2020ರಲ್ಲಿ ಬಿಡುಗಡೆಯಾದ ಟಾಪ್ 5 ಜನಪ್ರಿಯ ಎಸ್‌ಯುವಿ ಕಾರುಗಳಿವು..

ಕರೋನಾ ವೈರಸ್ ಭೀತಿ ನಡುವೆಯೂ ಚೇತರಿಕೆ ಹಾದಿಯಲ್ಲಿರುವ ಭಾರತೀಯ ಆಟೋ ಉದ್ಯಮದಲ್ಲಿ ಈ ವರ್ಷ ಹಲವಾರು ಹೊಸ ವಾಹನಗಳು ಮಾರುಕಟ್ಟೆ ಪ್ರವೇಶಿಸಿವೆ. ಕರೋನಾ ವೈರಸ್‌ನಿಂದ ಇನ್ನು ಕೆಲವು ವಾಹನಗಳ ಬಿಡುಗಡೆಯು ಮುಂದೂಡಿಕೆಯಾಗಿದ್ದು, ಸಂಕಷ್ಟ ಪರಿಸ್ಥಿತಿಯಲ್ಲೂ ಬಿಡುಗಡೆಯಾಗಿರುವ ಕೆಲವು ಪ್ರಮುಖ ಕಾರುಗಳು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿವೆ. ಹಾಗಾದ್ರೆ 2020ರ ಅವಧಿಯಲ್ಲಿ ಬಿಡುಗಡೆಗೊಂಡು ಜನಪ್ರಿಯವಾಗಿರುವ ಟಾಪ್ 5 ಕಾರುಗಳ ಮಾಹಿತಿ ಇಲ್ಲಿದೆ ನೋಡಿ.

2020ರಲ್ಲಿ ಬಿಡುಗಡೆಯಾದ ಟಾಪ್ 5 ಜನಪ್ರಿಯ ಎಸ್‌ಯುವಿ ಕಾರುಗಳಿವು..

ನ್ಯೂ ಜನರೇಷನ್ ಹ್ಯುಂಡೈ ಕ್ರೆಟಾ

ಹ್ಯುಂಡೈ ಕಾರುಗಳ ಮಾರಾಟ ಪೈಕಿ ಅತಿ ಹೆಚ್ಚು ಬೇಡಿಕೆ ಹೊಂದಿರುವ ಕ್ರೆಟಾ ಕಾರು ಕಳೆದ ಮಾರ್ಚ್‌ನಲ್ಲಿ ನ್ಯೂ ಜನರೇಷನ್ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಗೊಂಡಿತ್ತು. ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಆರಂಭಿಕವಾಗಿ ರೂ. 9.81 ಲಕ್ಷ, ಟಾಪ್ ಎಂಡ್ ಮಾದರಿಯು ರೂ. 17.31 ಲಕ್ಷ ಬೆಲೆ ಹೊಂದಿದ್ದು, ಬಿಎಸ್-6 ವೈಶಿಷ್ಟ್ಯತೆಯ ಮೂರು ಪ್ರಮುಖ ಎಂಜಿನ್ ಆಯ್ಕೆಗಳನ್ನು ಪಡೆದುಕೊಂಡಿದೆ.

2020ರಲ್ಲಿ ಬಿಡುಗಡೆಯಾದ ಟಾಪ್ 5 ಜನಪ್ರಿಯ ಎಸ್‌ಯುವಿ ಕಾರುಗಳಿವು..

ಕ್ರೆಟಾ ಹೊಸ ಎಸ್‌ಯುವಿ ಕಾರಿನಲ್ಲಿ ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯ ಆಯ್ಕೆ ಹೊಂದಿದ್ದು, ಮಧ್ಯಮ ಕ್ರಮಾಂಕದ ಎಸ್‌ಯುವಿ ಮಾರಾಟದಲ್ಲಿ ಸದ್ಯ ಕ್ರೆಟಾ ಅಗ್ರಸ್ಥಾನದಲ್ಲಿದೆ.

2020ರಲ್ಲಿ ಬಿಡುಗಡೆಯಾದ ಟಾಪ್ 5 ಜನಪ್ರಿಯ ಎಸ್‌ಯುವಿ ಕಾರುಗಳಿವು..

ಕಿಯಾ ಸೊನೆಟ್

ಕಿಯಾ ಮೋಟಾರ್ಸ್ ನಿರ್ಮಾಣದ ಮೂರನೇ ಕಾರು ಮಾದರಿಯಾಗಿ ಬಿಡುಗಡೆಯಾಗಿರುವ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಸಬ್ ಫೋರ್ ಮೀಟರ್ ಎಸ್‌ಯುವಿ ಮಾದರಿಯಲ್ಲಿ ಭಾರೀ ಬೇಡಿಕೆ ಹೊಂದಿದ್ದು, ಸೆಪ್ಟೆಂಬರ್ ಮಧ್ಯಂತರದಲ್ಲಿ ಬಿಡುಗಡೆಯಾದ ಹೊಸ ಕಾರು ಇದುವರೆಗೆ ಸುಮಾರು 70 ಸಾವಿರಕ್ಕೂ ಅಧಿಕ ಬುಕ್ಕಿಂಗ್ ಪಡೆದುಕೊಂಡಿದೆ.

2020ರಲ್ಲಿ ಬಿಡುಗಡೆಯಾದ ಟಾಪ್ 5 ಜನಪ್ರಿಯ ಎಸ್‌ಯುವಿ ಕಾರುಗಳಿವು..

