಗೊಂಡ ವಾಹನಗಳ ಮಾಹಿತಿ ಒಳಗೊಂಡಿದೆ. ಪ್ರಯಾಣಿಕರ ವಾಹನಗಳ ಸುದ್ದಿಯ ಜೊತೆಗೆ ವಾಣಿಜ್ಯ ವಾಹನಗಳ ಸುದ್ದಿಯು ಸಹ ಓದುಗರ ಗಮನ ಸೆಳೆದಿದ್ದು, ಈ ವಾರದ ಪ್ರಮುಖ ಸುದ್ದಿಗಳನ್ನು ಮುಂದಿನ ಸ್ಲೈಡ್ಗಳಲ್ಲಿ ನೋಡೋಣ.

ಮ್ಯಾಗ್ನೈಟ್ ಕಾರಿನ ಬಿಡುಗಡೆಯ ದಿನಾಂಕ ಫಿಕ್ಸ್
ನಿಸ್ಸಾನ್ ಇಂಡಿಯಾ ಕಂಪನಿಯು ಮ್ಯಾಗ್ನೈಟ್ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್ಯುವಿ ಮಾದರಿಯನ್ನು ಮುಂದಿನ ತಿಂಗಳು ಡಿಸೆಂಬರ್ 2ರಂದು ಅಧಿಕೃತ ಬಿಡುಗಡೆ ಮಾಡುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಹೊಸ ಕಾರು ಖರೀದಿಗೆ ಈಗಾಗಲೇ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

ಹೊಸ ಮ್ಯಾಗ್ನೈಟ್ ಕಾರು ಕಂಪ್ಯಾಕ್ಟ್ ಎಸ್ಯುವಿ ಕಾರು ಮಾದರಿಯು ಪ್ರತಿ ಸ್ಪರ್ಧಿಕಾರು ಮಾದರಿಗಳಿಂತಲೂ ಅತ್ಯುತ್ತಮ ಫೀಚರ್ಸ್ಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಗ್ರಾಹಕರ ಬೇಡಿಕೆಯೆಂತೆ ಎಕ್ಸ್ಇ, ಎಕ್ಸ್ಎಲ್, ಎಕ್ಸ್ವಿ ಮತ್ತು ಎಕ್ಸ್ವಿ ಪ್ರೀಮಿಯಂ ಎಂಬ ನಾಲ್ಕು ವೆರಿಯೆಂಟ್ಗಳೊಂದಿಗೆ ಬೆಲೆಯಲ್ಲೂ ಗಮನಸೆಳೆಯಲಿದೆ. ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆ ಹೊಂದಿದ್ದು, ಸೆಗ್ಮೆಂಟ್ ಇನ್ ಬೆಸ್ಟ್ ಫೀಚರ್ಸ್ಗಳೊಂದಿಗೆ ಕಾರು ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸಲಿದೆ. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ರೆನಾಲ್ಟ್ ಹೊಸ ಕಿಗರ್ ಕಂಪ್ಯಾಕ್ಟ್ ಎಸ್ಯುವಿ ಅನಾವರಣ
ರೆನಾಲ್ಟ್ ಇಂಡಿಯಾ ತನ್ನ ಬಹುನೀರಿಕ್ಷಿತ ಕಿಗರ್ ಕಾನ್ಸೆಪ್ಟ್ ಮಾದರಿಯು ಭಾರತದಲ್ಲಿ ಅನಾವರಣಗೊಳಿಸಿದ್ದು, ಹೊಸ ಕಂಪ್ಯಾಕ್ಟ್ ಎಸ್ಯುವಿ ಕಾರು ಮಾದರಿಯು ಆಟೋ ಉದ್ಯಮದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಕಂಪ್ಯಾಕ್ಟ್ ಎಸ್ಯುವಿ ಕಾರುಗಳ ಮಾರಾಟ ಪಾಲು ಕಳೆದ ಎರಡು ವರ್ಷಗಳಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಕಂಪ್ಯಾಕ್ಟ್ ಎಸ್ಯುವಿ ಸೆಗ್ಮೆಂಟ್ನಲ್ಲಿ ಈಗಾಗಲೇ ಹಲವಾರು ಹೊಸ ಕಾರುಗಳು ಬಿಡುಗಡೆಗೊಂಡಿವೆ.
