ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಥಾರ್

ಏಪ್ರಿಲ್ 1ರಿಂದ ಕಡ್ಡಾಯಗೊಂಡಿರುವ ಬಿಎಸ್-6 ವಾಹನಗಳ ಮಾರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡಿರುವ ಮಹೀಂದ್ರಾ ಕಂಪನಿಯು ವಿವಿಧ ಕಾರು ಮಾದರಿಗಳನ್ನು ಹೊಸ ಎಂಜಿನ್‌ನೊಂದಿಗೆ ಬಿಡುಗಡೆ ಮಾಡಿದ್ದು, ಇದೀಗ ನ್ಯೂ ಜನರೇಷನ್ ಥಾರ್ ಮಾದರಿಯ ಬಿಡುಗಡೆಗೆ ಸಿದ್ದವಾಗುತ್ತಿದೆ.

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಥಾರ್

ಹೊಸ ಥಾರ್ ಮಾದರಿಯು ಈ ಬಾರಿ ಹಲವಾರು ಹೊಸ ಬದಲಾವಣೆಗಳನ್ನು ಪಡೆದುಕೊಂಡಿದ್ದು, 5 ಸೀಟರ್ ಮಾದರಿ ಸಾಮಾನ್ಯ ಕಾರುಗಳಲ್ಲಿರುವಂತೆ ಆಸನ ಸೌಲಭ್ಯವನ್ನು ಹೊಂದಿರಲಿದೆ. ಹಾಗೆಯೇ 6 ಸೀಟರ್ ಮಾದರಿಯು ಆಫ್ ರೋಡ್ ಪ್ರಯಾಣಕ್ಕೆ ಸುಲಭವಾಗುವಂತೆ ಎರಡನೇ ಸಾಲಿನ ಆಸನಗಳನ್ನು ಎದುರುಬದುರಾಗಿ ನೀಡಿರುವುದು ಆಕರ್ಷಕವಾಗಿದ್ದು, ಹೊಸ ಕಾರಿನ ಉತ್ಪದನಾ ಆವೃತ್ತಿ ಕೂಡಾ ಅಂತಿಮ ರೂಪ ಪಡೆದುಕೊಳ್ಳುತ್ತಿದೆ.

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಥಾರ್

ಹೊಸ ಥಾರ್ ಕಾರು ಈ ಬಾರಿ ನವೀಕರಿಸಿದ 2.2-ಡೀಸೆಲ್ ಎಂಜಿನ್ ಜೊತೆಗೆ ಹೊಸದಾಗಿ 2.0-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ಹೊಂದಿಲಿದ್ದು, ಮಾಲಿನ್ಯ ಹೊರಸೂಸುವಿಕೆ ಪ್ರಮಾಣದಲ್ಲಿ ಸಾಕಷ್ಟು ಸುಧಾರಣೆ ಕಂಡಿದೆ.

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಥಾರ್

ಭಾರತದಲ್ಲಿ ಸದ್ಯ ಬಿಎಸ್-6 ನಿಯಮವು ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬಂದಿದ್ದು, ಕೇಂದ್ರ ಸರ್ಕಾರದ ಹೊಸ ನಿಯಮದಂತೆ ಮಹೀಂದ್ರಾ ಸೇರಿದಂತೆ ಬಹುತೇಕ ಆಟೋ ಕಂಪನಿಗಳು ಬಿಎಸ್-6 ಎಂಜಿನ್ ಪ್ರೇರಿತ ಡೀಸೆಲ್ ವಾಹನಗಳನ್ನು ಬಿಡುಗಡೆಗೊಳಿಸಿವೆ.

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಥಾರ್

ಬಿಎಸ್-6 ವೈಶಿಷ್ಟ್ಯತೆಗಳಿಂದಾಗಿ ಮಹೀಂದ್ರಾ ಹೊಸ ಕಾರುಗಳಲ್ಲಿ ಈ ಬಾರಿ ಹಲವಾರು ಬದಲಾವಣೆಗಳಾಗಿದ್ದು, ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300, ಟಿಯುವಿ300 ಪ್ಲಸ್ ಮತ್ತು ನ್ಯೂ ಜನರೇಷನ್ ಥಾರ್ ಕಾರುಗಳಲ್ಲಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲ್ ಸಿಸ್ಟಂ, ಸ್ಪೀಡ್ ಅಲರ್ಟ್, ಸೀಟ್ ಬೆಲ್ಟ್ ರಿಮೆಂಡರ್ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಥಾರ್

ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು(ಟಾಪ್ ಎಂಡ್‌ಗಳಲ್ಲಿ), ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಸನ್‌ರೂಫ್, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್ ಸೌಲಭ್ಯವಿದೆ.

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಥಾರ್

ಇದಲ್ಲದೆ ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟು ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ನೀಡಬಲ್ಲ ಟಚ್ ಸ್ಕ್ರಿನ್ ಇನ್ಪೋಟೈನ್‌ಟೆಂಟ್ ಸಿಸ್ಟಂ ಜೋಡಣೆ ಮಾಡಲಾಗಿದೆ.

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಥಾರ್

ಕಾರು ಕಳ್ಳತನಗಳಿಗೆ ಬ್ರೇಕ್ ಹಾಕಲು ಜಿಯೋ ಫೆನ್ಸ್ ಅಲರ್ಟ್ ಸೇರಿದಂತೆ ಸೆಂಟರ್ ಲಾಕಿಂಗ್ ಸಿಸ್ಟಂ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಒಟ್ಟಿನಲ್ಲಿ ಪ್ರಯಾಣಿಕರ ಸುರಕ್ಷೆತೆಗಾಗಿ ಗರಿಷ್ಠ ಮಟ್ಟದಲ್ಲಿ ಸುರಕ್ಷಾ ಸೌಲಭ್ಯ ಗಳನ್ನು ಅಳವಡಿಸಿರುವುದೇ ಹೊಸ ಕಾರುಗಳ ಪ್ರಮುಖ ಆಕರ್ಷಣೆಯಾಗಲಿದೆ.

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಥಾರ್

ಬೆಲೆಯಲ್ಲಿ ಭಾರೀ ಹೆಚ್ಚಳ

ಬಿಎಸ್-4 ಕಾರುಗಳ ಬೆಲೆಗಳಿಂತಲೂ ಬಿಎಸ್-6 ಕಾರುಗಳ ಬೆಲೆಯು ತಾಂತ್ರಿಕ ಸೌಲಭ್ಯಗಳ ಅಳವಡಿಕೆಯ ಆಧಾರದ ಮೇಲೆ ಪೆಟ್ರೋಲ್ ಕಾರುಗಳು ರೂ.10 ಸಾವಿರದಿಂದ ರೂ.30 ಸಾವಿರ ತನಕ ಮತ್ತು ಡೀಸೆಲ್ ಕಾರುಗಳು ರೂ.40 ಸಾವಿರದಿಂದ ರೂ. 80 ಸಾವಿರ ತನಕ ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿವೆ.

Most Read Articles

Kannada
English summary
Here is a list of the top 6 features of the new Mahindra Thar SUV. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X