ಗ್ರಾಹಕರ ಬೇಡಿಕೆಯೆಂತೆ 1.2-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಂಡಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.6.71 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.89 ಲಕ್ಷ ಬೆಲೆ ಹೊಂದಿದೆ. ಹೊಸ ಕಾರು ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ಶೀಘ್ರದಲ್ಲೇ ಬೆಲೆ ಏರಿಕೆ ಪಡೆದುಕೊಳ್ಳಲು ಸಜ್ಜಾಗುತ್ತಿದೆ.

2020ರಲ್ಲಿ ಬಿಡುಗಡೆಯಾದ ಟಾಪ್ 5 ಜನಪ್ರಿಯ ಎಸ್‌ಯುವಿ ಕಾರುಗಳಿವು..

ನ್ಯೂ ಜನರೇಷನ್ ಮಹೀಂದ್ರಾ ಥಾರ್

ಭಾರೀ ಬದಲಾವಣೆಯೊಂದಿಗೆ ಬಿಡುಗಡೆಯಾಗಿರುವ ಹೊಸ ಥಾರ್ ಕಾರು ಮಾದರಿಯು 2.2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಮೊದಲ ಬಾರಿಗೆ 2.0-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ಪಡೆದುಕೊಂಡಿದ್ದು, ಬಿಡುಗಡೆಯಾದ ಕೇವಲ 2 ತಿಂಗಳಿನಲ್ಲಿ ಬರೋಬ್ಬರಿ 25 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದೆ.

2020ರಲ್ಲಿ ಬಿಡುಗಡೆಯಾದ ಟಾಪ್ 5 ಜನಪ್ರಿಯ ಎಸ್‌ಯುವಿ ಕಾರುಗಳಿವು..

ಹೊಸ ಥಾರ್ ಕಾರು ಮಾದರಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.90 ಲಕ್ಷದಿಂದ ಟಾಪ್ ಮಾದರಿಯು ರೂ. 12.95 ಲಕ್ಷ ಬೆಲೆ ಪಡೆದುಕೊಂಡಿದ್ದು, ಲ್ಯಾಡರ್ ಫ್ರೇಮ್ ಮೇಲೆ ಅಭಿವೃದ್ದಿಗೊಂಡಿರುವ ಹೊಸ ಕಾರು ಆಫ್ ರೋಡ್ ಎಸ್‌ಯುವಿ ಪ್ರಿಯರ ಪ್ರಮುಖ ಆಕರ್ಷಣೆಯಾಗಿದೆ.

2020ರಲ್ಲಿ ಬಿಡುಗಡೆಯಾದ ಟಾಪ್ 5 ಜನಪ್ರಿಯ ಎಸ್‌ಯುವಿ ಕಾರುಗಳಿವು..

ನಿಸ್ಸಾನ್ ಮ್ಯಾಗ್ನೈಟ್

ನಿಸ್ಸಾನ್ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಅತಿ ಕಡಿಮೆ ಬೆಲೆಯಲ್ಲಿ ಬಿಡುಗಡೆ ಮಾಡಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9.35 ಲಕ್ಷ ಬೆಲೆ ಹೊಂದಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

2020ರಲ್ಲಿ ಬಿಡುಗಡೆಯಾದ ಟಾಪ್ 5 ಜನಪ್ರಿಯ ಎಸ್‌ಯುವಿ ಕಾರುಗಳಿವು..

ಹೊಸ ಕಾರಿನಲ್ಲಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ಹೊಸ ಕಾರು ಖರೀದಿಗಾಗಿ ಕೇವಲ 15 ದಿನಗಳ ಅವಧಿಯಲ್ಲಿ ಬರೋಬ್ಬರಿ 10 ಸಾವಿರಕ್ಕೂ ಅಧಿಕ ಬುಕ್ಕಿಂಗ್ ದಾಖಲವಾಗಿವೆ.

2020ರಲ್ಲಿ ಬಿಡುಗಡೆಯಾದ ಟಾಪ್ 5 ಜನಪ್ರಿಯ ಎಸ್‌ಯುವಿ ಕಾರುಗಳಿವು..

ಎಂಜಿ ಗ್ಲೊಸ್ಟರ್

ಎಂಜಿ ಮೋಟಾರ್ ಇಂಡಿಯಾ ನಿರ್ಮಾಣದ ನಾಲ್ಕನೇ ಕಾರು ಮಾದರಿಯಾಗಿ ಬಿಡುಗಡೆಯಾಗಿರುವ ಗ್ಲೊಸ್ಟರ್ ಎಸ್‌ಯುವಿ ಕಾರು ಟೊಯೊಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಮಾದರಿಗಳಿಗೆ ಭರ್ಜರಿ ನೀಡುವ ಮೂಲಕ ದುಬಾರಿ ಬೆಲೆ ನಡುವೆಯೂ ಸುಮಾರು 2500 ಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

2020ರಲ್ಲಿ ಬಿಡುಗಡೆಯಾದ ಟಾಪ್ 5 ಜನಪ್ರಿಯ ಎಸ್‌ಯುವಿ ಕಾರುಗಳಿವು..

ಹೊಸ ಕಾರು 2.0-ಲೀಟರ್ ಟ್ವಿನ್ ಟರ್ಬೋ ಡೀಸೆಲ್ ಎಂಜಿನ್‌ನೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 29.98 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯ ಬೆಲೆಯನ್ನು ರೂ.35.58 ಲಕ್ಷ ಬೆಲೆ ಪಡೆದುಕೊಂಡಿದೆ.

More from DriveSpark

Article Published On: Friday, December 18, 2020, 11:10 [IST]
English summary
Top 5 SUV Launches Of 2020. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+