ಕ್ಲಾಸಿಕ್ ಬೈಕ್ ಪ್ರಿಯರಿಗಾಗಿ ಬಿಡುಗಡೆಯಾದ ರಾಯಲ್ ಎನ್ಫೀಲ್ಡ್ ಹೊಸ ಮಿಟಿಯೊರ್ 350 ಹೇಗಿದೆ? ಈ ವಿಡಿಯೋ ನೋಡಿ..
4 ಮೀಟರ್ಗಿಂತಲೂ ಕಡಿಮೆ ಉದ್ದಳತೆ ಹೊಂದಿರುವ ಕಂಪ್ಯಾಕ್ಟ್ ಎಸ್ಯುವಿ ಮಾರಾಟದಲ್ಲಿ ಸದ್ಯ ಪ್ರಮುಖ ಕಾರು ಕಂಪನಿಗಳ ನಡುವೆ ಭಾರೀ ಪೈಪೋಟಿ ನಡೆಯುತ್ತಿದ್ದು, ಕಿಗರ್ ಕಾರು ಮಾದರಿಯು ಮುಂಬರುವ 2021 ಮಾರ್ಚ್ ಹೊತ್ತಿಗೆ ಅಧಿಕೃತವಾಗಿ ಖರೀದಿಗೆ ಲಭ್ಯವಿರಲಿದೆ. ಹೊಸ ಕಾರು ನಿಸ್ಸಾನ್ ಕಂಪನಿಯ ಮ್ಯಾಗ್ನೈಟ್ ಕಾರು ಆವೃತ್ತಿಯಲ್ಲಿ ಎಂಜಿನ್ ಮಾದರಿಯನ್ನೇ ಪಡೆದುಕೊಳ್ಳಲಿದ್ದು, ಎರಡು ಕಾರು ಮಾದರಿಗಳಿಗಾಗಿ ಸಹಭಾಗೀತ್ವದಲ್ಲಿ ಎಂಜಿನ್ ಅಭಿವೃದ್ದಿಗೊಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಹ್ಯುಂಡೈಗೆ ಸೆಡ್ದು ಹೊಡೆದ ಟಾಟಾ ಮೋಟಾರ್ಸ್
ಅಪಘಾತಗಳ ಸಂದರ್ಭಗಳಲ್ಲಿ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವತ್ತ ಗಮನಹರಿಸಿರುವ ಟಾಟಾ ಕಂಪನಿಯು ಗುಣಮಟ್ಟದ ಕಾರು ಉತ್ಪಾದನೆಯತ್ತ ಮಹತ್ವದ ಹೆಜ್ಜೆಯಿರಿಸಿದ್ದು, ಟಾಟಾ ಹೊಸ ಕಾರು ಮಾದರಿಗಳು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಹೆಚ್ಚು ಸುರಕ್ಷಿತವಾಗಿರುವುದು ಕ್ರ್ಯಾಶ್ ಟೆಸ್ಟಿಂಗ್ನಲ್ಲಿ ಗಮನಸೆಳೆದಿದೆ.

ಕಾರು ಮಾದರಿಗಳಿಗೆ ಅನುಗುಣವಾಗಿ ಟಾಟಾ ಕಂಪನಿಯು ಕ್ರ್ಯಾಶ್ ಟೆಸ್ಟಿಂಗ್ನಲ್ಲಿ 4 ಸ್ಟಾರ್ ರೇಟಿಂಗ್ ಮತ್ತು 5 ಸ್ಟಾರ್ ರೇಟಿಂಗ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಆರಂಭಿಕ ಕಾರು ಮಾದರಿಯಾದ ಟಿಯಾಗೋ ಹ್ಯಾಚ್ಬ್ಯಾಕ್ ಮಾದರಿಯು 4 ಸ್ಟಾರ್ ರೇಟಿಂಗ್ನೊಂದಿಗೆ ಪ್ರತಿಸ್ಪರ್ಧಿ ಕಾರು ಮಾದರಿಯಾಗಿರುವ ಹ್ಯುಂಡೈ ಗ್ರ್ಯಾಂಡ್ ಐ10 ನಿಯೊಸ್ ಕಾರಿಗೆ ಕ್ರ್ಯಾಶ್ ಟೆಸ್ಟ್ ರೇಟಿಂಗ್ ವಿಚಾರವಾಗಿ ಸೆಡ್ಡು ಹೊಡೆದಿದೆ. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಕೆಟಿಎಂ 250 ಅಡ್ವೆಂಚರ್ ಬೈಕ್ ಬಿಡುಗಡೆ
ಕೆಟಿಎಂ ಕಂಪನಿಯು ತನ್ನ ಎಂಟ್ರಿ ಲೆವಲ್ ಅಡ್ವೆಂಚರ್ ಬೈಕ್ ಮಾದರಿಯಾದ 250 ಅಡ್ವೆಂಚರ್ ಬೈಕ್ ಮಾದರಿಯನ್ನು ಭಾರತದಲ್ಲೂ ಬಿಡುಗಡೆ ಮಾಡಿದ್ದು, ಹೊಸ ಬೈಕ್ ಮಾದರಿಯು ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 2.48 ಲಕ್ಷ ಬೆಲೆ ಹೊಂದಿದೆ. 250 ಅಡ್ವೆಂಚರ್ ಮತ್ತು 390 ಅಡ್ವೆಂಚರ್ ಬೈಕಿನಲ್ಲಿ ಕೆಲವು ತಾಂತ್ರಿಕ ಅಂಶಗಳ ಬದಲಾವಣೆಯನ್ನು ಹೊರತುಪಡಿಸಿ ಎರಡು ಅಡ್ವೆಂಚರ್ ಬೈಕ್ ಮಾದರಿಗಳಲ್ಲಿ ಹಲವಾರು ತಾಂತ್ರಿಕ ಅಂಶಗಳು ಸಮನಾಗಿದ್ದು, ಎಂಜಿನ್ ಮತ್ತು ಪರ್ಫಾಮೆನ್ಸ್ ಎರಡು ಬೈಕ್ ಮಾದರಿಗಳು ತಮ್ಮದೆ ಆದ ಹಲವು ವಿಶೇಷ ವೈಶಿಷ್ಟ್ಯತೆಗಳನ್ನು ಹೊಂದಿವೆ.

ಆಫ್ ರೋಡ್ ಮತ್ತು ಅಡ್ವೆಂಚರ್ ಟೂರರ್ ರೈಡಿಂಗ್ ಕೌಶಲ್ಯಕ್ಕಾಗಿಯೇ ವಿಶೇಷವಾಗಿ ಸಿದ್ದಗೊಂಡಿರುವ 250 ಅಡ್ವೆಂಚರ್ ಬೈಕ್ ಮಾದರಿಯಲ್ಲಿ 6-ಸ್ಪೀಡ್ ಗೇರ್ಬಾಕ್ಸ್ ನೀಡಲಾಗಿದ್ದು, ಇದು 30-ಬಿಎಚ್ಪಿ ಮತ್ತು 24-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ. ಬ್ಲ್ಯಾಕ್ ಮತ್ತು ಆರೇಂಜ್ ಬಣ್ಣಗಳ ಆಯ್ಕೆ ಹೊಂದಿರುವ ಹೊಸ ಬೈಕ್ ಮಾದರಿಯು ರಾಯಲ್ ಎನ್ಫೀಲ್ಡ್ ಹೊಸ ಮಿಟಿಯೊರ್ 350 ಜೊತೆಗೆ ದುಬಾರಿ ಬೆಲೆಯ ಬಿಎಂಡಬ್ಲ್ಯು ಜಿ 310 ಜಿಎಸ್ ಮಾದರಿಗಳಿಗೆ ಪೈಪೋಟಿ ನೀಡಲಿದೆ. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಮೈಲೇಜ್ ವಿಚಾರದಲ್ಲಿ ಗಮನಸೆಳೆದ ಸಿಂಪಲ್ ಎನರ್ಜಿ ಇವಿ ಸ್ಕೂಟರ್
ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಈಗಾಗಲೇ ಸಾಂಪ್ರಾದಾಯಿಕ ವಾಹನಗಳನ್ನು ಮಾರಾಟ ಮಾಡುತ್ತಿರುವ ಆಟೋ ಕಂಪನಿಗಳಿಂತಲೂ ಸ್ಟಾರ್ಟ್ಅಪ್ ಕಂಪನಿಗಳೇ ಹೆಚ್ಚಿನ ಮಟ್ಟದಲ್ಲಿ ಗ್ರಾಹಕರನ್ನು ಗಮನಸೆಳೆಯುವಲ್ಲಿ ಯಶಸ್ವಿಯಾಗುತ್ತಿದ್ದು, ಬೆಂಗಳೂರು ಮೂಲದ 'ಸಿಂಪಲ್ ಎನರ್ಜಿ' ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡಬಲ್ಲ ಆಕರ್ಷಕ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯೊಂದನ್ನು ಸಿದ್ದಪಡಿಸಿದೆ.

ಎಆರ್ಎಐ(ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ) ಸಂಸ್ಥೆಯು ನಡೆಸಿದ ಟೆಸ್ಟಿಂಗ್ ಪ್ರಕ್ರಿಯೆಯಲ್ಲಿ ಸಿಂಪಲ್ ಎನರ್ಜಿಯ ಹೊಸ ಮಾರ್ಕ್ 2 ಸ್ಕೂಟರ್ ಮಾದರಿಯು ಇಕೋ ಮೋಡ್ನಲ್ಲಿ ಗರಿಷ್ಠ 230 ಕಿ.ಮೀ ಮೈಲೇಜ್ ಹಿಂದಿರುಗಿಸುವಲ್ಲಿ ಯಶಸ್ವಿಯಾಗಿದೆ. ಮತ್ತೊಂದು ಪ್ರಮುಖ ಆಕರ್ಷಣೆಯೆಂದರೆ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಇತರೆ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಟಾಪ್ ಸ್ಪೀಡ್ ಹೊಂದಿದೆ. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಹೊಸ ಸರಣಿ ಟ್ರ್ಯಾಕ್ಟರ್ಗಳ ಉತ್ಪಾದನೆಗೆ ಚಾಲನೆ ನೀಡಿದ ಮಹೀಂದ್ರಾ
ಆಧುನಿಕ ಕೃಷಿ ಚಟುವಟಿಕೆಗಳಲ್ಲಿ ಟ್ರ್ಯಾಕ್ಟರ್ಗಳ ಬಳಕೆಯೂ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ವಿವಿಧ ಮಾದರಿಗಳ ಟ್ರ್ಯಾಕ್ಟರ್ ಮಾದರಿಗಳ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಮಹೀಂದ್ರಾ ಫಾರ್ಮಾ ಇಕ್ವಿಪ್ಮೆಂಟ್ ಸೆಕ್ಟರ್ ವಿಭಾಗವು ಕೃಷಿ ಚಟುವಟಿಕೆಗಳಿಗೆ ಪೂರಕವಾದ ಯಂತ್ರೋಪಕರಣ ತಯಾರಿಕೆಯಲ್ಲಿ ಹಲವು ಹೊಸ ದಾಖಲೆಗಳಿಗೆ ಕಾರಣವಾಗಿದೆ.

ಮಹೀಂದ್ರಾ ಫಾರ್ಮಾ ಇಕ್ವಿಪ್ಮೆಂಟ್ ಸೆಕ್ಟರ್ ವಿಭಾಗವು ಭಾರತದಲ್ಲಿ ಮಾತ್ರವಲ್ಲ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ತನ್ನ ಮಾರಾಟ ಜಾಲವನ್ನು ಹೊಂದಿದ್ದು, ಆ ಪ್ರದೇಶಗಳಿಗೆ ಅನುಗುಣವಾಗಿ ವಿವಿಧ ಮಾದರಿಯ ಕೃಷಿ ಯಂತ್ರೋಪಕರಣಗಳನ್ನು ಮಾರಾಟ ಮಾಡುತ್ತಿದೆ. ಇದರಲ್ಲಿ ಟ್ರ್ಯಾಕ್ಟರ್ ಮಾದರಿಗಳೇ ಪ್ರಮುಖ ಉತ್ಪನ್ನವಾಗಿದ್ದು, ಇದೀಗ ಮಿಟ್ಸುಬಿಷಿ ಎಂಜನಿಯರಿಂಗ್ ಜೊತೆಗೂಡಿ ಕೆ2 ಸರಣಿಯ ಟ್ರ್ಯಾಕ್ಟರ್ ಉತ್ಪಾದನೆಗಾಗಿ ಚಾಲನೆ ನೀಡಿದೆ. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.